Connect with us

ದೇಶ

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ

ಮೈಸೂರು, : ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರ ಇದೇ ಜನವರಿ 22ರಂದು ಉದ್ಘಾಟನೆಯಾಗಲಿದೆ. ಇನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಎನ್ನುವರು ಕೆತ್ತನೆ ಮಾಡಿರುವುದು ವಿಶೇಷವಾಗಿದ್ದು, ಇದೀಗ ಅವರು ಕೆತ್ತನೆ ಮಾಡಿದ ಮೂರ್ತಿಯೇ ಫೈನಲ್​​​​​​ ಎಂದು ಹೇಳಿದೆ. ರಾಮಜನ್ಮ ಭೂಮಿ ಟ್ರಸ್ಟ್​​​​​​ ಈ ಬಗ್ಗೆ ಮಾಹಿತಿ ನೀಡಿದೆ. ಮತ ಹಾಕುವ ಮೂಲಕ ರಾಮಲಲ್ಲಾನ ಮೂರ್ತಿಯನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಜನವರಿ 22ರಂದು ಈ ಮೂರ್ತಿಯನ್ನು ಪ್ರಾಣ ಪ್ರತಿಷ್ಠೆ ಮಾಡಲಾಗುವುದು. ಎಂಬಿಎ ಪದವೀಧರರಾಗಿರುವ ಅರುಣ್ ಯೋಗಿರಾಜ್, ಕಾರ್ಪೋರೇಟ್ ನೌಕರಿಯನ್ನು ತೊರೆದು ಕುಟುಂಬ ನಡೆಸಿಕೊಂಡು ಬಂದ ಶಿಲ್ಪ ಕೆತ್ತನೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು, ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮ ಲಲ್ಲ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ.
ಮೈಸೂರಿನ ಅರುಣ್​ ಅವರೊಂದಿಗೆ ಬೆಂಗಳೂರಿನ ಜಿ,ಎಲ್,ಭಟ್ ಹಾಗೂ ರಾಜಸ್ಥಾನದ ಸತ್ಯನಾರಾಯಣ ಪಾಂಡೇ ಕೂಡ ಈ ರಾಮ ಲಲ್ಲ ಮೂರ್ತಿ ಕೆತ್ತನೆ ಮಾಡಿದ್ದಾರೆ. ಇನ್ನು 51 ಇಂಚು ಎತ್ತರದ ಮೂರ್ತಿ ಇದಾಗಿದ್ದು, ಒಟ್ಟು ಮೂರ್ತಿಯ ಗ್ರಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ. ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಲಿದ್ದಾರೆ.ಜನವರಿ 22ರಂದು ಆಯೋಧ್ಯೆ ರಾಮ ಮಂದರದಲ್ಲಿ ಆಯೋಜನೆಗೊಂಡಿರುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ 2 ಸಾವಿರ ಆಹ್ವಾನಿತರಲ್ಲಿ ಅರುಣ್​ ಸಹ ಒಬ್ಬರು. ಎಂಬಿಎ ಪದವೀಧರರಾಗಿರುವ ಅರುಣ್ ಕಾರ್ಪೋರೇಟ್ ನೌಕರಿಯನ್ನು ತೊರೆದು ಕುಟುಂಬ ನಡೆಸಿಕೊಂಡು ಬಂದ ಶಿಲ್ಪ ಕೆತ್ತನೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. 2008ರಿಂದ ಈವರೆಗೂ ಸುಮಾರು 1 ಸಾವಿರಕ್ಕೂ ಹೆಚ್ಚು ವಿವಿಧ ಪ್ರತಿಮೆಗಳನ್ನು ಕತ್ತನೆ ಮಾಡಿದ್ದಾರೆ. ಈ ಮೊದಲು ಕೇದರನಾಥ ದೇಗುಲ್ಕೆ ಆದಿ ಶಂಕರಾಚಾರ್ಯರ ಮೂರ್ತಿಯನ್ನು ಅರುಣ್ ಕೆತ್ತಿದ್ದರು. ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾದ ಸುಭಾಶಚಂದ್ರ ಬೋಸ್ ಅವರ ಪ್ರತಿಮೆಯನ್ನು ಸಹ ಅರುಣ್ ಕೆತ್ತಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.ಇನ್ನು ದೆಹಲಿಯ ಜೈಸಲ್ಮೇರ್ ಹೌಸ್​ನಲ್ಲಿ ಡಾ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಕೆತ್ತನೆಗೆಊ ನ್ಯಾಯಾಂ ಇಲಾಖೆ ಅರುಣ್ ಅವರಿಗೆ ನೀಡಿದ್ದು, ಪ್ರತಿಮೆ ಫೆಬ್ರವರಿ ಅಂತ್ಯದೊಳಗೆ ನೀಡುವಂತೆ ಸೂಚಿಸಿದೆ. ಇದು ಬರುವ ಏಪ್ರಿಲ್ 14ರಂದು ಲೋಕಾರ್ಪಣೆಗೊಳ್ಳಲಿದೆ. ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿರುವ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಅರುಣ್, ರಾಮಲಲ್ಲಾ ಕಲ್ಲಿನ ವಿಗ್ರಹ ಕೆತ್ತನೆಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಸಂತಸ ಹಂಚಿಕೊಂಡಿದ್ದಾರೆ.

