Connect with us

ರಾಜಕೀಯ

ಡಿಸೆಂಬರ್ ನವೆಂಬರ್ ತಿಂಗಳಲ್ಲಿ ಜಾತಿಗಣತಿ ವರದಿ ಸ್ವೀಕಾರ ಸಿಎಂ ಸಿದ್ದರಾಮಯ್ಯ

ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಸರಬರಾಜು: ಸಿಎಂ ಸಿದ್ದರಾಮಯ್ಯ
ಡಿಸೆಂಬರ್ ನವೆಂಬರ್ ತಿಂಗಳಲ್ಲಿ ಜಾತಿಗಣತಿ ವರದಿ ಸ್ವೀಕಾರ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ವರದಿ ಸ್ವೀಕರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ, ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು, ನಂತರ ಅವರು ವರಿದಿ ಸಲ್ಲಿಸುವಾಗ ಅಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರ್‌ಸ್ವಾಮಿ ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿಯನ್ನು ಪಡೆಯಲಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ, ಇದೀಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಸಲ್ಲಿಸುವದಾಗಿ ತಿಳಿಸಿದ್ದಾರೆ, ಅವರು ಕೊಟ್ಟಾಗ ಸ್ವೀಕರಿಸಲಾಗುವುದ ಎಂದು ಸಿದ್ದರಾಮಯ್ಯ ಹೇಳಿದ್ದಾರೆ, ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ಸರ್ಕಾರ ಜಾತಿ ಜನಗಣತಿ ವರದಿಯನ್ನು ಬಹಿರಂಗಗೊಳಿಸಿದ ಬಳಿಕ ಇತರ ರಾಜ್ಯಗಳಲ್ಲೂ ಜಾತಿ ಜನಗಣತಿ ಬಗ್ಗೆ ಬೇಡಿಕೆ ಕೇಳೀ ಬಂದಿದ್ದು ಜಾತಿ ಗಣತಿ ಬಗ್ಗೆ ಕಾಂಗ್ರೆಸ್ ಬಹಳ ಉತ್ಸುಕತೆ ತೋರುತ್ತಿದೆ,

ಬೆಂಗಳೂರು

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಹೆಸರು-ಡಿಸಿಎಂ ಡಿಕೆಶಿ

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,
ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿಕೆ ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು,
ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ, ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ, ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಧೆ ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ, ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ, ಎಂದು ಬಣ್ಣೀಸಿದರು,

Continue Reading

ದೇಶ

ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,

ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,

Continue Reading

ರಾಜಕೀಯ

ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ “ಜನಪರ ವಿಧಾನ” ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತಕ್ಕೆ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ್ದರ ಕುರಿತು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಸಿದ್ದರಾಮಯ್ಯ ಅಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಪ್ರಧಾನಿ ಮೋದಿ ಅವರ ನಾಯಕತ್ವ ನೋಡಿ ಕಲಿಯಬೇಕಿದೆ ಎಂದು ಹೇಳಿದರು.

ನಾನು ಕೂಡ ಮೊದಲು ಕಾಂಗ್ರೆಸ್ ಜೊತೆಗಿದ್ದೆ. ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ಅಗಾಧ ವ್ಯತ್ಯಾಸವಿದೆ. ಕಾಂಗ್ರೆಸ್ ನಾಯಕರಿಗೆ ನೈತಿಕ ಸಮಗ್ರತೆಯ ಕೊರತೆಯಿದೆ. ಮೋದಿಯವರ ಜನಪರ ಆಡಳಿತವನ್ನು ನೋಡಿ, ಅವರು ತಮ್ಮದೇ ಆದ ನ್ಯೂನತೆಗಳ ಬಗ್ಗೆ ಅರಿತುಕೊಳ್ಳುತ್ತಿದ್ದಾರೆ.

ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಮಾತನಾಡಿ, ಇದು ನರಿ ಮತ್ತು ಕುರಿಮರಿಯ ಕಥೆಯಂತೆ ಎಂದು ವ್ಯಂಗ್ಯವಾಡಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ ಈ ವಿಷಯದಲ್ಲಿ ಆತುರದಿಂದ ವರ್ತಿಸುವುದಿಲ್ಲ ಎಂದು ನಾನು ನಂಬುತ್ತೇನೆ. ನಾನು ಇನ್ನೂ ಯಾವುದೇ ನಿಲುವನ್ನು ತೆಗೆದುಕೊಂಡಿಲ್ಲ. ಅದು ಪ್ರಯೋಜನಕಾರಿ ಎಂದು ತೋರಿದರೆ, ನಾನು ಅದನ್ನು ಬೆಂಬಲಿಸುತ್ತೇನೆ

Continue Reading

Trending