crcket

ಮುಂಬೈಗೆ ಹಾರಿದ ಹಾರ್ದಿಕ್

ಮುಂಬೈಗೆ ಹಾರಿದ ಹಾರ್ದಿಕ್

ಗುಜರಾತ್ ಟೈಟಾನ್ಸ್ ತನ್ನ ಟ್ವಿಟರ್ ಹ್ಯಾಂಡಲ್ ಮೂಲಕ ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಹಾರ್ದಿಕ್ ಅವರ ಮುಂದಿನ ಪ್ರಯಾಣಕ್ಕೆ ಶುಭ ಹಾರೈಸಿದೆ. ಇದರೊಂದಿಗೆ ತನ್ನ ತಂಡದ ನೂತನ ನಾಯಕನನ್ನೂ ಸಹ ಆಯ್ಕೆ ಮಾಡಿದೆ. ಅದರಂತೆ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಯುವ ಬ್ಯಾಟರ್ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿದೆ.ಕಳೆದ ಎರಡು-ಮೂರು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ಇದೀಗ ನಿಜವಾಗಿದೆ. ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ತಂಡಕ್ಕೆ ವಿದಾಯ ಹೇಳಿದ್ದು, ಇದೀಗ ಮುಂಬೈ ಇಂಡಿಯನ್ಸ್​ಗೆ ಸೇರ್ಪಡೆಯಾಗಿದ್ದಾರೆ. ಸೋಮವಾರ, ಗುಜರಾತ್ ಟೈಟಾನ್ಸ್ ತನ್ನ ಟ್ವಿಟರ್ ಹ್ಯಾಂಡಲ್ ಮೂಲಕ ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಹಾರ್ದಿಕ್ ಅವರ ಮುಂದಿನ ಪ್ರಯಾಣಕ್ಕೆ ಶುಭ ಹಾರೈಸಿದೆ. ಇದರೊಂದಿಗೆ ತನ್ನ ತಂಡದ ನೂತನ ನಾಯಕನನ್ನೂ ಸಹ ಆಯ್ಕೆ ಮಾಡಿದೆ. ಅದರಂತೆ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಯುವ ಬ್ಯಾಟರ್ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿದೆ. ಅಂದರೆ ಹಾರ್ದಿಕ್ ಪಾಂಡ್ಯ ನಿರ್ಗಮನದ ನಂತರ ಗುಜರಾತ್ ಟೈಟಾನ್ಸ್‌ ತಂಡದ ನಾಯಕನಾಗಿ ಶುಭಮನ್ ಗಿಲ್ ಐಪಿಎಲ್ 2024 ರಲ್ಲಿ ಕಾಣಿಸಿಕೊಳ್ಳಲಿದ್ದಾರೆ.ವಾಸ್ತವವಾಗಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ಗೆ ಹೋಗುತ್ತಾರೆ ಎಂಬ ವದಂತಿಗಳು ಇದ್ದಾಗಿನಿಂದ ಗಿಲ್ ಅವರನ್ನು ನಾಯಕರನ್ನಾಗಿ ಮಾಡಲಾಗುತ್ತದೆ ಎಂಬ ಊಹಾಪೋಹಗಳು ಪ್ರಾರಂಭವಾಗಿದ್ದವು. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ಗೆ ಸೇರ್ಪಡೆಯಾಗುವ ಸುದ್ದಿ ಅಧಿಕೃತವಾಗುತ್ತಿದ್ದಂತೆ, ಗುಜರಾತ್ ಟೈಟಾನ್ಸ್‌ನ ಹೊಸ ನಾಯಕನಾಗಿ ಶುಭ್​ಮನ್ ಗಿಲ್ ಕೂಡ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಶುಭ್​ಮನ್ ಗಿಲ್ ಈ ತಂಡದ ಎರಡನೇ ನಾಯಕರಾಗಲಿದ್ದಾರೆ. ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಅಮೋಘ ಪ್ರದರ್ಶನ ನೀಡಿತ್ತು. ಕಳೆದ ಎರಡು ಸೀಸನ್‌ಗಳಲ್ಲಿ ಅಥವಾ ಐಪಿಎಲ್‌ನ ಎಲ್ಲಾ ಸೀಸನ್‌ಗಳಲ್ಲಿ ಈ ತಂಡವು ಫೈನಲ್‌ಗೆ ತಲುಪಿದೆ.ಹಾರ್ದಿಕ್ ಪಾಂಡ್ಯ ತಮ್ಮ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮೊದಲ ಆವೃತ್ತಿಯಲ್ಲೇ ಚಾಂಪಿಯನ್ ಮಾಡಿದ್ದರು. ಆದರೆ ಎರಡನೇ ಆವೃತ್ತಿಯಲ್ಲಿ ಅಂದರೆ ಕಳೆದ ವರ್ಷ, ಈ ತಂಡವು ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಸೋಲನ್ನು ಎದುರಿಸಬೇಕಾಯಿತು. ಇದೀಗ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವವಹಿಸಿಕೊಂಡಿರುವ ಗಿಲ್​ಗೆ ಹಾರ್ದಿಕ್​ರಂತೆ ತಂಡವನ್ನು ಯಶಸ್ಸಿನತ್ತ ಕೊಂಡೊಯ್ಯಬೇಕಾದ ಒತ್ತಡ ಎದುರಾಗಿದೆ.

Trending

Exit mobile version