Connect with us

ರಾಜಕೀಯ

ಹೈಕಮಾಂಡ್​ ಜೊತೆಗಿನ ಸಭೆ :ವಿಜಯೇಂದ್ರಗೆ ನಾಲ್ಕು ಪ್ರಮುಖ ಟಾಸ್ಕ್ ಕೊಟ್ಟ ಅಮಿತ್​ ಶಾ​​!

Published

on

ಹೈಕಮಾಂಡ್​ ಜೊತೆಗಿನ ಸಭೆ :ವಿಜಯೇಂದ್ರಗೆ ನಾಲ್ಕು ಪ್ರಮುಖ ಟಾಸ್ಕ್ ಕೊಟ್ಟ ಅಮಿತ್​ ಶಾ​​!

2024ರ ಮಹಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ದಳಪತಿಗಳು ಮೈತ್ರಿ ಖಾತ್ರಿ ಮಾಡಿಕೊಂಡಿದ್ದಾರೆ. ಇದರ ನಡುವೆಯೇ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ವಿಜಯೇಂದ್ರ ಅವರು ಬಳಿಕ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸುಮಾರು 20 ನಿಮಿಷಗಳ ಸುದೀರ್ಘ ಚರ್ಚೆ ಮಾತುಕತೆ ನಡೆಸಿದ್ದಾರೆ.ಈ ವೇಳೆ ಜನವರಿ ಮೊದಲನೇ ವಾರ ಸಂಘಟನಾತ್ಮಕ ದೃಷ್ಟಿಯಿಂದ ಪದಾಧಿಕಾರಿಗಳ ನೇಮಕ ಮುಕ್ತಾಯವಾಗಬೇಕು, ಜೊತೆಗೆ ಕೇಂದ್ರದ ಯೋಜನೆ ಬಗ್ಗೆ ಎಷ್ಟರ ಮಟ್ಟಿಗೆ ಜನರಿಗೆ ಮುಟ್ಟುವ ಕೆಲಸವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಚಾರವು ಚರ್ಚೆಯಾಗಿದೆ. ಎಷ್ಟು ಸೀಟ್ ಎಂಬ ಬಗ್ಗೆ ನಾವು ನಿರ್ಧಾರ ಮಾಡುತ್ತೇವೆ. ಎರಡು ಕಡೆಯ ಪಕ್ಷದ ಕಾರ್ಯಕರ್ತರ ಮಟ್ಟಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು, ಕೋರ್ ಕಮಿಟಿಯಲ್ಲೂ ಕೆಲ ಬದಲಾವಣೆ ಮಾಡಲು, ಜೊತೆಗೆ ಎಂಎಲ್‌ಸಿ ಮತ್ತು ಎಂಪಿ ಎರಡು ಚುನಾವಣೆಯಲ್ಲೂ ಒಟ್ಟಿಗೆ ಹೋಗಲು ಸೂಚನೆ ಸಿಕ್ಕಿದೆ.ಇನ್ನು ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ನಾಯಕರ ಅಸಮಾಧಾನ ವಿಚಾರ ಪ್ರಸ್ತಾಪವಾಗಿದ್ದು, ನಾವು ಅದನ್ನ ಗಂಭೀರವಾಗಿ ಪರಿಗಣಿಸಿದ್ದೇವೆ. ಮುಂದಿನ ದಿನಗಳಲ್ಲಿ ನಾವು ಅದನ್ನ ಸರಿ ಪಡಿಸುತ್ತೇವೆ ಎಂದು ತಿಳಿಸಿದ್ದಾರಂತೆ.

ಮೋದಿ ನಾಯಕತ್ವ ಬಲಿಷ್ಠ ಗೊಳಿಸಲು ಸೂಚನೆ
ಒಟ್ಟು ನಾಲ್ಕು ಅಂಶಗಳ‌ ಮೇಲೆ ಗಮನ ಹರಿಸಲು ಅಮಿತ್ ಶಾ ಅವರು ವಿಜಯೇಂದ್ರ ಅವರಿಗೆ ಸೂಚನೆ ನೀಡಿದ್ದಾರಂತೆ. ಸಂಘಟನೆಗೆ ಒತ್ತುಕೊಡುವುದು. ಹಿರಿಯ ನಾಯಕರನ್ನ ಜೊತೆಗೆ ತೆಗೆದುಕೊಂಡು ಹೋಗುವುದು. ವಿಕಸಿತ ಭಾರತವನ್ನ ಸರಿಯಾದ ರೀತಿಯಲ್ಲಿ ಪ್ರಚಾರ ಮಾಡುವುದು. ಕೇಂದ್ರದ ಯೋಜನೆಯನ್ನ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂಬ ಟಾಸ್ಕ್​ಗಳನ್ನು ನೀಡಿದ್ದರಂತೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಬಗ್ಗೆ ಜನರಿಗೆ ತಿಳಿಸಿ, ರಾಜ್ಯದಲ್ಲಿ ಮೋದಿ ನಾಯಕತ್ವ ಬಲಿಷ್ಠ ಗೊಳಿಸಲು ಸೂಚನೆ ನೀಡಿದ್ದರಂತೆ.ಮೋದಿ-ಅಮಿತ್ ಶಾ ಅವರನ್ನು ಭೇಟಿಯಾದ ಕುರಿತು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿರುವ ವಿಜಯೇಂದ್ರ ಅವರು, ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದ ಸಂದರ್ಭ ಸಂತ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು.