ರಾಮಲಲ್ಲಾ ಕಲ್ಲಿನ ವಿಗ್ರಹ
ಅಯೋಧ್ಯೆ ಅಂದ್ರೆ ಥಟ್ಟನೆ ನೆನಪಾಗುವುದು ರಾಮಲಲ್ಲಾ. ಲಲ್ಲಾ ಅಂದರೆ ಮಗು. ಅಂದ್ರೆ ರಾಮನ ಬಾಲ್ಯದ ಮೂರ್ತಿ. ಅಯೋಧ್ಯಾ ರಾಮಮಂದಿರದಲ್ಲಿ ಅತ್ಯಾಕರ್ಷಕವಾದ ರಾಮಲಲ್ಲಾನ ಕಲ್ಲಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ರಾಮ ಬಾಲಕನಿದ್ದಾಗ ಹೇಗಿದ್ದ ಅನ್ನೋ ಪರಿಕಲ್ಪನೆಯಲ್ಲಿ ಈ ವಿಗ್ರಹ ಇರುತ್ತದೆ. 51 ಇಂಚಿನ ಕಲ್ಲಿನ ವಿಗ್ರಹದಲ್ಲಿ ಶ್ರೀ ರಾಮನ ಬಾಲ್ಯದ ಸ್ವರೂಪ, ಶ್ರೀ ರಾಮನ ಮುಗ್ದತೆ, ತುಂಟತನದ ಜೊತೆಗೆ ಗಾಂಭೀರ್ಯತೆ ಸಹಾ ಇರಲಿದೆ. ಪುಟ್ಟ ಬಾಲಕ ಧನುರ್ದಾಯಿಯಾಗಿ ಕಾಣಿಸಿಕೊಳ್ಳಲಿದ್ದಾನೆ. ಇದರ ಜೊತೆಗೆ ಮತ್ತೊಂದು ವಿಶೇಷ ಅಂದ್ರೆ ಇದುವರೆಗೂ ಪುರಾಣಗಳಲ್ಲಿ, ಕಥೆಗಳಲ್ಲಿ, ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ, ಪುಸ್ತಕದ ಪುಟಗಳಲ್ಲಿ ಎಲ್ಲೂ ಸಹಾ ರಾಮಲಲ್ಲಾನನ್ನು ಯಾರು ನೋಡಿಲ್ಲ. ನಮ್ಮಲ್ಲಿ ಏನಿದ್ದರು ಶ್ರೀ ಕೃಷ್ಣನ ಬಾಲಲೀಲೆಯೇ ಹೊರತು ರಾಮನ ಬಾಲ್ಯದ ಬಗ್ಗೆ ಉಲ್ಲೇಖಗಳು ಚಿತ್ರಗಳು ಕಡಿಮೆಯೇ. ಹೀಗಾಗಿ ಇದೊಂದು ವಿಭಿನ್ನವಾದ ಕಲಾಕೃತಿಯಾಗಿ ಮೂಡಿಬರುವುದರಲ್ಲಿ ಯಾವುದೇ ಅನುಮಾನಗಳಿಲ್ಲ.
ಇಂತಹ ವಿಭಿನ್ನ ವಿಶೇಷವಾದ ಮೂರ್ತಿ ಮೂಡಿಬಂದಿರುವುದೇ ರೋಚಕ.

