Connect with us

ಚುನಾವಣೆ

ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ

ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ
ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ. ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ಮಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.

ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರೂ, ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸಬೇಕು ಎಂದು ಸೋಮಶೇಖರ್ ಒತ್ತಾಯಿಸಿದ್ದಾರೆ.

ಒಂದು ವೇಳೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಕಣಕ್ಕಿಳಿಸಿದರೆ ಸೋಮಶೇಖರ್ ಅವರನ್ನು ಬೆಂಬಲಿಸುವ ಸಾಧ್ಯತೆ ಕಡಿಮೆಯಿದ್ದು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಚಿಂತನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮ್ಮ ಪುತ್ರ ನಿಶಾಂತ್‌ ಅಭ್ಯರ್ಥಿಯಾಗಬೇಕೆಂದು ಅವರು ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಪುತ್ರನಿಗೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್‌ಗೆ ಕಳುಹಿಸಿ ಕಣಕ್ಕೆ ಇಳಿದಿದ್ದಾರೆ.

ಕೆಲವು ಬಿಜೆಪಿ ನಾಯಕರು ರಾತ್ರಿಯ ಸಮಯದಲ್ಲಿ ಬಂದು  ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ, ನಮ್ಮ ಕ್ಷೇತ್ರದ ಬಗ್ಗೆ ಒಂದು ಮನವಿ ಇತ್ತು ಹಾಗಾಗಿ ಬಂದಿದ್ದೆ. ಕೆಲ ಬಿಜೆಪಿ ಶಾಸಕರು ರಾತ್ರಿ ಬರುತ್ತಾರೆ. ಮತ್ತೊಂದಿಷ್ಟು ಜನ ಮಾಧ್ಯಮದ ಕಣ್ಣು ತಪ್ಪಿಸಿ ಹೋಗುತ್ತಾರೆ. ನಾನು ರಾಜರೋಷವಾಗಿ ಬಂದು ಹೋಗುತ್ತಿದ್ದೇನೆ. ಕೆಲವರ ಹಾಗೆ ಕತ್ತಲಲ್ಲಿ ಬಂದು ಹೋಗಲ್ಲ. ನಾನಿದ್ದಾಗಲೂ ಸಾಕಷ್ಟು ಜನ ಬರುತ್ತಿದ್ದರು. ಆದರೆ ನೀವು ಅವರನ್ನು ಗಮನಿಸುವುದಿಲ್ಲ, ಯಶವಂತಪುರ ಶಾಸಕರನ್ನು ಮಾತ್ರ ಗಮನಿಸುತ್ತೀರಿ ಎಂದು ಪ್ರತಿಕ್ರಿಯಿಸಿದರು.

ಆದರೆ ಅವರ ಭೇಟಿಯ ಬಗ್ಗೆ ಅವರು ಹೆಚ್ಚಿನ ವಿಷಯ ಬಹಿರಂಗಪಡಿಸಲಿಲ್ಲ. ಇತ್ತೀಚೆಗೆ ಅವರು ಮಾಜಿ ಸಚಿವ ಶಿವರಾಮ ಹೆಬ್ಬಾರ್ ಅವರೊಂದಿಗೆ ಇತ್ತೀಚೆಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ ಎಂಎಲ್‌ಸಿ ಹೆಚ್ ವಿಶ್ವನಾಥ್ ಅವರೊಂದಿಗೆ ಕಾಂಗ್ರೆಸ್ ನಾಯಕರ ಔತಣ ಕೂಟದಲ್ಲಿ ಭಾಗಿಯಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವಿಜಯೇಂದ್ರ ಅವರು ಇದನ್ನು ಗಂಭೀರ ವಿಷಯ ಎಂದು ಬಣ್ಣಿಸಿದ್ದು, ಸೋಮಶೇಖರ್ ಮತ್ತು ಹೆಬ್ಬಾರ್ ಅವರಿಂದ ವಿವರಣೆ ಕೇಳಿದ್ದಾರೆ.

ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷದಿಂದ ಉತ್ತರ ಕನ್ನಡ ಲೋಕಸಭಾ ಸ್ಥಾನದ ಆಕಾಂಕ್ಷಿಯಾಗಿದ್ದರು, ಅದಕ್ಕಾಗಿಯೇ ಅವರು ಸೋಮಶೇಖರ್ ಅವರೊಂದಿಗೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದರು. ಇವರಿಬ್ಬರು ಮೂಲತಃ ಕಾಂಗ್ರೆಸ್ ಪಕ್ಷದವರು ಆದರೆ 2019 ರಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಆಪರೇಷನ್ ಕಮಲದ ಕಾರಣ ಪಕ್ಷ ಬದಲಾಯಿಸಿದರು.

