ಬೆಂಗಳೂರು
ಡಿಕೆಶಿ ಮಾಸ್ಟರ್ ಪ್ಲ್ಯಾನ್ ಬಿಬಿಎಂಪಿ ವಿಭಜನೆ; ಬೆಂಗಳೂರು ದಕ್ಷಿಣದತ್ತ ರಾಮನಗರ
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕನಕಪುರವನ್ನು ಸರ‍್ಪಡೆ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹಿಂದೆ ಹಲವು ರಾಜಕೀಯ ಲೆಕ್ಕಾಚಾರಗಳು ಅಡಗಿದೆ ಎನ್ನಲಾಗಿದೆ. ಅಲ್ಲದೆ, ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಚಿಂತನೆಯಲ್ಲಿದ್ದಾರಾ ಎಂಬ ಅನುಮಾನವನ್ನೂ ಮೂಡಿಸಿದೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸಿ, ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ಲ್ಯಾನ್ ಅನ್ನು ಅವರು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ತಂತ್ರಗಾರಿಕೆಯನ್ನು ವಿರೋಧ ಮಾಡಿದೆ. ಇದಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಮರು ನಾಮಕರಣದ ಪ್ರಸ್ತಾಪದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಆಪ್ತ ವಲಯದಲ್ಲಿ ಈ ರ‍್ಚೆ ಜೋರಾಗಿದೆ. ಬಿಬಿಎಂಪಿ ಚುನಾವಣೆಯನ್ನು ಮುಂದೂಡುವುದರ ಜತೆಗೆ ಬಿಬಿಎಂಪಿ ವಿಭಜನೆ ಸಂರ‍್ಭದಲ್ಲಿ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣದ ಚಿಂತನೆ ನಡೆಸಲಾಗಿದೆ.
ಒಂದು ವೇಳೆ ರ‍್ಕಾರ ಸಮಿತಿಯ ಶಿಫಾರಸನ್ನು ಒಪ್ಪಿದರೆ, ವರ‍್ಡ್ ಮರುವಿಂಗಡಣೆ ಆಗಬೇಕು. ಇದಕ್ಕಾಗಿ ಬಿಬಿಎಂಪಿ ಚುನಾವಣೆ ಸಹ ಮುಂದೂಡಿಕೆ ಆಗಲಿದೆ. ಹಾಗಾಗಿ ಬಿಬಿಎಂಪಿ ವಿಭಜನೆ ಸಂರ‍್ಭದಲ್ಲಿ ರಾಮನಗರಕ್ಕೆ ಮರು ನಾಮಕರಣ ಮಾಡುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಬಿಬಿಎಂಪಿ ವಿಭಜನೆಗೆ ಬಿ.ಎಸ್. ಪಾಟೀಲ್ ನೇತೃತ್ವದಲ್ಲಿ ಸಮಿತಿ ಈಗಾಗಲೇ ಒಂದು ಸುತ್ತಿನ ವರದಿಯನ್ನು ರ‍್ಕಾರಕ್ಕೆ ಸಲ್ಲಿಸಿಯಾಗಿದೆ. ಆ ವರದಿಗೆ ಪುರ‍್ಜನ್ಮ ನೀಡುವುದು ಡಿ.ಕೆ. ಶಿವಕುಮಾರ್ ಪ್ಲ್ಯಾನ್ ಆಗಿದೆ. ಬಿಬಿಎಂಪಿಯನ್ನು ನಾಲ್ಕು ಅಥವಾ ಐದು ಭಾಗಗಳಾಗಿ ವಿಂಗಡಿಸುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ಚಿಂತನೆಯನ್ನು ನಡೆಸಲಾಗಿದೆ. ಐದು ವಲಯಗಳಾದರೆ ಐವರು ಮೇಯರ್, ಐವರು ಆಯುಕ್ತರನ್ನು ನೇಮಕ ಮಾಡುವ ಪ್ಲ್ಯಾನ್ ಅನ್ನೂ ಹೊಂದಲಾಗಿದೆ.
ಐದು ವಲಯಗಳಲ್ಲೂ ಕನಿಷ್ಠ ೭೦ ಹಾಗೂ ಗರಿಷ್ಠ ೧೦೦ ವರ‍್ಡ್ ಇರುವಂತೆ ನೋಡಿಕೊಳ್ಳುವುದು. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸರ‍್ಪಡೆ ಆಗುತ್ತಿರುವ ಮಾಜಿ ಕರ‍್ಪೊರೇರ‍್ಗಳಿಗೆ ಎಲ್ಲರಿಗೂ ಅವಕಾಶ ಸಿಗಲಿದೆ ಎಂದು ಡಿ.ಕೆ. ಶಿವಕುಮಾರ್ ಅಭಯ ನೀಡುತ್ತಿದ್ದಾರೆ.
