Connect with us

ಸಿನಿಮಾ

ರಶ್ಮಿಕಾ-ರಣಬೀರ್​ ನಟನೆಯ ‘ಅನಿಮಲ್​’ ಸಿನಿಮಾ​ ವಿಮರ್ಶೆ

Published

on

ರಶ್ಮಿಕಾ-ರಣಬೀರ್​ ನಟನೆಯ ‘ಅನಿಮಲ್​’ ಸಿನಿಮಾ​ ವಿಮರ್ಶೆ

ಬಹುನಿರೀಕ್ಷಿತ ‘ಅನಿಮಲ್​’ ಸಿನಿಮಾಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ. ವಿಶ್ವಾದ್ಯಂತ ರಿಲೀಸ್​ ಆಗಿರುವ ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ಎರಡು ಡಿಫರೆಂಟ್​ ಶೇಡ್​ ಇರುವ ಪಾತ್ರವನ್ನು ನಿಭಾಯಿಸಿದ್ದಾರೆ. ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​​ನಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.ಸಂದೀಪ್​ ರೆಡ್ಡಿ ವಂಗಾ ಅವರು ನಿರ್ದೇಶನ ಮಾಡಿರುವ ‘ಅನಿಮಲ್​’ ಸಿನಿಮಾ ಇಂದು (ಡಿ.1) ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಬಾಬಿ ಡಿಯೋಲ್​, ಅನಿಲ್​ ಕಪೂರ್​ ಮುಂತಾದವರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಸಿನಿಮಾವನ್ನು ಫಸ್ಟ್​ ಡೇ ಫಸ್ಟ್​ ಶೋ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಸಿನಿಮಾ ಹೇಗಿದೆ ಎಂದು ಸೋಶಿಯಲ್​ ಮೀಡಿಯಾ ಮೂಲಕ ಅಭಿಪ್ರಾಯ ತಿಳಿಸುತ್ತಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಅನಿಮಲ್​’ ರಿಲೀಸ್​ ಆಗಿದೆ.‘ಅನಿಮಲ್​’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇವೆ. ಮಾಸ್​ ಪ್ರೇಕ್ಷಕರಿಗೆ ಇದು ಇಷ್ಟ ಆಗಿದೆ. ರಣಬೀರ್​ ಕಪೂರ್​ ಅವರು ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆ್ಯಕ್ಷನ್​ ಅವತಾರದಲ್ಲಿ ಅವರ ಅಭಿನಯಕ್ಕೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವು ನೆಟ್ಟಿಗರು ಈ ಸಿನಿಮಾಗೆ 5ಕ್ಕೆ 5 ಸ್ಟಾರ್​ ನೀಡಿದ್ದಾರೆ. ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಲಿದೆ ಎಂದು ಅನೇಕರು ಗ್ಯಾರಂಟಿ ನೀಡುತ್ತಿದ್ದಾರೆ.ವಿಶೇಷ ಏನೆಂದರೆ, ‘ಅನಿಮಲ್​’ ಸಿನಿಮಾದ ಅವಧಿ ಬರೋಬ್ಬರಿ 3 ಗಂಟೆ 21 ನಿಮಿಷ. ಸಾಮಾನ್ಯವಾಗಿ ಇಷ್ಟು ದೀರ್ಘವಾದ ಸಿನಿಮಾಗಳನ್ನು ನೋಡಲು ತಾಳ್ಮೆ ಬೇಕು. ಹಾಗಿದ್ದರೂ ಕೂಡ ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಸಿನಿಮಾದ ಅವಧಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಂತರದ ಶೋಗಳಲ್ಲಿ ಪ್ರೇಕ್ಷಕರಿಂದ ಯಾವ ರೀತಿಯ ಅಭಿಪ್ರಾಯ ಬರಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.ಬಹುತೇಕ ಎಲ್ಲ ರಾಜ್ಯಗಳಲ್ಲಿ ‘ಅನಿಮಲ್​’ ಸಿನಿಮಾ ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಎಲ್ಲ ಕಡೆಗಳಲ್ಲೂ ರಣಬೀರ್​ ಕಪೂರ್​ ಅವರಿಗೆ ಅಭಿಮಾನಿಗಳು ಇದ್ದಾರೆ. ಅದೇ ರೀತಿ ರಶ್ಮಿಕಾ ಮಂದಣ್ಣ ಕೂಡ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಈ ಸಿನಿಮಾದಿಂದ ಅವರ ಚಾರ್ಮ್​ ಹೆಚ್ಚಾಗಿದೆ. ಈ ಸಿನಿಮಾ ತುಂಬಾ ರಗಡ್​ ಆಗಿ ಮೂಡಿಬಂದಿದೆ. ರಣಬೀರ್​ ಕಪೂರ್​ ಅವರ ವೃತ್ತಿ ಜೀವನದಲ್ಲಿ ಇದು ಡಿಫರೆಂಟ್​ ಸಿನಿಮಾ ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ.‘ಅನಿಮಲ್​’ ಸಿನಿಮಾ ಮೊದಲ ದಿನ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಆಗಿದೆ. ಈ ಚಿತ್ರಕ್ಕೆ ಫಸ್ಟ್​ ಡೇ ಭರ್ಜರಿ ಕಲೆಕ್ಷನ್​ ಆಗಲಿದೆ ಎಂದು ಬಾಕ್ಸ್​ ಆಫೀಸ್​ ವ್ಯವಹಾರ ಬಲ್ಲವರು ಊಹಿಸಿದ್ದಾರೆ. ವಿಶ್ವಾದ್ಯಂತ 100 ಕೋಟಿ ರೂಪಾಯಿ ಕಲೆಕ್ಷನ್​ ಆಗಬಹುದು ಎಂದು ಅಂದಾಜಿಸಲಾಗಿದೆ. ಚಿತ್ರದ ಮೇಕಿಂಗ್​ ಸಖತ್​ ಅದ್ದೂರಿಯಾಗಿದೆ ಎಂದು ಪ್ರೇಕ್ಷಕರು ಹೊಗಳುತ್ತಿದ್ದಾರೆ.

