ಬಿಬಿಎಂಪಿ
ಬೆಂಗಳೂರಿನ ಹಲವೆಡೆ ಅಂಗಡಿ ತೆರವು:ಬೀದಿ ಬದಿ ವ್ಯಾಪಾರಸ್ತರಿಗೆ ಶಾಕ್ ನೀಡಿದ ಬಿಬಿಎಂಪಿ ಅಧಿಕಾರಿಗಳು!
ಬೆಂಗಳೂರು, ನವೆಂಬರ್ 17: ಇತ್ತೀಚೆಗೆ ಬಿಬಿಎಂಪಿ ಬೀದಿಬದಿ ಅಂಗಡಿಗಳ ತೆರವು ಮಾಡಿ ವ್ಯಾಪಾರಿಗಳಿಗೆ ಶಾಕ್ ನೀಡಿತ್ತು. ಇದೀಗ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಲಯಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಪಶ್ಚಿಮ ವಲಯ, ಯಲಹಂಕ, ಆರ್.ಆರ್ ನಗರ ಮತ್ತು ದಕ್ಷಿಣ ವಲಯದಲ್ಲೂ ತೆರವು ಕಾರ್ಯಾಚರಣೆ ಮಾಡಾಗಿದೆ. ಪಶ್ಚಿಮ ವಲಯದ ವಿಜಯನಗರದ ಪೋಸ್ಟ್ ಆಫೀಸ್ ಮುಂಭಾಗ ರಸ್ತೆ, ಪುಟ್ ಪಾತ್ ಮೇಲೆ ಹಾಕಿರುವ ತಳ್ಳುವ ಗಾಡಿ ಮತ್ತು ಅಂಗಡಿಗಳ ತೆರವು ಮಾಡಲಾಗಿದೆ.ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಬೀದಿ ಬದಿ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದ್ದಾರೆ. ಮೂವತ್ತು ವರ್ಷಗಳಿಂದ ಇದೇ ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಢೀರ್ ಬಂದು ಅಂಗಡಿಗಳನ್ನ ತೆರವು ಮಾಡುತ್ತಿದ್ದಾರೆ. ಇದೇ ವ್ಯಾಪರವನ್ನ ನಂಬಿಕೊಂಡು ನಮ್ಮ ಜೀವನ ನಡೆಯುತ್ತಿದೆ. ದಿಢೀರ್ ಅಂಗಡಿ ತೆರವು ಮಾಡಿದರೆ ಜೀವನ ನಡೆಯೋದು ಹೇಗೆ ಎಂದು ಪ್ರಶ್ನಿಸಿದ್ದಾರೆ.ಸಾವಿರಾರು ರೂಪಾಯಿ ಬಂಡವಾಳ ಹಾಕಿ ವ್ಯಾಪಾರ ಮಾಡುತ್ತಿದ್ದೇವೆ. ಕೈಮುಗಿದರು ಬಿಡುತ್ತಿಲ್ಲ. ನಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಬೀದಿ ಬದಿ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಳಂಬೆಳಗ್ಗೆ ಫೀಲ್ಡ್ಗೆ ಇಳಿದಿದ್ದ ಪಾಲಿಕೆ ಮಾರ್ಷಲ್ಸ್, ಫುಟ್ಪಾತ್ ಮೇಲೆ ಅಕ್ರಮವಾಗಿ ವ್ಯಾಪಾರ ಮಾಡುತ್ತಿದ್ದ 200 ಕ್ಕೂ ಹೆಚ್ಚು ವ್ಯಾಪಾರಿಗಳನ್ನ ತೆರವು ಮಾಡಿದ್ದಾರೆ. ಟ್ರ್ಯಾಕ್ಟರ್ ಸಮೇತವೇ ಬಂದಿದ್ದ ಅಧಿಕಾರಿಗಳು ತಳ್ಳೋಗಾಡಿಗಳನ್ನೆಲ್ಲಾ ತುಂಬಿಕೊಂಡು ಹೋಗಿದ್ದಾರೆ.
ಚುನಾವಣೆ
ಪೆರಂಬೂರ್ ಕಣಕ್ಕೆ ನಟ ವಿಜಯ್ ಎಂಟ್ರಿ: ತಮಿಳುನಾಡು ರಾಜಕೀಯದಲ್ಲಿ ಸಂಚಲನ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ನಟ Vijay ನೇತೃತ್ವದ Tamilaga Vettri Kazhagam (TVK) ಪಕ್ಷದ ರಾಜಕೀಯ ಪ್ರವೇಶ ರಾಜ್ಯ ರಾಜಕೀಯ ಸಮೀಕರಣಗಳಲ್ಲಿ ಭಾರೀ ಬದಲಾವಣೆ ತಂದಿದೆ. ವಿಶೇಷವಾಗಿ, ವಿಜಯ್ ಅವರು ಪೆರಂಬೂರ್ ವಿಧಾನಸಭಾ ಕ್ಷೇತ್ರವನ್ನು ತಮ್ಮ ಚೊಚ್ಚಲ ಚುನಾವಣಾ ಕಣವಾಗಿ ಆರಿಸಿಕೊಂಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ.
Perambur ಕ್ಷೇತ್ರವು ಸಾಂಪ್ರದಾಯಿಕವಾಗಿ ದ್ರಾವಿಡ ಪಕ್ಷಗಳ ಭದ್ರಕೋಟೆಯಾಗಿದ್ದರೂ, ಈ ಬಾರಿ ವಿಜಯ್ ಪ್ರವೇಶದಿಂದಾಗಿ ಹೈ-ಪ್ರೊಫೈಲ್ ಕಣವಾಗಿ ಪರಿಣಮಿಸಿದೆ. Dravida Munnetra Kazhagam (DMK) ಮತ್ತು All India Anna Dravida Munnetra Kazhagam (AIADMK) ಪಕ್ಷಗಳಿಗೆ ಇದು ಹೊಸ ಸವಾಲಾಗಿ ಪರಿಣಮಿಸಿದೆ.
ಈ ಕ್ಷೇತ್ರದಲ್ಲಿ ಡಿಎಂಕೆ ಒಂಬತ್ತು ಬಾರಿ ಗೆಲುವು ಸಾಧಿಸಿದ್ದು, ಸತ್ಯವಾಣಿ ಮುತ್ತು ಮತ್ತು ಪರಿಥಿ ಇಲಂವಝುತಿ ಅವರಂತಹ ನಾಯಕರಿಂದ ರಾಜಕೀಯ ಇತಿಹಾಸ ರೂಪುಗೊಂಡಿದೆ. 2016ರಲ್ಲಿ ಎಐಎಡಿಎಂಕೆ ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದರೂ, 2019ರ ಉಪಚುನಾವಣೆ ಮತ್ತು 2021ರ ಚುನಾವಣೆಯಲ್ಲಿ ಡಿಎಂಕೆ ಮತ್ತೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸಿತ್ತು.
ಸುಮಾರು 2.22 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಪೆರಂಬೂರ್ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಯುವಕರು ಮತ್ತು ಕಾರ್ಮಿಕ ವರ್ಗದ ಪ್ರಭಾವ ಹೆಚ್ಚಿರುವ ಈ ಪ್ರದೇಶದಲ್ಲಿ ಉದ್ಯೋಗ, ಹಣದುಬ್ಬರ ನಿಯಂತ್ರಣ, ವಸತಿ ಮತ್ತು ಮೂಲಸೌಕರ್ಯ ಪ್ರಮುಖ ಚುನಾವಣಾ ವಿಷಯಗಳಾಗಿವೆ.
ವಿಜಯ್ ಅವರ ಯುವಜನಪ್ರಿಯತೆ ಈ ಬಾರಿ ದ್ರಾವಿಡ ಪಕ್ಷಗಳ ದೀರ್ಘಕಾಲದ ಹಿಡಿತವನ್ನು ಸವಾಲು ಮಾಡಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಪೆರಂಬೂರ್ ಕಣ ಇದೀಗ ಸಾಮಾನ್ಯ ಚುನಾವಣೆ ಮಾತ್ರವಲ್ಲ, ಹೊಸ ರಾಜಕೀಯ ಶಕ್ತಿಯ ಪರೀಕ್ಷೆಯಾಗಿ ಪರಿಣಮಿಸಿದೆ.
ದೇಶ
ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ: ಮಧುಮೇಹ, ರಕ್ತದೊತ್ತಡ ಪ್ರಕರಣ ಹೆಚ್ಚಳ
ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಲ್ಲಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿರುವುದು ಆರೋಗ್ಯ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ಸ್ವಚ್ಛತಾ ಯೋಧರೆಂದು ಗುರುತಿಸಲಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿಯನ್ನು ಪಾಲಿಕೆ ವಹಿಸಿಕೊಂಡಿದ್ದು, ನಿಯಮಿತ ಆರೋಗ್ಯ ತಪಾಸಣೆಗಳನ್ನು ನಡೆಸುತ್ತಿದೆ.
ದಕ್ಷಿಣ ಕಾರ್ಪೋರೇಷನ್ ವ್ಯಾಪ್ತಿಯ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 49 ನಮ್ಮ ಕ್ಲಿನಿಕ್ಗಳಲ್ಲಿ ಬುಧವಾರ ಸಮೂಹ ಆರೋಗ್ಯ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
1,934 ಮಂದಿಗೆ ಆರೋಗ್ಯ ತಪಾಸಣೆ
ಒಟ್ಟು 1,934 ಪೌರಕಾರ್ಮಿಕರು ತಪಾಸಣೆಗೆ ಒಳಪಟ್ಟಿದ್ದು, ಈ ಪೈಕಿ 605 ಪುರುಷರು ಮತ್ತು 1,348 ಮಹಿಳೆಯರು ಸೇರಿದ್ದಾರೆ. ತಪಾಸಣಾ ಕಾರ್ಯಕ್ಕಾಗಿ 56 ವೈದ್ಯಾಧಿಕಾರಿಗಳು ಮತ್ತು 168 ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ದಕ್ಷಿಣ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದಾರೆ.
