ಕ್ರೀಡೆ
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಚಾಲನೆ – 8 ತಂಡಗಳ ಜಿದ್ದಾಜಿದ್ದು
ಬೆಂಗಳೂರು: 9 ಡ್ರೀಮ್ಸ್ ಸಂಸ್ಥೆ ಆಯೋಜಿಸಿರುವ ಮೊದಲ ಆವೃತ್ತಿಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಇಂದು ಆರಂಭವಾಗಿದೆ. Karnataka Badminton Association ಅಂಗಳದಲ್ಲಿ ಇಂದು ಹಾಗೂ ನಾಳೆ ಪಂದ್ಯಾವಳಿ ನಡೆಯಲಿದ್ದು, ಒಟ್ಟು ಎಂಟು ತಂಡಗಳು ಭಾಗವಹಿಸಿವೆ.
120ಕ್ಕೂ ಅಧಿಕ ಆಟಗಾರರ ಭಾಗವಹಿಕೆ
ಜನಪ್ರತಿನಿಧಿಗಳು, ಐಎಎಸ್–ಐಪಿಎಸ್ ಅಧಿಕಾರಿಗಳು, ಸಚಿವಾಲಯದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ವೈದ್ಯರು, ಸ್ಯಾಂಡಲ್ವುಡ್ ತಾರೆಯರು ಹಾಗೂ ಪತ್ರಕರ್ತರು ಸೇರಿ 120ಕ್ಕೂ ಹೆಚ್ಚು ಆಟಗಾರರು ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು ಒಂದೇ ವೇದಿಕೆಯಲ್ಲಿ ಕ್ರೀಡಾ ಸಂಭ್ರಮ ಹಂಚಿಕೊಳ್ಳುತ್ತಿರುವುದು ವಿಶೇಷವಾಗಿದೆ.
ಲೀಗ್ ಮಾದರಿಯಲ್ಲಿ ಸೆಣಸಾಟ
ಟೂರ್ನಿ ಲೀಗ್ ಮಾದರಿಯಲ್ಲಿ ಎರಡು ಗುಂಪುಗಳಾಗಿ ನಡೆಯಲಿದೆ. ಎ ಮತ್ತು ಬಿ ಬಣಗಳಲ್ಲಿ ನಾಲ್ಕು ತಂಡಗಳಂತೆ ವಿಭಜನೆ ಮಾಡಲಾಗಿದೆ. ಎರಡು ಗುಂಪುಗಳ ಅಗ್ರ ಎರಡು ತಂಡಗಳು ಸೆಮಿಫೈನಲ್ಗೆ ಪ್ರವೇಶಿಸಲಿವೆ. ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್, ಇನ್ಸ್ಪೈರ್ ಚಾಲೆಂಜರ್ಸ್, ಕೆಜಿಎಫ್ ಸ್ಮಾಷರ್ಸ್ ಸೇರಿದಂತೆ ಎಂಟು ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿವೆ.
ಮೊದಲ ಪಂದ್ಯ ಗೆದ್ದ ಟೆಲಿಕಾಂ ಸ್ಕೈ ಸ್ಟ್ರೈಕರ್ಸ್
ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ನಾಯಕ Jagadeesh G ತಮ್ಮ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಮಾತನಾಡಿ, “ಮೂರು ವರ್ಷಗಳ ಬಳಿಕ ಮತ್ತೆ ಕೋರ್ಟ್ಗೆ ಇಳಿದಿದ್ದೇನೆ. ಸಿಎಂ ಕಪ್ ಗೆಲ್ಲುವುದು ನಮ್ಮ ಗುರಿ” ಎಂದರು. ಒತ್ತಡದ ಕೆಲಸದ ನಡುವೆಯೂ ಕ್ರೀಡೆಗೆ ಸಮಯ ನೀಡುವುದು ಮುಖ್ಯ ಎಂದು ಹೇಳಿದರು.
ದೈಹಿಕ ಚಟುವಟಿಕೆ ಅಗತ್ಯ: ಡಿಸಿಪಿ ಮಿಥುನ್ ಕುಮಾರ್
ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ G.K. Mithun Kumar ಮಾತನಾಡಿ, “ದೈನಂದಿನ ಒತ್ತಡದ ಜೀವನದ ನಡುವೆ ಕನಿಷ್ಠ ಒಂದು ಗಂಟೆಯಾದರೂ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದು” ಎಂದು ಅಭಿಪ್ರಾಯಪಟ್ಟರು.