ಅರುಣ್ ಯೋಗಿರಾಜ್
ಅರುಣ್ ಯೋಗಿರಾಜ್ ಮೈಸೂರು ಮಣ್ಣಿನ ಅಪ್ಪಟ ಪ್ರತಿಭೆ. ಇವರದ್ದು ಕಲ್ಲಿನ ವಿಗ್ರಹ ಶಿಲ್ಪದಲ್ಲಿ 200 ವರ್ಷಗಳ ತಲೆಮಾರಿನ ಪರಂಪರೆ. ಇವರ ತಂದೆ, ತಾತಾ, ಮುತ್ತಾತ, ಅವರ ತಂದೆ ತಾತಾ ಅಂದರೆ ಬರೋಬ್ಬರಿ ಐದು ತಲೆ ಮಾರಿನಿಂದ ಕಲ್ಲಿನ ಶಿಲ್ಪ ಕಲೆಯಲ್ಲಿ ಇವರ ವಂಶಸ್ಥರು ತೊಡಗಿಕೊಂಡಿದ್ದಾರೆ. ಅರುಣ್ ತಂದೆ ಯೋಗಿರಾಜ್ ಕೂಡ ನುರಿತ ಶಿಲ್ಪಿ. ಅವರ ಅಜ್ಜ ಬಸವಣ್ಣ ಶಿಲ್ಪಿ ಮೈಸೂರು ರಾಜರ ಆಸ್ತಾನದಲ್ಲಿದ್ದರು. ತಾತಾ ಮುತ್ತಾತ ಕೂಡ ಶಿಲ್ಪಿಗಳಾಗಿದ್ದರು. ಸುಮಾರು 200 ವರ್ಷದ ಹಿಂದಿನವರ ಕಲೆ ಅರುಣ್ ಅವರಿಗೆ ಸಿದ್ದಿಯಾಗಿದೆ. ಅರುಣ್ ಯೋಗಿರಾಜ್ ಅವರು ಬಾಲ್ಯದಿಂದಲೂ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಎಂಬಿಎ ಮುಗಿಸಿದ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಕಾಲ ಕೆಲಸ ಮಾಡುತ್ತಿದ್ದರು. ಆದರೆ ಅವರಿಗೆ ಆ ಕೆಲದ ತೃಪ್ತಿ ನೀಡಲಿಲ್ಲ. ಆಗ ಅವರಿಗೆ ಅನಿಸಿದ್ದು ತಮ್ಮ ಪೂರ್ವಜರ ಕಲೆಯನ್ನು ಮುಂದುವರಿಸಬೇಕು ಅಂತಾ. ಮತ್ತೆ ವಾಪಸ್ಸು ಕಲೆಯ ಕಡೆಗೆ ಬಂದರು. ತಂದೆಗೆ ವಿಚಾರ ತಿಳಿಸಿದರು. ಮೊದ ಮೊದಲು ತಂದೆ ಇದಕ್ಕೆ ಒಪ್ಪದಿದ್ದರು ಮಗನ ಆಸಕ್ತಿ ಮುಂದೆ ಅವರು ಸೋಲಲೇಬೇಕಾಯಿತು. ಆದರೆ ಅವರು ಒಂದು ಷರತ್ತನ್ನು ಹಾಕಿ ಮಗನಿಗೆ ಅನುಮತಿ ನೀಡಿದರು. ನೀನು ಎಂಬಿಎ ಪದವೀಧರ. ಮಾರ್ಕೆಟಿಂಗ್ ನಿನ್ನ ತಲೆಯಲ್ಲಿ ಹಾಸು ಹೊಕ್ಕಿರುತ್ತದೆ. ಆದರೆ ಇದು ಶ್ರದ್ದಾ ಭಕ್ತಿಯ ಕೆಲಸ ಇಲ್ಲಿ ನೀನು ಮಾರ್ಕೆಟಿಂಗ್ ಮಾಡುವುದಾದರೆ ಸುತಾರಾಂ ನೀನು ಬರಬೇಡು. ಕಲ್ಲಿನ ವಿಗ್ರಹಗಳ ಖರೀದಿ ಮಾರಾಟಕ್ಕೆ ಇಲ್ಲಿ ಅವಕಾಶವಿಲ್ಲ. ಇಲ್ಲೇನಿದ್ದರು ಕಲಾಸೇವೆ ಅಷ್ಟೇ ಅಂತಾ ಕಡ್ಡಿ ತುಂಡಾದ ರೀತಿ ಷರತ್ತು ವಿಧಿಸಿದ್ದರು. ಅದಕ್ಕೆ ಒಪ್ಪಿದ ಅರುಣ್ ಯೋಗಿರಾಜ್ 2008ರಿಂದ ಮತ್ತೆ ಶಿಲ್ಪ ಕೆತ್ತನೆ ವೃತ್ತಿ ಮುಂದುವರಿಸಿದರು.

