Connect with us

ರಾಜಕೀಯ

ಪಕ್ಷ ಬಿಟ್ಟು ಹೋಗು ಎನ್ನಲು ಈಶ್ವರಪ್ಪ ಯಾರು? ಅವನಿಗೇ ಬೆಲೆ ಇಲ್ಲ ಎಂದ ಎಸ್.ಟಿ. ಸೋಮಶೇಖರ್‌

Published

on

ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ ನನ್ನ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಸ್ ಟಿ ಸೋಮಶೇಖರ್
ಪಕ್ಷ ಬಿಟ್ಟು ಹೋಗು ಎನ್ನಲು ಈಶ್ವರಪ್ಪ ಯಾರು? ಅವನಿಗೇ ಬೆಲೆ ಇಲ್ಲ ಎಂದ ಎಸ್.ಟಿ. ಸೋಮಶೇಖರ್‌

ಮೈಸೂರು: ನನ್ನನ್ನು ಪಕ್ಷದಿಂದ ಬಿಟ್ಟು ಹೋಗು ಅಂತ ಹೇಳಲು ಈಶ್ವರಪ್ಪ ಯಾರು? ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಈಶ್ವರಪ್ಪ ಏನು ರಾಜ್ಯಾಧ್ಯಕ್ಷನಾ? ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಹೀಗೆಂದು ಆಕ್ರೋಶದಿಂದ ಹೇಳಿದ್ದಾರೆ ಮಾಜಿ ಸಚಿವ, ಯಶ್ವಂತಪುರ ಶಾಸಕ ಎಸ್.ಟಿ ಸೋಮಶೇಖರ್ . ನಾನು ಈಶ್ವರಪ್ಪನನ್ನು ನಂಬಿ ಪಕ್ಷಕ್ಕೆ ಬರಲಿಲ್ಲ. ನಾನು ಯಡಿಯೂರಪ್ಪ ಅವರನ್ನು ನಂಬಿ ಪಕ್ಷಕ್ಕೆ ಬಂದಿದ್ದೇನೆ. ಇದೆಲ್ಲ ಬೆಳವಣಿಗೆಯಾದ ಮೇಲೆ ನಾನು ಯಡಿಯೂರಪ್ಪ ಜತೆ ಮಾತನಾಡಿದ್ದೇನೆ. ಅವರು ಯಾವುದೇ ಕಾರಣಕ್ಕೆ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷದಲ್ಲಿದ್ದೇನೆ. ಈಗ ಯಾರೋ ಐದು ಜನರು ಮಾತನಾಡುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲʼʼ ಎಂದು ಮೈಸೂರಿನಲ್ಲಿ ಮಾತನಾಡುತ್ತಾ ಅವರು ಹೇಳಿದರು.
ಎಸ್.ಟಿ.ಸೋಮಶೇಖರ್ ಬೆಂಬಲಿಗರು ಮಾತ್ರ ಪಕ್ಷ ಬಿಟ್ಟಿದ್ದಲ್ಲ. ಆರ್ ಅಶೋಕ್ ಕ್ಷೇತ್ರದಲ್ಲಿ ಹೋಗಿಲ್ಲವೇ? ಮುನಿರತ್ನ ಕ್ಷೇತ್ರದಲ್ಲಿ ಹೋಗಿಲ್ಲವೇ? ದಾಸರಹಳ್ಳಿ, ಕೆ.ಆರ್.ಪುರಂ ಕ್ಷೇತ್ರದಲ್ಲಿ ಹೋಗಿಲ್ಲವೇ? ಕೇವಲ ನನ್ನನ್ನೇ ಯಾಕೆ ಟಾರ್ಗೆಟ್ ಮಾಡುತ್ತೀರಾ? ಕ್ಷೇತ್ರದಲ್ಲಿ ಸಾವಿರ ಜನ ಲೀಡರ್ ಇರುತ್ತಾರೆ. ಚುನಾವಣೆ ಸಂಧರ್ಭದಲ್ಲಿ ಆ ಕಡೆ ಈ ಕಡೆ ಹೋಗುತ್ತಾರೆʼʼ ಎಂದು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಕಡೆಗೆ ವಲಸೆ ಹೋಗುತ್ತಿರುವ ಪ್ರಕ್ರಿಯೆಗೆ ಉತ್ತರಿಸಿದರು. ನಾನು ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ. ನಾನು ಮಾನಸಿಕವಾಗಿ ದೈಹಿಕವಾಗಿ ನಾನು ಪಕ್ಷದಲ್ಲೆ ಇದ್ದೇನೆʼʼ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ʻʻಕಾಂಗ್ರೆಸ್ ಸೇರುತ್ತಾರೆ ಎಂಬುದ್ದೆಲ್ಲ ಊಹಾಪೋಹಗಳು. ನಾನು ಯಡಿಯೂರಪ್ಪ ಮಾತು ನಂಬಿ ಬಿಜೆಪಿಯಲ್ಲಿದ್ದೇನೆ.