ಬಿಜೆಪಿಯ ಹಾಲಿ ಸಂಸದ ಅನಂತಕುಮಾರ ಹೆಗಡೆ ಲೋಕಸಭೆ ಚುನಾವಣೆಯಿಂದ ದೂರ ಉಳಿದರೆ ಬಿಜೆಪಿಗೆ ಪರ್ಯಾಯ ಅಭ್ಯರ್ಥಿ ಹುಡುಕುವುದು ಕಷ್ಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೆಬ್ಬಾರ್‌ ಸದುಪಯೋಗಪಡಿಸಿಕೊಳ್ಳಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಉತ್ತರ ಕನ್ನಡದ ಬಿಜೆಪಿ ನಾಯಕರು ಹಿಂದೂ ಫೈರ್ ಬ್ರ್ಯಾಂಡ್ ಹೆಗ್ಡೆ ಅವರನ್ನು ಮತ್ತೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.

 

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚುನಾವಣೆ

ವಿಜಯ್ ರಾಜಕೀಯ ಪ್ರವೇಶಕ್ಕೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎನ್‌ಡಿಟಿವಿ ಪ್ರಾಫಿಟ್ ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಅವರು, ವಿಜಯ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕಾರಣಕ್ಕೆ ಹೊಸ ತಿರುವು ನೀಡಲಿದೆ ಎಂದು ಅಭಿಪ್ರಾಯಪಟ್ಟರು.

“ದಳಪತಿ ವಿಜಯ್ ಖಂಡಿತವಾಗಿಯೂ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಾರೆ. ಆದರೆ ಅವರು ಯಾವ ಮಟ್ಟಿಗೆ, ಯಾವ ಪಕ್ಷಗಳ ಮತಗಳನ್ನು ಕಸಿದುಕೊಳ್ಳುತ್ತಾರೆ ಎಂಬುದು ಇನ್ನೂ ನೋಡಬೇಕಿದೆ. ವಿಶೇಷವಾಗಿ ಮಹಿಳಾ ಮತಗಳ ಮೇಲೆ ಅವರ ಪ್ರಭಾವ ಎಷ್ಟಿರುತ್ತದೆ ಎಂಬುದೇ ಮುಖ್ಯ ಅಂಶ” ಎಂದು ಸೀತಾರಾಮನ್ ಹೇಳಿದರು. ತಮಿಳುನಾಡು ರಾಜಕೀಯದಲ್ಲಿ ಮಹಿಳೆಯರು ಶಕ್ತಿಶಾಲಿ ಹಾಗೂ ನಿರ್ಧಾರಾತ್ಮಕ ಪಾತ್ರ ವಹಿಸುತ್ತಾರೆ. ಆ ಕಾರಣದಿಂದ ಮುಂದಿನ ಚುನಾವಣೆ ಅತ್ಯಂತ ಆಸಕ್ತಿದಾಯಕವಾಗಲಿದೆ ಎಂದರು.

ಇದೇ ವೇಳೆ, ಆಡಳಿತಾರೂಢ ಡಿಎಂಕೆಗೆ (DMK) ಈ ಬಾರಿ ಎನ್‌ಡಿಎ ಮೈತ್ರಿಕೂಟ (NDA Alliance) ಪ್ರಬಲ ಪೈಪೋಟಿ ನೀಡಲಿದೆ ಎಂದು ಅವರು ಪ್ರತಿಪಾದಿಸಿದರು. “ಬೃಹತ್ ಎನ್‌ಡಿಎ ಒಕ್ಕೂಟವನ್ನು ಎದುರಿಸುತ್ತಿರುವ ಡಿಎಂಕೆ ತನ್ನ ಗೆಲುವಿನ ಬಗ್ಗೆ ಆತ್ಮವಿಶ್ವಾಸದಲ್ಲಿಲ್ಲ. ಕಳೆದ ಒಂದು ವರ್ಷದಲ್ಲಿ ಅವರ ನಡೆ-ನುಡಿಗಳು ಆತಂಕ ಮತ್ತು ಅಸ್ಥಿರತೆಯನ್ನು ತೋರಿಸುತ್ತಿವೆ” ಎಂದು ಟೀಕಿಸಿದರು.

ಡಿಎಂಕೆ ಮಂತ್ರಿಗಳ ವಿವಾದಾತ್ಮಕ ಹೇಳಿಕೆಗಳು, ಉಚಿತ ಕೊಡುಗೆಗಳ ಘೋಷಣೆ, ದೇವಾಲಯ ಬೇಟಿ ಮುಂತಾದ ಕ್ರಮಗಳು ಪಕ್ಷದ ಆತಂಕವನ್ನು ಸ್ಪಷ್ಟಪಡಿಸುತ್ತವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. “ತಮಿಳುನಾಡಿನ ಅಭಿವೃದ್ಧಿ ಬಗ್ಗೆ ಮಾತನಾಡುವುದರಿಂದ ಮಾತ್ರ ಮತಗಳನ್ನು ಗಳಿಸಲು ಸಾಧ್ಯವಿಲ್ಲ. ಇದು ಡಿಎಂಕೆಯ ಪ್ರಮುಖ ಮಿತಿ. ಈ ಸತ್ಯವನ್ನು ಡಿಎಂಕೆಯೂ ಅರಿತಿದೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ದಳಪತಿ ವಿಜಯ್ ರಾಜಕೀಯ ಪ್ರವೇಶ, ಮಹಿಳಾ ಮತಗಳ ಪಾತ್ರ ಮತ್ತು ಎನ್‌ಡಿಎ–ಡಿಎಂಕೆ ನಡುವಿನ ಪೈಪೋಟಿ ತಮಿಳುನಾಡು ಚುನಾವಣೆಯನ್ನು ಮತ್ತಷ್ಟು ಕುತೂಹಲಕಾರಿಯಾಗಿಸುತ್ತಿದೆ.

