Connect with us

ರಾಜಕೀಯ

ರಾಹುಲ್‌ ಗಾಂಧಿಗೆ ಮತ್ತೆ ಸಂಕಷ್ಟ – ಜ.6ರಂದು ವಿಚಾರಣೆಗೆ ಹಾಜರಾಗುವಂತೆ UP ಕೋರ್ಟ್‌ನಿಂದ ಸಮನ್ಸ್‌

ರಾಹುಲ್‌ ಗಾಂಧಿಗೆ ಮತ್ತೆ ಸಂಕಷ್ಟ – ಜ.6ರಂದು ವಿಚಾರಣೆಗೆ ಹಾಜರಾಗುವಂತೆ UP ಕೋರ್ಟ್‌ನಿಂದ ಸಮನ್ಸ್‌

ಲಕ್ನೋ: 2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ʻಮೋದಿ ಉಪನಾಮʼ ಬಳಸಿ ಟೀಕಿಸಿ ಸಂಕಷ್ಟಕ್ಕೆ ಗುರಿಯಾಗಿದ್ದ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2018ರಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರದ MP/MLA ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ.ಜನವರಿ 6ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ತಿಳಿಸಿರುವುದಾಗಿ ವಕೀಲರಾದ ವಕೀಲ ಸಂತೋಷ್ ಪಾಂಡೆ ಖಚಿತಪಡಿಸಿದ್ದಾರೆ. 2018ರ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಆರಂಭದಲ್ಲೇ ಸಮನ್ಸ್‌ ನೀಡಿತ್ತು. ಆದ್ರೆ ಅವರು ಹಾಜರಾಗದ ಕಾರಣ 2ನೇ ಬಾರಿಗೆ ಸಮನ್ಸ್‌ ಜಾರಿಗೊಳಿಸಿರುವುದಾಗಿ ವಕೀಲರು ಹೇಳಿದ್ದಾರೆ.2018ರ ಪತ್ರಿಕಾಗೋಷ್ಠಿಯೊಂದರಲ್ಲಿ ರಾಹುಲ್‌ ಗಾಂಧಿ ಅವರು ಮಾತನಾಡುತ್ತಿದಾಗ, ಬಿಜೆಪಿ ಅಧ್ಯಕ್ಷ ಕೊಲೆ ಆರೋಪಿ ಎಂಬುದನ್ನು ದೇಶದ ಜನ ಮರೆತುಬಿಡುತ್ತಾರೆ, ಆದ್ರೆ ಅದೇ ಸತ್ಯ. ಸದಾ ಪ್ರಾಮಾಣಿಕತೆ ಮತ್ತು ಸಭ್ಯತೆಯ ಬಗ್ಗೆ ಮಾತನಾಡುವ ಪಕ್ಷವು ಕೊಲೆ ಆರೋಪ ಹೊತ್ತ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಮಾಡುತ್ತದೆ ಎಂದು ಟೀಕಿಸಿದ್ದರು.2005 ರಲ್ಲಿ ಸೊಹ್ರಾಬುದ್ದೀನ್ ಶೇಖ್ ಎಂಬ ಕ್ರಿಮಿನಲ್ ಹತ್ಯೆಯಲ್ಲಿ ಅಮಿತ್‌ ಶಾ ಅವರ ಪಾತ್ರದ ಆರೋಪದ ಬಗ್ಗೆ ಮಾತನಾಡಿದ್ದ ರಾಗಾ, ಅಮಿತ್‌ ಶಾ ಅವರ ಮೇಲೆ ಕೊಲೆ ಆರೋಪ ಇದೇ ಅಲ್ಲವೇ? ಹಾಗಾಗಿ ಅಮಿತ್ ಶಾ ಅವರಿಗೆ ಹೆಚ್ಚಿನ ವಿಶ್ವಾಸಾರ್ಹತೆ ಇದೆ ಎಂದು ನಾನು ಭಾವಿಸುವುದಿಲ್ಲ. ಈತ ಯಾವ ರೀತಿ ರಾಜಕೀಯ ಮಾಡ್ತಾನೋ ನೋಡೋಣ, ಕೊಲೆ ಆರೋಪಿ ಅನ್ನೋದನ್ನ ಮರೆಯಬೇಡಿ ಎಂದು ವಾಗ್ದಾಳಿ ನಡೆಸಿದ್ದರು.ಈ ಹೇಳಿಕೆ ಬಳಿಕ ಅಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿದ್ದ ವಿಜಯ್‌ ಮಿಶ್ರಾ ಅವರು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಅಮಿತ್‌ ಶಾ ಅವರನ್ನು ಕೊಲೆಗಾರ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ಆರೋಪಗಳನ್ನು ಕೇಳಿ ನನಗೆ ನೋವಾಯಿತು ಎಂದು ಹೇಳಿ ವಕೀಲರ ಮೂಲಕ ಕೇಸ್‌ ದಾಖಲಿಸಿದ್ದರು. ಇದು 5 ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ.

ಪ್ರಕರಣದ ಕುರಿತು ಕಾನೂನು ಪರಿಣಾಮಗಳನ್ನು ವಿವರಿಸಿದ ವಕೀಲ ಸಂತೋಷ್ ಪಾಂಡೆ ಅವರು, ರಾಹುಲ್‌ ಗಾಂಧಿ ವಿರುದ್ಧ ಸಾಕ್ಷಿಗಳು ಕಂಡುಬಂದರೆ, ಅಪರಾಧ ಸಾಬೀತಾದರೆ ಗರಿಷ್ಠ 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಸಿದ್ದಾರೆ.

Continue Reading

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

Trending