ರಾಜ್ಯ
ಬೊಮ್ಮಾಯಿಗೆ ಯಶಸ್ವಿ ಬೈಪಾಸ್ ಆರೋಗ್ಯ ಚೇತಿರಿಕೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನ ಫ್ರೋರ್ಟಿಸ್ ಆಸ್ಪತ್ರೆಯಲ್ಲಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ, ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾದಾಗ ಪ್ರಾಥಮಿಕ ಪರೀಕ್ಷೆ ನಡೆಸಿದ ವೇಳೆ ಹೃದಯ ಸಂಬಂಧಿ ಸಮಸ್ಯೆ ಇರುವ ಅನುಮಾನ ಕಂಡುಬಂದಿದೆ, ಹೀಗಾಗಿ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕಲರ್ ಸೈನ್ಸ್ ಅಧ್ಯಕ್ಷ ಡಾ.ವಿವೇಕ್ ಜವಳಿ ಮೇಲ್ವಿಚಾರಣೆಯಲ್ಲಿ ಆಕ್ಟೋಬರ್ 15 ರಂದು ಅವರನ್ನು ವೈದ್ಯಕೀಯ ಪರೀಕ್ಷೆಗ ಒಳಪಡಿಸಲಾಯಿತು, ಅಂಜಿಯೋಗ್ರಾಮ್ ನಂತರ ಎಲ್ಲಾ ಮೂರು ಪರಿಧಮನಿಯ ಅಪಧಮನಿಗಳಲ್ಲಿ ತೀವ್ರ ಪ್ರಸರಣ ತಡೆ ಇತ್ತು, ಭವಿಷ್ಯದಲ್ಲಿ ಹೃದಯಾಘಾತದ ಅಪಾಯವನ್ನು ಉಂಟುಮಾಡುವ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕರೋನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ ಶಸ್ತ್ರಕ್ರಿಯೆಯನ್ನು ನಡೆಸಲಾಗಿದೆ, ಶಸ್ತ್ರಚಿಕಿತ್ಸೆಯ ಬಳಿಕ ಬೊಮ್ಮಾಯಿ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಒಂದೆರಡು ವಾರದಲ್ಲಿ ಎಂದಿನಂತೆ ತಮ್ಮ ದಿನಚರಿಯಲ್ಲಿ ತೊಡಗಿಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ,