ಬೆಂಗಳೂರು
ಕರ್ನಾಟಕ-ತಮಿಳುನಾಡು ಸರ್ಕಾರ ಜಲಯುದ್ಧಕ್ಕೆ ವೇದಿಕೆ ಸಜ್ಜಾಗುವ ಸಾಧ್ಯತೆ
ಬೆಂಗಳೂರು: ಮಳೆ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಜಲಾನಯನ ಪ್ರದೇಶಗಳ ಅಣೆಕಟ್ಟುಗಳಿಗೆ ಒಳಹರಿವು ಶೇ ೪೨.೫೪ರಷ್ಟು ತಗ್ಗಿದೆ, ಇದರಿಂದಾಗಿ ಅತಂಕದ ವಾತಾವರಣ ಮೂಡಿದೆ, ನೀರಿಲ್ಲದೇ ಗೋಳಾಡುತ್ತಿರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ೧೦ ಟಿಎಂಸಿ ನೀರು ಹರಿಸಲಾಗುತ್ತಿದೆ ಎಂಬ ಸರ್ಕಾರದ ಹೇಳಿಕೆ ಇನ್ನಷ್ಟು ಆತಂಕ ತಂದಿದೆ, ಜೂನ್ ೧ರಿಂದ ಆಗಸ್ಟ್ ೯ರವರೆಗೆ ಜಲಾನಯನ ಭಾಗದ ಅಣೆಕಟ್ಟುಗಳಾದ ಕಬನಿ,ಹಾರಂಗಿ, ಹೇಮಾವತಿ, ಕೆಆರ್‌ಎಸ್‌ನಲ್ಲಿ ಒಳ ಹರಿವಿನ ಪ್ರಮಾಣ ೩೦ ವರ್ಷಗಳ ಸರಾಸರಿಗೆ ಹೋಲಿಸಿದರೆ ಶೇ ೪೨.೫೪ ರಷ್ಟು ಇಳಿಮುಖವಾಗಿದ್ದು ಕಳೆದ ವಾರ ನಡೆದಿದ್ದ ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಇದು ಬಹಿರಂಗವಾಗಿದ, ಈ ಪರಿಸ್ಧಿತಿ ಗಮನಿಸಿದರೆ ತಮಿಳುವಾಡು ಹಾಗೂ ಕರ್ನಾಟಕದ ನಡುವೆ ಮತ್ತೆ ಜಲಯುದ್ಧದ ವೇದಿಕೆ ಸಜ್ಜಾದಂತೆ ಕಾಣುತ್ತಿದೆ, ತಮಿಳುನಾಡಿನಲ್ಲಿ ಒಟ್ಟು ೧ ಲಕ್ಷ ೮೫ ಸಾವಿರ ಎಕರೆ ವಿಸ್ತೀರ್ಣದ ಭಾಗದ ಒಳೆಗೆ ೩೨ ಟಿಎಂಸಿ ಆಡಿ ನೀರು ಆಗತ್ಯ ಎಂದು ಕಾವೇರಿ ಜಲವಿವಾದ ನ್ಯಾಯಮಂಡಳಿ ಹಂಚಿಕೆ ಮಾಡಿತ್ತು, ಅದರೆ ತಮಿಳುನಾಡು ಸರ್ಕಾರ ಹಂಚಿದ್ದ ನೀರಿಗಿಂತ ೨ ಪಟ್ಟು ಹೆಚ್ಚು ನೀರು ಬಳಿಕೆ ಮಾಡಿದೆ ಎಂದು ಕರ್ನಾಟಕ ಸರ್ಕಾರ ಇದೀಗ ಪ್ರಾಧಿಕಾರದ ಗಮನಕ್ಕೆ ತಂದಿದೆ,
ಕ್ರೀಡೆ
ಅಪ್ಪು ಕಪ್ ಸೀಸನ್ 4ಕ್ಕೆ ಅದ್ದೂರಿ ಚಾಲನೆ: ಜುಲೈ 24ರಿಂದ ಶಟಲ್ ಬ್ಯಾಡ್ಮಿಂಟನ್ ಲೀಗ್ ಆರಂಭ
ಬೆಂಗಳೂರು: ರಾಜ್ಯದ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿರುವ ಅಪ್ಪು ಕಪ್ ಸೀಸನ್ 4 (Appu Cup Season 4) ಶಟಲ್ ಬ್ಯಾಡ್ಮಿಂಟನ್ ಟೂರ್ನಿಗೆ ಅದ್ದೂರಿ ಚಾಲನೆ ದೊರೆತಿದೆ. STELLER STUDIO & EVENT MANAGEMENT ಸಂಸ್ಥೆ, PRK Audio ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಈ ಪ್ರತಿಷ್ಠಿತ ಟೂರ್ನಿಯ ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಸಂಭ್ರಮದಿಂದ ನಡೆಯಿತು. ಇದೇ ಜುಲೈ 24, 25 ಮತ್ತು 26ರಂದು ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ವಿ. ಪ್ರಭಾಕರ್, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಟೂರ್ನಿಗೆ ಶುಭ ಕೋರಿದರು. ತಂಡಗಳ ಮಾಲೀಕರು, ನಾಯಕರು, ರಾಯಭಾರಿಗಳು ಹಾಗೂ ಮೆನ್ ಮತ್ತು ವುಮನ್ ಐಕಾನ್‌ಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಆಯೋಜಕ ಚೇತನ್ ಸೂರ್ಯ, “ಅಪ್ಪು ಕಪ್ ಆರಂಭವಾದ ದಿನದಿಂದಲೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಬೆಂಬಲ ನಮ್ಮೊಂದಿಗಿದೆ. ಈ ಬಾರಿಯ ಪಂದ್ಯಗಳು ಜುಲೈ 24ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ಪಂದ್ಯಗಳ ನೇರ ಪ್ರಸಾರವೂ ಇರಲಿದೆ. ಫೈನಲ್ ಪಂದ್ಯ ನಡೆಯುವ ಸ್ಥಳವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು” ಎಂದು ತಿಳಿಸಿದರು.
ಟಿ.ಎ. ಶರವಣ ಅವರು, “ಅಪ್ಪು ಕಪ್ ಆರಂಭದಿಂದಲೇ ಚೇತನ್ ಸೂರ್ಯ ಅವರೊಂದಿಗೆ ಇದ್ದೇನೆ. ಮುಂದೆಯೂ ಈ ಕ್ರೀಡಾ ಉತ್ಸವಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ” ಎಂದು ಹೇಳಿದರು. ಕೆ.ವಿ. ಪ್ರಭಾಕರ್ ಹಾಗೂ ಸಾ.ರಾ. ಗೋವಿಂದು ಅವರು ಕೂಡ ಟೂರ್ನಿಯ ಯಶಸ್ಸಿಗೆ ಶುಭ ಹಾರೈಸಿದರು.
ಕ್ರೀಡೆ, ಮನರಂಜನೆ ಹಾಗೂ ಯುವ ಪ್ರತಿಭೆಗಳಿಗೆ ವೇದಿಕೆಯಾಗಿರುವ ಅಪ್ಪು ಕಪ್ ಸೀಸನ್ 4 ಈ ಬಾರಿ ಮತ್ತಷ್ಟು ಭರ್ಜರಿಯಾಗಿ ನಡೆಯಲಿದ್ದು, ಬ್ಯಾಡ್ಮಿಂಟನ್ ಅಭಿಮಾನಿಗಳಲ್ಲಿ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದೆ. ಬೆಂಗಳೂರಿನ ಕ್ರೀಡಾ ಕ್ಯಾಲೆಂಡರ್‌ನಲ್ಲಿ ಈ ಟೂರ್ನಿ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮುವ ಸಾಧ್ಯತೆ ಇದೆ.
ದೇಶ
ರಾಮಮಂದಿರ ದೇಣಿಗೆ ಪ್ರಕರಣ ಸಿಬಿಐಗೆ ವಹಿಸಿ: ಮೋದಿ, ಅಮಿತ್ ಶಾ, ಯೋಗಿ ರಾಜೀನಾಮೆಗೆ ಕೆಪಿಸಿಸಿ ಆಗ್ರಹ
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ (KPCC) ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಐದು ಮಹತ್ವದ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಹಿಸಿದ್ದರು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿದ್ದರು.
ಸಭೆಯಲ್ಲಿ ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ₹10,000 ಕೋಟಿ ವಿಶೇಷ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮೊದಲ ಪ್ರಮುಖ ನಿರ್ಣಯ ಕೈಗೊಳ್ಳಲಾಯಿತು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಕುಡಿಯುವ ನೀರು, ಮೇವು ಹಾಗೂ ಉದ್ಯೋಗ ಸಮಸ್ಯೆ ಗಂಭೀರವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಇನ್ನೊಂದು ಪ್ರಮುಖ ನಿರ್ಣಯದಲ್ಲಿ ರಾಮಮಂದಿರ ದೇಣಿಗೆ ಹಾಗೂ ಹುಂಡಿ ಹಣದ ದುರ್ಬಳಕೆ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಯಿತು. ಪ್ರಕರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ಸಭೆ ನಿರ್ಣಯದಲ್ಲಿ ತಿಳಿಸಿತು. ಆರೋಪದಲ್ಲಿ ಭಾಗಿಯಾಗಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
ಇದರ ಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸುವ ನಿರ್ಣಯ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ನೇಮಕಗೊಂಡ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವ ನಿರ್ಣಯ ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಮತ್ತೊಂದು ಅಭಿನಂದನಾ ನಿರ್ಣಯವನ್ನೂ ಸಭೆ ಅಂಗೀಕರಿಸಿತು.
ಕೆಪಿಸಿಸಿ ಸಭೆಯಲ್ಲಿ ಕೈಗೊಂಡ ಈ ಐದು ನಿರ್ಣಯಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬರ ನಿರ್ವಹಣೆ ಹಾಗೂ ರಾಮಮಂದಿರ ದೇಣಿಗೆ ಪ್ರಕರಣದ ಕುರಿತಾಗಿ ಕಾಂಗ್ರೆಸ್ ತನ್ನ ಅಧಿಕೃತ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ದೇಶ
Grama Panchayat Election ಬಿಗ್ ಅಪ್‌ಡೇಟ್! ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ಅಧಿಕೃತವಾಗಿ ವೇಗ ಸಿಕ್ಕಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಈಗಿನಿಂದಲೇ ಗರಿಗೆದರಲು ಆರಂಭಿಸಿವೆ.
2027ರ ಮಾರ್ಚ್ ಅಂತ್ಯದೊಳಗೆ ಅವಧಿ ಮುಕ್ತಾಯಗೊಳ್ಳಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ಹೊಸದಾಗಿ ಪುನರ್ರಚನೆಯಾಗಿರುವ 42 ಗ್ರಾಮ ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯೋಗ ಸೂಚಿಸಿದೆ.
ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಅಧಿಕಾರಿಗಳ ನಿಯೋಜನೆಗೆ ಹೊಸ ಮಾರ್ಗಸೂಚಿಯನ್ನೂ ರೂಪಿಸಲಾಗಿದೆ. ಇದರ ಪ್ರಕಾರ, ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಗ್ರೂಪ್-ಬಿ ಅಧಿಕಾರಿ ಚುನಾವಣಾಧಿಕಾರಿಯಾಗಿ ನೇಮಕವಾಗಲಿದ್ದಾರೆ. ಇವರಿಗೆ ನೆರವಾಗಲು ಶಿರಸ್ತೇದಾರ್, ಸೂಪರಿಂಟೆಂಡೆಂಟ್ ಅಥವಾ ವ್ಯವಸ್ಥಾಪಕ ಹುದ್ದೆಯ ಅಧಿಕಾರಿಯನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನಿಯೋಜಿಸಲು ಸೂಚಿಸಲಾಗಿದೆ.
ಯಾವುದೇ ಅಧಿಕಾರಿಯನ್ನು ಅವರ ಸ್ವಂತ ಊರು ಅಥವಾ ತವರು ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ಆಯೋಗ ಸ್ಪಷ್ಟಪಡಿಸಿದೆ. ಸದಸ್ಯ ಸ್ಥಾನಗಳ ಸಂಖ್ಯೆಯನ್ನು ಆಧರಿಸಿ ಅಧಿಕಾರಿಗಳ ನಿಯೋಜನೆಯ ಪ್ರಮಾಣವೂ ನಿಗದಿಯಾಗಿದೆ. 25 ಸದಸ್ಯ ಸ್ಥಾನಗಳವರೆಗೆ ಇರುವ ಪಂಚಾಯಿತಿಗಳಿಗೆ ಒಬ್ಬ ಚುನಾವಣಾಧಿಕಾರಿ ಹಾಗೂ ಒಬ್ಬ ಸಹಾಯಕ ಚುನಾವಣಾಧಿಕಾರಿ, 25ರಿಂದ 35 ಸ್ಥಾನಗಳಿರುವ ಪಂಚಾಯಿತಿಗಳಿಗೆ ಒಬ್ಬ ಚುನಾವಣಾಧಿಕಾರಿ ಮತ್ತು ಇಬ್ಬರು ಸಹಾಯಕರು, 35ಕ್ಕಿಂತ ಹೆಚ್ಚು ಸ್ಥಾನಗಳಿರುವ ದೊಡ್ಡ ಪಂಚಾಯಿತಿಗಳಿಗೆ ಇಬ್ಬರು ಚುನಾವಣಾಧಿಕಾರಿಗಳು ಹಾಗೂ ಇಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗುತ್ತದೆ.
ಇದರ ಜೊತೆಗೆ, 2027ರ ಏಪ್ರಿಲ್ ನಂತರ ಅವಧಿ ಮುಕ್ತಾಯಗೊಳ್ಳಲಿರುವ 56 ಗ್ರಾಮ ಪಂಚಾಯಿತಿಗಳ ಪಟ್ಟಿಯನ್ನೂ ಆಯೋಗ ಸುತ್ತೋಲೆಯೊಂದಿಗೆ ಲಗತ್ತಿಸಿದೆ. ಈ ಬೆಳವಣಿಗೆಯೊಂದಿಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆ ವ್ಯಕ್ತವಾಗಿದೆ.
-
ದೇಶ19 hours agoGrama Panchayat Election ಬಿಗ್ ಅಪ್‌ಡೇಟ್! ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶ
-
ದೇಶ19 hours ago30 ನಿಮಿಷ ಸಿಂಹದ ಹಿಡಿತದಲ್ಲೇ ವ್ಯಕ್ತಿ! ಗ್ರಾಮಸ್ಥರ ಕೂಗಾಟಕ್ಕೂ ಜಗ್ಗದ ಕಾಡಿನ ರಾಜ
-
ದೇಶ20 hours agoPetrol Diesel Price: ಜುಲೈ 20ರೊಳಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ? ಗ್ರಾಹಕರಿಗೆ ಸಿಗುತ್ತಾ ಸಿಹಿಸುದ್ದಿ
-
ದೇಶ19 hours agoಕೇರಳದಲ್ಲಿ ಮತ್ತೆ ಪ್ರಕೃತಿ ವಿಕೋಪ! ವಯನಾಡಿನ ಕಲ್ಲಾಡಿ ಗ್ರಾಮದಲ್ಲಿ ಭಾರೀ ಭೂ ಕುಸಿತ
-
ದೇಶ16 hours agoಅಂಜನಾದ್ರಿ ಹುಂಡಿ ಎಣಿಕೆ ಬಳಿಕ 4 ದಿನ ಮೌನ! ಈಗ ಪ್ರಕಟಣೆ ಹೊರಬಿದ್ದಿದ್ದು ಏಕೆ?
-
ದೇಶ16 hours ago‘ಕಿಂಗ್100’ನಲ್ಲಿ ಟಬು ವಿಲನ್! ನಾಗಾರ್ಜುನ ವಿರುದ್ಧ ಹೊಸ ಅವತಾರ
-
ಕ್ರೀಡೆ21 hours agoಸಂಜು ಸ್ಯಾಮ್ಸನ್ ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ
-
ದೇಶ19 hours agoರೈತರ ಬೆಳೆ ಸಾಲ ಮನ್ನಾ ಆಗುತ್ತಾ? ಕಲಬುರಗಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