Continue Reading

ದೇಶ

25 ವರ್ಷದ ಸ್ನೇಹಕ್ಕೆ ಮದುವೆಯ ಮುದ್ರೆ? ಗೌರಿ ಜೊತೆ ಅಮೀರ್ ಹೊಸ ಜೀವನ ಆರಂಭ!

Published

on

ಮುಂಬೈ: ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಎಂದೇ ಖ್ಯಾತರಾಗಿರುವ Aamir Khan ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಲ್ಲಿದೆ. ಹಲವು ಮಾಧ್ಯಮ ವರದಿಗಳ ಪ್ರಕಾರ, ಅಮೀರ್ ಖಾನ್ ತಮ್ಮ ಗೆಳತಿ Gauri Spratt ಅವರನ್ನು ಇದೇ ವರ್ಷದ ಜುಲೈನಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವರದಿಗಳು ನಿಜವಾದರೆ, ಇದು ಅಮೀರ್ ಖಾನ್ ಅವರ ಮೂರನೇ ವಿವಾಹವಾಗಲಿದೆ.

ವರದಿಗಳ ಪ್ರಕಾರ, ಜುಲೈ 5ರಂದು ಅಮೀರ್ ಮತ್ತು ಗೌರಿ ಆತ್ಮೀಯ ವಾತಾವರಣದಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಅದ್ಧೂರಿ ಬಾಲಿವುಡ್ ಮದುವೆಯ ಬದಲು, ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ರಿಜಿಸ್ಟರ್ ಮ್ಯಾರೇಜ್ ನಡೆಸಲು ಜೋಡಿ ನಿರ್ಧರಿಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಅಮೀರ್ ಮತ್ತು ಗೌರಿ ಕಳೆದ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಕುಟುಂಬದಂತೆ ಒಟ್ಟಿಗೆ ಜೀವನ ನಡೆಸುತ್ತಿದ್ದು, ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಎರಡೂ ಕುಟುಂಬಗಳ ಆಶೀರ್ವಾದದೊಂದಿಗೆ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಗಮನಾರ್ಹವಾಗಿ, 2025ರಲ್ಲಿ ತಮ್ಮ 60ನೇ ಜನ್ಮದಿನದ ಸಂದರ್ಭದಲ್ಲಿ ಅಮೀರ್ ಖಾನ್ ಮೊದಲ ಬಾರಿಗೆ ಗೌರಿ ಸ್ಪ್ರಾಟ್ ಅವರನ್ನು ಸಾರ್ವಜನಿಕವಾಗಿ ಪರಿಚಯಿಸಿದ್ದರು. ಸುಮಾರು 25 ವರ್ಷಗಳಿಂದ ಪರಸ್ಪರ ಪರಿಚಯವಿದ್ದರೂ, ಪ್ರೇಮ ಸಂಬಂಧ ಇತ್ತೀಚೆಗೆ ಆರಂಭವಾಗಿದೆ ಎಂದು ಅವರು ತಿಳಿಸಿದ್ದರು. ನಂತರದ ಹಲವು ಸಂದರ್ಶನಗಳಲ್ಲಿ ಗೌರಿ ತಮ್ಮ ಜೀವನದಲ್ಲಿ ಸಂತೋಷ ಮತ್ತು ನೆಮ್ಮದಿ ತಂದ ವ್ಯಕ್ತಿ ಎಂದು ಅಮೀರ್ ಹೇಳಿಕೊಂಡಿದ್ದರು.

ಅಮೀರ್ ಖಾನ್ ಈ ಹಿಂದೆ Reena Dutta ಅವರನ್ನು ವಿವಾಹವಾಗಿದ್ದು, 2002ರಲ್ಲಿ ಇಬ್ಬರೂ ಬೇರ್ಪಟ್ಟಿದ್ದರು. ಬಳಿಕ 2005ರಲ್ಲಿ Kiran Rao ಅವರನ್ನು ವಿವಾಹವಾಗಿದ್ದು, 2021ರಲ್ಲಿ ವಿಚ್ಛೇದನ ಘೋಷಿಸಿದ್ದರು. ಆದರೂ ತಮ್ಮ ಮಾಜಿ ಪತ್ನಿಯರೊಂದಿಗೆ ಉತ್ತಮ ಬಾಂಧವ್ಯ ಉಳಿಸಿಕೊಂಡಿದ್ದಾರೆ.

ಆದರೆ, ಜುಲೈ 5ರ ವಿವಾಹದ ಕುರಿತು ಅಮೀರ್ ಖಾನ್ ಅಥವಾ ಗೌರಿ ಸ್ಪ್ರಾಟ್ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಅಭಿಮಾನಿಗಳು ಅಧಿಕೃತ ದೃಢೀಕರಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

Continue Reading

ದೇಶ

“ನೀವು ನಮ್ಮೆಲ್ಲರ ಸ್ಫೂರ್ತಿ”: ತಾತನ ಬಗ್ಗೆ ಜೂನಿಯರ್ ಎನ್‌ಟಿಆರ್ ಭಾವನಾತ್ಮಕ ಪೋಸ್ಟ್

Published

on

ಆಂಧ್ರಪ್ರದೇಶ: ತೆಲುಗು ಸಿನಿಮಾರಂಗದ ಮೇರು ನಟ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ನಂದಮೂರಿ ತಾರಕ ರಾಮರಾವ್ (ಎನ್‌ಟಿಆರ್) ಅವರ 103ನೇ ಜಯಂತಿ ಅಂಗವಾಗಿ ಹೈದರಾಬಾದ್‌ನ ಎನ್‌ಟಿಆರ್ ಘಾಟ್‌ನಲ್ಲಿ ಭಾವುಕ ಕ್ಷಣಗಳು ಕಂಡುಬಂದವು. ಮೊಮ್ಮಗ ಹಾಗೂ ಖ್ಯಾತ ನಟ ಜೂನಿಯರ್ ಎನ್‌ಟಿಆರ್ ತಮ್ಮ ಅಜ್ಜನ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.