ಎರಡನೇ ಇನಿಂಗ್ಸ್‌ನಲ್ಲಿ ಭರ್ಜರಿ ಯಶಸ್ಸು – ಸಾಂಸ್ಕೃತಿಕ ರಾಜಧಾನಿಯಿಂದ ದೇಶದ ರಾಜಧಾನಿಗೆ……..!
ಅರುಣ್ ಯೋಗಿರಾಜ್ ಅವರು ತಮ್ಮ ಕಲೆಯಲ್ಲಿ ತೊಡಗಿಸಿಕೊಂಡಿದ್ದೇ ತಡ ಅವರು ಅಂದುಕೊಂಡಿದ್ದು ದಿಟವಾಯ್ತು. ಕಲೆ ಅನ್ನೋದು ಅವರ ರಕ್ತದಲ್ಲೇ ಇದೆ ಅನ್ನೋದು ಸಾಬೀತಾಯಿತು. ಹುಳಿ ಹಿಡಿದ ಕೈಗಳಲ್ಲಿ ಅದ್ಬುತಗಳು ಮೂಡಿದವು. ಆರಂಭದಲ್ಲಿ ಸಣ್ಣ ಪುಟ್ಟ ಮಂಟಪಗಳ ಕೆತ್ತನೆಯೊಂದಿಗೆ ಹೊಸ ಇನಿಂಗ್ಸ್‌ನ್ನು ಆರಂಭಿಸಿದರು‌. ನಂತರ ದೇಗುಲಗಳಿಗೆ ಭಗವಾನ್ ಪಂಚಮುಖಿ ಗಣಪತಿ, ಭಗವಾನ್ ಮಹಾವಿಷ್ಣು, ದೇವರು ಬುದ್ಧ, ನಂದಿ, ಸ್ವಾಮಿ ಶಿವಬಾಲ ಯೋಗಿ, ಸ್ವಾಮಿ ಶಿವಕುಮಾರ ಮತ್ತು ಬನಶಂಕರಿ ದೇವಿಯ ವಿಗ್ರಹಗಳನ್ನು ಕೆತ್ತನೆ ಮಾಡಿ ನೀಡಿದರು. ಇದಾದ ನಂತರ ಮೈಸೂರಿನಲ್ಲಿ 5 ಅಡಿಯ ಗರುಡ ದೇವರ ವಿಗ್ರಹ. ಕೆಆರ್ ನಗರದಲ್ಲಿ 7 ಅಡಿ ಎತ್ತರದ ಯೋಗಾನರಸಿಂಹ ಸ್ವಾಮಿ ದೇವರ ವಿಗ್ರಹ, ಭಾರತದ ಅತಿ ದೊಡ್ಡ 10 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಶ್ರೀ ರಾಮಕೃಷ್ಣ ಪರಮಹಂಸರ ಶಿಲ್ಪ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ “ಕ್ರಿಯೇಶನ್ ಆಫ್ ಕ್ರಿಯೇಶನ್” ಪರಿಕಲ್ಪನೆಯಲ್ಲಿ 11 ಅಡಿ ಏಕಶಿಲೆಯ ಆಧುನಿಕ ಕಲಾ ಕಲ್ಲಿನ ಶಿಲ್ಪ, 15 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಅವರ ಪೀಠದೊಂದಿಗೆ ಮೈಸೂರಿನ ಶಿಲ್ಪ, 15 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಡಾ.ಬಿ.ಆರ್. ಅಂಬೇಡ್ಕರ್ ಅವರ ಪೀಠದೊಂದಿಗಿನ ಶಿಲ್ಪ. ಕೆ.ಆರ್.ನಗರದ ಚುಂಚಕಟ್ಟೆಯಲ್ಲಿ 21 ಅಡಿ ಏಕಶಿಲೆಯ ಹನುಮಾನ್ ಹೊಯ್ಸಳ ಶೈಲಿ ಶಿಲ್ಪ ಇವರ ಕೈ ಚಳಕದಲ್ಲಿ ಅದ್ಬುತವಾಗಿ ಮೂಡಿಬಂದವು. ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದ ಅರುಣ್ ಯೋಗಿರಾಜ್ ಅವರನ್ನು ರಾಷ್ಟ್ರಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದು ಉತ್ತರಾಖಂಡದ ಕೇದಾರನಾಥದಲ್ಲಿ 12 ಅಡಿಯ ಆದಿ ಶಂಕರಾಚಾರ್ಯರ ವಿಗ್ರಹ ಹಾಗೂ 28 ಅಡಿ ಏಕಶಿಲೆಯ ಕಪ್ಪು ಗ್ರಾನೈಟ್ ಕಲ್ಲಿನಲ್ಲಿ ಅರಳಿ ಇಂಡಿಯಾ ಗೇಟ್‌ನಲ್ಲಿ ರಾರಾಜಿಸುತ್ತಿರುವ ಸುಭಾಷ್ ಚಂದ್ರ ಬೋಸ್ ಅವರ ಕಲಾಕೃತಿಗಳು. ಈ ಕಲಾಕೃತಿಗಳನ್ನು ಖುದ್ದು ದೇಶದ ಪ್ರಧಾನಿ ಮೆಚ್ಚಿ ಅನಾವರಣಗೊಳಿಸಿದರು‌. ಇದೀಗ ರಾಮಲಲ್ಲಾ ಅರುಣ್ ಅವರ ಹ್ಯಾಟ್ರಿಕ್ ಕಲಾಕೃತಿಯಾಗಲಿದೆ‌.

