Connect with us

ರಾಜ್ಯ

ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ನಟ ದರ್ಶನ್ ವಿನಯ್ ಗುರೂಜಿಗೂ ಸಂಕಷ್ಟ ಎದುರು

Published

on

ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ನಟ ದರ್ಶನ್ ವಿನಯ್ ಗುರೂಜಿಗೂ ಸಂಕಷ್ಟ ಎದುರು
ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ನಟ ದರ್ಶನ್ ವಿನಯ್ ಗುರೂಜಿಗೂ ಸಂಕಷ್ಟ ಎದುರು

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಬಳಿಕ ನಟ ದರ್ಶನ್ ಹಾಗೂ ವಿನಯ್ ಗುರೂಜಿಗೂ ಕಾನೂನಿನ ಸಂಕಟ ಎದುರಾಗಿದೆ,
ರಾಜ್ಯದಲ್ಲೀಗ ಹುಲಿ ಉಗುರಿನ ವಿವಾದ ಸಾಕಷ್ಟು ಸದ್ದು ಮಾಡುತ್ತಿದೆ, ನಟ ದರ್ಶನ್ ಹಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಜೊತೆಗೆ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ, ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ,
ಈ ಬಗ್ಗೆ ಶಿವಕುಮಾರ್ ಮಾತನಾಡುತ್ತ ದರ್ಶನ್ ಬಂಗಾರದ ಚೈನ್ ಹಾಕಿದ್ದಾರೆ ಅದರಲ್ಲಿ ಹುಲಿಯ ಉಗುರು ಇದೆ, ಅವರಿಂದ ಕಾನೂನಿನ ಉಲ್ಲಂಘನೆ ಆಗಿದೆ, ವಿನಯ ಗುರೂಜಿ ಹುಲಿಯ ಚರ್ಮದ ಮೇಲೆ ಕೂರಿದ್ದಾರೆ, ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರ್ ಸಂತೋಷ್ ಅವರನ್ನು ಬಂಧಿಸಿದ್ದೀರಿ ಅದೇ ರೀತಿ ನಟ ದರ್ಶನ್, ವಿನಯ್ ಗುರೂಜಿಯನ್ನು ಕರೆಸಿ ವಿಚಾರಿಸಿ, ಅವರು ಧರಿಸಿದ್ದು ಅಸಲಿನೋ ಅಥವಾ ನಕಲಿಯೋ ಎಂಬುದು ಅಧಿಕಾರಿಗಳು ಪರಿಶೀಲಿಸಬೇಕು, ದರ್ಶನ್ ಅವರು ಅರಣ್ಯ ರಾಯಭಾರಿ ಆಗಿದ್ದಾರೆ, ಅವರಿಗೆ ಕನಿಷ್ಠ ಪ್ರಜ್ಞೆ ಇಲ್ಲವೇ? ಅವರು ಧರಿಸಿದ ಹುಲಿ ಉಗುರು ಅಸಲಿಯೋ ಅಥವಾ ನಕಲಿಯೋ ಅನ್ನೋದನ್ನು ಪರಿಶೀಲನೆ ಮಾಡೋದು ಅರಣ್ಯಾಧಿಕಾರಿಗಳ ಕಾರ್ಯ ಎಂದರು,
ಇಂದು ರಜೆ ಇರುವ ಹಿನ್ನಲೆ ಪೊಲೀಸರೊಂದಿಗೆ ಮಾತುಕತೆ ನಡೆಸಿದ ಶಿವಕುಮಾರ್ ಆ ಬಳಿಕ ಮಲ್ಲೇಶ್ವರಂ ಅರಣ್ಯ ಭವನದಲ್ಲಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ, ದೂರು ಸ್ವೀಕರಿಸುವ ಅಧಿಕಾರಿಗಳು ನಾಳೆ ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳನ್ನು ಭೇಟಿಯಾಗಲು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ,
ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿ ವರ್ತೂರ್ ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ್ದರು, ಅದಕ್ಕೆ ಸಂಬಂಧಿಸದಂತೆ ದೂರು ದಾಖಲಾದ ಪರಿಣಾಮವಾಗಿ ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಗೆ ಹೋಗಿ ಸಂತೋಷ್ ಅವರನ್ನು ಬಂಧಿಸಿದರುಮ ನಂತರ ನ್ಯಾಯಾಲಯದ ಅದೇಶದಂತೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಅದಾದ ಬಳಿಕ ಹುಲಿ ಉಗುರು ಧರಿಸಿದ ಇನ್ನಿತರ ಸೆಲೆಬ್ರಿಟಿಗಳ ಫೋಟೋ ಕೂಡ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗುತ್ತಿದೆ,