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಕ್ರೀಡಾಸಕ್ತರಲ್ಲಿ ಉತ್ಸಾಹ ಮೂಡಿಸಿದೆ.
ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಸೋಲು ಬೆನ್ನಲ್ಲೇ ಗಂಭೀರ್ ಭವಿಷ್ಯ ಪ್ರಶ್ನೆ; ಲಕ್ಷ್ಮಣ್ ಹೆಸರು ಮುನ್ನೆಲೆಗೆ?
ನವದೆಹಲಿ, ಜು.10: ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಅನುಭವಿಸಿದ ಟಿ20 ಸರಣಿ ಸೋಲಿನ ಬಳಿಕ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಭವಿಷ್ಯದ ಕುರಿತು ಚರ್ಚೆಗಳು ಜೋರಾಗಿವೆ. ಬಿಸಿಸಿಐ (BCCI) ಮೂಲಗಳನ್ನು ಉಲ್ಲೇಖಿಸಿರುವ ವರದಿಗಳ ಪ್ರಕಾರ, ಆಟಗಾರರ ಜೊತೆಗೆ ಕೋಚಿಂಗ್ ಸಿಬ್ಬಂದಿಯ ಪ್ರದರ್ಶನವನ್ನೂ ಮಂಡಳಿ ಪರಿಶೀಲಿಸುವ ಸಾಧ್ಯತೆ ಇದೆ.
2027ರವರೆಗೆ ಗೌತಮ್ ಗಂಭೀರ್ ಅವರ ಒಪ್ಪಂದವಿದ್ದರೂ, ಇತ್ತೀಚಿನ ಫಲಿತಾಂಶಗಳ ಹಿನ್ನೆಲೆಯಲ್ಲಿ ಅವರ ಕಾರ್ಯಕ್ಷಮತೆಯ ಮೌಲ್ಯಮಾಪನ ನಡೆಯಬಹುದು ಎಂದು ವರದಿಗಳು ತಿಳಿಸಿವೆ. ಶ್ರೇಯಸ್ ಅಯ್ಯರ್ (Shreyas Iyer) ನೇತೃತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ನಿರಾಸೆ ಅನುಭವಿಸಿತು. ಮೊದಲ ಪಂದ್ಯ ಮಳೆಯಿಂದ ಫಲಿತಾಂಶವಿಲ್ಲದೆ ಅಂತ್ಯಗೊಂಡರೆ, ನಂತರದ ಪಂದ್ಯಗಳಲ್ಲಿ ಭಾರತ ಸೋಲು ಕಂಡು ಸರಣಿಯನ್ನು ಕಳೆದುಕೊಂಡಿತು.
ಮಾಧ್ಯಮ ವರದಿಗಳ ಪ್ರಕಾರ, ಮುಂದಿನ ಸರಣಿಗಳಲ್ಲೂ ಭಾರತ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ ಕೋಚಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ಕುರಿತು ಬಿಸಿಸಿಐ ಚಿಂತನೆ ನಡೆಸುವ ಸಾಧ್ಯತೆ ಇದೆ. ಇದೇ ವೇಳೆ, ಟೆಸ್ಟ್ ಮತ್ತು ಟಿ20 ತಂಡಗಳಿಗೆ ವಿವಿಎಸ್ ಲಕ್ಷ್ಮಣ್ (VVS Laxman) ಅವರನ್ನು ಪರಿಗಣಿಸಲಾಗುತ್ತಿದೆ ಎಂಬ ವರದಿಗಳೂ ಹರಿದಾಡುತ್ತಿವೆ. ಆದರೆ ಈ ಕುರಿತು ಬಿಸಿಸಿಐಯಿಂದ ಯಾವುದೇ ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ.
ಇತ್ತೀಚೆಗಷ್ಟೇ ಟಿ20 ತಂಡದ ನಾಯಕತ್ವದಲ್ಲಿ ಬದಲಾವಣೆ ಮಾಡಿ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿತ್ತು. ಮುಂಬರುವ ಜಿಂಬಾಬ್ವೆ ಪ್ರವಾಸ ಹಾಗೂ ಏಷ್ಯನ್ ಕ್ರೀಡಾಕೂಟದಲ್ಲಿ ವಿವಿಎಸ್ ಲಕ್ಷ್ಮಣ್ ಹಂಗಾಮಿ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿವೆ.
ಗಮನಿಸಿ: ಗಂಭೀರ್ ಅವರ ಹುದ್ದೆ ಬದಲಾವಣೆ ಹಾಗೂ ಲಕ್ಷ್ಮಣ್ ನೇಮಕ ಕುರಿತ ಮಾಹಿತಿಗಳು ಸದ್ಯ ಮಾಧ್ಯಮ ವರದಿಗಳು ಮತ್ತು ಬಿಸಿಸಿಐ ಮೂಲಗಳ ಆಧಾರಿತವಾಗಿದ್ದು, ಈ ಕುರಿತು ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
ಕ್ರೀಡೆ
ಚೆನ್ನೈನಲ್ಲಿ BBL 2026-27 KICK OFF : ಮೆಲ್ಬೋರ್ನ್ ರೆನೆಗೇಡ್ಸ್ vs ಪರ್ತ್ ಸ್ಕಾರ್ಚರ್ಸ್
ಮೆಲ್ಬರ್ನ್, ಜು.10: ಆಸ್ಟ್ರೇಲಿಯಾದ ಪ್ರತಿಷ್ಠಿತ ಬಿಗ್ ಬ್ಯಾಷ್ ಲೀಗ್ (BBL) 2026-27 ಋತುವಿನ ಉದ್ಘಾಟನಾ ಪಂದ್ಯವು ಮೊದಲ ಬಾರಿಗೆ ಭಾರತದಲ್ಲಿ ನಡೆಯಲಿದ್ದು, ಡಿಸೆಂಬರ್ನಲ್ಲಿ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣ ಈ ಐತಿಹಾಸಿಕ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಈ ಮಹತ್ವದ ಘೋಷಣೆಯನ್ನು ಆಸ್ಟ್ರೇಲಿಯಾದ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಸ್ಟ್ರೇಲಿಯಾ ಪ್ರವಾಸದ ಕೊನೆಯ ದಿನ ಪ್ರಕಟಿಸಿದರು.
ವಿಶ್ವದ ಪ್ರಮುಖ ಫ್ರಾಂಚೈಸಿ ಟಿ20 ಲೀಗ್ಗಳಲ್ಲಿ ಒಂದಾದ BBL, ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಹೊರಗೆ ಅಧಿಕೃತ ಲೀಗ್ ಪಂದ್ಯವನ್ನು ಆಯೋಜಿಸುತ್ತಿದೆ. ಇದುವರೆಗೆ ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೇರಿದಂತೆ ಹಲವು ಅಂತರರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳು ನಡೆದಿದ್ದರೂ, ವಿದೇಶಿ ದೇಶೀಯ ಟಿ20 ಲೀಗ್ ಪಂದ್ಯಕ್ಕೆ ಆತಿಥ್ಯ ನೀಡುತ್ತಿರುವುದು ಇದೇ ಮೊದಲು.
ಉದ್ಘಾಟನಾ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಮತ್ತು ಪರ್ತ್ ಸ್ಕಾರ್ಚರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯಕ್ಕೆ ಆಸ್ಟ್ರೇಲಿಯಾ ಸರ್ಕಾರ ಹಾಗೂ ಆಸ್ಟ್ರೇಲಿಯಾ-ಭಾರತ ಸಂಬಂಧಗಳ ಕೇಂದ್ರ ಬೆಂಬಲ ನೀಡುತ್ತಿದ್ದು, ಪಂದ್ಯಾವಳಿಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರ ಹಾಗೂ ಕಲಾ ಉತ್ಸವಗಳನ್ನು ಸಹ ಆಯೋಜಿಸಲಾಗುತ್ತದೆ.
ಈ ವೇಳೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನ (MCG)ಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಬಾಂಧವ್ಯವನ್ನು ಶ್ಲಾಘಿಸಿದರು. ಎಂಸಿಜಿ ಪ್ರತಿಯೊಬ್ಬ ಭಾರತೀಯನಲ್ಲಿ ಕ್ರಿಕೆಟ್ ಮೇಲಿನ ಉತ್ಸಾಹವನ್ನು ಮೂಡಿಸುವ ತಾಣವಾಗಿದ್ದು, ಕ್ರಿಕೆಟ್ ಎರಡೂ ರಾಷ್ಟ್ರಗಳಿಗೆ ಕೇವಲ ಕ್ರೀಡೆಯಲ್ಲ, ಭಾವನಾತ್ಮಕ ಬಂಧವಾಗಿದೆ ಎಂದು ಹೇಳಿದರು.
