crcket
ಆಟದ ಮಧ್ಯದಲ್ಲೇ ಮೈದಾನ ತೊರೆದ ಶುಭ್ಮನ್ ಗಿಲ್
ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ರೋಹಿತ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಶುಭ್ಮನ್ ಗಿಲ್, ಸ್ನಾಯು ಸೆಳೆತದಿಂದಾಗಿ ಆಟದ ಮಧ್ಯದಲ್ಲೇ ಮೈದಾನವನ್ನು ತೊರೆದಿದ್ದಾರೆ.ನ್ಯೂಜಿಲೆಂಡ್ ವಿರುದ್ಧ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಫ್ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಸ್ಥಿತಿಯಲ್ಲಿದೆ. ತಂಡ, ಆರಂಭಿಕ ರೋಹಿತ್ ಶರ್ಮಾ ಅವರ ಏಕೈಕ ವಿಕೆಟ್ ಕಳೆದುಕೊಂಡು 180 ಕ್ಕೂ ಹೆಚ್ಚು ರನ್ ಕಲೆಹಾಕಿದೆ. ಆದರೆ ಈ ನಡುವೆ ತಂಡಕ್ಕೆ ಆಘಾತ ಎದುರಾಗಿದ್ದು, ರೋಹಿತ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಶುಭ್ಮನ್ ಗಿಲ್, ಸ್ನಾಯು ಸೆಳೆತದಿಂದಾಗಿ ಆಟದ ಮಧ್ಯದಲ್ಲೇ ಮೈದಾನವನ್ನು ತೊರೆದಿದ್ದಾರೆ. ಹೀಗಾಗಿ ರಿಟೈರ್ಡ್ ಹರ್ಟ್ ಆಗಿರುವ ಗಿಲ್ ಬದಲಿಗೆ ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ ಅವರೊಂದಿಗೆ ಕ್ರೀಸ್ನಲ್ಲಿದ್ದಾರೆ.ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಶುಭ್ಮನ್ ಗಿಲ್ ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್ಗೆ ಮುಂದಾಗಿದ್ದರು. ಈ ಮೂಲಕ ಮೊದಲ ವಿಕೆಟ್ಗೆ ರೋಹಿತ್ ಅವರೊಂದಿಗೆ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು. ಆ ವೇಳೆ 47 ರನ್ ಸಿಡಿಸಿ ನಾಯಕ ಅರ್ಧಶತಕ ವಂಚಿತರಾಗಿ ಪೆವಿಲಿಯನ್ ಸೇರಿಕೊಂಡರು. ನಂತರ ವಿರಾಟ್ ಕೊಹ್ಲಿ ಅವರೊಂದಿಗೆ ಬಿಗ್ ಇನ್ನಿಂಗ್ಸ್ ಕಟ್ಟಿದ ಗಿಲ್, ಅರ್ಧಶತಕವನ್ನು ಸಹ ಪೂರೈಸಿದರು.ಆದರೆ ಈ ವೇಳೆ ಮುಂಬೈನ ಬಿಸಿಲಿನಿಂದಾಗಿ ವಿರಾಟ್ ಕೊಹ್ಲಿ ಅವರೊಂದಿಗೆ ವಿಕೆಟ್ ಮಧ್ಯದಲ್ಲಿ ಓಡಲು ಕಷ್ಟ ಪಡುತ್ತಿದ್ದ ಗಿಲ್ ಅವರನ್ನು ಮೈದಾನದಿಂದ ಹೊರಬರುವಂತೆ ನಾಯಕ ರೋಹಿತ್ ಶರ್ಮಾ ಸೂಚನೆ ನೀಡಿದರು. ಆ ಬಳಿಕ ನಾಯಕನ ಸಲಹೆ ಮೇರೆಗೆ ಗಿಲ್, 65 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 79 ರನ್ ಸಿಡಿಸಿ, ಪೆವಿಲಿಯನ್ ಸೇರಿಕೊಂಡಿದ್ದಾರೆ. ಇದೀಗ ಇಂಜುರಿಯಿಂದ ಪೆವಿಲಿಯನ್ ಸೇರಿಕೊಂಡಿರುವ ಗಿಲ್, ಮತ್ತೊಂದು ವಿಕೆಟ್ ಬಿದ್ದ ಬಳಿಕವೂ ಬ್ಯಾಟಿಂಗ್ಗೆ ಬರಬಹುದಾಗಿದೆ.
crcket
ಕ್ಯಾಪ್ಟನ್ಸಿಯಲ್ಲಿ ವಿಶೇಷ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ!
