Connect with us

ರಾಜಕೀಯ

ಪಕ್ಷ ಹಾನಿ ಹೇಳಿಕೆ ಕೊಟ್ಟರೆ ಶಿಸ್ತು ಕ್ರಮ ಸಚಿವ ಶಾಸಕರಿಗೆ ಸುರ್ಜೇವಾಲ ವಾರ್ನಿಂಗ್

Published

on

ಪಕ್ಷ ಹಾನಿ ಹೇಳಿಕೆ ಕೊಟ್ಟರೆ ಶಿಸ್ತು ಕ್ರಮ; ಸಚಿವ, ಶಾಸಕರಿಗೆ ಸುರ್ಜೇವಾಲ ವಾರ್ನಿಂಗ್
ಪಕ್ಷ ಹಾನಿ ಹೇಳಿಕೆ ಕೊಟ್ಟರೆ ಶಿಸ್ತು ಕ್ರಮ; ಸಚಿವ, ಶಾಸಕರಿಗೆ ಸುರ್ಜೇವಾಲ ವಾರ್ನಿಂಗ್

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜ್ಯ ರಾಜಕೀಯದಲ್ಲಿ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ಕಾಂಗ್ರೆಸ್ನಲ್ಲಿ ಹೆಚ್ಚಿದ್ದ ಆಂತರಿಕ ಕಲಹಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆ. ಇನ್ನು ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಇನ್ನಿತರ ಯಾವುದೇ ಪಕ್ಷಕ್ಕೆ ಹಾನಿಯಾಗುವ ವಿಚಾರವನ್ನು ಯಾವೊಬ್ಬ ನಾಯಕರೂ ಪ್ರಸ್ತಾಪ ಮಾಡಬಾರದು. ಪಕ್ಷದ ಚೌಕಟ್ಟು ಉಲ್ಲಂಘನೆ ಮಾಡಿ ಹೇಳಿಕೆಗಳನ್ನು ನೀಡಬಾರದು. ಒಂದು ವೇಳೆ ನೀಡಿದರೆ ಶಿಸ್ತು ಕ್ರಮವನ್ನು ಎದುರಿಸಬೇಕಾದೀತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಇದರ ಜತೆಗೆ ಪಕ್ಷ ಸಂಘಟನೆ, ನಿಗಮ – ಮಂಡಳಿಗಳಿಗೆ ನೇಮಕ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೆಪಿಸಿಸಿ ಕಚೇರಿಯಲ್ಲಿ ಸುದೀರ್ಘ 2 ಗಂಟೆ ಕಾಲ ಚರ್ಚೆ ನಡೆಸಿದರು. ಈ ವೇಳೆ ರಾಜ್ಯ ರಾಜಕೀಯ ಸೇರಿದಂತೆ ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಯಾವ ಸಚಿವರು, ಶಾಸಕರು ವಿವಾದ ಸೃಷ್ಟಿ ಮಾಡುವಂತಿಲ್ಲ. ತಮ್ಮ ತಮ್ಮ ಇಲಾಖೆ, ಕ್ಷೇತ್ರ ಹಾಗೂ ಅಭಿವೃದ್ಧಿ ಕೆಲಸ ಕಾರ್ಯಗಳತ್ತ ಗಮನ ಹರಿಸಬೇಕು. ಬದಲಾಗಿ ಪಕ್ಷದ ಚೌಕಟ್ಟು ಉಲ್ಲಂಘನೆ ಮಾಡಿ ಹೇಳಿಕೆಗಳನ್ನು ನೀಡಬಾರದು. ಏನೇ ಸಮಸ್ಯೆ ಇದ್ದರೂ ನನ್ನನ್ನು ಅಥವಾ ಕೆ.ಸಿ. ವೇಣುಗೋಪಾಲ್ ಅವರನ್ನು ಸಂಪರ್ಕ ಮಾಡಬಹುದು. ಅದು ಬಿಟ್ಟು ಬಹಿರಂಗ ಹೇಳಿಕೆಗಳನ್ನು ನೀಡುವ ಹಾಗಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಶಾಸಕರಾದವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸಬೇಕು. ಈ ವಿಚಾರವಾಗಿ ಹೆಚ್ಚು ಆದ್ಯತೆ ಕೊಡಲಿ. ಸಿಎಂ ಬದಲಾವಣೆ ವಿಚಾರವಾಗಿಯೂ ಯಾವುದೇ ಹೇಳಿಕೆ ನೀಡುವ ಹಾಗಿಲ್ಲ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಯ ತಂದು ಕೊಡಲಿದೆ. 