ತಪಾಸಣೆಯಲ್ಲಿ ಪತ್ತೆಯಾದ ಕಾಯಿಲೆಗಳು
ಆರೋಗ್ಯ ತಪಾಸಣೆಯಲ್ಲಿ ಕಂಡುಬಂದ ಪ್ರಮುಖ ಸಮಸ್ಯೆಗಳ ವಿವರ ಹೀಗಿದೆ:
- ಮಧುಮೇಹ: 256 ಪ್ರಕರಣ
- ಅಧಿಕ ರಕ್ತದೊತ್ತಡ: 254 ಪ್ರಕರಣ
- ರಕ್ತಹೀನತೆ: 67 ಪ್ರಕರಣ
- ದಂತ ಸಮಸ್ಯೆ: 57 ಪ್ರಕರಣ
- ಜ್ವರ: 43 ಪ್ರಕರಣ
- ಕಣ್ಣಿನ ಸಮಸ್ಯೆ: 39 ಪ್ರಕರಣ
- ಶ್ರವಣ ಸಮಸ್ಯೆ: 16 ಪ್ರಕರಣ
- ಹೃದಯ ಸಮಸ್ಯೆ: 4 ಪ್ರಕರಣ
- ಜನರಲ್ ಓಪಿಡಿ: 1,198
- ಪೌರಕಾರ್ಮಿಕರ ಆರೋಗ್ಯದ ಮೇಲೆ ವಿಶೇಷ ಗಮನ
- ಪೌರಕಾರ್ಮಿಕರು ನಗರ ಸ್ವಚ್ಛತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಹಿನ್ನೆಲೆ, ಅವರ ಆರೋಗ್ಯ ರಕ್ಷಣೆಗಾಗಿ ಪಾಲಿಕೆ ನಿರಂತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಸೌಲಭ್ಯ ಒದಗಿಸುತ್ತಿದೆ. ಮಧುಮೇಹ ಮತ್ತು ರಕ್ತದೊತ್ತಡ ಪ್ರಕರಣಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಯೋಜನೆ ರೂಪಿಸಲಾಗುತ್ತಿದೆ.
ಬಿಬಿಎಂಪಿ
ಬಿಬಿಎಂಪಿ ಘನತ್ಯಾಜ್ಯ ಆಟೋ ಟಿಪ್ಪರ್ಗಳಿಗೆ ನೂತನ ಸಮಯ: ಈಗಿನಿಂದ ಬೆಳಿಗ್ಗೆ 5:30ಕ್ಕೆ ಸ್ಕ್ಯಾನಿಂಗ್ ಆರಂಭ
ಬೆಂಗಳೂರು: ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿರ್ಧಾರ ಕೈಗೊಂಡಿದೆ. ನಗರದ ವಿವಿಧ ವಾರ್ಡ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ಸ್ಕ್ಯಾನಿಂಗ್) ಸಮಯವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಈ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ.
ಈ ಮೊದಲು ಬೆಳಿಗ್ಗೆ 6:00 ರಿಂದ 7:30 ರವರೆಗೆ ನಡೆಯುತ್ತಿದ್ದ ಮಸ್ಟರಿಂಗ್ ಸಮಯವನ್ನು ಈಗ ಬೆಳಿಗ್ಗೆ 5:30 ರಿಂದ 6:30 ರವರೆಗೆ ಮುಂಚಿತಗೊಳಿಸಲಾಗಿದೆ.

🧹 ಬದಲಾವಣೆ ಉದ್ದೇಶ ಏನು?
- ನಿವಾಸಿಗಳು ತಮ್ಮ ತ್ಯಾಜ್ಯವನ್ನು ಕೆಲಸಕ್ಕೆ ಹೊರಡುವ ಮೊದಲು ನೀಡಲು ಅನುಕೂಲ.
- ಜನರ ದೈನಂದಿನ ಕಾರ್ಯವೈಖರಿಯೊಂದಿಗೆ ತ್ಯಾಜ್ಯ ಸಂಗ್ರಹಣೆ ಜೋಡಣೆ.
- ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದು ಕಪ್ಪು ಚುಕ್ಕಿ (Black Spot) ರೂಪುಗೊಳ್ಳುವಿಕೆ ತಡೆಯುವುದು.
🤝 ಸಾರ್ವಜನಿಕರ ಸಹಕಾರಕ್ಕೆ ಕರೆ:
ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು ಈ ಹೊಸ ಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಗರದ ನಾಗರಿಕರಿಂದ ಸಹಕಾರ ಕೋರಿದ್ದಾರೆ.
-
ಕ್ರೀಡೆ8 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ12 hours ago59 ವರ್ಷಗಳ ಬಳಿಕ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್ ಎಂಟ್ರಿ! ಇಂದು ವಿಜಯ್ ಕ್ಯಾಬಿನೆಟ್ ವಿಸ್ತರಣೆ
-
ದೇಶ11 hours agoಬಿಜೆಪಿಗಿಂತ ವೇಗವಾಗಿ ಬೆಳೆದ ‘Cockroach Janta Party’!
-
ದೇಶ6 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ6 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ಅಪರಾಧ10 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
-
ದೇಶ10 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ9 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