2022ರ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ನಂತರ ಭಾರತದ ಟಿ20 ಕ್ರಿಕೆಟ್ ತಂಡದಿಂದ ಹೊರಗುಳಿದಿದ್ದ ಅನುಭವಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಇದೀಗ ಕಮ್‌ಬ್ಯಾಕ್ ಮಾಡಿದ್ದಾರೆ. ಪ್ರವಾಸಿ ಅಫಘಾನಿಸ್ತಾನ ಎದುರು ನಡೆಯುತ್ತಿರುವ ಮೊತ್ತ ಮೊದಲ ದ್ವಿಪಕ್ಷೀಯ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದ ರೋಹಿತ್ ಜೊತೆಗೆ ಕ್ಯಾಪ್ಟನ್ಸಿ ಜವಾಬ್ದಾರಿ ಕೂಡ ಹೊತ್ತಿದ್ದಾರೆ. ಗುರುವಾರ (ಜ.11) ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕನಾಗಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ವಿಶೇಷ ದಾಖಲೆ ಒಂದನ್ನು ಬರೆದಿದ್ದಾರೆ.
ಮೊಹಾಲಿ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬರೋಬ್ಬರಿ 14 ತಿಂಗಳ ನಂತರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಪ್ರವಾಸಿ ಅಫಘಾನಿಸ್ತಾನ ಎದುರು ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ಮೊದಲ ಹಣಾಹಣಿ ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಗುರುವಾರ (ಜ.11) ನಡೆದು, ಈ ಪಂದ್ಯದಲ್ಲಿ ಕಣಕ್ಕಿಳಿದ ರೋಹಿತ್ ವಿಶೇಷ ದಾಖಲೆ ಒಂದನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಈಗ 36 ವರ್ಷ, 256 ದಿನಗಳ ವಯಸ್ಸಿನ ಹಿರಿಯ ಬ್ಯಾಟರ್ ಪಾಲಾಗಿದೆ. ಈ ಮೂಲಕ ಹಿರಿಯ ಓಪನರ್ ಶಿಖರ್ ಧವನ್ ಅವರ ಹೆಸರಲ್ಲಿದ್ದ ದಾಖಲೆಯನ್ನು ರೋಹಿತ್ ಅಳಿಸಿಹಾಕಿದ್ದಾರೆ.
crcket
ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಕ್ರಿಕೆಟಿಗ ಮುಹಮ್ಮದ್ ಶಮಿ
ದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿ ಅವರಿಗೆ ಇಂದು ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು. ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮುಹಮ್ಮದ್ ಶಮಿ ಅವರ ಹೆಸರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿತ್ತು. ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್ ಗಳನ್ನು ಕಬಳಿಸುವ ಮೂಲಕ ಶಮಿ ತಮ್ಮ ಏಕದಿನ ವಿಶ್ವಕಪ್ 2023 ಯಾತ್ರೆ ಅನ್ನು ಯಶಸ್ವಿಯಾಗಿ ಮುಗಿಸಿದ್ದರು.
