ದೇಶ
ರಾಹುಲ್ ಗಾಂಧಿ ನಿರ್ಧಾರದಿಂದ ರಾಜ್ಯ ಕಾಂಗ್ರೆಸ್‌ಗೆ ಹೊಸ ಚೈತನ್ಯ: ಪಿ ಗಾಂಧಿ
ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಜವಹರಲಾಲ್ ನೆಹರೂ ಅವರ 62ನೇ ಪುಣ್ಯತಿಥಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಂಟ್ರೋಲ್ ರೂಮ್ ಚೇರ್ಮನ್ ಪಿ ಗಾಂಧಿ ಅವರು ಮಾಜಿ ಪ್ರಧಾನಮಂತ್ರಿ ಜವಹರಲಾಲ್ ನೆಹರೂ ಅವರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರೀತಿಯಿಂದ ‘ಚಾಚಾ ನೆಹರೂ’ ಎಂದು ಕರೆಯಲ್ಪಡುವ ಜವಹರಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನಮಂತ್ರಿಯಾಗಿದ್ದು, ಸ್ವತಂತ್ರ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು. 1947ರ ಆಗಸ್ಟ್ 15ರಿಂದ 1964ರ ಮೇ 27ರವರೆಗೆ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ ಅವರು, ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಯ ದಾರಿಯಲ್ಲಿ ದೇಶವನ್ನು ಮುನ್ನಡೆಸಿದರು ಎಂದು ಹೇಳಿದರು.
ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಪಿ ಗಾಂಧಿ, ತಾವು ಕೂಡ ಎಂಎಲ್‌ಸಿ ಆಕಾಂಕ್ಷಿಯಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರ ಅನುಮತಿ ಪಡೆದು ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಪರ್ವ ಆರಂಭವಾಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರವನ್ನು ನೋಡಲು ರಾಜ್ಯದ ಜನ ಕಾತರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರು.
ರಾಹುಲ್ ಗಾಂಧಿ ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರಗಳು ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ತರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಗೊಂದಲ ಇಲ್ಲ, ಪಕ್ಷದ ಕಾರ್ಯಕರ್ತರಿಗೆ ಇದು ಹೆಮ್ಮೆಯ ವಿಚಾರ ಎಂದು ಹೇಳಿದರು.
ಯಶವಂತಪುರ ಕ್ಷೇತ್ರದ ನಿವಾಸಿಯಾಗಿರುವ ನಾನು ಕಾಂಗ್ರೆಸ್ ಪಕ್ಷವನ್ನು ಕುಟುಂಬದಂತೆ ಭಾವಿಸಿದ್ದೇನೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದು, ಇದೀಗ ಎಂಎಲ್‌ಸಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ಪಿ ಗಾಂಧಿ ಹೇಳಿದರು.
ದೇಶ
Latest News : ಮಾತಿಗೆ ಬದ್ಧರಾಮಯ್ಯ ನವ ನಾಯಕತ್ವಕ್ಕೆ ನಾಂದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದರೊಂದಿಗೆ ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವಶಾಲಿ ನಾಯಕರೊಬ್ಬರ ಸುದೀರ್ಘ ಅಧ್ಯಾಯ ಅಂತ್ಯದ ಹಂತ ತಲುಪಿದಂತಾಗಿದೆ.
ಸಿದ್ದರಾಮನಹುಂಡಿ ಎಂಬ ಸಣ್ಣ ಹಳ್ಳಿಯಿಂದ ರಾಜಕೀಯ ಪಯಣ ಆರಂಭಿಸಿದ್ದ ಸಿದ್ದರಾಮಯ್ಯ, ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿ ಅಹಿಂದ ರಾಜಕಾರಣದ ಪ್ರಬಲ ಧ್ವನಿಯಾಗಿ ಹೊರಹೊಮ್ಮಿದ್ದರು. ಇದೀಗ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಬುಧವಾರ ದಿನಪೂರ್ತಿ ಸಿಎಂ ನಿವಾಸ ‘ಕಾವೇರಿ’ಯಲ್ಲಿ ಆಪ್ತ ಸಚಿವರು ಹಾಗೂ ಶಾಸಕರ ಸಭೆಗಳು ನಡೆದವು. ಹಲವರು ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಮನವಿ ಮಾಡಿದರೂ, ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದರು. ವಿಧಾನಸೌಧದಲ್ಲಿ ಜಾತಿ ಗಣತಿ ವರದಿ ಸ್ವೀಕರಿಸಿದ ಸಂದರ್ಭದಲ್ಲೂ ಸಿಎಂ ಭಾವುಕರಾಗಿ ಕಾಣಿಸಿಕೊಂಡರು.