ಆದರೆ ಉಳಿದಿವರೇ ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ, ಆದರೆ ಪ್ರಯೋಜನವಾಗಲಿಲ್ಲ. ಅವರ ಹುಟ್ಟಹಬ್ಬವನ್ನೇ ಕ್ಷೇತ್ರದಲ್ಲಿ ಅದ್ದೂರಿಯಾಗಿ ಮಾಡಿದರು. ಇದೆಲ್ಲ ಏನ್ ಅರ್ಥʼʼ ಎಂದು ಸೋಮಶೇಖರ್ ಪ್ರಶ್ನೆ ಮಾಡಿದರು.
ಬಸವರಾಜು ಬೊಮ್ಮಯಿ ಅವರು ಮುಖ್ಯಮಂತ್ರಿಯಾದಾಗ ನನ್ನನ್ನು ಉಳಿಸಿದ್ದು ಯಡಿಯೂರಪ್ಪ ಅವರು. ಯಡಿಯೂರಪ್ಪ ಅವರ ವಿರುದ್ಧ ಐದಾರು ಜನರು ಮಾತನಾಡಿದರು. ಅವರ ವಿರುದ್ಧ ಪಕ್ಷದಲ್ಲಿ ಕ್ರಮ ತೆಗೆದುಕೊಳ್ಳಲಿಲ್ಲ. ಇದು ಕೂಡ ಪಕ್ಷದ ಹಿನ್ನೆಡೆಗೆ ಕಾರಣʼʼ ಎಂದು ಹೇಳುವ ಮೂಲಕ ಯಡಿಯೂರಪ್ಪರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಿರುವುದಕ್ಕೆ ಎಸ್.ಟಿ. ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆʼʼ ಎಂದು ಎಸ್.ಟಿ. ಸೋಮಶೇಖರ್ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದರು.
ʻʻನಾನು ಕಾಂಗ್ರೆಸ್ ನಲ್ಲಿದ್ದವನು. ಅವರಾಗಿಯೇ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್.ಟಿ.ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನು ಪಕ್ಷ ಬಿಡಿಸಲು ಅಂತ ರೆಡಿಯಾಗಿದ್ದಾರೆʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.
ʻʻನಾನು ಕ್ಷೇತ್ರಕ್ಕೆ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ. ಜತೆಗೆ ನಾನು ಸಿಎಂ, ಡಿಸಿಎಂ ಅವರನ್ನು ಹೊಗಳುವುದನ್ನು ಸಹಿಸುತ್ತಿಲ್ಲ.ʼʼ ಎಂದು ಹೇಳಿದರು ಸೋಮಶೇಖರ್.
ನಾನು ನನ್ನ ಕಚೇರಿ ಮೂಲಕ ಕಾಂಗ್ರೆಸ್ ಗ್ಯಾರಂಟಿಗಳ ಫಾಲೋ ಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರರ ಜನರಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಯವರು ಅದೆಲ್ಲ ಕಾಂಗ್ರೆಸ್ ಗ್ಯಾರಂಟಿ ಅದನ್ನು ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ. ಅರೇ ಸರ್ಕಾರ ಯಾವುದಾದರೂ ಇರಲಿ. ಜನಕ್ಕೆ ಒಳ್ಳೆಯದು ಮಾಡುವುದು ಬೇಡವೇ?ʼʼ ಎಂದು ಸೋಮಶೇಖರ್ ಪ್ರಶ್ನಿಸಿದರು. ರಾಜ್ಯ ಬಿಜೆಪಿ ಘಟಕ ರಾಜ್ಯದಲ್ಲಿ ಬರ ಪರಿಸ್ಥಿತಿ ಅಧ್ಯಯನ ಮಾಡುತ್ತಿರುವುದನ್ನು ಎಸ್.ಟಿ. ಸೋಮಶೇಖರ್ ವಿರೋಧಿಸಿದರು. ʻʻನಿಮ್ಮದೇ ಕೇಂದ್ರ ಸರ್ಕಾರ ಇದೆ. ಅಧಿಕಾರಿಗಳು ಅಧ್ಯಾಯನ ಮಾಡಿ ಹೋಗಿದ್ದಾರೆ. ನೀವು ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿ. ಅದನ್ನು ಬಿಟ್ಟು ಇಲ್ಲಿ ಪ್ರವಾಸ ಮಾಡಿದರೆ ಏನು ಪ್ರಯೋಜನ. ನಿಮ್ಮ ಬರ ಅಧ್ಯಯನ ಪ್ರವಾಸದಿಂದ ಯಾವುದೇ ಪ್ರಯೋಜನ ಇಲ್ಲʼʼ ಎಂದು ಸ್ವಪಕ್ಷದ ವಿರುದ್ಧವೇ ಅವರು ಕಿಡಿ ಕಾರಿದರು