“ಈ ಪ್ರಶಸ್ತಿಯು ನನ್ನ ಕನಸಾಗಿತ್ತು. ಹಲವಾರು ಮಂದಿ ತಮ್ಮ ಜೀವಿತಾವಧಿ ಮುಗಿಸಿದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದಿಲ್ಲ. ಈ ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಪ್ರಶಸ್ತಿ ಪ್ರದಾನ ಸಮಾರಂಭದ ಪ್ರಾರಂಭಕ್ಕೂ ಮುನ್ನ ಮುಹಮ್ಮದ್ ಶಮಿ ಸಂತಸ ವ್ಯಕ್ತಪಡಿಸಿದರು. ಮುಹಮ್ಮದ್ ಶಮಿ ಅವರು ವಿಶ್ವಕಪ್ ಕ್ರೀಡಾಕೂಟದ ಆರಂಭಿಕ ನಾಲ್ಕು ಪಂದ್ಯಗಳಿಂದ ಆಡುವ ಹನ್ನೊಂದು ಮಂದಿ ತಂಡದಿಂದ ಹೊರಗಿದ್ದರು. ಆದರೆ, ಹಾರ್ದಿಕ್ ಪಾಂಡ್ಯ ಗಾಯಾಳುವಾಗಿದ್ದರಿಂದ ಶಮಿ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ದೊರೆತಿತ್ತು. ತಮ್ಮ ಮೊದಲ ಪಂದ್ಯದಲ್ಲೇ ನ್ಯೂಝಿಲೆಂಡ್ ತಂಡದ ವಿರುದ್ಧ 5 ವಿಕೆಟ್ ಗಳನ್ನು ಕಿತ್ತು ಶಮಿ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದರು. ಅಲ್ಲಿಂದಾಚೆಗೆ ಶಮಿ ದಾಖಲೆಯ ಓಟ ಓಡಿದರು. ಕೇವಲ ಏಳು ಪಂದ್ಯಗಳಿಂದ 24 ವಿಕೆಟ್ ಗಳನ್ನು ಪಡೆದು ಮಿಂಚಿದ್ದರು.
crcket
35 ವರ್ಷಗಳ ಬಳಿಕ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕಲರವ..
ಭಾರತದ ಮುಕುಟ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿತ್ತು. ಆದರೆ ಭಯೋತ್ಪಾದನೆಯಿಂದಾಗಿ ಅದನ್ನು ನಿಲ್ಲಿಸಲಾಯಿತು. ಇದೀಗ ಬರೋಬ್ಬರಿ 35 ವರ್ಷಗಳ ಬಳಿಕ ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕಲರವ ಮತ್ತೆ ಮರುಕಳಿಸಿದೆ. ಹೀಗಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.35 ವರ್ಷಗಳ ನಂತರ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿದೆ. ಈಗಾಗಲೇ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಎರಡು ಪಂದ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಾಗಂತ ಪಂದ್ಯವನ್ನು ವೀಕ್ಷಿಸಲು ಬಂದ ಅಭಿಮಾನಿಗಳ ಸಂಖ್ಯೆ ಕಡಿಮೆಯೇನೂ ಇರಲಿಲ್ಲ. ಜಮ್ಮುವಿನಲ್ಲಿ ಕ್ರಿಕೆಟ್ ಬೆಳವಣಿಗೆಗೆ ಈ ಪಂದ್ಯಗಳು ಇದು ಪ್ರಮುಖ ಪಾತ್ರ ವಹಿಸುತ್ತದೆ. ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಮುಂದೆ ಮತ್ತಷ್ಟು ಪಂದ್ಯಗಳು ನಡೆಯಲಿವೆ.ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣವನ್ನು 1966ರಲ್ಲಿ ನಿರ್ಮಿಸಲಾಯಿತು. 1988ರ ಡಿಸೆಂಬರ್ 19ರಂದು ಆ ಮೈದಾನದಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ನಡೆದಿದೆ. ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಆ ಬಳಿಕ ಭಯೋತ್ಪಾದನೆಯಿಂದಾಗಿ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಈ ಮೈದಾನದಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ.ಲೆಜೆಂಡ್ಸ್ ಲೀಗ್ ಕ್ರಿಕೆಟ್ ಬಳಿಕ ಪ್ರಮುಖ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸುವಲ್ಲಿ ಮತ್ತು ಜಮ್ಮುವಿನ ಮೌಲಾನಾ ಆಜಾದ್ ಸ್ಟೇಡಿಯಂ ಒಂದು ಹೆಜ್ಜೆ ಮುಂದಿಟ್ಟಿದೆ. ಲೆಜೆಂಡ್ಸ್ ಲೀಗ್ ಟೂರ್ನಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಈ ಮೈದಾನದಲ್ಲಿ ಆಯೋಜಿಸಲಾಗಿದೆ. ಇನ್ನೆರಡು ಪಂದ್ಯಗಳು ನಡೆಯಬೇಕಿದೆ.ನವೆಂಬರ್ 27ರ ಸೋಮವಾರ ನಡೆಯದ ಮೊದಲ ಪಂದ್ಯದಲ್ಲಿ ಮಣಿಪಾಲ್ ಟೈಗರ್ಸ್ ಮತ್ತು ಸರ್ದಾನ್ ಸೂಪರ್ ಸ್ಟಾರ್ಸ್ ಮುಖಾಮುಖಿಯಾದವು. ರಾಸ್ ಟೇಲರ್ ಬಳಗವು ಹರ್ಭಜನ್ ಸಿಂಗ್ ಅವರ ಮಣಿಪಾಲವನ್ನು ಐದು ವಿಕೆಟ್ ಗಳಿಂದ ಸೋಲಿಸಿತು. ನವೆಂಬರ್ 29ರ ಬುಧವಾರ ನಡೆಯಬೇಕಿದ್ದ ಭಿಲ್ವಾರ ಕಿಂಗ್ಸ್ ಮತ್ತು ಸರ್ದಾನ್ ಸೂಪರ್ ಸ್ಟಾರ್ಸ್ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿತು.ನವೆಂಬರ್ 30ರ ಗುರುವಾರ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ತಂಡಗಳ ನಡುವೆ ಪಂದ್ಯ ನಡೆಯಯುತ್ತಿದೆ. ಕೊನೆಯ ಪಂದ್ಯದಲ್ಲಿ ಭಿಲ್ವಾರ ಕಿಂಗ್ಸ್ ಮತ್ತು ಅರ್ಬನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಡಿಸೆಂಬರ್ 1ರ ಶುಕ್ರವಾರ ಪಂದ್ಯ ನಡೆಯಲಿದೆ.100ಕ್ಕೂ ಹೆಚ್ಚು ಮಾಜಿ ಕ್ರಿಕೆಟಿಗರು ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದಾರೆ. ದಿಗ್ಗಜ ಕ್ರಿಕೆಟಿಗರಾದ ಗಂಭೀರ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಶೇನ್ ವ್ಯಾಟ್ಸನ್, ರಾಬಿನ್ ಉತ್ತಪ್ಪ, ಕ್ರಿಸ್ ಗೇಲ್, ಹಾಶಿಮ್ ಆಮ್ಲಾ, ಮೊರ್ನೆ ಮೊರ್ಕೆಲ್ ಮುಂತಾದ ತಾರೆಯರು ಇದ್ದಾರೆ.
-
ದೇಶ19 hours agoKumar Bangarappa : ಶಹನಾಯಿ ನಾದಕ್ಕೆ ಮನಸೋತ ಕುಮಾರ್ ಬಂಗಾರಪ್ಪ: ಕಲಾವಿದ ರಾಮಪ್ಪಗೆ ಭಾರಿ ಮೆಚ್ಚುಗೆ
-
ಅಪರಾಧ21 hours agoಶಕ್ತಿ ಯೋಜನೆ ಹೆಸರಿನಲ್ಲಿ ಲೂಟಿ: BMTC ಸಿಬ್ಬಂದಿ ವಿರುದ್ಧ ಕಠಿಣ ಕ್ರಮ
-
ಕ್ರೀಡೆ22 hours agoCSK ಮೊದಲ ಜಯದ ನಡುವೆ ವಿವಾದ: ಡಿಸಿ ತಂಡದ ಕೋಪ ಸಿಡಿತ
-
ದೇಶ13 hours agoಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!
-
ದೇಶ21 hours ago“ಪರಮಾಣು ಬದ್ಧತೆ ಕಾಣಿಸಲಿಲ್ಲ” – ವ್ಯಾನ್ಸ್ ಹೇಳಿಕೆ
-
ದೇಶ19 hours agoಬೆಂಗಳೂರು ಜೀವನ ವೆಚ್ಚಕ್ಕೆ ಸವಾಲು: ಮಹಿಳೆಯ ಬಜೆಟ್ ಟ್ರಾವೆಲ್ ಸ್ಟೋರಿ
-
ಚುನಾವಣೆ14 hours agoದಾವಣಗೆರೆ ಟಿಕೆಟ್ ವಿವಾದ: ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೇ?
-
ದೇಶ19 hours agoಪಾಪ ನಿವಾರಣೆಗಾಗಿ ವರುಥಿನಿ ಏಕಾದಶಿ ವ್ರತ: ಯಾವಾಗ, ಹೇಗೆ?