ಇನ್ನೊಂದೆಡೆ, ಸಿದ್ದರಾಮಯ್ಯ ರಾಜೀನಾಮೆಯ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಹೈಕಮಾಂಡ್ ಕಳುಹಿಸುವ ವೀಕ್ಷಕರ ಸಮ್ಮುಖದಲ್ಲಿ ಶಾಸಕರ ಸಭೆ ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ್ ಹೆಸರೂ ಕೇಳಿಬರುತ್ತಿದೆಯಾದರೂ ಸ್ಪಷ್ಟತೆ ಇಲ್ಲ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಹೊಸ ಮುಖದ ಹುಡುಕಾಟ ಆರಂಭವಾಗಿದ್ದು, ಸತೀಶ್ ಜಾರಕಿಹೊಳಿ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಜೊತೆಗೆ ಜಾತಿ ಸಮೀಕರಣದ ಆಧಾರದ ಮೇಲೆ ಮೂರು ಡಿಸಿಎಂ ಹುದ್ದೆಗಳ ಸೃಷ್ಟಿಯ ಸಾಧ್ಯತೆಯೂ ಚರ್ಚೆಯಲ್ಲಿದೆ.
ರಾಜಕೀಯ ವಲಯದಲ್ಲಿ ಇದೀಗ ಹೊಸ ಸಂಪುಟ ರಚನೆ, ಹಿರಿಯ ಸಚಿವರ ಭವಿಷ್ಯ ಹಾಗೂ ಯುವ ನಾಯಕರಿಗೆ ಅವಕಾಶ ಎಂಬ ಚರ್ಚೆಗಳು ಜೋರಾಗಿವೆ. ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ಮುಂದಿನ ನಿರ್ಧಾರ ರಾಜ್ಯ ರಾಜಕೀಯದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆ ಇದೆ.
ದೇಶ
‘ಸಿದ್ದರಾಮಯ್ಯ ಹಳೇ ಹುಲಿ’: ಶೋಭಾ ಕರಂದ್ಲಾಜೆ ಕುತೂಹಲಕಾರಿ ಹೇಳಿಕೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗೆ ಬಿಜೆಪಿ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಲ ತಿಂಗಳ ಹಿಂದೆ ನೀಡಿದ್ದ ಸಂದರ್ಶನದಲ್ಲಿ “ಎರಡೂವರೆ ವರ್ಷಗಳ ಬಳಿಕ ಅಧಿಕಾರ ಹಸ್ತಾಂತರವಾಗಲಿದೆ” ಎಂದು ಹೇಳಿದ್ದನ್ನು ಇದೀಗ ಮತ್ತೆ ನೆನಪಿಸಿಕೊಳ್ಳಲಾಗುತ್ತಿದೆ. ಈ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಬಿಜೆಪಿ ನಾಯಕ ಸುನಿಲ್ ಕುಮಾರ್ ಮಾತನಾಡಿ, “ಹಿಂದುಳಿದ ವರ್ಗದ ರಾಜಕೀಯ ಏಳಿಗೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ದೇವರಾಜ ಅರಸು ಅವರನ್ನು ಹಿಂದೆ ಹೇಗೆ ಕೆಳಗಿಳಿಸಲಾಯಿತೋ, ಅದೇ ರೀತಿ ಈಗ ಸಿದ್ದರಾಮಯ್ಯರನ್ನು ಅಧಿಕಾರದಿಂದ ದೂರ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.
ವಿಪಕ್ಷ ನಾಯಕ ಆರ್. ಅಶೋಕ್, “ರಾಜ್ಯಕ್ಕೆ ಬೇಕಾಗಿರುವುದು ಮುಖ್ಯಮಂತ್ರಿ ಬದಲಾವಣೆ ಅಲ್ಲ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ಬದಲಾವಣೆ” ಎಂದು ಟೀಕಿಸಿದರು. ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, “ಸಿದ್ದರಾಮಯ್ಯ ಹಳೇ ಹುಲಿ. ಅವರು ರಾಜೀನಾಮೆ ಕೊಡುವವರೆಗೆ ಯಾವುದೇ ಊಹೆ ಖಚಿತವಲ್ಲ” ಎಂದು ಅಭಿಪ್ರಾಯಪಟ್ಟರು.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ದಲಿತರು ಕಾಂಗ್ರೆಸ್‌ಗೆ ಕೇವಲ ವೋಟ್ ಬ್ಯಾಂಕ್ ಮಾತ್ರ” ಎಂದು ಆರೋಪಿಸಿದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಬೇಸರವಿಲ್ಲ, ಅವರು ನನ್ನ ಸ್ನೇಹಿತರು ಎಂದೂ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿ, “ಹೊಸ ಎಟಿಎಂ ಗೇಟ್‌ಕೀಪರ್ ಹುಡುಕುವ ಕೆಲಸವೇ ನಡೆಯುತ್ತಿದೆ” ಎಂದು ಟೀಕಿಸಿದರು.