ಭಾರತದಲ್ಲಿ ಜಿಯೋಸ್ಟಾರ್ ಜೊತೆಗಿನ ಮಾಧ್ಯಮ ಹಕ್ಕುಗಳ ಒಪ್ಪಂದದ ಮೂಲಕ ಈಗಾಗಲೇ BBL ಪಂದ್ಯಗಳು ಪ್ರಸಾರವಾಗುತ್ತಿವೆ. ಇದೀಗ ಚೆನ್ನೈನಲ್ಲಿ ನಡೆಯಲಿರುವ ಅಧಿಕೃತ ಪಂದ್ಯವು ಭಾರತ-ಆಸ್ಟ್ರೇಲಿಯಾ ಕ್ರೀಡಾ ಸಂಬಂಧಕ್ಕೆ ಹೊಸ ಮೈಲಿಗಲ್ಲಾಗುವ ನಿರೀಕ್ಷೆ ಮೂಡಿಸಿದೆ.
ಕ್ರೀಡೆ
ಇಂಗ್ಲೆಂಡ್ ವಿರುದ್ಧ ಮುಖಭಂಗ; ಸೋಲಿನ ಬಳಿಕ ಶ್ರೇಯಸ್ ಅಯ್ಯರ್ ಹೇಳಿದ್ದೇನು?
ನಾಟಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 125 ರನ್ಗಳ ಹೀನಾಯ ಸೋಲು ಅನುಭವಿಸಿದ ಬಳಿಕ ನಾಯಕ ಶ್ರೇಯಸ್ ಅಯ್ಯರ್ ತಂಡದ ಕಳಪೆ ಪ್ರದರ್ಶನದ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಐದು ಪಂದ್ಯಗಳ ಸರಣಿಯಲ್ಲಿ ಭಾರತ ಇನ್ನೂ ಗೆಲುವಿನ ಖಾತೆ ತೆರೆಯದೆ 0-2 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ ಅವರ 44 ಎಸೆತಗಳಲ್ಲಿ 70 ರನ್ಗಳ ಸ್ಫೋಟಕ ಆಟದ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿತು. ಕೊನೆಯಲ್ಲಿ ಸ್ಯಾಮ್ ಕರನ್ ಅಜೇಯ 41 ರನ್ ಹಾಗೂ ವಿಲ್ ಜಾಕ್ಸ್ ಅವರ ವೇಗದ ಇನ್ನಿಂಗ್ಸ್ನಿಂದ ಇಂಗ್ಲೆಂಡ್ 20 ಓವರ್ಗಳಲ್ಲಿ 201 ರನ್ ಗಳಿಸಿತು.
202 ರನ್ಗಳ ಗುರಿ ಬೆನ್ನಟ್ಟಿದ ಭಾರತ ಆರಂಭದಿಂದಲೇ ವಿಕೆಟ್ಗಳನ್ನು ಕಳೆದುಕೊಂಡಿತು. ಇಂಗ್ಲೆಂಡ್ ಬೌಲರ್ಗಳ ದಾಳಿಗೆ ತತ್ತರಿಸಿದ ಭಾರತೀಯ ಬ್ಯಾಟರ್ಗಳು ಯಾವುದೇ ಹಂತದಲ್ಲೂ ಪ್ರತಿರೋಧ ತೋರಲಿಲ್ಲ. ಅಂತಿಮವಾಗಿ ಭಾರತ ಕೇವಲ 11.4 ಓವರ್ಗಳಲ್ಲಿ 76 ರನ್ಗೆ ಆಲೌಟ್ ಆಗಿ 125 ರನ್ಗಳ ಭಾರೀ ಸೋಲು ಕಂಡಿತು. ವೈಭವ್ ಸೂರ್ಯವಂಶಿ ಹಾಗೂ ಇಶಾನ್ ಕಿಶನ್ ತಲಾ 13 ರನ್ ಗಳಿಸಿದ್ದೇ ಭಾರತದ ಗರಿಷ್ಠ ವೈಯಕ್ತಿಕ ಮೊತ್ತವಾಗಿತ್ತು.