ಒಂದು ವೇಳೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆಗೆ ರಾಜ್ಯ ರ‍್ಕಾರ ಮುಂದಾದರೆ ಸದ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಯುವುದಿಲ್ಲ. ಬಿಬಿಎಂಪಿ ಚುನಾವಣೆ ಮುಂದೂಡುವ ಭಾಗವಾಗಿ ಬಿ.ಎಸ್. ಪಾಟೀಲ್ ವರದಿ ಅನುಷ್ಠಾನ ಮಾಡಲು ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ದೇಶ
PUC Result ಶಾಕ್: ಇಂದು ಇಲ್ಲ, ಏಪ್ರಿಲ್ 9ಕ್ಕೆ ಪ್ರಕಟ!
ಬೆಂಗಳೂರು, ಏಪ್ರಿಲ್ 07: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗಿದೆ. ಇಂದು (ಏಪ್ರಿಲ್ 07) ಫಲಿತಾಂಶ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. Karnataka School Examination and Assessment Board (KSEAB) ಈಗ ಹೊಸ ದಿನಾಂಕವಾಗಿ ಏಪ್ರಿಲ್ 9ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯದಾದ್ಯಂತ 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಫಲಿತಾಂಶ ಇಂದು ಪ್ರಕಟವಾಗಲಿದೆ ಎಂಬ ನಿರೀಕ್ಷೆ ಇದ್ದರೂ, ಅಧಿಕೃತ ಘೋಷಣೆ ಇಲ್ಲದ ಕಾರಣ ವಿದ್ಯಾರ್ಥಿಗಳಲ್ಲಿ ಗೊಂದಲ ಮತ್ತು ಆತಂಕ ಉಂಟಾಯಿತು.
ಇದೀಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಏಪ್ರಿಲ್ 9ರಂದು ಫಲಿತಾಂಶ ಆನ್‌ಲೈನ್‌ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ Registration Number ಹಾಗೂ Date of Birth ನಮೂದಿಸಿ ಫಲಿತಾಂಶ ಪರಿಶೀಲಿಸಬಹುದು.
ಇನ್ನೊಂದೆಡೆ, ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಈ ಕಾರಣದಿಂದ ಕೆಲವು ಪ್ರದೇಶಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಫಲಿತಾಂಶ ಪ್ರಕಟಿಸಲು ಅಡಚಣೆ ಎದುರಾಗಿದೆ.
ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿರುವುದರಿಂದ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ.
ಒಟ್ಟಿನಲ್ಲಿ, ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಲ್ಪಟ್ಟಿದ್ದು, ವಿದ್ಯಾರ್ಥಿಗಳು ಇನ್ನೂ ಎರಡು ದಿನ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ದೇಶ
“ಬ್ರೆಡ್ ಇಲ್ಲ ಅಂದ್ರೆ ಕೇಕ್ ತಿನ್ನಿ!” – ಜೋಶಿಗೆ ತಿರುಗೇಟು
ಬಾಗಲಕೋಟೆ: ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ವಿಚಾರ ರಾಜಕೀಯ ಕಾಳಗಕ್ಕೆ ತಿರುಗಿದೆ. ಕೇಂದ್ರ ಸಚಿವ Pralhad Joshi ಅವರು “ಗ್ಯಾಸ್ ಇಲ್ಲದಿದ್ದರೆ ಪೆಟ್ರೋಲ್ ಬಳಸಿ” ಎಂಬ ಸಲಹೆ ನೀಡಿದ್ದಕ್ಕೆ ಕೆಪಿಸಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕೆಪಿಸಿಸಿ ವಕ್ತಾರ A. N. Nataraj Gowda ಅವರು ಈ ಹೇಳಿಕೆಯನ್ನು ಫ್ರೆಂಚ್ ಕ್ರಾಂತಿಯ “ಬ್ರೆಡ್ ಇಲ್ಲದಿದ್ದರೆ ಕೇಕ್ ತಿನ್ನಿ” ಎಂಬ ಮನೋಭಾವಕ್ಕೆ ಹೋಲಿಸಿ ಕಿಡಿಕಾರಿದ್ದಾರೆ. “ದಿನಗೂಲಿ ನಂಬಿ ಬದುಕುವ ಆಟೋ ಚಾಲಕರಿಗೆ ಪೆಟ್ರೋಲ್ ಬಳಸುವಂತೆ ಹೇಳುವುದು ಆರ್ಥಿಕ ವಾಸ್ತವತೆ ತಿಳಿಯದ ಮಾತು” ಎಂದು ಆರೋಪಿಸಿದರು.