ಇನ್ನೊಂದೆಡೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಸಿದ್ದರಾಮಯ್ಯರನ್ನು ಕೆಳಗಿಳಿಸುವುದು ಸಾಮಾನ್ಯ ನಿರ್ಧಾರವಲ್ಲ. ಇದರ ಪರಿಣಾಮ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಮೇಲೆ ಬೀಳಲಿದೆ” ಎಂದು ಎಚ್ಚರಿಕೆ ನೀಡಿದರು.
ಸದ್ಯ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮುಂದುವರಿದಿದೆ.
ದೇಶ
ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕರ ಉಪಹಾರ ಸಭೆಯಲ್ಲಿ ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರಸ್ಪರ ಅಲಿಂಗನ ಮಾಡಿಕೊಂಡು ರಾಜಕೀಯ ವಲಯದ ಗಮನ ಸೆಳೆದರು.
ಗುರುವಾರ ಬೆಳಗ್ಗೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಲಾಗಿದ್ದ ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಡಿಕೆ ಶಿವಕುಮಾರ್ ಆಗಮಿಸಿದ ವೇಳೆ ಈ ಭಾವುಕ ದೃಶ್ಯ ಕಂಡುಬಂದಿತು. ಸಿಎಂ ನಿವಾಸಕ್ಕೆ ಪ್ರವೇಶಿಸಿದ ಡಿಕೆ ಶಿವಕುಮಾರ್ ಅವರು ಮೊದಲು ಸಿದ್ದರಾಮಯ್ಯರನ್ನು ಆತ್ಮೀಯವಾಗಿ ತಬ್ಬಿಕೊಂಡರು. ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳು ತೀವ್ರವಾಗಿರುವ ಸಂದರ್ಭದಲ್ಲಿ ಈ ಬೆಳವಣಿಗೆಗೆ ಹೆಚ್ಚಿನ ರಾಜಕೀಯ ಮಹತ್ವ ಸಿಕ್ಕಿದೆ. ಇಬ್ಬರು ನಾಯಕರು ಪರಸ್ಪರ ಗೌರವ ಹಾಗೂ ಏಕತೆಯ ಸಂದೇಶ ನೀಡಲು ಯತ್ನಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.
ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆದ ಸಭೆಗಳು ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ ಈ ಉಪಹಾರ ಸಭೆ ಆಯೋಜನೆಯಾಗಿದ್ದು, ರಾಜ್ಯ ರಾಜಕೀಯದ ಮುಂದಿನ ದಿಕ್ಕಿನ ಕುರಿತು ಕುತೂಹಲ ಹೆಚ್ಚಿಸಿದೆ.
ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಕಾಂಗ್ರೆಸ್‌ನ ಹಲವು ಸಚಿವರು ಹಾಗೂ ಹಿರಿಯ ನಾಯಕರು ಭಾಗಿಯಾಗಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ನಡೆ ಸಿದ್ದರಾಮಯ್ಯ ಮೇಲಿನ ಗೌರವದ ಪ್ರತೀಕ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.
ಈ ನಡುವೆ ಸಿಎಂ ಬದಲಾವಣೆ ಕುರಿತು ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದರೆ ಕಾಂಗ್ರೆಸ್ ನಾಯಕತ್ವದ ಮುಂದಿನ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ತರಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ.
-
ದೇಶ21 hours agoಕರ್ನಾಟಕಕ್ಕೆ ಹೊಸ ಸಿಎಂ? ಡಿಕೆ ಶಿವಕುಮಾರ್ ಪಾಲಿಗೆ ‘ಶುಭ ಶುಕ್ರವಾರ’ ಫಿಕ್ಸ್!
-
ಬೆಂಗಳೂರು22 hours ago“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
-
ಕ್ರೀಡೆ22 hours ago“That’s a silly question!”: ಆರ್ಸಿಬಿ ಸೋಲಿನ ಬಳಿಕ ಪತ್ರಕರ್ತರ ಮೇಲೆ ಫಿಲಿಪ್ಸ್ ಸಿಡಿತ
-
ದೇಶ20 hours agoಕಾಂಗ್ರೆಸ್‌ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್
-
ದೇಶ23 hours agoತಮಿಳು ಚಿತ್ರರಂಗಕ್ಕೆ ಸಿಎಂ ವಿಜಯ್ ಬಂಪರ್ ಗಿಫ್ಟ್: ದಿನಕ್ಕೆ 5 ಶೋಗಳಿಗೆ ಗ್ರೀನ್ ಸಿಗ್ನಲ್!
-
ದೇಶ21 minutes agoಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್
-
ದೇಶ22 hours ago“ಭಗವಂತ ನನ್ನ ಆಸೆ ಈಡೇರಿಸಿದ್ದಾನೆ”: ಇಕ್ಬಾಲ್ ಹುಸೇನ್ ಭಾವನಾತ್ಮಕ ಮಾತು
-
ದೇಶ24 hours ago‘ಶೀಶ್ ಮಹಲ್’ ಟೀಕಿಸಿದ ಬಿಜೆಪಿ ಈಗ ಐಷಾರಾಮಿ ಕುರ್ಚಿ ಬಳಕೆ?