ಕಲೆಗೆ ಒಲಿದು ಬಂತು ಅವಕಾಶ – ಶ್ರದ್ದಾ ಭಕ್ತಿಯಲ್ಲಿ ಮೂಡಿದ ರಾಮಲಲ್ಲಾ ಮೂರ್ತಿ
ಅರುಣ್ ಯೋಗಿರಾಜ್ ಪ್ರತಿಭೆ ನೋಡಿದ ಪ್ರಧಾನಿ ಮೋದಿ ಮತ್ತೊಮ್ಮೆ ರಾಮಲಲ್ಲಾ ವಿಗ್ರಹ ಕೆತ್ತನೆಯ ಅವಕಾಶ ನೀಡಿದ್ದಾರೆ. ಇವರ ಜೊತೆಗೆ ಬೆಂಗಳೂರು ಹಾಗೈ ರಾಜಸ್ಥಾನದ ಇಬ್ಬರು ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಲಿದ್ದಾರೆ. ಮೂವರಲ್ಲಿ ಯಾರ ಮೂರ್ತಿ ಆಕರ್ಷಕ ಅರ್ಥಪೂರ್ಣವಾಗಲಿದೆ ಆ ಮೂರ್ತಿಯನ್ನು ಮುಖ್ಯ ಪೀಠಿಕೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಉಳಿದ ಎರಡು ಮೂರ್ತಿಗಳು ಅಯೋಧ್ಯಾ ರಾಮಮಂದಿರಲ್ಲೇ ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಅರುಣ್ ರಾಮಲಲ್ಲಾ ವಿಗ್ರಹ ಕೆತ್ತನೆ ಮಾಡಿದ ರೀತಿ ರೋಚಕ. ಅರುಣ್ ಕೆತ್ತನೆಗೆ ಆಯ್ಕೆಯಾಗುತ್ತಿದ್ದಂತೆ ಅವರಿಗೆ ಕಂಕಣಧಾರಣೆ ಮಾಡಲಾಗಿದೆ. ಕೆಲಸ ಆರಂಭಕ್ಕೂ ಮುನ್ನ ನಂತರ ಶ್ರೀ ರಾಮ ಸ್ತೋತ್ರ ಪಠನೆ. ಸಂಪೂರ್ಣ ಶ್ರದ್ದಾ ಭಕ್ತಿಯಿಂದ ಕೆಲಸ ಮಾಡಿದ್ದಾರೆ. ಇನ್ನು ಅರುಣ್ ಅವರು ಈ ಕಾರ್ಯದಲ್ಲಿ ಎಷ್ಟು ಮುಳುಗಿ ಹೋಗಿದ್ದರು ಅಂದ್ರೆ ವಿಗ್ರಹ ಕೆತ್ತನೆ ಪರಿಪೂರ್ಣವಾಗಿರಲಿ ಅನ್ನೋ ಕಾರಣಕ್ಕೆ ಸದಾ ಕಾಲ ಮಕ್ಕಳ ಒಡನಾಟದಲ್ಲೇ ಕಾಲ ಕಳೆದಿದ್ದಾರೆ. ಚಿಣ್ಣರ ಮೇಳ, ಮಕ್ಕಳಿರುವ ಕಡೆ ಗಂಟೆಗಟ್ಟಲೇ ಕುಳಿತು ಮಕ್ಕಳ ಹಾವಭಾವವನ್ನು ಕಣ್ತುಂಬಿಕೊಂಡಿದ್ದಾರೆ. ಇದರ ಪ್ರತಿಫಲವಾಗಿ ಶ್ರೀ ರಾಮಲಲ್ಲಾ ವಿಗ್ರಹ ಮೂಡಿಬಂದಿದೆ.

Continue Reading

ದೇಶ

ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಎಚ್ಚರಿಕೆ: “ಭಾರತಕ್ಕೆ ಮರಳದಿದ್ದರೆ ಅರ್ಜಿ ವಿಚಾರಣೆ ಇಲ್ಲ”

ಮುಂಬೈ: ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ (Vijay Mallya) ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ಹಾಜರಾಗದ ಹಿನ್ನೆಲೆ, ಮುಂದಿನ ವಿಚಾರಣೆಯಲ್ಲಿಯೂ ಇದೇ ರೀತಿಯ ವರ್ತನೆ ತೋರಿದರೆ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅಂಕದ್ ಅವರ ಪೀಠ, ಮಲ್ಯ ಭಾರತಕ್ಕೆ ಮರಳುವ ಉದ್ದೇಶ ಹೊಂದಿದ್ದಾರೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಲು “ಕೊನೆಯ ಅವಕಾಶ” ನೀಡಿದೆ.

“ನೀವು ಭಾರತಕ್ಕೆ ಹಿಂತಿರುಗಲೇಬೇಕು. ಹಿಂತಿರುಗದಿದ್ದರೆ ನಿಮ್ಮ ಅರ್ಜಿಯನ್ನು ನಾವು ವಿಚಾರಣೆ ನಡೆಸಲು ಸಾಧ್ಯವಿಲ್ಲ,” ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.


FEOA ಕಾಯ್ದೆ ಪ್ರಶ್ನೆ

ವಿಜಯ್ ಮಲ್ಯ ಅವರು ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಹಾಗೂ ಅವರನ್ನು ‘Fugitive Economic Offender’ ಎಂದು ಘೋಷಿಸುವ ಪ್ರಕ್ರಿಯೆಗಳ ವಿರುದ್ಧದ ಅರ್ಜಿಯನ್ನು ನ್ಯಾಯಾಲಯ ವಿಚಾರಿಸುತ್ತಿದೆ.