ಭದ್ರತಾ ಸಿಬ್ಬಂದಿಯೊಂದಿಗೆ ಎನ್‌ಟಿಆರ್ ಘಾಟ್‌ಗೆ ಆಗಮಿಸಿದ ಜೂನಿಯರ್ ಎನ್‌ಟಿಆರ್, ಅಜ್ಜನ ಸಮಾಧಿ ಎದುರು ಕೆಲಕಾಲ ಮೌನವಾಗಿ ನಿಂತು ಭಾವುಕರಾದರು. ಬಳಿಕ ಹೂವಿನ ನಮನ ಸಲ್ಲಿಸಿ ಗೌರವ ವ್ಯಕ್ತಪಡಿಸಿದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದೇ ವೇಳೆ ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಜೂನಿಯರ್ ಎನ್‌ಟಿಆರ್, “ತೆಲುಗು ಚಿತ್ರರಂಗ ಮತ್ತು ಆಂಧ್ರಪ್ರದೇಶದ ಮೇಲೆ ಎನ್‌ಟಿಆರ್ ಅವರ ಪ್ರಭಾವ ಹಾಗೂ ಪ್ರೇರಣೆ ಅನನ್ಯವಾಗಿದೆ. ಚಿತ್ರರಂಗದಲ್ಲಿ ಅವರನ್ನು ದಂತಕಥೆಯಂತೆ ಕಾಣಲಾಗುತ್ತದೆ. ಇದಕ್ಕಾಗಿ ನಾನು ಸದಾ ಕೃತಜ್ಞ” ಎಂದು ಬರೆದುಕೊಂಡಿದ್ದಾರೆ.

ಸಿನಿಮಾ ಮಾತ್ರವಲ್ಲದೆ, ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಜನಪರ ಯೋಜನೆಗಳು ಹಾಗೂ ಬಡವರ ಕಲ್ಯಾಣಕ್ಕಾಗಿ ಮಾಡಿದ ಸೇವೆಗಳನ್ನು ಜನ ಇಂದಿಗೂ ನೆನಪಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದ ಎನ್‌ಟಿಆರ್ ಆದರ್ಶಗಳು ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಜೂನಿಯರ್ ಎನ್‌ಟಿಆರ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಕೂಡ ಎನ್‌ಟಿಆರ್ ಅವರನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. “ಸಿನಿಮಾ ಮತ್ತು ರಾಜಕೀಯದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಎನ್‌ಟಿಆರ್ ಅವರ ಜೀವನ ಮತ್ತು ಆದರ್ಶಗಳು ಸ್ಫೂರ್ತಿಯ ಮೂಲ” ಎಂದು ಮೋದಿ ಬರೆದುಕೊಂಡಿದ್ದಾರೆ.

ಚಂದ್ರಬಾಬು ನಾಯ್ಡು ನೇತೃತ್ವದ ಎನ್‌ಡಿಎ ಸರ್ಕಾರ ಆಂಧ್ರಪ್ರದೇಶದ ಜನರ ಕನಸುಗಳನ್ನು ಸಾಕಾರಗೊಳಿಸಲು ಬದ್ಧವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

Continue Reading

ದೇಶ

ತಮಿಳು ಚಿತ್ರರಂಗಕ್ಕೆ ಸಿಎಂ ವಿಜಯ್ ಬಂಪರ್ ಗಿಫ್ಟ್: ದಿನಕ್ಕೆ 5 ಶೋಗಳಿಗೆ ಗ್ರೀನ್ ಸಿಗ್ನಲ್!

