ಸಿನಿಮಾ
ಸಂಜು ವೆಡ್ಸ್ ಗೀತಾ ೨ ಚಿತ್ರಕ್ಕೆ ರಚಿತಾ ರಾಮ್ ನಾಯಕಿ
ಬೆಂಗಳೂರು: ಸಂಜು ವೆಡ್ಸ್ ಗೀತಾ ಚಿತ್ರ ೧೨ ವರ್ಷಗಳ ಹಿಂದೆ ತೆರೆಕಂಡಿ, ಹಾಡು ಮತ್ತು ಕಂಟೆAಟ್ ಮೂಲಕ ೧೦೦ ದಿನಗಳ ಯಶಸ್ವಿ ಪ್ರದರ್ಶನ ಕಂಡಿದ್ದ ಈ ಸಿನಿಮಾ ಈಗ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ ೨ ಬರುತ್ತಿದೆ, ಈ ಚಿತ್ರವನ್ನು ನಾಗಶೇಖರ್ ಅವರು ನಿರ್ದೇಶನ ಮಾಡಿತ್ತಿದ್ದಾರೆ, ಮೊದಲ ಬಾಗದಲ್ಲಿದ್ದ ಕಲಾವಿದರೇ ಈ ಸಿನಿಮಾದಲ್ಲೂ ಇರುತ್ತಾರೆ ಅದರೆ ಶ್ರೀನಗರ ಕಿಟ್ಟಿ ಅವರಿಗೆ ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್ ನಾಯಕಿಯಾಗಿದ್ದಾರೆ, ಬೆಂಗಳೂರಿನ ಅಶೋಕ್ ಹೋಟೆಲ್ನಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ, ಟೀಸರ್ ಬಿಡುಗಡೆ ಸಮಾರಂಭದ ಕಾರ್ಯಕ್ರಮ ನಡೆಯಿತು, ನಾಗಶೇಖರ್ ಮೂವೀಸ್, ಪವಿತರ ಇಂಟರ್ ನ್ಯಾಷನ್ಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಚಿತ್ರದ ಕಾರ್ಯಕ್ರಮದಲ್ಲಿ ನಾಗಶೇಖರ್ ಅವರು ಮಾತನಾಡುತ್ತ ೫ ವರ್ಷಗಳ ಹಿಂದೆಯೇ ಈ ಸಿನಿಮಾವನ್ನು ಪ್ರಾರಂಭಿಸಬೇಕಾಗಿತ್ತು, ಅದರೆ ನಾನು ತೆಲುಗು, ತಮಿಳು ಕಡೆ ಹೋಗಿದ್ದರಿಂದ ಆಗಲಿಲ್ಲ, ರಾಮ್ಯಾ ಅವರು ರಾಜಕೀಯದಲ್ಲಿ ಬ್ಯುಸಿ ಇರುವ ಕಾರಣ ಈ ಚಿತ್ರದಲ್ಲಿ ನಟನೆ ಮಾಡುತ್ತಿಲ್ಲ ಎಂದರು, ತ್ರಿಷಾ ಅಥವಾ ರಚಿತಾ ರಾಮ್ ಇಬ್ಬರಲ್ಲಿ ಒಬ್ಬರು ಈ ಸಿನಿಮಾದಲ್ಲಿ ನಟಿಸಬೇಕು ಅಂದುಕೊAಡಿದ್ದೆ, ಅಮೇಲೆ ಈ ಪಾತ್ರದಲ್ಲಿ ರಚಿತಾ ರಾಮ್ ಅವರನ್ನು ಹಾಕಿಕೊಳ್ಳಬೇಕು ಅಂತ ಫಿಕ್ಸ್ ಆದೆ, ರಚಿತಾ ರಾಮ್ ಅವರು ಅದ್ಬುತವಾದ ಅಭಿನಯದಿಂದ ಅವರು ಹೆಸರು ಮಾಡಿದ್ದಾರೆ, ನಾನು ಚಿತ್ರದಲ್ಲಿ ಕಥೆಯ ಜೊತೆ ಹಾಡುಗಳಿಗೂ ಜಾಸ್ತಿ ಪ್ರಾಮುಖ್ಯತೆ ಕೊಡುತ್ತೇನೆ, ಶ್ರೀಧರ್ ಸಂಭ್ರಮ್ ಅವರಿಗೆ ರಾತ್ರಿ ೧೨ ಗಂಟೆಗೆ ಫೋನ್ ಮಾಡಿ ಹಾಡುಗಳ ಸನ್ನಿವೇಶ ವಿವರಿಸಿದ್ದೇನೆ, ಅವರು ಸೂಪರ್ ಹಾಡುಗಳನ್ನು ಕೊಟ್ಟಿದ್ದಾರೆ, ಬಹಳ ಚನ್ನಾಗಿ ೫ ಹಾಡುಗಳು ಮೂಡಿಬಂದಿವೆ, ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದು ನಾಗಶೇಖರ್ ತಿಳಿಸಿದರು,
ದೇಶ
ರಾಜಮೌಳಿ ಚಿತ್ರದಲ್ಲಿ ಜೂ. ಎನ್ಟಿಆರ್ ಪುತ್ರ ಎಂಟ್ರಿ? ‘ವಾರಣಾಸಿ’ ಬಗ್ಗೆ ಭಾರೀ ಚರ್ಚೆ
ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ S. S. Rajamouli ಅವರ ಸಿನಿಮಾಗಳು ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿವೆ. ಅವರ ಹೊಸ ಸಿನಿಮಾ ‘ವಾರಣಾಸಿ’ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ಇದಕ್ಕೆ ಸಂಬಂಧಿಸಿದ ಹೊಸ ಸುದ್ದಿಯೊಂದು ಸಿನಿ ವಲಯದಲ್ಲಿ ಸದ್ದು ಮಾಡುತ್ತಿದೆ.
