Connect with us

ದೇಶ

ಲೋಕಸಭೆ ಸದನದೊಳಗೆ ನುಗ್ಗಿ ಹಂಗಾಮ ಮಾಡಿದ ಮನೋರಂಜನ್​ಗೆ ಇದೆ ಬೆಂಗಳೂರಿನ ನಂಟು!

ಲೋಕಸಭೆ ಸದನದೊಳಗೆ ನುಗ್ಗಿ ಹಂಗಾಮ ಮಾಡಿದ ಮನೋರಂಜನ್​ಗೆ ಇದೆ ಬೆಂಗಳೂರಿನ ನಂಟು!

7 ಸುತ್ತಿನ ಕೋಟೆಯಂತಹ ಸಂಸತ್ ಭವನಕ್ಕೆ ನುಗ್ಗಿ ಲೋಕಸಭೆ ಕಲಾಪದ ಬಾವಿಗಿಳಿದು ಬಣ್ಣ ಬಣ್ಣದ ಸ್ಮೋಕ್​ ಸಿಡಿಸಿ ಅಟ್ಟಹಾಸ ಮೆರೆದಿದ್ದ ಆರೋಪಿ ಮನೋರಂಜನ್ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಆರೋಪಿ ಮನೋರಂಜನ್​ಗೆ ಬೆಂಗಳೂರಿನ ಜೊತೆ ಅವಿನಾಭಾವ ಸಂಬಂಧವಿದೆ. ಈತನ ಬಹುತೇಕ ಸ್ನೇಹಿತರು ಬೆಂಗಳೂರಿನವರಾಗಿದ್ದು ತನಿಖೆ ನಡೆಯುತ್ತಿದೆ.ಮೂಲತಃ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಲ್ಲಾಪುರ ಗ್ರಾಮದ ಮನೋರಂಜನ್ ಶಿಕ್ಷಣಕ್ಕಾಗಿಯೇ ಮೈಸೂರಿನಲ್ಲಿ ನೆಲೆಸಿದ್ದ. ಮೈಸೂರಿನ ಮರಿಮಲ್ಲಪ್ಪದಲ್ಲಿ ಹೈಸ್ಕೂಲ್ ಓದಿದ್ದು, ಸೇಂಟ್ ಜೋಸೆಫ್‍ನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದ. ಬಳಿಕ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬಿಇ ಡ್ರಾಪ್ ಔಟ್ ವಿದ್ಯಾರ್ಥಿಯಾಗಿದ್ದಾನೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ವಿವಿಪುರಂ ಬಳಿ ಇರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆರೋಪಿ ಮನೋರಂಜನ್ ವಿಧ್ಯಾಭ್ಯಾಸ ಮಾಡಿದ್ದಾನೆ. ಈ ಬಗ್ಗೆ ಮಾತನಾಡಿರುವ ಕಾಲೇಜು ಪ್ರಿನ್ಸಿಪಾಲ್ ಅಶ್ವಥ್ ಅವರು, ಮನೋರಂಜನ್ 2018ರ ಬ್ಯಾಚ್ ಔಟ್. ಈತ ಡ್ರಾಪ್ ಔಟ್ ಸ್ಟೂಡೆಂಟ್. ನಮ್ಮಲ್ಲಿ ಬಿಇ ಪದವಿ ಪೂರ್ಣ ಮಾಡಿಲ್ಲ. ಡ್ರಾಪ್ ಔಟ್ ಮಾಡಿ ಹೋಗಿದ್ದಾರೆ. ವಿಧ್ಯಾರ್ಥಿಯ ಬಗ್ಗೆ ಸಾಕಷ್ಟು ಮಾಹಿತಿ ಲಭ್ಯವಾಗಿಲ್ಲ. ಎಲ್ಲ ಮಾಹಿತಿ ಪಡೆಯುತ್ತಿದ್ದೇವೆ. ಮನೋರಂಜನ್ ಕಾಲೇಜು ವರ್ತನೆ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸಹ ಉಪನ್ಯಾಸಕರ ಬಳಿಯೂ ಮಾಹಿತಿ ಕೇಳದ್ದೀವಿ ಎಂದು ತಿಳಿಸಿದ್ದಾರೆ.ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ನಿವಾಸಕ್ಕೆ ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಪಿಐ ಸುರೇಶ್ ಭೇಟಿ‌ ನೀಡಿ ಪರಿಶೀಲನೆ ನಡೆಸಿದಾಗ ಮನೆಯಲ್ಲಿ ಕ್ರಾಂತಿಕಾರಿ ಚಿಗುವೆರಾ ಸೇರಿದಂತೆ ಹಲವು ದಾರ್ಶನಿಕರು, ಕ್ರಾಂತಿಕಾರಿಗಳ ಬಗ್ಗೆಗಿನ ಪುಸ್ತಕಗಳು ಸಿಕ್ಕಿವೆ. ಕೆಲವೊಂದು ಭೂಗತ ಜಗತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ವಾತಂತ್ರ್ಯ ಹೋರಾಟದ ಕಥನಗಳು ಪತ್ತೆಯಾಗಿವೆ. ಚೆ ಗುವೇರಾ ಅವರ ಗೆರಿಲ್ಲಾ ವಾರ್‌ಫೇರ್, ಸನ್ ತ್ಸು ಅವರ ದಿ ಆರ್ಟ್ ಆಫ್ ವಾರ್, ವಂದನಾ ಶಿವ ಅವರ ವಾಟರ್ ವಾರ್ಸ್, ಚಾರ್ಲ್ಸ್ ಡಿಕನ್ಸ್ ಅವರ ಆಲಿವರ್ ಟ್ವಿಸ್ಟ್, ಚಾರ್ಲ್ಸ್ ಡಿಕನ್ಸ್ ಅವರ ಗ್ರೇಟ್ ಎಕ್ಸ್‌ಪೆಕ್ಟೇಷನ್ಸ್, ವಂದನಾ ಶಿವ ಅವರ ಹಸಿರು ಕ್ರಾಂತಿಯ ಹಿಂಸೆ, ಲುವೊ ಗುವಾನ್‌ಜಾಂಗ್‌ನ ರೋಮ್ಯಾನ್ಸ್ ಆಫ್ ದಿ ತ್ರೀ ಕಿಂಗ್‌ಡಮ್ಸ್, ದಿ ಗ್ರೇಟೆಸ್ಟ್ ಶೋ ಆನ್ ಅರ್ಥ್: ದಿ ಎವಿಡೆನ್ಸ್ ಫಾರ್ ಎವಲ್ಯೂಷನ್ ಬೈ ರಿಚರ್ಡ್ ಡಾಕಿನ್ಸ್, ಹುಸೇನ್ ಜೈದಿ ಅವರ ಡೋಂಗ್ರಿ ಟು ದುಬೈ , ಹಮೀಶ್ ಮೆಕ್‌ಡೊನಾಲ್ಡ್ ಬರೆದ ಅಂಬಾನಿ ಮತ್ತು ಸನ್ಸ್ , ಸುಭಾಸ್ ಚಂದ್ರ ಬೋಸ್ ಅವರ ದಿ ಇಂಡಿಯನ್ ಸ್ಟ್ರಗಲ್, ಪೀಟರ್ ವಾರ್ಡ್ ಫೇ ಬರೆದ ದಿ ಫಾರ್ಗಾಟನ್ ಆರ್ಮಿ ಎನ್ನುವ ಇಂಗ್ಲೀಷ್ ಪುಸ್ತಕಗಳು ದೊರೆತಿವೆ. ಇನ್ನು ದಾದಾಗಿರಿಯ ದಿನಗಳು, ಎದೆಗಾರಿಕೆ ಎನ್ನುವ ಕನ್ನಡ ಪುಸ್ತಕಗಳು ಸಿಕ್ಕಿವೆ.

ಅಪರಾಧ

KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ

ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.

ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Continue Reading

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

Trending