ಅಪರಾಧ

ವೈರಲ್ ವಿಡಿಯೋ: ಲಾರಿ ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿನಿ

Published

on

ತುಮಕೂರು: ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಗುದ್ದಿದೆ. ಈ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ವೇಗವಾಗಿ ಬಂದ ಲಾರಿಯು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ವಿದ್ಯಾರ್ಥಿನಿಯತ್ತ ನುಗ್ಗಿದೆ. ಡಿಕ್ಕಿಯ ತೀವ್ರತೆಗೆ ವಿದ್ಯಾರ್ಥಿನಿ ಲಾರಿಯ ಕೆಳಗೆ ಸಿಲುಕಿದ್ದರೂ, ಅದೃಷ್ಟವಶಾತ್ ವಾಹನದ ಚಕ್ರ ಆಕೆಯ ಮೇಲೆ ಹರಿಯದೆ ಮಧ್ಯಭಾಗದಲ್ಲಿ ಸಿಲುಕಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.

ಅಪಘಾತ ಕಂಡ ಸ್ಥಳೀಯರು ಕೂಡಲೇ ಲಾರಿಯನ್ನು ನಿಲ್ಲಿಸಿ ವಿದ್ಯಾರ್ಥಿನಿಯನ್ನು ಸುರಕ್ಷಿತವಾಗಿ ಹೊರತೆಗೆದರು. ಬಳಿಕ ಗಾಯಗೊಂಡ ವಿದ್ಯಾರ್ಥಿನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಆಕೆಯ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿಯನ್ನು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಲಾರಿ ಕೆಳಗೆ ಸಿಲುಕಿದ್ದರೂ ವಿದ್ಯಾರ್ಥಿನಿ ಅದೃಷ್ಟವಶಾತ್ ಜೀವಂತವಾಗಿ ಪಾರಾಗಿರುವುದು ಹಲವರಲ್ಲಿ ಆಶ್ಚರ್ಯ ಮೂಡಿಸಿದೆ. ವಾಹನ ಚಾಲಕರು ವೇಗ ಮಿತಿಯನ್ನು ಪಾಲಿಸಬೇಕು ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂಬ ಒತ್ತಾಯವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.

Continue Reading

ದೇಶ

ಮದ್ಯಪ್ರಿಯರಿಂದ ಸರ್ಕಾರಕ್ಕೆ ಬಂಪರ್ ಆದಾಯ: ಬಿಯರ್ ಬೆಲೆ ಇಳಿಕೆ, ಮಾರಾಟ ಏರಿಕೆ

Published

on

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಆಲ್ಕೋಹಾಲ್ ಇನ್ ಬಿವರೇಜ್ (AIB)’ ಆಧಾರಿತ ಹೊಸ ತೆರಿಗೆ ವ್ಯವಸ್ಥೆಯು ಅಬಕಾರಿ ಇಲಾಖೆಯ ಆದಾಯದಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ ಈ ಹೊಸ ನೀತಿಯ ಪರಿಣಾಮವಾಗಿ ಲಘು ಆಲ್ಕೋಹಾಲ್ ಹೊಂದಿರುವ ಬಿಯರ್‌ಗಳ ಮಾರಾಟ ಹೆಚ್ಚಾಗಿದ್ದು, ಸರ್ಕಾರದ ಆದಾಯವೂ ಹೊಸ ದಾಖಲೆ ಬರೆದಿದೆ.

ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದಲ್ಲೇ ಸರ್ಕಾರಕ್ಕೆ ಒಟ್ಟು ₹10,599.29 ಕೋಟಿ ಅಬಕಾರಿ ಆದಾಯ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 14.39ರಷ್ಟು ಹೆಚ್ಚಳವಾಗಿದೆ.

ಬಿಯರ್ ಮಾರಾಟದಿಂದ ಮಾತ್ರ ₹1,914.81 ಕೋಟಿ ಆದಾಯ ಬಂದಿದ್ದು, ಕಳೆದ ವರ್ಷದ ಇದೇ ಅವಧಿಗಿಂತ ₹312.67 ಕೋಟಿ ಹೆಚ್ಚುವರಿ ಆದಾಯ ದಾಖಲಾಗಿದೆ. ಭಾರತೀಯ ಮದ್ಯ (IML) ಮಾರಾಟದಿಂದ ₹8,394.32 ಕೋಟಿ ಆದಾಯ ಹರಿದುಬಂದಿದೆ.

ಹೊಸ ತೆರಿಗೆ ವ್ಯವಸ್ಥೆಯಿಂದ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಲಾಗರ್ ಬಿಯರ್‌ಗಳ ಬೆಲೆ ಇಳಿಕೆಯಾಗಿರುವುದು ಗ್ರಾಹಕರ ಖರೀದಿ ಹೆಚ್ಚಲು ಕಾರಣವಾಗಿದೆ. ವ್ಯಾಪಾರಿಗಳ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಬಿಯರ್ ಮಾರಾಟದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ದಾಸ್ತಾನು ವೇಗವಾಗಿ ಖಾಲಿಯಾಗಿದೆ.

ರಾಜ್ಯ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹45,000 ಕೋಟಿ ಅಬಕಾರಿ ಆದಾಯ ಸಂಗ್ರಹಿಸುವ ಗುರಿ ಹೊಂದಿದೆ. ಇದರ ಭಾಗವಾಗಿ ಬಳಕೆಯಾಗದೆ ಉಳಿದಿರುವ 483 ಚಿಲ್ಲರೆ ಮದ್ಯದ ಅಂಗಡಿ (CL-2A) ಹಾಗೂ 96 ಬಾರ್ (CL-9A) ಪರವಾನಗಿಗಳನ್ನು ಇದೇ ತಿಂಗಳ ಕೊನೆಯಲ್ಲಿ ಆನ್‌ಲೈನ್ ಹರಾಜು ಮೂಲಕ ವಿತರಿಸಲು ಇಲಾಖೆ ಯೋಜನೆ ರೂಪಿಸಿದೆ. ಈ ಪರವಾನಗಿಗಳನ್ನು ಐದು ವರ್ಷಗಳ ಅವಧಿಗೆ ನೀಡಲಾಗಲಿದ್ದು, ಇದರಿಂದ ಸರ್ಕಾರದ ಆದಾಯ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ.

ಹಣಕಾಸು ಇಲಾಖೆ ಅಧಿಕಾರಿಗಳ ಪ್ರಕಾರ, ಹೊಸ AIB ತೆರಿಗೆ ನೀತಿಯ ಉದ್ದೇಶ ಹೆಚ್ಚಿನ ಆಲ್ಕೋಹಾಲ್ ಹೊಂದಿರುವ ಪಾನೀಯಗಳ ಬಳಕೆಯನ್ನು ಕಡಿಮೆ ಮಾಡಿ, ಕಡಿಮೆ ಆಲ್ಕೋಹಾಲ್ ಹೊಂದಿರುವ ಪಾನೀಯಗಳ ಬಳಕೆಗೆ ಉತ್ತೇಜನ ನೀಡುವುದಾಗಿದೆ.

Continue Reading

ಅಪರಾಧ

ಆಸ್ಪತ್ರೆ ದೌರ್ಜನ್ಯ ಪ್ರಕರಣ: ವೈರಲ್ ದೃಶ್ಯಗಳ ನಡುವೆ ಕಾರ್ಪೊರೇಟರ್ ಸ್ಪಷ್ಟನೆ ಏನು?