Continue Reading

ಚುನಾವಣೆ

BENGALURU ಜಿಬಿಎ ಚುನಾವಣೆ ಮುನ್ನ ಶಿವನಪಾಳ್ಯ ವಾರ್ಡ್‌ನಲ್ಲಿ ಮತಗಟ್ಟೆ ಗೊಂದಲ

ಬೆಂಗಳೂರು, ಫೆಬ್ರವರಿ 7, 2026: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್ (ಸಂಖ್ಯೆ 19) ವ್ಯಾಪ್ತಿಯಲ್ಲಿ ಮತಗಟ್ಟೆಗಳ ವಿಂಗಡಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಬಿಎ ಚುನಾವಣೆ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಸಿ.ಎಂ. ಸತ್ಯನಾರಾಯಣ್ (CMC) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಗಟ್ಟೆಗಳ ಪಟ್ಟಿಯಲ್ಲಿ ಗಂಭೀರ ತಪ್ಪುಗಳಿರುವುದನ್ನು ಉಲ್ಲೇಖಿಸಿ, ಬಿಜೆಪಿಯ ಬಿಎಲ್‍ಎ1 ದೀಪಕ್ ಕುಮಾರ್ ಅವರ ಮೂಲಕ ಕಂದಾಯ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, ಸ್ಥಳ ಪರಿಶೀಲನೆ ನಡೆಸದೇ ಮತಗಟ್ಟೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿರುವುದೇ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.

ದೂರು ಪ್ರಕಾರ, ಲಿಂಗಾಯತರ ಬೀದಿ, ಅಂಗಡಿ ಬೀದಿ, ಹಸಿ ಕರಗ ಮಂಟಪ ಹಾಗೂ ಹರ್ಷ ಲೇಔಟ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 21 ರಿಂದ 31 ರವರೆಗಿನ ಪ್ರದೇಶಗಳು ವಾಸ್ತವವಾಗಿ ಕೆಂಗೇರಿ ವಾರ್ಡ್‌ಗೆ ಸೇರಬೇಕಿದ್ದರೂ, ತಪ್ಪಾಗಿ ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ. ಇದೇ ರೀತಿ, ಬಾಬಾ ಸಾಬ್ ಪಾಳ್ಯ ಗ್ರಾಮಕ್ಕೆ ಸೇರಿದ ಮತಗಟ್ಟೆ ಸಂಖ್ಯೆ 32 ಮತ್ತು 33 ಕೂಡ ಶಿವನಪಾಳ್ಯ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಇದಲ್ಲದೆ, ಬಂಡೆ ಮಠ ರಸ್ತೆಯ ಮತಗಟ್ಟೆ ಸಂಖ್ಯೆ 34 ಮತ್ತು 35 ಕೆಂಗಲ್ ಹನುಮಂತಯ್ಯ ವಾರ್ಡ್‌ಗೆ (ವಾರ್ಡ್ 18) ಸೇರಬೇಕಿದ್ದರೂ, ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮತಗಟ್ಟೆ ಸಂಖ್ಯೆ 19ರ ಮಾಹಿತಿ ಲಭ್ಯವಿಲ್ಲದಿರುವುದು ಮತದಾರರಲ್ಲಿ ಗೊಂದಲ ಮತ್ತು ಆತಂಕವನ್ನು ಹೆಚ್ಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಿ.ಎಂ. ಸತ್ಯನಾರಾಯಣ್, “ಕ್ಷೇತ್ರ ಸಮೀಕ್ಷೆ ಇಲ್ಲದೆ ಮತದಾರರ ಪಟ್ಟಿ ಸಿದ್ಧಪಡಿಸಿರುವುದು ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಧಕ್ಕೆ ತರುತ್ತದೆ. ಕೂಡಲೇ ತಪ್ಪುಗಳನ್ನು ಸರಿಪಡಿಸಿ, ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಮತಗಟ್ಟೆ ಮರುಹಂಚಿಕೆ ಮಾಡಬೇಕು,” ಎಂದು ಆಗ್ರಹಿಸಿದರು. ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

Continue Reading

Trending