15 ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಪಟ್ಟಿ ಮಾಡಲು ಸೂಚನೆ ನೀಡಲಾಗಿದೆ. ಈ ಬಾರಿ ಲೋಕಸಭೆಯಲ್ಲಿ 20 ಸ್ಥಾನಗಳನ್ನು ಖಂಡಿತಾ ಗೆಲ್ಲುತ್ತೇವೆ. ಜತೆಗೆ 25+ ಸ್ಥಾನಗಳನ್ನು ಗೆಲ್ಲುವ ಪ್ರಯತ್ನ ಪಡುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ದಾರೆ ಎಂಬುದಾಗಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.
ಪಾರ್ಲಿಮೆಂಟ್ ಚುನಾವಣೆಗೆ ತಕ್ಷಣ ಕ್ಯಾಂಡಿಡೇಟ್ ಹುಡುಕುವ ಕೆಲಸ ಆಗಬೇಕಿದೆ. ಇನ್ನು 15 ದಿನಗಳ ಒಳಗಾಗಿ ಮೊದಲ ಹಂತದ ಸಭೆ ನಡೆಯಲಿದೆ. ಯಾರು ಅಭ್ಯರ್ಥಿಗಳಾಗಲು ಸೂಕ್ತ ಎಂಬ ಬಗ್ಗೆ ಪ್ರಾಥಮಿಕ ಹಂತದ ಚರ್ಚೆ ಆಗಿದೆ. 25ಕ್ಕೂ ಹೆಚ್ಚು ಸೀಟು ಗೆಲ್ಲಲು ಸಿದ್ಧತೆಯನ್ನು ಆರಂಭಿಸುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.
ಮಧ್ಯ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆಗಳು ನಡೆಯಲಿವೆ. ಹೀಗಾಗಿ ಅದರಲ್ಲಿ ನಾನು ಬ್ಯುಸಿಯಾಗಿದ್ದೆ. ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತಲಿದೆ. ಯಾರೇ ಆಗಲಿ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಮಾಧ್ಯಮಗಳ ಮುಂದೆ ವಿವಾದಿತ ಹೇಳಿಕೆ ಕೊಡಬಾರದು. ಸಚಿವರಾಗಲಿ, ಶಾಸಕರಾಗಲಿ ಇಂತಹ ಹೇಳಿಕೆಗಳನ್ನು ನೀಡಬಾರದು. ಪಕ್ಷದ ಶಿಸ್ತನ್ನು ಎಲ್ಲರೂ ಪಾಲಿಸಬೇಕು. ಇಲ್ಲಸಲ್ಲದ ಹೇಳಿಕೆಗಳನ್ನ ನೀಡಬಾರದು ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

ದೇಶ

ಕಾಂಗ್ರೆಸ್‌ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್

Published

on

ಬೆಂಗಳೂರು: Karnataka Pradesh Congress Committee ಪ್ರಮುಖ ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ D. K. Shivakumar ಭಾರೀ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕುರಿತ ಮಹತ್ವದ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಹಲವು ಹಿರಿಯ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ವಜಾಗೊಳಿಸಲಾಗಿದೆ.

