Connect with us

ರಾಜಕೀಯ

ಕೆಲವೇ ದಿನದಲ್ಲಿ 30-40 ಶಾಸಕರು ಕಾಂಗ್ರೆಸ್ನಿಂದ ಔಟ್ ಎಂದ ಕಟೀಲ್

ಕೆಲವೇ ದಿನದಲ್ಲಿ 30-40 ಶಾಸಕರು ಕಾಂಗ್ರೆಸ್ನಿಂದ ಔಟ್ ಎಂದ ಕಟೀಲ್
ಕೆಲವೇ ದಿನದಲ್ಲಿ 30-40 ಶಾಸಕರು ಕಾಂಗ್ರೆಸ್ನಿಂದ ಔಟ್ ಎಂದ ಕಟೀಲ್

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತಿತರ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಲು ಪ್ರಯತ್ನ ನಡೆಸುತ್ತಿದ್ದಾರೆ. ಅದರ ನಡುವೆಯೇ ಹಸ್ತದೊಳಗೇ ಆಪರೇಷನ್ ನಡೆಯುತ್ತಿರುವುದು ಅವರಿಗೆ ಗೊತ್ತಾಗುತ್ತಿಲ್ಲ. ಇನ್ನು ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್ನಿಂದ ಹೊರಬರಲಿದ್ದಾರೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಅವರು ಮಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿ, ಕಾಂಗ್ರೆಸ್ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಟೀಮ್ ಡಿವೈಡ್ ಆಗಿದೆ. ಅದರ ಮಧ್ಯೆ ಮರಿ ಖರ್ಗೆ (ಪ್ರಿಯಾಂಕ್ ಖರ್ಗೆ) ಮುಖ್ಯಮಂತ್ರಿ ಪಟ್ಟಕ್ಕೆ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರ್ತಾರೆ ಎಂದು ಅವರು ಹೇಳಿದರು.
ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್ ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ. ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ ಹಲವಾರು ಮಂದಿ ಬರ್ತಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಯಾರೂ ಹೋಗ್ತಾ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ʻʻಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವೆಲ್ಗಳು ಬಿದ್ದಿವೆ. ಸತೀಶ್ ಜಾರಕಿಹೊಳಿ, ಜಿ. ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಸಿಎಂ ಹುದ್ದೆಗಾಗಿ ಹೋರಾಟ ಮಾಡುವ ಕಾರಣ ಸರ್ಕಾರ ಬೀಳಬಹುದು ಎಂದು ನಳಿನ್ ಕುಮಾರ್ ಕಟೀಲ್ ಆಶಾವಾದ ವ್ಯಕ್ತಪಡಿಸಿದರು.
ʻʻಆರು ತಿಂಗಳಾದರೂ ಸರ್ಕಾರ ಇನ್ನೂ ಟೇಕಾಫ್ ಆಗ್ತಾ ಇಲ್ಲ. ಅಭಿವೃದ್ಧಿ ಕಾರ್ಯ ಆಗ್ತಾ ಇಲ್ಲ. ಬರ ಪರಿಸ್ಥಿತಿಯ ನಿರ್ವಹಣೆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆʼʼ ಎಂದು ನಳಿನ್ ಕುಮಾರ್ ಆಪಾದಿಸಿದರು.
ʻʻರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದವರನ್ನೂ ಬಂಧಿಸಲಾಗುತ್ತಿಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿವೆʼʼ ಎಂದು ಹೇಳಿದ ನಳಿನ್ ಕುಮಾರ್ ಕಟೀಲ್, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸಗಳು ನಡೆಯುತ್ತಿವೆ. ರಾಜ್ಯ ಸರ್ಕಾರದಿಂದ ಒಂದು ರೂ. ಬಿಡಿಗಾಸು ಕೂಡಾ ಬಿಡುಗಡೆಯಾಗಿಲ್ಲ. ಅಧಿಕಾರಿಗಳ ಸಂಬಳ ಕೊಡಲು ಕೂಡಾ ಹಣ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರ್ನಾಲ್ಕು ತಿಂಗಳು ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆʼʼ ಎಂದು ನಳಿನ್ ಕುಮಾರ್ ಕಟೀಲ್ ನುಡಿದರು. ರಾಜ್ಯ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ನಳಿನ್ ಆಪಾದಿಸಿದರು.

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

Trending