ದೇಶ
ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2017/07/ಪಿಎಂ-ವಿಶ್ವಕರ್ಮ-ಯೋಜನೆಗೆ-ಕೇಂದ್ರ-ಸಂಪುಟ-ಅನುಮೋದನೆ-1000x600.jpg&description=ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2017/07/ಪಿಎಂ-ವಿಶ್ವಕರ್ಮ-ಯೋಜನೆಗೆ-ಕೇಂದ್ರ-ಸಂಪುಟ-ಅನುಮೋದನೆ-1000x600.jpg&description=ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ', 'pinterestShare', 'width=750,height=350'); return false;" title="Pin This Post">
ಹೊಸದಿಲ್ಲಿ: ಕೇಂದ್ರ ವಲಯದ ವಿನೂತನ ಯೋಜನೆ ಪಿಎಂ ವಿಶ್ವಕರ್ಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷೆತೆಯಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ(ಸಿಸಿಇಎ) ಅನುಮೋದನೆ ನೀಡಿದೆ, ಸ್ವಾತಂತ್ರö್ಯ ದಿನಾಚರಣೆ ಭಾಷಣದ ವೇಳೆ ಪ್ರಧಾನಿ ಮೋದಿ ಅವರು ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ್ದರು, ಸಬ್ಸಿಡಿ ದರದ ಬಡ್ಡಿಯಲ್ಲಿ ಭದ್ರತೆ ರಹಿತ ಸಾಲಗಳನ್ನು ನೀಡುವ ಮೂಲಕ ೩೦ ಲಕ್ಷ ಕುಶಲಕರ್ಮಿಗಳು ಮತ್ತು ಅವರ ಕುಟುಂಬಗಳಿಗೆ ಇದು ನರೆವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ,
ಪಿಎಂ ವಿಶ್ವಕರ್ಮ ಯೋಜನೆಯಿಂದ ಯಾರಿಗೆ ಲಾಭ?
ಈ ಯೋಜನೆ ಅಡಿ ಕುಶಲಕರ್ಮಿಗಳು ಶೇ ೫ರ ಬಡ್ಡಿದರದಲ್ಲಿ ೨ ಲಕ್ಷ ರೂಪಾಯಿವರೆಗೂ ಸಬ್ಸಿಡಿ ಸಹಿತ ಸಾಲ ಪಡೆದುಕೊಳ್ಳಬಹುದಾಗಿದೆ, ಇದಕ್ಕಾಗಿ ೧೩ ಸಾವಿರ ಕೋಟಿ ರೂ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ, ೨೦೨೮ರವರೆಗೂ ಐದು ವರ್ಷಗಳ ಅವಧಿವರೆಗೆ ೧೩ ಸಾವಿರ ಕೋಟಿ ರೂ ಆರ್ಥಿಕ ವೆಚ್ಚದ್ದಾಗಿರುವ ಈ ಯೋಜನೆಯು ಮೊದಲ ಹಂತದಲ್ಲಿ ೧೮ ಸಾಂಪ್ರದಾಯಿಕ ವಹಿವಾಟುಗಳನ್ನು ಒಳಗೊಳ್ಳಲಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ,
ದೇಶ
ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.
ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.
ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.
ದೇಶ
ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.
ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.
ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.
ದೇಶ
ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,
“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.
ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.
ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,
“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