Published

on

ನವದೆಹಲಿ: ಮುಂಬೈ ಸಮೀಪದ ಆಸ್ಪತ್ರೆಯೊಂದರಲ್ಲಿ ಮಹಿಳಾ ವೈದ್ಯೆ ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಶಿವಸೇನಾ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಹಾಗೂ ಅವರ ಬೆಂಬಲಿಗರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ನವಜಾತ ಶಿಶುಗಳ ತೀವ್ರ ನಿಗಾ ಘಟಕ (NICU)ದಲ್ಲಿ ಹಾಸಿಗೆಗಳ ಕೊರತೆಯ ವಿಚಾರದಿಂದ ಆರಂಭವಾದ ಮಾತಿನ ಚಕಮಕಿ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವೈದ್ಯರು ಸಂಬಂಧಿಕರಿಗೆ ಆಸ್ಪತ್ರೆಯಲ್ಲಿ ಸದ್ಯ ಯಾವುದೇ NICU ಹಾಸಿಗೆ ಲಭ್ಯವಿಲ್ಲ ಎಂದು ತಿಳಿಸಿದ್ದಾಗಿ ವರದಿಯಾಗಿದೆ. ಬಳಿಕ ಈ ವಿಚಾರಕ್ಕೆ ಸಂಬಂಧಿಸಿ ಕಾರ್ಪೊರೇಟರ್ ಆಸ್ಪತ್ರೆಗೆ ಆಗಮಿಸಿದ್ದು, ಗಲಾಟೆ ನಡೆದಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳಾ ವೈದ್ಯೆಯೊಬ್ಬರು ತಮ್ಮ ಮೊಬೈಲ್ ಬಳಸಲು ಪ್ರಯತ್ನಿಸುವ ವೇಳೆ ಅವರತ್ತ ಧಾವಿಸುವ ವ್ಯಕ್ತಿ ಕಾಣಿಸಿಕೊಂಡಿದ್ದು, ಬಳಿಕ ಆಸ್ಪತ್ರೆಯ ಸಿಬ್ಬಂದಿ ಮತ್ತು ನರ್ಸ್‌ಗಳೊಂದಿಗೆ ತಳ್ಳಾಟ-ನೂಕಾಟ ನಡೆದಿರುವ ದೃಶ್ಯಗಳು ಗೋಚರಿಸುತ್ತವೆ. ಈ ವಿಡಿಯೋ ಆಧರಿಸಿ ವೈದ್ಯರ ಸಂಘಟನೆಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಮೇಶ್ ಮ್ಹಾತ್ರೆ, ಮಹಿಳಾ ವೈದ್ಯೆಯ ಮೇಲೆ ಹಲ್ಲೆ ನಡೆಸಿಲ್ಲ ಎಂದು ಹೇಳಿದ್ದಾರೆ. ವೈದ್ಯರು ತಮ್ಮ ದೂರುಗಳಿಗೆ ಸ್ಪಂದಿಸದ ಕಾರಣ ಅವರ ಕೈಯಲ್ಲಿದ್ದ ಮೊಬೈಲ್ ಕೆಳಗೆ ಬೀಳುವಂತೆ ಮಾಡಿದ್ದೇನೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಕ್ರಮದಿಂದ ರೋಗಿಯ ಜೀವ ಉಳಿದಿದೆ ಎಂಬ ವಾದವನ್ನೂ ಮುಂದಿಟ್ಟಿದ್ದಾರೆ.

ಈ ಘಟನೆ ವೈದ್ಯರ ಸುರಕ್ಷತೆ, ಆಸ್ಪತ್ರೆಗಳಲ್ಲಿ ಭದ್ರತಾ ವ್ಯವಸ್ಥೆ ಹಾಗೂ ಸಾರ್ವಜನಿಕ ಪ್ರತಿನಿಧಿಗಳ ವರ್ತನೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ವೈರಲ್ ವಿಡಿಯೋ ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Continue Reading

Trending