ದೇಶ

ಕರ್ನಾಟಕ ರಾಜಕೀಯಕ್ಕೆ ಬಿಹಾರದ VIP ಪಕ್ಷ ಎಂಟ್ರಿ; 2028 ಚುನಾವಣೆಗೆ ಭರ್ಜರಿ ಸಿದ್ಧತೆ

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಪೈಪೋಟಿಯ ನಡುವೆ ಇದೀಗ ಬಿಹಾರ ಮೂಲದ Vikassheel Insaan Party (VIP) ಪಕ್ಷ ಹೊಸದಾಗಿ ಪ್ರವೇಶಿಸಿದೆ. ಪಕ್ಷದ ಸಂಸ್ಥಾಪಕ Mukesh Sahani ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಮಾರಂಭದ ಮೂಲಕ ಪಕ್ಷವು ಅಧಿಕೃತವಾಗಿ ಕರ್ನಾಟಕ ರಾಜಕೀಯಕ್ಕೆ ಕಾಲಿಟ್ಟಿದೆ.

ಮೀನುಗಾರರು ಮತ್ತು ಹಿಂದುಳಿದ ವರ್ಗಗಳ ಮೇಲೆ ಗಮನ

ಬಿಹಾರದಲ್ಲಿ ನಿಶಾದ್ (ಮೀನುಗಾರ) ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳ ಪರವಾಗಿ ಆರಂಭವಾದ VIP ಪಕ್ಷ ಇದೀಗ ಕರ್ನಾಟಕದಲ್ಲೂ ತನ್ನ ನೆಲೆ ವಿಸ್ತರಿಸಲು ಮುಂದಾಗಿದೆ. ಬೆಂಗಳೂರಿನಲ್ಲಿ ಮಾತನಾಡಿದ ಮುಖೇಶ್ ಸಹಾನಿ, ದೇಶಾದ್ಯಂತ ಮೀನುಗಾರಿಕೆ ವಲಯಕ್ಕೆ ಸಂಬಂಧಿಸಿದ ಸುಮಾರು 312 ಸಮುದಾಯಗಳಿದ್ದು, ಅವರಿಗೆ ರಾಜಕೀಯ ಪ್ರಾತಿನಿಧ್ಯ ಮತ್ತು ಶಕ್ತಿ ನೀಡುವ ಉದ್ದೇಶದಿಂದ ಪಕ್ಷ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹರಡಿರುವ ಕೋಲಿ ಹಾಗೂ ಇತರೆ ಹಿಂದುಳಿದ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

2028ರ ವಿಧಾನಸಭೆ ಚುನಾವಣೆಗೆ ಸಿದ್ಧತೆ

ಪ್ರಸ್ತುತ ರಾಜ್ಯದಲ್ಲಿ ಯಾವುದೇ ಪ್ರಮುಖ ಚುನಾವಣೆ ಇಲ್ಲದಿದ್ದರೂ, VIP ಪಕ್ಷವು ದೀರ್ಘಾವಧಿಯ ರಾಜಕೀಯ ಯೋಜನೆಯೊಂದಿಗೆ ಕರ್ನಾಟಕಕ್ಕೆ ಪ್ರವೇಶಿಸಿದೆ. 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪಕ್ಷ ಘೋಷಿಸಿದೆ.

