crcket
ಕ್ರಿಕೆಟ್ ದೇವರ ಸಾರ್ವಕಾಲಿಕ ದಾಖಲೆ ಮುರಿದ ವಿರಾಟ್ ಕೊಹ್ಲಿ..!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಲಿದ್ದಾರೆ.ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ.
ಕೊಹ್ಲಿ ಕೇವಲ 50 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇಯ 50 ರನ್ ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಲಿದ್ದಾರೆ.ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಕ್ಯಾಲೆಂಡರ್ ವರ್ಷದಲ್ಲಿ 1000 ಕ್ಕೂ ಹೆಚ್ಚು ಏಕದಿನ ರನ್ ಪೂರೈಸಿದ್ದಾರೆ. ವಿರಾಟ್ ತಮ್ಮ ವೃತ್ತಿ ಜೀವನದಲ್ಲಿ ಎಂಟನೇ ಬಾರಿ ಈ ಸಾಧನೆ ಮಾಡಿದ್ದಾರೆ.ಈ ಹಿಂದೆ, ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ಕ್ಯಾಲೆಂಡರ್ ವರ್ಷದಲ್ಲಿ 1000 ಕ್ಕೂ ಹೆಚ್ಚು ಏಕದಿನ ರನ್ ದಾಖಲಿಸಿದ ಸಾಧನೆಯನ್ನು 7 ಬಾರಿ ಮಾಡಿದ್ದರು. ಇದೀಗ ಆ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ.ಈ ಹಿಂದೆ ಕೊಹ್ಲಿ, 2011 ಮತ್ತು 2014ರ ನಡುವೆ ಪ್ರತಿ ವರ್ಷವೂ ಈ ಸಾಧನೆ ಮಾಡಿದ್ದಾರೆ. ಆ ಬಳಿಕ 2017, 2019 ಮತ್ತು 2023 ರಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 1000 ಏಕದಿನ ರನ್ ಸಿಡಿಸಿದ್ದರು.ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಕ್ರಮವಾಗಿ 1994, 1996, 1997, 1998, 2000, 2003 ಮತ್ತು 2007 ರಲ್ಲಿ ಏಕದಿನ ಮಾದರಿಯಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಸಿಡಿಸಿ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು.
ಇನ್ನು ಒಂದು ಕ್ಯಾಲೆಂಡರ್ ವರ್ಷದಲ್ಲಿ ಒಂದು ಸಾವಿರ ರನ್ಗಳ ಅಧಿಕ ಬಾರಿ ಸಿಡಿಸಿದ ಆಟಗಾರರ ಪೈಕಿ ಪ್ರಸ್ತುತ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಸಚಿನ್ ತೆಂಡೂಲ್ಕರ್ ಎರಡನೇ ಸ್ಥಾನದಲ್ಲಿದ್ದಾರೆ. ಈ ಇಬ್ಬರನ್ನು ಹೊರತುಪಡಿಸಿ ಈ ಪಟ್ಟಿಯಲ್ಲಿ ಮೂರು ಆಟಗಾರರು ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದಾರೆ.ಅವರುಗಳ ಪೈಕಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ, ಶ್ರೀಲಂಕಾದ ಕುಮಾರ ಸಂಗಕ್ಕಾರ ಮತ್ತು ಆಸ್ಟ್ರೇಲಿಯಾದ ದಿಗ್ಗಜ ನಾಯಕ ರಿಕಿ ಪಾಂಟಿಂಗ್ ತಮ್ಮ ವೃತ್ತಿಜೀವನದಲ್ಲಿ ತಲಾ 6 ಬಾರಿ ಈ ಸಾಧನೆ ಮಾಡಿದ್ದಾರೆ.
crcket
ಕ್ಯಾಪ್ಟನ್ಸಿಯಲ್ಲಿ ವಿಶೇಷ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ!

2022ರ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ನಂತರ ಭಾರತದ ಟಿ20 ಕ್ರಿಕೆಟ್ ತಂಡದಿಂದ ಹೊರಗುಳಿದಿದ್ದ ಅನುಭವಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಇದೀಗ ಕಮ್‌ಬ್ಯಾಕ್ ಮಾಡಿದ್ದಾರೆ. ಪ್ರವಾಸಿ ಅಫಘಾನಿಸ್ತಾನ ಎದುರು ನಡೆಯುತ್ತಿರುವ ಮೊತ್ತ ಮೊದಲ ದ್ವಿಪಕ್ಷೀಯ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದ ರೋಹಿತ್ ಜೊತೆಗೆ ಕ್ಯಾಪ್ಟನ್ಸಿ ಜವಾಬ್ದಾರಿ ಕೂಡ ಹೊತ್ತಿದ್ದಾರೆ. ಗುರುವಾರ (ಜ.11) ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕನಾಗಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ವಿಶೇಷ ದಾಖಲೆ ಒಂದನ್ನು ಬರೆದಿದ್ದಾರೆ.