ಸ್ಟಾರ್ ನಟ Jr. NTR ಅವರ ಪುತ್ರ ಭಾರ್ಗವ್ ರಾಮ್ ಈ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ನಟಿಸುತ್ತಿರುವ Mahesh Babu ಅವರ ಬಾಲ್ಯದ ಪಾತ್ರದಲ್ಲಿ ಭಾರ್ಗವ್ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ರಾಜಮೌಳಿ ಅವರ ಸಿನಿಮಾಗಳಲ್ಲಿ ನಾಯಕನ ಬಾಲ್ಯದ ಕಥೆಗೆ ವಿಶೇಷ ಮಹತ್ವವಿರುತ್ತದೆ. ಇದೇ ಶೈಲಿಯನ್ನು ‘ವಾರಣಾಸಿ’ ಸಿನಿಮಾದಲ್ಲಿಯೂ ಮುಂದುವರಿಸಲಾಗುತ್ತಿದ್ದು, ಫ್ಲ್ಯಾಶ್ಬ್ಯಾಕ್ ಸನ್ನಿವೇಶದಲ್ಲಿ ಬಾಲ್ಯದ ಪಾತ್ರ ಪ್ರಮುಖ ಪಾತ್ರವಹಿಸಲಿದೆ ಎಂದು ತಿಳಿದುಬಂದಿದೆ.
ಹೆಚ್ಚಿನ ಆಸಕ್ತಿಯ ಸಂಗತಿ ಎಂದರೆ, Jr. NTR ಕೂಡ ಬಾಲನಟನಾಗಿಯೇ ತಮ್ಮ ಸಿನಿ ಜೀವನವನ್ನು ಆರಂಭಿಸಿದ್ದರು. ‘ರಾಮಾಯಣಂ’ ಚಿತ್ರದಲ್ಲಿ ಅಭಿನಯಿಸಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು. ಈಗ ಅವರ ಪುತ್ರವೂ ಅದೇ ಹಾದಿಯಲ್ಲಿ ಸಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಈ ಸಿನಿಮಾದಲ್ಲಿ ನಟಿಸಲು ಅನೇಕ ದೊಡ್ಡ ನಟರು ಆಸಕ್ತಿ ತೋರಿಸುತ್ತಿದ್ದು, ಸಂಭಾವನೆ ಇಲ್ಲದಿದ್ದರೂ ಪಾತ್ರಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ರಾಜಮೌಳಿ ನಿರ್ದೇಶನ ಮತ್ತು ಮಹೇಶ್ ಬಾಬು ನಟನೆಯ ಸಂಯೋಜನೆಯಿಂದ ‘ವಾರಣಾಸಿ’ ಈಗಾಗಲೇ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಒಟ್ಟಾರೆ, ಭಾರ್ಗವ್ ರಾಮ್ ಅವರ ಎಂಟ್ರಿ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಬಾರದಿದ್ದರೂ, ಈ ಸುದ್ದಿ ಜೂ. ಎನ್ಟಿಆರ್ ಅಭಿಮಾನಿಗಳಿಗೆ ಸಂತಸದ ಅಲೆ ಮೂಡಿಸಿದೆ.
ದೇಶ
‘ಬಡೇ ಸಾಬ್’ ಪಾತ್ರದ ಹಿಂದಿನ ಸತ್ಯ: ದಾವೂದ್ ಕುರಿತ ಚರ್ಚೆ
ಬೆಂಗಳೂರು: ಭಾರತದ ಮೋಸ್ಟ್ ವಾಂಟೆಡ್ ಅಪರಾಧಿ Dawood Ibrahim ಮತ್ತೆ ಸುದ್ದಿಯಲ್ಲಿದ್ದಾರೆ. ಬಾಲಿವುಡ್ನಲ್ಲಿ ಬಿಡುಗಡೆಯಾದ Dhurandhar 2 ಚಿತ್ರದ ಭಾರೀ ಯಶಸ್ಸಿನ ಬೆನ್ನಲ್ಲೇ ದಾವೂದ್ ಇಬ್ರಾಹಿಂ ಕುರಿತ ಚರ್ಚೆ ಮತ್ತೆ ಜೋರಾಗಿದೆ.