ಪಕ್ಷದ ರಾಜ್ಯ ಉಪಾಧ್ಯಕ್ಷ Mohan Kumar B. K. ಮಾತನಾಡಿ, ಹಿಂದುಳಿದ ವರ್ಗಗಳ ಪರ್ಯಾಯ ರಾಜಕೀಯ ಶಕ್ತಿಯಾಗಿ ಪಕ್ಷವನ್ನು ಬೆಳೆಸುವುದಾಗಿ ಹೇಳಿದ್ದಾರೆ.

ಬಿಹಾರದಲ್ಲಿ ಮಿಶ್ರ ಸಾಧನೆ

VIP ಪಕ್ಷವು ಬಿಹಾರದಲ್ಲಿ ತನ್ನ ಪ್ರಭಾವ ಸ್ಥಾಪಿಸಲು ಪ್ರಯತ್ನಿಸಿದರೂ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲಿಲ್ಲ. ಆ ಸಮಯದಲ್ಲಿ Rashtriya Janata Dal ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಪಕ್ಷಕ್ಕೆ ಒಂದು ಸ್ಥಾನವೂ ದೊರೆಯಲಿಲ್ಲ. ಆದರೂ ರಾಷ್ಟ್ರೀಯ ಮಟ್ಟದಲ್ಲಿ ತನ್ನ ವಿಸ್ತರಣೆ ಮುಂದುವರಿಸುವ ಗುರಿಯನ್ನು ಹೊಂದಿದೆ.

ಮುಖೇಶ್ ಸಹಾನಿ ಯಶೋಗಾಥೆ

ಮುಖೇಶ್ ಸಹಾನಿ ಅವರ ಜೀವನ ಪಯಣ ಗಮನಾರ್ಹವಾಗಿದೆ. ಬಿಹಾರದ ಬಡ ಮೀನುಗಾರ ಕುಟುಂಬದಲ್ಲಿ ಜನಿಸಿದ ಅವರು, ಕೇವಲ ಎಂಟನೇ ತರಗತಿವರೆಗೆ ಶಿಕ್ಷಣ ಪಡೆದಿದ್ದರು. ನಂತರ ಮುಂಬೈಗೆ ತೆರಳಿ ಸಿನಿಮಾ ಕ್ಷೇತ್ರದಲ್ಲಿ ಸೆಟ್ ಡಿಸೈನರ್ ಆಗಿ ಕೆಲಸ ಆರಂಭಿಸಿದರು.

ಮುಂದೆ ತಮ್ಮದೇ Cineyug ಸಂಸ್ಥೆಯ ಮೂಲಕ ಮನರಂಜನಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿದರು. ಬಾಲಿವುಡ್‌ನ ಜನಪ್ರಿಯ ಚಿತ್ರಗಳಾದ Devdas ಮತ್ತು Bajrangi Bhaijaan ಸೇರಿದಂತೆ ಹಲವು ಯೋಜನೆಗಳಲ್ಲಿ ಕೆಲಸ ಮಾಡಿ ಗಮನ ಸೆಳೆದಿದ್ದರು.

ಈಗ ರಾಜಕೀಯದಲ್ಲಿ ತಮ್ಮದೇ ಗುರುತು ಮೂಡಿಸಲು ಮುಂದಾಗಿರುವ ಮುಖೇಶ್ ಸಹಾನಿ, ಕರ್ನಾಟಕದ ರಾಜಕೀಯ ಅಖಾಡದಲ್ಲಿ ಎಷ್ಟು ಪ್ರಭಾವ ಬೀರುತ್ತಾರೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

Continue Reading

ದೇಶ

ಕಾಂಗ್ರೆಸ್‌ನಲ್ಲಿ ಮಂತ್ರಿಗಿರಿ ಮಹಾಯುದ್ಧ: 20 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು!

Published

on

ಬೆಂಗಳೂರು: ಮುಖ್ಯಮಂತ್ರಿ D. K. Shivakumar ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಮೊದಲ ಹಂತದಲ್ಲಿ 13 ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಮಂತ್ರಿಗಿರಿ ಪೈಪೋಟಿ ತೀವ್ರಗೊಂಡಿದೆ. ಸಂಪುಟದಲ್ಲಿ ಇನ್ನೂ ಖಾಲಿ ಇರುವ 20 ಸಚಿವ ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರು ಆಕಾಂಕ್ಷಿಗಳಾಗಿರುವುದು ಹೈಕಮಾಂಡ್‌ಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಮೊದಲ ಪಟ್ಟಿಯಲ್ಲಿ ಸ್ಥಾನ ಸಿಗದ ಹಲವು ಹಿರಿಯ ನಾಯಕರು, ಮಾಜಿ ಸಚಿವರು ಮತ್ತು ಪ್ರಭಾವಿ ಶಾಸಕರು ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಪಡೆಯಲು ದೆಹಲಿ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ. ಸಚಿವ ಸ್ಥಾನ ಸಿಗದೇ ಹೋದದ್ದು ತಮ್ಮ ರಾಜಕೀಯ ಅನುಭವಕ್ಕೆ ಮಾಡಿದ ಅಗೌರವ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಜಮೀರ್, ರಾಮಲಿಂಗಾ ರೆಡ್ಡಿ ಅಸಮಾಧಾನದ ಬಳಿಕ ಹೊಸ ಸವಾಲು