ಕೇಂದ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಮೂರು ಪ್ರಮುಖ ಪ್ರಶ್ನೆಗಳನ್ನು ಎತ್ತಿದೆ. ಪೆಟ್ರೋಲ್ ದರ ಗ್ಯಾಸ್‌ಗಿಂತ ಬಹಳ ಹೆಚ್ಚಿದ್ದು, ಅದರಿಂದ ಬಡ ಚಾಲಕರ ಜೀವನ ಸಾಗುವುದೇ ಹೇಗೆ ಎಂದು ಪ್ರಶ್ನಿಸಿದೆ. ಜೊತೆಗೆ, ಹೆಚ್ಚಿನ ಆಟೋಗಳು Dedicated LPG/CNG ಎಂಜಿನ್ ಹೊಂದಿರುವುದರಿಂದ ಪೆಟ್ರೋಲ್ ಬಳಸುವುದು ತಾಂತ್ರಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದೆ.
ಇನ್ನು, ಇಂಧನ ಪೂರೈಕೆಯನ್ನು ನಿಯಂತ್ರಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದೇ ಆಗಿದ್ದು, ಖಾಸಗಿ ಕಂಪನಿಗಳಿಂದ ಉಂಟಾಗಿರುವ ಕೃತಕ ಅಭಾವದ ಮೇಲೆ ಕ್ರಮ ಕೈಗೊಳ್ಳದಿರುವುದೇಕೆ ಎಂದು ಪ್ರಶ್ನಿಸಿದೆ. “ಅಂತಾರಾಷ್ಟ್ರೀಯ ಬಿಕ್ಕಟ್ಟು” ನೆಪವೊಡ್ಡಿ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಆರೋಪಿಸಲಾಗಿದೆ.
ಈ ನಡುವೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿದ ಕೆಪಿಸಿಸಿ, ಸಚಿವರು ತಕ್ಷಣವೇ ಆಟೋ ಚಾಲಕರಲ್ಲಿ ಕ್ಷಮೆ ಕೇಳಬೇಕು ಮತ್ತು ಎಲ್‌ಪಿಜಿ ಪೂರೈಕೆಯನ್ನು ಸುಧಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ಒಟ್ಟಿನಲ್ಲಿ, ಎಲ್‌ಪಿಜಿ ಕೊರತೆ ಸಮಸ್ಯೆ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ಬಡ ಆಟೋ ಚಾಲಕರ ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ.
ದೇಶ
ಬೆಂಗಳೂರು ಹೃದಯ ಸ್ಪರ್ಶಿ ಕಥೆ: ಯುವತಿಗೆ ನೆರವಾದ ಅಪರಿಚಿತರು
ಬೆಂಗಳೂರು: ಸಿಲಿಕಾನ್ ಸಿಟಿಯ ಕತ್ತಲ ರಾತ್ರಿಯಲ್ಲಿ ಯುವತಿಯೊಬ್ಬಳಿಗೆ ರಕ್ಷೆಯಾಗಿ ನಿಂತ ಸಾರಿಗೆ ಸಿಬ್ಬಂದಿ ಹಾಗೂ ಬೈಕ್ ಟ್ಯಾಕ್ಸಿ ಚಾಲಕನ ಮಾನವೀಯತೆ ಈಗ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ನಗರದ ಗದ್ದಲದ ನಡುವೆ ಮಾನವೀಯ ಮೌಲ್ಯಗಳು ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಸೋಮವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಐಶ್ವರ್ಯ ಎಂಬ ಯುವತಿ Bangalore Metropolitan Transport Corporation ಬಸ್‌ನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ನಿಲ್ದಾಣದಿಂದ ಕಾಡುಗೋಡಿಗೆ ಬಂದಿಳಿದಿದ್ದರು. ಆ ಸಮಯದಲ್ಲಿ ಸುತ್ತಮುತ್ತ ಸಂಪೂರ್ಣ ಕತ್ತಲು ಆವರಿಸಿಕೊಂಡಿದ್ದು, ರಸ್ತೆಗಳಲ್ಲಿ ಜನರ ಓಡಾಟವೂ ಇರಲಿಲ್ಲ. ನಿರ್ಜನ ಪ್ರದೇಶದಲ್ಲಿ ಒಬ್ಬಳೇ ಸಿಲುಕಿದ ಯುವತಿ ಮನೆಗೆ ತೆರಳಲು ಕ್ಯಾಬ್ ಬುಕ್ ಮಾಡಲು ಪ್ರಯತ್ನಿಸಿದರೂ ಯಾವುದೇ ವಾಹನ ಲಭ್ಯವಾಗಲಿಲ್ಲ.