1990ರ ದಶಕದ 1993 Bombay bombings ದಾಳಿಗಳ ಮಾಸ್ಟರ್ ಮೈಂಡ್ ಆಗಿದ್ದ ದಾವೂದ್, ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿದನು. ಅಂದಿನಿಂದಲೇ ತನ್ನ ‘ಡಿ-ಗ್ಯಾಂಗ್’ ಕಾರ್ಯಾಚರಣೆಗಳನ್ನು ಅಲ್ಲಿಂದಲೇ ನಿರ್ವಹಿಸುತ್ತಿದ್ದಾನೆ ಎಂಬ ಆರೋಪಗಳಿವೆ.
ಸದ್ಯದ ಮಾಹಿತಿಗಳ ಪ್ರಕಾರ, ದಾವೂದ್ ಪಾಕಿಸ್ತಾನದ Karachi ನಗರದಲ್ಲಿನ ಕ್ಲಿಫ್ಟನ್ ಪ್ರದೇಶದ 13ನೇ ರಸ್ತೆಯ ‘ವೈಟ್ ಹೌಸ್’ ಎಂಬ ಐಷಾರಾಮಿ ಮನೆಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗುತ್ತಿದೆ. ಈ ಪ್ರದೇಶವು ಪಾಕಿಸ್ತಾನದ ಅತ್ಯಂತ ಭದ್ರತಾ ವ್ಯವಸ್ಥೆ ಹೊಂದಿರುವ ಪ್ರದೇಶಗಳಲ್ಲಿ ಒಂದಾಗಿದೆ.
ಇನ್ನೂ ಕೆಲವು ವರದಿಗಳ ಪ್ರಕಾರ, ಕರಾಚಿಯ ಡಿಫೆನ್ಸ್ ಹೌಸಿಂಗ್ ಏರಿಯಾ (DHA) ಹಾಗೂ ಖಯ್ಯುಮಾಬಾದ್ ಪ್ರದೇಶದಲ್ಲಿಯೂ ದಾವೂದ್ ನಿವಾಸ ಹೊಂದಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಭಾರತೀಯ ಗುಪ್ತಚರ ಸಂಸ್ಥೆಗಳಿಗೂ ಇದೇ ರೀತಿಯ ಮಾಹಿತಿ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.
‘ಧುರಂಧರ್ 2’ ಸಿನಿಮಾದಲ್ಲಿ ‘ಬಡೇ ಸಾಬ್’ ಎಂಬ ಪಾತ್ರದ ಮೂಲಕ ದಾವೂದ್ ಇಬ್ರಾಹಿಂನಂತೆ ಕಾಣುವ ಪಾತ್ರವನ್ನು ಚಿತ್ರಿಸಲಾಗಿದೆ. ನೈಜ ಘಟನೆಗಳನ್ನು ಆಧರಿಸಿದ ಕಥಾಹಂದರ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಈ ಪಾತ್ರ ಭಾರೀ ಚರ್ಚೆಗೆ ಕಾರಣವಾಗಿದೆ.
ಆದಾಗ್ಯೂ, ದಾವೂದ್ ಇಬ್ರಾಹಿಂ ನಿಖರವಾಗಿ ಎಲ್ಲಿದ್ದಾನೆ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಆದರೆ ಸಿನಿಮಾ ಮತ್ತು ಗುಪ್ತಚರ ಮಾಹಿತಿಗಳ ಹಿನ್ನೆಲೆ, ದಾವೂದ್ ಕುರಿತ ಚರ್ಚೆ ಮತ್ತೆ ಜಾಗತಿಕ ಮಟ್ಟದಲ್ಲಿ ತೀವ್ರವಾಗಿದೆ
ದೇಶ
ಲಾಸ್ ಏಂಜಲೀಸ್ನಲ್ಲಿ ‘ರಾಮಾಯಣ’ ಟೀಸರ್ ಸದ್ದು: ರಣಬೀರ್ ಲುಕ್ಗೆ ಭಾರೀ ಚಪ್ಪಾಳೆ
-
ದೇಶ13 hours agoಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
-
ಚುನಾವಣೆ23 hours ago“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ
-
ಆರೋಗ್ಯ17 hours agoಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
-
ದೇಶ20 hours agoಪ್ರಚಾರ ವೇಳೆ ಕಾರು ತಡೆದು ಹಲ್ಲೆ: ತರೂರ್ ಬೆಂಗಾವಲು ಮೇಲೆ ದಾಂಧಲೆ
-
ದೇಶ18 hours agoಜಮೀರ್ ಅಹ್ಮದ್ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!
-
ದೇಶ15 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
-
ಚುನಾವಣೆ13 hours agoTN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
-
ದೇಶ15 hours agoಇರಾನ್-ಅಮೆರಿಕಾ ಮಾತುಕತೆ ವಿಫಲ: ಪಾಕಿಸ್ತಾನಕ್ಕೆ ಮುಖಭಂಗ!