ಖಾತೆ ಹಂಚಿಕೆ ವಿಚಾರದಲ್ಲಿ ಉಂಟಾದ ಅಸಮಾಧಾನದಿಂದ Ramalinga Reddy ರಾಜೀನಾಮೆ ನೀಡಿ ಬಳಿಕ ವಾಪಸ್ ಪಡೆದ ಬೆಳವಣಿಗೆ ಹಾಗೂ Zameer Ahmed Khan ಬೆಂಬಲಿಗರ ಪ್ರತಿಭಟನೆ ಪಕ್ಷದೊಳಗಿನ ಅಸಮಾಧಾನವನ್ನು ಬಹಿರಂಗಪಡಿಸಿತ್ತು. ಇದೀಗ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯ ವಿಚಾರ ಕಾಂಗ್ರೆಸ್ ನಾಯಕತ್ವಕ್ಕೆ ಮತ್ತಷ್ಟು ಸವಾಲು ತಂದಿದೆ.

ಜಾತಿ, ಜಿಲ್ಲಾ ಕೋಟಾ ಲೆಕ್ಕಾಚಾರ

ಸಚಿವ ಸ್ಥಾನ ಬಯಸಿರುವ ನಾಯಕರು ಜಾತಿ ಸಮೀಕರಣ, ಜಿಲ್ಲಾ ಪ್ರತಿನಿಧಿತ್ವ ಹಾಗೂ ಸಮುದಾಯದ ಪ್ರಾಬಲ್ಯದ ಅಂಶಗಳನ್ನು ಮುಂದಿಟ್ಟು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಸಚಿವರಾಗದ ನಾಯಕರು Mallikarjun Kharge ಅವರ ಮೂಲಕ ಅವಕಾಶ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಆಪ್ತ ವಲಯದ ಶಾಸಕರು ತಮ್ಮ ಅವಕಾಶದ ಬಗ್ಗೆ ವಿಶ್ವಾಸ ಹೊಂದಿದ್ದರೆ, ಮಾಜಿ ಮುಖ್ಯಮಂತ್ರಿ Siddaramaiah ಬೆಂಬಲಿಗರೂ ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ.

ಪರಿಷತ್ ಚುನಾವಣೆ ಬಳಿಕವೇ ಸಂಪುಟ ವಿಸ್ತರಣೆ?

ಪ್ರಸ್ತುತ ಲೆಕ್ಕಾಚಾರದ ಪ್ರಕಾರ, ಒಂದು ಸಚಿವ ಸ್ಥಾನಕ್ಕೆ ಕನಿಷ್ಠ ಮೂರರಿಂದ ನಾಲ್ಕು ಮಂದಿ ಆಕಾಂಕ್ಷಿಗಳಿದ್ದು, ಅಂತಿಮ ಪಟ್ಟಿ ಸಿದ್ಧಪಡಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಮಾಡದಿರಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯ ಉಸ್ತುವಾರಿ Randeep Singh Surjewala ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಸಚಿವರ ಖಾತೆ ಹಂಚಿಕೆ ಅಸಮಾಧಾನವನ್ನು ಶಮನಗೊಳಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದರ ನಡುವೆ ಉಳಿದ 20 ಸಚಿವ ಸ್ಥಾನಗಳನ್ನು ಸಮತೋಲನದಿಂದ ಭರ್ತಿ ಮಾಡುವುದು ಕಾಂಗ್ರೆಸ್ ನಾಯಕತ್ವಕ್ಕೆ ಅತ್ಯಂತ ಕಠಿಣ ಪರೀಕ್ಷೆಯಾಗಿ ಪರಿಣಮಿಸಿದೆ.

Continue Reading

ದೇಶ

ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ

Published

on

ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.

ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.

ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.

ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.

ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.

Continue Reading

Trending