ಡಿಸೆಂಬರ್‌ನಲ್ಲಿ ನ್ಯಾಯಪೀಠ, ಮಲ್ಯ ಭಾರತಕ್ಕೆ ಮರಳಿ ನ್ಯಾಯಾಲಯದ ವ್ಯಾಪ್ತಿಗೆ ಒಳಪಟ್ಟರೆ ಮಾತ್ರ ಅವರ ಅರ್ಜಿಯನ್ನು ಪರಿಗಣಿಸುವುದಾಗಿ ಹೇಳಿತ್ತು.

ನ್ಯಾಯಾಧೀಶರು, “ನೀವು ನ್ಯಾಯಾಲಯದ ಪ್ರಕ್ರಿಯೆಯಿಂದ ದೂರ ಓಡುತ್ತಿದ್ದೀರಿ. ಆದ್ದರಿಂದ ಸಮಾನ ಪರಿಹಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟರು.


ಇಡಿ ಪರ ವಾದ

ಜಾರಿ ನಿರ್ದೇಶನಾಲಯ (ED) ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮಲ್ಯ ಬ್ಯಾಂಕುಗಳ ಹಕ್ಕುಗಳನ್ನು ಪ್ರಶ್ನಿಸಿ ಅಫಿಡವಿಟ್ ಸಲ್ಲಿಸಿರುವುದನ್ನು ಉಲ್ಲೇಖಿಸಿ, ಅವರು ವಸೂಲಾತಿ ಪ್ರಕ್ರಿಯೆಗಳನ್ನು ಬೇರೆ ದಿಕ್ಕಿಗೆ ತಳ್ಳಲು ಯತ್ನಿಸುತ್ತಿದ್ದಾರೆ ಎಂದು ವಾದಿಸಿದರು.

ಮಲ್ಯ ಅವರನ್ನು ಪರಾರಿಯಾಗಿದ್ದಾನೆಂದು ಘೋಷಿಸಿದ ನಂತರ ಹಾಗೂ ಲಂಡನ್‌ನಲ್ಲಿ ಹಸ್ತಾಂತರ ಪ್ರಕ್ರಿಯೆ ಮುಂದುವರಿದ ಹಂತದಲ್ಲಿದ್ದಾಗ ಮಾತ್ರ FEOAಗೆ ಸವಾಲು ಹಾಕಿದ್ದಾರೆ ಎಂದು ಮೆಹ್ತಾ ಹೇಳಿದರು.

“ಭಾರತೀಯ ನ್ಯಾಯಾಲಯಗಳಿಂದ ಪರಿಹಾರ ಕೇಳುವವರು ಭಾರತೀಯ ಕಾನೂನಿನ ಮೇಲೆ ನಂಬಿಕೆ ಇಡಬೇಕು,” ಎಂದು ಇಡಿ ಪರ ವಾದ ಮಂಡಿಸಲಾಯಿತು.


ಮಲ್ಯ ಪರ ವಾದ

ವಿಜಯ್ ಮಲ್ಯ ಪರ ವಕೀಲ ಅಮಿತ್ ದೇಸಾಯಿ, ಮಲ್ಯ ಭೌತಿಕವಾಗಿ ಭಾರತಕ್ಕೆ ಮರಳದಿದ್ದರೂ ಅವರ ಅರ್ಜಿಯನ್ನು ವಿಚಾರಣೆ ಮಾಡಬಹುದು ಎಂದು ವಾದಿಸಿದರು.

ಆದರೆ, ಮಲ್ಯ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಅವರು ನಡೆದುಕೊಳ್ಳುತ್ತಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ನ್ಯಾಯಾಲಯ ಸ್ಪಷ್ಟವಾಗಿ ಹೇಳಿದ್ದು:

  • ಮಲ್ಯ ಭಾರತಕ್ಕೆ ಹಿಂದಿರುಗುವುದಿಲ್ಲವೆಂದು ಅಫಿಡವಿಟ್ ಸಲ್ಲಿಸಬಹುದು.
  • ಆದರೆ ನ್ಯಾಯಾಲಯದ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.
  • ದೇಶಕ್ಕೆ ಮರಳಲು ಇದು ಅಂತಿಮ ಅವಕಾಶ.

ಮುಂದಿನ ವಾರ ವಿಚಾರಣೆ ಮುಂದುವರಿಯಲಿದೆ.

Continue Reading

ಕ್ರೀಡೆ

IND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ!”

ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಫೆ.12ರಂದು ನಮೀಬಿಯಾ ವಿರುದ್ಧ ಕಣಕ್ಕಿಳಿದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಪಾಕಿಸ್ತಾನ ಎದುರಿಸಲು ಸಜ್ಜಾಗಿದೆ.