ಈ ಕ್ರಮದಡಿ ಕೆಪಿಸಿಸಿ ವಕ್ತಾರರಾದ Niketh Raj Maurya, Bhavana Ramanna ಸೇರಿದಂತೆ ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿ.ಆರ್. ಮನೋಹರ್ ಅವರಿಗೆ ಪಕ್ಷದಿಂದ “ಗೇಟ್ ಪಾಸ್” ನೀಡಲಾಗಿದೆ. ಇವರ ಜೊತೆಗೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನೂ ಹುದ್ದೆಗಳಿಂದ ಕೈಬಿಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಕೂಡ ಭಾಗವಹಿಸಿದ್ದರು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದ ಸಭೆಗೆ ಇಷ್ಟೊಂದು ಪ್ರಮಾಣದಲ್ಲಿ ನಾಯಕರು ಗೈರಾಗಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು ಎನ್ನಲಾಗಿದೆ.

ಸಭೆಯನ್ನು ಲಘುವಾಗಿ ತೆಗೆದುಕೊಂಡವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸುರ್ಜೇವಾಲಾ ಸೂಚನೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಈ ಮೂಲಕ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಇದೇ ವೇಳೆ ರಾಜ್ಯ ರಾಜಕೀಯದಲ್ಲಿ Siddaramaiah ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಕ್ರಮ ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.

ಪಕ್ಷದಲ್ಲಿ ಹಿರಿಯರಾಗಿರಲಿ ಅಥವಾ ಪ್ರಮುಖ ಹುದ್ದೆಯಲ್ಲಿರಲಿ, ಜವಾಬ್ದಾರಿ ಮತ್ತು ಶಿಸ್ತು ಪಾಲನೆ ಕಡ್ಡಾಯ ಎಂಬುದನ್ನು ಡಿಕೆ ಶಿವಕುಮಾರ್ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದ್ದಾರೆ.

Continue Reading

ದೇಶ

ಕರ್ನಾಟಕಕ್ಕೆ ಹೊಸ ಸಿಎಂ? ಡಿಕೆ ಶಿವಕುಮಾರ್ ಪಾಲಿಗೆ ‘ಶುಭ ಶುಕ್ರವಾರ’ ಫಿಕ್ಸ್!

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಮೂರು ವರ್ಷಗಳಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆಯ ವಿಚಾರಕ್ಕೆ ಕೊನೆಗೂ ಅಂತಿಮ ರೂಪ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್ ಸಭೆಯ ಬಳಿಕ ಉಪಮುಖ್ಯಮಂತ್ರಿ D. K. Shivakumar ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವುದು ಬಹುತೇಕ ಖಚಿತ ಎನ್ನುವ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಪ್ರಸ್ತುತ ಮುಖ್ಯಮಂತ್ರಿ Siddaramaiah ಅವರು ಗುರುವಾರ ರಾಜೀನಾಮೆ ಸಲ್ಲಿಸುವ ಸಾಧ್ಯತೆ ದಟ್ಟವಾಗಿದ್ದು, ಶುಕ್ರವಾರ ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಯ ನಡುವೆಯೇ ಇಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಮಹತ್ವದ ಉಪಹಾರ ಕೂಟ ಆಯೋಜಿಸಲಾಗಿದ್ದು, ಸಚಿವರು ಹಾಗೂ ಕಾಂಗ್ರೆಸ್‌ನ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ಬಳಿಕ ಸಿದ್ದರಾಮಯ್ಯ ಬೆಂಗಳೂರಿಗೆ ಮರಳಿದ್ದರೆ, ಡಿಕೆ ಶಿವಕುಮಾರ್ ದೆಹಲಿಯಲ್ಲೇ ಉಳಿದಿದ್ದರು. ಆದರೆ ಇಂದಿನ ಸಭೆಗಾಗಿ ಡಿಕೆಶಿ ಹಾಗೂ ಅವರ ಆಪ್ತರು ಬೆಳಗ್ಗೆಯೇ ಬೆಂಗಳೂರಿಗೆ ಆಗಮಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಹೈಕಮಾಂಡ್ ಅವರು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಗೆ ಮಹತ್ವದ ಜವಾಬ್ದಾರಿ ನೀಡುವ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಹೊಸ ರಾಜಕೀಯ ಸಮತೋಲನಕ್ಕಾಗಿ ವಿವಿಧ ಸಮುದಾಯಗಳ ನಾಲ್ವರು ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸೂತ್ರವೂ ಚರ್ಚೆಯಲ್ಲಿದೆ. ಸಿಎಂ ರೇಸ್‌ನಲ್ಲಿದ್ದ ಹಲವು ಪ್ರಮುಖ ನಾಯಕರ ಹೆಸರುಗಳು ಡಿಸಿಎಂ ಹುದ್ದೆಗೆ ಕೇಳಿಬರುತ್ತಿವೆ.