Published

on

ಚೆನ್ನೈ: Vijay ನೇತೃತ್ವದ ತಮಿಳುನಾಡು ಸರ್ಕಾರ ಚಿತ್ರೋದ್ಯಮಕ್ಕೆ ಮಹತ್ವದ ಸಿಹಿಸುದ್ದಿ ನೀಡಿದೆ. ಹೊಸ ಸಿನಿಮಾ ಬಿಡುಗಡೆಯಾದ ಮೊದಲ ಒಂದು ವಾರದವರೆಗೆ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಸರ್ಕಾರ ಅಧಿಕೃತ ಅನುಮತಿ ನೀಡಿದ್ದು, ನಿರ್ಮಾಪಕರು ಹಾಗೂ ಚಿತ್ರಮಂದಿರ ಮಾಲೀಕರಲ್ಲಿ ಸಂತಸ ಮೂಡಿಸಿದೆ.

ಚಿತ್ರರಂಗದ ಪ್ರತಿನಿಧಿಗಳು, ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರೋದ್ಯಮದ ಪ್ರಮುಖರು ಮೇ 16ರಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಿದ್ದರು. ಚಿತ್ರಮಂದಿರಗಳ ಆರ್ಥಿಕ ಚೇತರಿಕೆ ಮತ್ತು ಪ್ರೇಕ್ಷಕರ ಅನುಕೂಲಕ್ಕಾಗಿ ದಿನಕ್ಕೆ ಐದು ಶೋಗಳಿಗೆ ಅವಕಾಶ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು.

ಈ ಮನವಿಯನ್ನು ಪರಿಗಣಿಸಿದ ಸರ್ಕಾರ, ಚಿತ್ರೋದ್ಯಮದ ಹಿತದೃಷ್ಟಿಯಿಂದ ಹೊಸ ಆದೇಶ ಹೊರಡಿಸಿದೆ. ಈ ಕುರಿತು Tamil Nadu Chief Minister’s Office ತನ್ನ ಅಧಿಕೃತ ‘ಎಕ್ಸ್’ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದೆ.

ಈ ಮೊದಲು ಜಾರಿಯಲ್ಲಿದ್ದ ಚಿತ್ರಮಂದಿರಗಳ ನಿಯಮ 14-ಎ ಪ್ರಕಾರ, ತಮಿಳುನಾಡಿನಲ್ಲಿ ದಿನಕ್ಕೆ ಕೇವಲ ನಾಲ್ಕು ಪ್ರದರ್ಶನಗಳಿಗೆ ಮಾತ್ರ ಅವಕಾಶವಿತ್ತು. ಹಬ್ಬ-ಹರಿದಿನಗಳು ಅಥವಾ ಸಾರ್ವಜನಿಕ ರಜಾದಿನಗಳಲ್ಲಿ ಮಾತ್ರ ವಿಶೇಷ ಅನುಮತಿ ಪಡೆದು ಐದನೇ ಪ್ರದರ್ಶನ ನಡೆಸಲಾಗುತ್ತಿತ್ತು.

ಆದರೆ ಹೊಸ ನಿಯಮದಂತೆ, ಯಾವುದೇ ಹೊಸ ಸಿನಿಮಾ ಬಿಡುಗಡೆಯಾದ ಬಳಿಕ ಮೊದಲ ಏಳು ದಿನಗಳವರೆಗೆ ಪ್ರತಿದಿನ ಐದು ಪ್ರದರ್ಶನಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಕ್ರಮದಿಂದ ಹೊಸ ಸಿನಿಮಾಗಳಿಗೆ ಹೆಚ್ಚಿನ ಆದಾಯ ಸಾಧ್ಯವಾಗಲಿದ್ದು, ಚಿತ್ರಮಂದಿರಗಳ ವ್ಯವಹಾರಕ್ಕೂ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

ತಮಿಳು ಚಿತ್ರರಂಗದ ನಿರ್ಮಾಪಕರು, ವಿತರಕರು ಮತ್ತು ಥಿಯೇಟರ್ ಮಾಲೀಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, ಇದು ಚಿತ್ರೋದ್ಯಮಕ್ಕೆ “ಬೂಸ್ಟರ್ ಡೋಸ್” ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

Trending