ಈ ಮಧ್ಯೆ, ಪಾಕಿಸ್ತಾನದ ನಿಗೂಢ ಸ್ಪಿನ್ನರ್ ಉಸ್ಮಾನ್ ತಾರಿಕ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ. ಅದಕ್ಕಾಗಿ ನನ್ನ ಬೌಲಿಂಗ್ ಶೈಲಿಯ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.


ಮಾತಿನ ಸಮರ ಜೋರಾಗಿದೆ

ಟಿ20 ವಿಶ್ವಕಪ್ ಈಗ ರೋಚಕ ಹಂತ ತಲುಪಿದ್ದು, ಈಗಾಗಲೇ 15ಕ್ಕೂ ಹೆಚ್ಚು ಪಂದ್ಯಗಳು ಪೂರ್ಣಗೊಂಡಿವೆ. ಭಾರತ–ಪಾಕಿಸ್ತಾನ ಪಂದ್ಯ ನಡೆಯುತ್ತದೆಯೇ? ಎಂಬ ಅನುಮಾನಕ್ಕೆ ತೆರೆಬಿದ್ದಿದ್ದು, ಪಾಕಿಸ್ತಾನ ಪಂದ್ಯಕ್ಕೆ ಒಪ್ಪಿಗೆ ನೀಡಿದೆ.

ಪಂದ್ಯ ಖಚಿತವಾದ ಬೆನ್ನಲ್ಲೇ ಎರಡೂ ತಂಡಗಳ ನಡುವೆ ಮಾತಿನ ಸಮರ ಜೋರಾಗಿದೆ. ಪಾಕಿಸ್ತಾನಿ ಆಟಗಾರರು ಭಾರತವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದರೆ, ಭಾರತೀಯರು ಪಾಕಿಸ್ತಾನವನ್ನು ಮಣಿಸುತ್ತೇವೆ ಎಂದು ತಿರುಗೇಟು ನೀಡುತ್ತಿದ್ದಾರೆ.


ತಾರಿಕ್ ಸಮರ್ಥನೆ

ಭಾರತೀಯರು ನನ್ನ ಬೌಲಿಂಗ್ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಐಸಿಸಿ ನಿಯಮಗಳ ಪ್ರಕಾರ ನನ್ನ ಬೌಲಿಂಗ್ ಶೈಲಿ ಮಾನ್ಯವಾಗಿದೆ ಎಂದು ಉಸ್ಮಾನ್ ತಾರಿಕ್ ಸಮರ್ಥಿಸಿಕೊಂಡಿದ್ದಾರೆ.

“ಭಾರತೀಯ ಆಟಗಾರರಿಗೆ ನನ್ನ ಬೌಲಿಂಗ್‌ನಿಂದ ಹೆಚ್ಚುವರಿ ಒತ್ತಡ ಇದೆ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ. ಫೆಬ್ರವರಿ 15ರಂದು ಭಾರತದ ಅಗ್ರ ಕ್ರಮಾಂಕವನ್ನು ಕೆಡವುತ್ತೇನೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನನ್ನ ಬಗ್ಗೆ ಏನು ಚರ್ಚೆ ನಡೆಯುತ್ತಿದೆ ಎಂಬುದನ್ನು ನಾನು ಪರಿಗಣಿಸುವುದಿಲ್ಲ. ನನ್ನ ಗಮನ ಪಂದ್ಯದಲ್ಲೇ ಇದೆ” ಎಂದು ತಾರಿಕ್ ಹೇಳಿದ್ದಾರೆ.

Continue Reading

ದೇಶ

ಜೈರಾಮ್ ರಮೇಶ್‌ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”

ಹೊಸದಿಲ್ಲಿ: ಪರಿಸರ ಪರವಾನಿಗೆಗೆ ಸಂಬಂಧಿಸಿದ ರಿಟ್ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. “ಇದೆಲ್ಲವನ್ನೂ ನೀವು ಕೇವಲ ಮಾಧ್ಯಮ ಪ್ರಚಾರಕ್ಕಾಗಿ ಮಾಡುತ್ತಿದ್ದೀರಾ?” ಎಂದು ತ್ರಿಸದಸ್ಯ ಪೀಠ ಕಿಡಿಕಾರಿತು.

ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಲ್ಲಿ ನ್ಯಾ. ಸೂರ್ಯಕಾಂತ್, ನ್ಯಾ. ಜಾಯ್‌ಮಾಲ್ಯ ಬಾಗ್ಚಿ ಹಾಗೂ ನ್ಯಾ. ಉಜ್ಜಲ್ ಭುಯಾನ್ ಇದ್ದರು. ಪರಿಸರ ಪರವಾನಿಗೆಯನ್ನು ಪೂರ್ವ ಅನ್ವಯವಾಗುವಂತೆ (Retrospective Environmental Clearance) ನೀಡುವ ಕ್ರಮವನ್ನು ಪ್ರಶ್ನಿಸಿ ಜೈರಾಮ್ ರಮೇಶ್ ರಿಟ್ ಅರ್ಜಿ ಸಲ್ಲಿಸಿದ್ದರು.