2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಕುರಿತು ಆಂತರಿಕ ಒಪ್ಪಂದವಾಗಿತ್ತು ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಈಗ ಆ ಸೂತ್ರ ಜಾರಿಯಾಗುತ್ತಿರುವುದಾಗಿ ಕಾಂಗ್ರೆಸ್ ಮೂಲಗಳು ಹೇಳುತ್ತಿವೆ.

Continue Reading

ದೇಶ

“ಭಗವಂತ ನನ್ನ ಆಸೆ ಈಡೇರಿಸಿದ್ದಾನೆ”: ಇಕ್ಬಾಲ್ ಹುಸೇನ್ ಭಾವನಾತ್ಮಕ ಮಾತು

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ Iqbal Hussain ನೀಡಿರುವ ಹೇಳಿಕೆ ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ D. K. Shivakumar ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ವಿಚಾರವಾಗಿ ಮಾತನಾಡಿದ ಅವರು, “ಭಗವಂತ ನನ್ನ ಆಸೆ ಈಡೇರಿಸಿದ್ದಾನೆ” ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಭಗವಂತನ ದಯೆಯಿಂದ ಒಳ್ಳೆ ಕಾಲ ಬಂದಿದೆ. ನಮ್ಮ ನಾಯಕರಿಗೆ ರಾಜ್ಯದ ಜನರು ಬಯಸಿದ್ದನ್ನು ಭಗವಂತ ನೆರವೇರಿಸಿದ್ದಾನೆ. ಅವನಿಗೆ ಕೋಟಿ ಕೋಟಿ ನಮಸ್ಕಾರಗಳು” ಎಂದು ಹೇಳಿದ್ದಾರೆ.

“ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಪಕ್ಷದ ವರಿಷ್ಠರು ಶಿಸ್ತಿನಿಂದ ಇರಲು ಸೂಚಿಸಿದ್ದರು. ಕಾಲ ಬಂದಾಗ ಮಾತನಾಡಿ ಎಂದಿದ್ದರು. ಈಗ ಆ ಸಮಯ ಬಂದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಸುಳಿವನ್ನೂ ನೀಡಿದ್ದಾರೆ.

ಇನ್ನೂ ನಾಯಕರು ಬೆಂಗಳೂರಿಗೆ ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದ ಅವರು, ಕಾರ್ಯಕರ್ತರು ಹಾಗೂ ನಾಯಕರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಇಕ್ಬಾಲ್ ಹುಸೇನ್, “ರಾತ್ರಿ ನನಗೆ ನಿದ್ದೆ ಬರಲಿಲ್ಲ. ದೆಹಲಿಯಲ್ಲಿ ಮಾತನಾಡಬೇಕಾದವರ ಜೊತೆ ಮಾತನಾಡುತ್ತಿದ್ದೆ. ಕ್ಷಣಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೆ” ಎಂದು ಹೇಳಿದ್ದಾರೆ.

ಈ ಹೇಳಿಕೆ ಇದೀಗ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.

Continue Reading

Trending