ಮೊಹಾಲಿ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬರೋಬ್ಬರಿ 14 ತಿಂಗಳ ನಂತರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಪ್ರವಾಸಿ ಅಫಘಾನಿಸ್ತಾನ ಎದುರು ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ಮೊದಲ ಹಣಾಹಣಿ ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಗುರುವಾರ (ಜ.11) ನಡೆದು, ಈ ಪಂದ್ಯದಲ್ಲಿ ಕಣಕ್ಕಿಳಿದ ರೋಹಿತ್ ವಿಶೇಷ ದಾಖಲೆ ಒಂದನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಈಗ 36 ವರ್ಷ, 256 ದಿನಗಳ ವಯಸ್ಸಿನ ಹಿರಿಯ ಬ್ಯಾಟರ್ ಪಾಲಾಗಿದೆ. ಈ ಮೂಲಕ ಹಿರಿಯ ಓಪನರ್ ಶಿಖರ್ ಧವನ್ ಅವರ ಹೆಸರಲ್ಲಿದ್ದ ದಾಖಲೆಯನ್ನು ರೋಹಿತ್ ಅಳಿಸಿಹಾಕಿದ್ದಾರೆ.
crcket
ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಕ್ರಿಕೆಟಿಗ ಮುಹಮ್ಮದ್ ಶಮಿ

ದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿ ಅವರಿಗೆ ಇಂದು ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು. ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮುಹಮ್ಮದ್ ಶಮಿ ಅವರ ಹೆಸರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿತ್ತು. ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್ ಗಳನ್ನು ಕಬಳಿಸುವ ಮೂಲಕ ಶಮಿ ತಮ್ಮ ಏಕದಿನ ವಿಶ್ವಕಪ್ 2023 ಯಾತ್ರೆ ಅನ್ನು ಯಶಸ್ವಿಯಾಗಿ ಮುಗಿಸಿದ್ದರು.
“ಈ ಪ್ರಶಸ್ತಿಯು ನನ್ನ ಕನಸಾಗಿತ್ತು. ಹಲವಾರು ಮಂದಿ ತಮ್ಮ ಜೀವಿತಾವಧಿ ಮುಗಿಸಿದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದಿಲ್ಲ. ಈ ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಪ್ರಶಸ್ತಿ ಪ್ರದಾನ ಸಮಾರಂಭದ ಪ್ರಾರಂಭಕ್ಕೂ ಮುನ್ನ ಮುಹಮ್ಮದ್ ಶಮಿ ಸಂತಸ ವ್ಯಕ್ತಪಡಿಸಿದರು. ಮುಹಮ್ಮದ್ ಶಮಿ ಅವರು ವಿಶ್ವಕಪ್ ಕ್ರೀಡಾಕೂಟದ ಆರಂಭಿಕ ನಾಲ್ಕು ಪಂದ್ಯಗಳಿಂದ ಆಡುವ ಹನ್ನೊಂದು ಮಂದಿ ತಂಡದಿಂದ ಹೊರಗಿದ್ದರು. ಆದರೆ, ಹಾರ್ದಿಕ್ ಪಾಂಡ್ಯ ಗಾಯಾಳುವಾಗಿದ್ದರಿಂದ ಶಮಿ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ದೊರೆತಿತ್ತು. ತಮ್ಮ ಮೊದಲ ಪಂದ್ಯದಲ್ಲೇ ನ್ಯೂಝಿಲೆಂಡ್ ತಂಡದ ವಿರುದ್ಧ 5 ವಿಕೆಟ್ ಗಳನ್ನು ಕಿತ್ತು ಶಮಿ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದರು. ಅಲ್ಲಿಂದಾಚೆಗೆ ಶಮಿ ದಾಖಲೆಯ ಓಟ ಓಡಿದರು. ಕೇವಲ ಏಳು ಪಂದ್ಯಗಳಿಂದ 24 ವಿಕೆಟ್ ಗಳನ್ನು ಪಡೆದು ಮಿಂಚಿದ್ದರು.
crcket
35 ವರ್ಷಗಳ ಬಳಿಕ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕಲರವ..

