ಬೆಂಗಳೂರು
ಬೆಂಗಳೂರು ಮಹಾನಗರದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ,ಹೀಗಾಗಿ ಬೆಂಗಳೂರು ಮಹಾನಗರದ ಮಂದಿ ಮುಂದಿನ 24 ಗಂಟೆಯಲ್ಲಿ ಭಾರೀ ಪ್ರಮಾಣದ ಮಳೆ ಕಾಣಲಿದ್ದು, ಸದ್ಯ ಹವಾಮಾನ ಇಲಾಖೆ ನೀಡಿದ ವರದಿ ಅನ್ವಯ ಕೆಲವೆಡೆ ಸಾಧಾರಣ ಮತ್ತು ಇನ್ನೂ ಕೆಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ.ಹೀಗೆ ಆದಲ್ಲಿ ರಸ್ತೆ ಸಂಚಾರದಲ್ಲಿ ಭಾರೀ ದುಸ್ತರ ಎದುರಿಸುವ ಸಾಧ್ಯತೆ ಇದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಯಲಹಂಕ ವ್ಯಾಪ್ತಿಯ ಯಲಹಂಕ, ಜಕ್ಕೂರು, ಬಸವನಪುರ, ರಾಮಮೂರ್ತಿ ನಗರ, ಕಾಡುಗೋಡಿ ವ್ಯಾಪ್ತಿಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.ಇನ್ನುಳಿದಂತೆ ದಾಸರಹಳ್ಳಿ ವಲಯ, ಪೂರ್ವ ವಲಯ, ಮಹದೇವಪುರ ವಲಯ, ಪಶ್ಚಿಮ ವಲಯ, ದಕ್ಷಿಣ ವಲಯ, ಬೊಮ್ಮನಹಳ್ಳಿ ವಲಯ, ಆರ್ ಆರ್ ನಗರ ವಲಯಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ.ಈ ಎಲ್ಲ ಪ್ರದೇಶಗಳಲ್ಲಿ 64 ಮೀಟರ್ ನಿಂದ 115 ಮೀಟರ್ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಪ್ರಮುಖವಾಗಿ ಮಾರತಹಳ್ಳಿ, ವರ್ತೂರು, ಬೊಮ್ಮನಹಳ್ಳಿ, ನಾಗರಬಾವಿ, ಹೆಚ್ಎಎಲ್, ದೊಮ್ಮಲೂರು, ಗಾಲಿ ಆಂಜನೇಯ ದೇಗುಲ, ಆರ್ ಆರ್ ನಗರ, ಕೆಂಗೇರಿ, ಪೀಣ್ಯ, ಪುಲಕೇಶಿನಗರ, ಯಶವಂತಪುರ, ಬಾಣಸವಾಡಿ ಈ ಎಲ್ಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ.ಇಂದು ರಾತ್ರಿ ಭಾರಿ ಮಳೆಯಾಗಲಿದ್ದು,ನಾಳೆಯು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು
ಕಾಲ್ತುಳಿತ ದುರಂತ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಜೂ. 24 ಕೊನೆಯ ದಿನ: ನಿವೃತ್ತ ನ್ಯಾಯಾಧೀಶರಿಂದ ಜಾಹೀರಾತು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ.
ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದರೆ ಹಾಗೂ 50ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದರು. ರಾಜ್ಯ ಸರ್ಕಾರವು ಮ್ಯಾಜಿಸ್ಟ್ರೇಟ್, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರಾದ ಕುನ್ನಾ ಅವರ ನೇತೃತ್ವದ ಆಯೋಗ ರಚಿಸಿದೆ. ಈ ಸಂಬಂಧ ಪ್ರತ್ಯೇಕ ತನಿಖೆ ನಡೆಸುತ್ತಿದೆ. ದುರ್ಘಟನೆ ವೇಳೆ ಘಟನೆಯ ವಾಸ್ತವಾಂಶದ ವಿವರಗಳು, ಮಾಹಿತಿ ಹಾಗೂ ಸತ್ಯ ಸಂಗತಿಗಳ ತಿಳಿದಿರುವ ಸಾರ್ವಜನಿಕರು ಆಯೋಗಕ್ಕೆ ತಿಳಿಸಬಹುದಾಗಿದೆ.

ತನಿಖಾ ಆಯೋಗಕ್ಕೆ ಹೇಳಿಕೆ ನೀಡಲು ಹಾಗೂ ಸಾಕ್ಷ್ಯ ದಾಖಲೆಗಳನ್ನು ಒದಗಿಸಲು ಇಚ್ಛಿಸುವವರು ಎರಡು ಪ್ರತಿಗಳಲ್ಲಿ ದೃಢೀಕೃತ ಪ್ರಮಾಣ ಪತ್ರದೊಂದಿಗೆ ಸಲ್ಲಿಸಬಹುದಾಗಿದೆ. ಜೂನ್ 24ರ ಒಳಗೆ ಸಹಿ ಮಾಡಿದ ಹಾಗೂ ಸ್ಕ್ಯಾನ್ ಮಾಡಿದ ಪ್ರಮಾಣಪತ್ರ ಹಾಗೂ ದಾಖಲೆಗಳೊಂದಿಗೆ cdinqcom@gmail.com ಕಳುಹಿಸಬೇಕು.