ನಮ್ಮ ಭವ್ಯ ಭಾರತ ಅಗ್ರಸ್ಥಾನದಲ್ಲಿ ನಿಲ್ಲಲಿದೆ
ರಾಷ್ಟ್ರ ಭಕ್ತಿ, ಸಂಘ ನಿಷ್ಠೆ, ಸಮರ್ಪಣೆ, ಶಿಸ್ತು, ಬದ್ಧತೆ, ಕ್ರಿಯಾಶೀಲತೆ, ಸಾಧಿಸುವ ಛಲದ ಗುರಿ ಇವೆಲ್ಲಕ್ಕೂ ಭಾರತದ ಇತಿಹಾಸದಲ್ಲಿ ಉದಾಹರಿಸಬಲ್ಲ ಏಕೈಕ ವ್ಯಕ್ತಿತ್ವ ಮಾನ್ಯ ಮೋದಿ ಜೀ ಅವರದು, ಅವರ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತ ಕಟ್ಟುವ ಮಹಾನ್ ಸಂಕಲ್ಪ ಪರಿಪೂರ್ಣವಾಗಿ ಈಡೇರಿದರೆ ವಿಶ್ವಮಟ್ಟದಲ್ಲಿ ನಮ್ಮ ಭವ್ಯ ಭಾರತ ಅಗ್ರಸ್ಥಾನದಲ್ಲಿ ನಿಲ್ಲಲಿದೆ. ಈ ನಿಟ್ಟಿನಲ್ಲಿ ಅವರೊಂದಿಗೆ ಹೆಗಲು ಕೊಡುವ ಪುಣ್ಯದ ಕಾರ್ಯದಲ್ಲಿ ಸಮರ್ಪಿಸಿಕೊಳ್ಳಲು ‘ಬಿಜೆಪಿ-ಕರ್ನಾಟಕ’ದ ರಥ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಟ್ಟಿರುವುದು ನನ್ನ ಸೌಭಾಗ್ಯ ಎಂಬುದು ನನ್ನ ವಿನಮ್ರ ಭಾವವಾಗಿದೆ. 2024ರ ಮಹಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ.ಮಾನ್ಯ ಅಮಿತ್ ಶಾ ಜೀ, “ರಾಷ್ಟ್ರಭಕ್ತಿ-ಪಕ್ಷನಿಷ್ಠೆ ನಿಮ್ಮ ಧ್ಯೇಯ, ಬದ್ಧತೆ, ಆತ್ಮ ವಿಶ್ವಾಸ, ಗುರಿ ಮುಟ್ಟುವ ಛಲ, ಗೆಲುವಿನ ರಣತಂತ್ರ ನಿಮ್ಮ ಶಕ್ತಿ ಇದು ನಮ್ಮಂಥ ಯವಕರಿಗೆ ನಿತ್ಯ ಸ್ಫೂರ್ತಿ” ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜೀ ಅವರನ್ನು ಭೇಟಿಯಾಗಿ ಪಂಚರಾಜ್ಯ ಚುನಾವಣೆಯ ಬಿಜೆಪಿ ಗೆಲುವಿನ ಸಾಧನೆಗಾಗಿ ಆತ್ಮೀಯ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆಯಲಾಯಿತು.
ಪಕ್ಷ ಸಂಘಟನೆಯ ಅವಕಾಶಗಳನ್ನು ಕಲ್ಪಿಸಿ ಆರಂಭದಿಂದಲೂ ನನಗೆ ಮಾರ್ಗದರ್ಶನ ನೀಡುತ್ತಿರುವ ಅಮಿತ್ ಶಾ ಜೀ ಅವರು ನನ್ನ ಸಾಮರ್ಥ್ಯದ ಮೇಲೆ ಅಪರಿಮಿತ ನಂಬಿಕೆಯನ್ನಿರಿಸಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸುವ ಮಹತ್ವದ ನಿರ್ಣಯದಲ್ಲಿ ಭಾಗಿಯಾಗಿದ್ದು, ನನ್ನ ಜೀವನದಲ್ಲಿ ಎಂದೂ ಮರೆಯಲಾಗದ ಮಹತ್ವದ ಘಟ್ಟ. ಈ ನಿಟ್ಟಿನಲ್ಲಿ ಅವರ ಇಂದಿನ ಉತ್ತೇಜನ ಪೂರ್ಣ ಮಾತುಗಳು ನನ್ನಲ್ಲಿ ಹನುಮನ ಶಕ್ತಿ – ಭೀಮನ ಛಲ ನೆನಪಿಸುವ ಸಂಕಲ್ಪ ತೊಡಿಸಿದೆ.ಇನ್ನು, ಅಮಿತ್​ ಶಾ ಭೇಟಿ ವೇಳೆ ವಿಜಯೇಂದ್ರ ಅವರಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಂಸದರಾದ ಪ್ರತಾಪ್ ಸಿಂಹ, ಮುನಿಸ್ವಾಮಿ ಅವರು ಸಾಥ್ ನೀಡಿದ್ದರು.

Continue Reading

ದೇಶ

“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ

Published

on

By

ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.

ಟಿಕೆಟ್‌ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್‌ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್‌ ಅಸಮಾಧಾನಗೊಂಡಿದ್ದರು.

ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್‌ ಅವರನ್ನು ಸ್ವತಃ ಮಲ್ಲಿಕಾರ್ಜುನ್‌ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್‌, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.

ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ ಬಲ ಹೆಚ್ಚಿದಂತೆ ಕಾಣುತ್ತಿದೆ.

Continue Reading

ದೇಶ

ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”

Published

on

By

ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.

ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.

ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.

ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

Continue Reading

Trending