ಭಾರತದ ಮುಕುಟ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿತ್ತು. ಆದರೆ ಭಯೋತ್ಪಾದನೆಯಿಂದಾಗಿ ಅದನ್ನು ನಿಲ್ಲಿಸಲಾಯಿತು. ಇದೀಗ ಬರೋಬ್ಬರಿ 35 ವರ್ಷಗಳ ಬಳಿಕ ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕಲರವ ಮತ್ತೆ ಮರುಕಳಿಸಿದೆ. ಹೀಗಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.35 ವರ್ಷಗಳ ನಂತರ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿದೆ. ಈಗಾಗಲೇ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಎರಡು ಪಂದ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಾಗಂತ ಪಂದ್ಯವನ್ನು ವೀಕ್ಷಿಸಲು ಬಂದ ಅಭಿಮಾನಿಗಳ ಸಂಖ್ಯೆ ಕಡಿಮೆಯೇನೂ ಇರಲಿಲ್ಲ. ಜಮ್ಮುವಿನಲ್ಲಿ ಕ್ರಿಕೆಟ್ ಬೆಳವಣಿಗೆಗೆ ಈ ಪಂದ್ಯಗಳು ಇದು ಪ್ರಮುಖ ಪಾತ್ರ ವಹಿಸುತ್ತದೆ. ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಮುಂದೆ ಮತ್ತಷ್ಟು ಪಂದ್ಯಗಳು ನಡೆಯಲಿವೆ.ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣವನ್ನು 1966ರಲ್ಲಿ ನಿರ್ಮಿಸಲಾಯಿತು. 1988ರ ಡಿಸೆಂಬರ್ 19ರಂದು ಆ ಮೈದಾನದಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ನಡೆದಿದೆ. ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಆ ಬಳಿಕ ಭಯೋತ್ಪಾದನೆಯಿಂದಾಗಿ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಈ ಮೈದಾನದಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ.ಲೆಜೆಂಡ್ಸ್ ಲೀಗ್ ಕ್ರಿಕೆಟ್ ಬಳಿಕ ಪ್ರಮುಖ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸುವಲ್ಲಿ ಮತ್ತು ಜಮ್ಮುವಿನ ಮೌಲಾನಾ ಆಜಾದ್ ಸ್ಟೇಡಿಯಂ ಒಂದು ಹೆಜ್ಜೆ ಮುಂದಿಟ್ಟಿದೆ. ಲೆಜೆಂಡ್ಸ್ ಲೀಗ್ ಟೂರ್ನಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಈ ಮೈದಾನದಲ್ಲಿ ಆಯೋಜಿಸಲಾಗಿದೆ. ಇನ್ನೆರಡು ಪಂದ್ಯಗಳು ನಡೆಯಬೇಕಿದೆ.ನವೆಂಬರ್ 27ರ ಸೋಮವಾರ ನಡೆಯದ ಮೊದಲ ಪಂದ್ಯದಲ್ಲಿ ಮಣಿಪಾಲ್ ಟೈಗರ್ಸ್ ಮತ್ತು ಸರ್ದಾನ್ ಸೂಪರ್ ಸ್ಟಾರ್ಸ್ ಮುಖಾಮುಖಿಯಾದವು. ರಾಸ್ ಟೇಲರ್ ಬಳಗವು ಹರ್ಭಜನ್ ಸಿಂಗ್ ಅವರ ಮಣಿಪಾಲವನ್ನು ಐದು ವಿಕೆಟ್ ಗಳಿಂದ ಸೋಲಿಸಿತು. ನವೆಂಬರ್ 29ರ ಬುಧವಾರ ನಡೆಯಬೇಕಿದ್ದ ಭಿಲ್ವಾರ ಕಿಂಗ್ಸ್ ಮತ್ತು ಸರ್ದಾನ್ ಸೂಪರ್ ಸ್ಟಾರ್ಸ್ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿತು.ನವೆಂಬರ್ 30ರ ಗುರುವಾರ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ತಂಡಗಳ ನಡುವೆ ಪಂದ್ಯ ನಡೆಯಯುತ್ತಿದೆ. ಕೊನೆಯ ಪಂದ್ಯದಲ್ಲಿ ಭಿಲ್ವಾರ ಕಿಂಗ್ಸ್ ಮತ್ತು ಅರ್ಬನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಡಿಸೆಂಬರ್ 1ರ ಶುಕ್ರವಾರ ಪಂದ್ಯ ನಡೆಯಲಿದೆ.100ಕ್ಕೂ ಹೆಚ್ಚು ಮಾಜಿ ಕ್ರಿಕೆಟಿಗರು ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದಾರೆ. ದಿಗ್ಗಜ ಕ್ರಿಕೆಟಿಗರಾದ ಗಂಭೀರ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಶೇನ್ ವ್ಯಾಟ್ಸನ್, ರಾಬಿನ್ ಉತ್ತಪ್ಪ, ಕ್ರಿಸ್ ಗೇಲ್, ಹಾಶಿಮ್ ಆಮ್ಲಾ, ಮೊರ್ನೆ ಮೊರ್ಕೆಲ್ ಮುಂತಾದ ತಾರೆಯರು ಇದ್ದಾರೆ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