ಅಲ್ಲದೇ ಕೊಠಡಿ ಸಂಖ್ಯೆ 12, ಒಂದನೇ ಮಹಡಿ, ಹಳೆಕಟ್ಟಡ, ಕುಮಾರಕೃಪಾ ಅತಿಥಿ ಗೃಹ, ಬೆಂಗಳೂರು-560001. ಈ ಕಚೇರಿ ವಿಳಾಸಕ್ಕೆ ಕೊರಿಯರ್ ಮಾಡಬಹುದಾಗಿದೆ ಎಂದು ದಿನಪತ್ರಿಕೆಗಳಲ್ಲಿ ಒಳಾಡಳಿತ ಇಲಾಖೆಯು ಜಾಹೀರಾತು ನೀಡಿದೆ
ಬೆಂಗಳೂರು
ಇಂದು ಶ್ರೀನಿವಾಸಪುರ ತಾಲೂಕು ಬಂದ್

ಕೋಲಾರ: ಹಣ್ಣುಗಳ ರಾಜ ಮಾವಿನ ಹಣ್ಣಿಗೆ (Mango) ಬೆಲೆ ಕುಸಿದ ಹಿನ್ನೆಲೆ ಇಂದು ಕೋಲಾರದ (Kolar) ಶ್ರೀನೀವಾಸಪುರ (Srinivaspur) ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.
ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಾಥ್ ಕೊಟ್ಟಿವೆ. ಮಾವು ಬೆಳೆಗೆ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ಮಾವು ಬೆಳೆಗಾರರು, ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ. ಮಾವು ಬೆಳೆಗಾರರ ಬಂದ್‌ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ.
ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸಪುರದ ಬಸ್ ನಿಲ್ದಾಣದಲ್ಲಿ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಬಿಬಿಎಂಪಿ
ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜು.1ರಿಂದ ಹೊಸ ನಿಯಮ ಜಾರಿಗೆ..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶಿಸಿದೆ.
ಈ ಸಂಬಂಧ ಸೋಮವಾರ ಆದೇಶ ಹೊರಡಿಸಿರುವ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಆದುದರಿಂದ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆಇ-ಖಾತಾವನ್ನು ಆನ್‌ಲೈನ್‌ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿಸಲ್ಲಿ ಸುವವರು ಮೊದಲು ಇ- ಖಾತಾವನ್ನು ಪಡೆದಿರಬೇಕಿದೆ.
ಹೀಗಾಗಿ ಜು. 1ರಿಂದ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರುಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇ-ಖಾತಾ ಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು, ನಂಬಿಕೆಯೊಂದಿಗೆ ಪರಿಶೀಲನೆ ವ್ಯವಸ್ಥೆ ಅಡಿಯಲ್ಲಿ ನಿಗದಿತ ಕಾಲಮಿತಿಯಲ್ಲಿ ತಾತ್ಕಾಲಿಕ ನಕ್ಷೆ ಮಂಜೂರಾತಿ ಹೊಣೆಯನ್ನು ಸಂಬಂಧಪಟ್ಟ ಸಹಾಯಕ ನಿರ್ದೇಶಕ (ನಗರ ಯೋಜನೆ) ಅವರಿಗೆ ನೀಡಲಾಗಿದೆ. ಒಂದು ವೇಳೆ ಸಹಾಯಕ ನಿರ್ದೇಶಕ (ನಗರ ಯೋಜನೆ) ನಿಗದಿತ ಕಾಲ ಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸದಿದ್ದರೆ ತಂತ್ರಾಶದಲ್ಲಿ ಅರ್ಜಿಗಳಿಗೆ ಸ್ವಯಂಚಾಲಿತವಾಗಿ ಡೀಮ್ಡ್ ಅನುಮೋದನೆ ದೊರೆಯಲಿದೆ.
ಒಂದು ವೇಳೆ ನಕ್ಷೆ ಮಂಜೂರಾತಿ ಅರ್ಜಿಗಳು ಇ-ಖಾತಾ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸಲ್ಲಿಸದೇ ಡೀಮ್ ಅನುಮೋದನೆ ದೊರೆತರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ನಿಯಮದ ಪ್ರಕಾರ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
5 ಲಕ್ಷ ನಾಗರಿಕರಿಗೆ ಅಂತಿಮ ಇ-ಖಾತಾ ವಿತರಣೆ
ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೂ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.
25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ ಐ.ಡಿ, ಬೆಸ್ಕಾಂ ಸಂಖ್ಯೆ (ಖಾಲಿ ಜಾಗಕ್ಕೆ ಐಚ್ಛಿಕ) ಮತ್ತು ಆಸ್ತಿಯ ಫೋಟೋ ಹಾಕಬೇಕು. ಈ ಮಾಹಿತಿಗಳನ್ನು ನೀಡಿದ ನಂತರ ನಾಗರಿಕರಿಗೆ ಅಂತಿಮ ಇ-ಖಾತಾ ಕನಿಷ್ಠ 1 ರಿಂದ 2 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮತ್ತು ಇಷ್ಟೇ ಸಂಖ್ಯೆಯವರಿಗೆ ಇ-ಖಾತಾ ಅನುಮೋದನೆ ದೊರೆಯುತ್ತಿದೆ. ಈವರೆಗೆ ಸುಮಾರು 5 ಲಕ್ಷ ನಾಗರಿಕರು ತಮ್ಮ ಇ-ಖಾತಾ ಪಡೆದುಕೊಂಡಿದ್ದಾರೆ. ಅರ್ಜಿ ಸಲ್ಲಿಕೆಯಾದ 1 ರಿಂದ 2 ದಿನಗಳಲ್ಲಿ ಇ-ಖಾತಾ ಅನುಮೋದಿತವಾಗಲಿದೆ. ನಾಗಕರಿರು ಇ-ಖಾತಾವನ್ನು ಆನ್‌ಲೈನ್ BBMPeAasthi.karnataka.gov.in ಮೂಲಕ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