ರಿಟ್ ಅರ್ಜಿ ಸ್ವೀಕರಿಸಲು ನಿರಾಕರಣೆ

ವಿಚಾರಣೆ ವೇಳೆ ಪೀಠ, ಈ ಅರ್ಜಿ ಕೇಂದ್ರ ಸರ್ಕಾರದ ಕುಂದುಕೊರತೆಯನ್ನು ಹೈಲೆಟ್ ಮಾಡುವ ಬದಲು ಸಾರ್ವಜನಿಕ ಗಮನ ಸೆಳೆಯಲು ಸಲ್ಲಿಸಿದಂತಿದೆ ಎಂದು ಅಭಿಪ್ರಾಯಪಟ್ಟಿತು. ನವೆಂಬರ್ 2025ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ (ಫೆ.12) ಸ್ವೀಕರಿಸಲು ನಿರಾಕರಿಸಿತು.

“ದಂಡ ಎದುರಿಸಲು ಸಿದ್ದರಾಗಿ” ಎಚ್ಚರಿಕೆ

“ತೀರ್ಪಿನ ವಿರುದ್ಧ ರಿಟ್ ಅರ್ಜಿ ಯಾಕೆ? ಮರುಪರಿಶೀಲನಾ ಅರ್ಜಿ (Review Petition) ಸಲ್ಲಿಸಬಹುದು ಅಲ್ಲವೇ? ರಿಟ್ ಮೂಲಕ ಮರುಪರಿಶೀಲನೆ ಸಾಧ್ಯವಿಲ್ಲ ಎಂಬುದು ತಿಳಿದಿಲ್ಲವೇ? ದಂಡ ಎದುರಿಸಲು ಸಿದ್ದರಾಗಿ” ಎಂದು ನ್ಯಾ. ಸೂರ್ಯಕಾಂತ್ ಎಚ್ಚರಿಸಿದರು.

ನ್ಯಾಯಾಲಯದ ಎಚ್ಚರಿಕೆಯ ಬಳಿಕ ಜೈರಾಮ್ ರಮೇಶ್ ಪರ ವಕೀಲರು ಅರ್ಜಿಯನ್ನು ಹಿಂಪಡೆಯಲು ವಿನಂತಿಸಿಕೊಂಡರು. ನ್ಯಾಯಪೀಠ ಅದಕ್ಕೆ ಅನುಮತಿ ನೀಡಿ, ಕಾನೂನಿನ ಪ್ರಕಾರ ಲಭ್ಯವಿರುವ ಪರಿಹಾರವನ್ನು ಪಡೆಯುವಂತೆ ಸೂಚಿಸಿತು.


ಪ್ರಕರಣದ ಹಿನ್ನೆಲೆ

ಜೈರಾಮ್ ರಮೇಶ್ ಯಾವುದೇ ಯೋಜನೆ ಆರಂಭವಾದ ನಂತರ ಪರಿಸರ ಪರವಾನಿಗೆ ನೀಡುವ ಕ್ರಮವನ್ನು ಪ್ರಶ್ನಿಸಿದ್ದರು. ಈ ರೀತಿಯ ಅನುಮತಿ ಕಾನೂನುಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಅವರು ವಾದಿಸಿದ್ದರು.

ಕೇಂದ್ರ ಸರ್ಕಾರದ ನಿಯಮ ಏನು?

  • 2006ರಲ್ಲಿ ಯೋಜನೆ ಆರಂಭಿಸುವ ಮೊದಲು ಪರಿಸರ ಪರವಾನಿಗೆ ಕಡ್ಡಾಯಗೊಳಿಸಲಾಗಿತ್ತು.
  • 2017 ಮತ್ತು 2021ರ ಅಧಿಸೂಚನೆಗಳ ಮೂಲಕ ಕೆಲವು ಯೋಜನೆಗಳಿಗೆ ಷರತ್ತುಬದ್ದ ಪೂರ್ವಾನ್ವಯ ಅನುಮತಿ ಅವಕಾಶ ನೀಡಲಾಗಿತ್ತು.
  • ಮೇ 2025ರಲ್ಲಿ ಈ ಕ್ರಮವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.
  • ಆದರೆ ನವೆಂಬರ್ 2025ರಲ್ಲಿ CREDAI ಅರ್ಜಿಯ ವಿಚಾರಣೆ ವೇಳೆ ಹಿಂದಿನ ತೀರ್ಪಿನಲ್ಲಿ ಸಡಿಲಿಕೆ ನೀಡಲಾಗಿತ್ತು.

ಈ ಮರುಪರಿಶೀಲಿತ ತೀರ್ಪನ್ನೇ ಜೈರಾಮ್ ರಮೇಶ್ ಪ್ರಶ್ನಿಸಿದ್ದರು.

Continue Reading

Trending