crcket

ಮ್ಯಾಕ್ಸ್​ವೆಲ್ ದ್ವಿಶತಕದ ಆಟಕ್ಕೆ ಕಿಂಗ್ ಕೊಹ್ಲಿ ಕ್ಲೀನ್ ಬೌಲ್ಡ್

ಮ್ಯಾಕ್ಸ್​ವೆಲ್ ದ್ವಿಶತಕದ ಆಟಕ್ಕೆ ಕಿಂಗ್ ಕೊಹ್ಲಿ ಕ್ಲೀನ್ ಬೌಲ್ಡ್


ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಎಬ್ಬಿಸಿದ ಸುನಾಮಿಗೆ ಇಡೀ ಕ್ರಿಕೆಟ್ ಲೋಕವೇ ದಂಗಾಗಿ ಹೋಗಿದೆ. ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್​ ಪಂದ್ಯದಲ್ಲಿ ದ್ವಿಶತಕದ ಇನ್ನಿಂಗ್ಸ್ ಆಡಿದ ಮ್ಯಾಕ್ಸ್​ವೆಲ್​ಗೆ ಕ್ರಿಕೆಟ್​ ಜಗತ್ತಿನ ಶ್ರೇಷ್ಠ ಆಟಗಾರರೆಲ್ಲ ಸಲಾಂ ಹೊಡೆದಿದ್ದಾರೆ. ಮ್ಯಾಕ್ಸ್‌ವೆಲ್ ಅವರ ಸಿಡಿಲಬ್ಬರ್ ಇನ್ನಿಂಗ್ಸ್ ನೋಡಿದ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ವಾಸಿಂ ಅಕ್ರಮ್, ಮಿಸ್ಬಾ ಉಲ್ ಹಕ್, ಡೇಲ್ ಸ್ಟೇಯ್ನ್ ಅವರಂತಹ ದಿಗ್ಗಜರು ತಮ್ಮ ಕ್ರಿಕೆಟ್ ಜೀವನದಲ್ಲಿ ಇಂತಹ ಇನ್ನಿಂಗ್ಸ್ ನೋಡಿರಲಿಲ್ಲ ಎಂದಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಇನ್ನಿಂಗ್ಸ್ ಎಷ್ಟು ಅದ್ಭುತವಾಗಿತ್ತು ಎಂದರೆ 49 ಶತಕಗಳನ್ನು ಗಳಿಸಿದ ವಿರಾಟ್ ಕೊಹ್ಲಿ ಕೂಡ ಆಶ್ಚರ್ಯಚಕಿತರಾಗಿದ್ದು, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮ್ಯಾಕ್ಸ್‌ವೆಲ್​ರನ್ನು ಹಾಡಿ ಹೊಗಳಿದ್ದಾರೆ.ವಿರಾಟ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಹೊಗಳಿ ವಿಶೇಷವಾದ ಕಾಮೆಂಟ್ ಮಾಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಮ್ಯಾಕ್ಸ್‌ವೆಲ್ ಅವರ ಫೋಟೋವನ್ನು ಹಂಚಿಕೊಂಡಿರುವ ಕೊಹ್ಲಿ, ‘ನಿನ್ನಿಂದ ಮಾತ್ರ ಇದು ಸಾಧ್ಯ’ ಎಂದು ಬರೆದುಕೊಂಡಿದ್ದಾರೆ.

Trending

Exit mobile version