ಈ ಸಂದರ್ಭದಲ್ಲಿ ಯುವತಿಯ ಸ್ಥಿತಿಯನ್ನು ಗಮನಿಸಿದ ಬಿಎಂಟಿಸಿ ಸಿಬ್ಬಂದಿ, ಆಕೆಯನ್ನು ಬಸ್ ಸ್ಟಾಪ್‌ನಲ್ಲಿ ಬಿಟ್ಟು ತೆರಳದೆ ಸುರಕ್ಷಿತ ವಾಹನ ಸಿಗುವವರೆಗೂ ಅಲ್ಲಿಯೇ ಉಳಿದುಕೊಂಡರು. ಅವರ ಈ ಕಾಳಜಿ ಮಾನವೀಯತೆಗೆ ಉತ್ತಮ ಉದಾಹರಣೆಯಾಗಿದೆ.
ಅದೇ ಸಮಯದಲ್ಲಿ ಆ ಮಾರ್ಗವಾಗಿ ಬಂದ Rapido ಚಾಲಕನೊಬ್ಬ ಯುವತಿಯ ನೆರವಿಗೆ ಧಾವಿಸಿದರು. ಬಿಎಂಟಿಸಿ ಸಿಬ್ಬಂದಿ ಚಾಲಕನ ವಿವರಗಳನ್ನು ಖಚಿತಪಡಿಸಿಕೊಂಡ ಬಳಿಕವೇ ಯುವತಿಯನ್ನು ಅವರೊಂದಿಗೆ ಕಳುಹಿಸಿದರು. ವಿಶೇಷವೆಂದರೆ, ಆ ಚಾಲಕ ಯಾವುದೇ ಹಣ ಪಡೆಯದೆ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಘಟನೆಯ ಕುರಿತು ಐಶ್ವರ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ತಮಗೆ ನೆರವಾದ ಬಿಎಂಟಿಸಿ ಸಿಬ್ಬಂದಿ ಮತ್ತು ರ‍್ಯಾಪಿಡೋ ಚಾಲಕನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಹೃದಯಸ್ಪರ್ಶಿ ಘಟನೆ ಈಗ ವೈರಲ್ ಆಗಿ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.
-
ದೇಶ24 hours agoಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್?: AI ರೇಸ್ನಲ್ಲಿ ಟೆಕ್ ದೈತ್ಯರ ಹೊಸ ಹೆಜ್ಜೆ
-
ಚುನಾವಣೆ23 hours ago‘ಆಪರೇಷನ್ ಸಿಂಧೂರ್’ ವಿವಾದ: ಕಾಂಗ್ರೆಸ್ ವಿರುದ್ಧ ಮೋದಿ ತೀವ್ರ ಆರೋಪ
-
ದೇಶ23 hours agoಹಾರ್ಮುಜ್ ಸಮಸ್ಯೆ ಪರಿಹಾರಕ್ಕೆ ಭಾರತ ಪ್ರಮುಖ ಪಾತ್ರ?: ಇರಾನ್ ವಿಶ್ವಾಸ
-
ದೇಶ2 hours agoಇರಾನ್ ಶಾಕ್: ಹೊಸ ಸರ್ವೋಚ್ಚ ನಾಯಕ ಗಂಭೀರ ಸ್ಥಿತಿ!
-
ದೇಶ4 hours ago4 ಗಂಟೆಗೂ ಬೋರ್ ಇಲ್ಲ: ಕೊಹ್ಲಿ ರಿವ್ಯೂ ವೈರಲ್
-
ದೇಶ4 hours agoಪಾಕಿಸ್ತಾನ ಬೆದರಿಕೆ: ಮೋದಿ ಮೌನಕ್ಕೆ ಮಮತಾ ಕಿಡಿ!
-
ದೇಶ3 hours agoBengaluru : ₹180ಗೆ ತೆಂಗಿನ ನೀರು? ಬೆಂಗಳೂರಲ್ಲಿ ಏನಾಗ್ತಿದೆ ನೋಡಿ!
-
ದೇಶ3 hours agoಯುದ್ಧ ಭೀತಿ ನಡುವೆ ಇರಾನ್ ಯುವಕರ ಹೊಸ ಹೋರಾಟ