ಪಂದ್ಯದ ಬಳಿಕ ಮಾತನಾಡಿದ ನಾಯಕ ಶ್ರೇಯಸ್ ಅಯ್ಯರ್, “ನಾವು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದೇವೆ. ಇಷ್ಟು ದೊಡ್ಡ ಅಂತರದ ಸೋಲನ್ನು ಒಪ್ಪಿಕೊಳ್ಳುವುದು ಕಷ್ಟವಾದರೂ ಅದನ್ನು ಸ್ವೀಕರಿಸಲೇಬೇಕು. ಟ್ರೆಂಟ್ ಬ್ರಿಡ್ಜ್ ಪಿಚ್ನಲ್ಲಿ ನಮ್ಮ ಬೌಲರ್ಗಳು ಸರಿಯಾದ ಲೆಂತ್ನಲ್ಲಿ ಬೌಲಿಂಗ್ ಮಾಡಲು ವಿಫಲರಾದರು. ಪವರ್ಪ್ಲೇನಲ್ಲೇ ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡಿದ್ದು ನಮ್ಮ ಸೋಲಿಗೆ ಪ್ರಮುಖ ಕಾರಣವಾಯಿತು” ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, ಕಳೆದ ತಪ್ಪುಗಳನ್ನು ನೆನೆದು ಕುಳಿತುಕೊಳ್ಳುವುದರಿಂದ ಪ್ರಯೋಜನವಿಲ್ಲ. ಪ್ರತಿಯೊಬ್ಬ ಆಟಗಾರನೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು. ಮುಂದಿನ ಪಂದ್ಯಗಳಲ್ಲಿ ಬಲಿಷ್ಠವಾಗಿ ಪುನರಾಗಮನ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದರು. ಇದೀಗ ಸರಣಿಯಲ್ಲಿ ಉಳಿಯಲು ಭಾರತಕ್ಕೆ ಮುಂದಿನ ಪಂದ್ಯಗಳು ಅತ್ಯಂತ ಮಹತ್ವದ್ದಾಗಿವೆ.
-
ದೇಶ10 hours agoGBA ELECTION : ಪಾಲಿಕೆ ಚುನಾವಣೆಗೆ ಮತ್ತೊಂದು ಟ್ವಿಸ್ಟ್! ಆಗಸ್ಟ್ 31 ಗಡುವು ಮೀರುವ ಸಾಧ್ಯತೆ
-
ದೇಶ7 hours ago7 ದಿನದಲ್ಲಿ ವಾಹನ ತೆರವುಗೊಳಿಸಿ, ಇಲ್ಲದಿದ್ದರೆ ಹರಾಜು! ಬೆಂಗಳೂರು ಪೊಲೀಸರ ಖಡಕ್ ಎಚ್ಚರಿಕೆ
-
ಕ್ರೀಡೆ11 hours agoಚೆನ್ನೈನಲ್ಲಿ BBL 2026-27 KICK OFF : ಮೆಲ್ಬೋರ್ನ್ ರೆನೆಗೇಡ್ಸ್ vs ಪರ್ತ್ ಸ್ಕಾರ್ಚರ್ಸ್
-
ಆರೋಗ್ಯ9 hours agoಮೆಡಿಕಲ್ ಶಾಪ್ಗಳಿಗೆ ಹೊಸ ಮಾರ್ಗಸೂಚಿ: ಔಷಧ ಮಾರಾಟದ ದಾಖಲೆ 3 ವರ್ಷ ಕಡ್ಡಾಯ
-
ಅಪರಾಧ11 hours agoಅಪರಾಧಿಗಳಿಗೆ ನಡುಕ ಹುಟ್ಟಿಸಿದ ಬೆಂಗಳೂರು ಪೊಲೀಸರ ತಡರಾತ್ರಿ ಸ್ಪೆಷಲ್ ಆಪರೇಷನ್
-
ದೇಶ5 hours agoತಮಿಳುನಾಡು ಸರ್ಕಾರದ ಹೊಸ ಆದೇಶ: ಸರ್ಕಾರಿ ಶಾಲೆಗಳಲ್ಲಿ ರಾಜಕೀಯ ಚಟುವಟಿಕೆ ಸಂಪೂರ್ಣ ನಿಷೇಧ
-
ದೇಶ5 hours agoಮೈಸೂರು ದಸರಾ ದಿನಾಂಕ ಘೋಷಣೆ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ
-
ಕ್ರೀಡೆ7 hours agoಇಂಗ್ಲೆಂಡ್ ವಿರುದ್ಧದ ಸೋಲು ಬೆನ್ನಲ್ಲೇ ಗಂಭೀರ್ ಭವಿಷ್ಯ ಪ್ರಶ್ನೆ; ಲಕ್ಷ್ಮಣ್ ಹೆಸರು ಮುನ್ನೆಲೆಗೆ?
