ಚುನಾವಣೆ
ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ. ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ಮಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.
ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರೂ, ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸಬೇಕು ಎಂದು ಸೋಮಶೇಖರ್ ಒತ್ತಾಯಿಸಿದ್ದಾರೆ.
ಒಂದು ವೇಳೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಕಣಕ್ಕಿಳಿಸಿದರೆ ಸೋಮಶೇಖರ್ ಅವರನ್ನು ಬೆಂಬಲಿಸುವ ಸಾಧ್ಯತೆ ಕಡಿಮೆಯಿದ್ದು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಚಿಂತನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮ್ಮ ಪುತ್ರ ನಿಶಾಂತ್ ಅಭ್ಯರ್ಥಿಯಾಗಬೇಕೆಂದು ಅವರು ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಪುತ್ರನಿಗೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್ಗೆ ಕಳುಹಿಸಿ ಕಣಕ್ಕೆ ಇಳಿದಿದ್ದಾರೆ.
ಕೆಲವು ಬಿಜೆಪಿ ನಾಯಕರು ರಾತ್ರಿಯ ಸಮಯದಲ್ಲಿ ಬಂದು ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ, ನಮ್ಮ ಕ್ಷೇತ್ರದ ಬಗ್ಗೆ ಒಂದು ಮನವಿ ಇತ್ತು ಹಾಗಾಗಿ ಬಂದಿದ್ದೆ. ಕೆಲ ಬಿಜೆಪಿ ಶಾಸಕರು ರಾತ್ರಿ ಬರುತ್ತಾರೆ. ಮತ್ತೊಂದಿಷ್ಟು ಜನ ಮಾಧ್ಯಮದ ಕಣ್ಣು ತಪ್ಪಿಸಿ ಹೋಗುತ್ತಾರೆ. ನಾನು ರಾಜರೋಷವಾಗಿ ಬಂದು ಹೋಗುತ್ತಿದ್ದೇನೆ. ಕೆಲವರ ಹಾಗೆ ಕತ್ತಲಲ್ಲಿ ಬಂದು ಹೋಗಲ್ಲ. ನಾನಿದ್ದಾಗಲೂ ಸಾಕಷ್ಟು ಜನ ಬರುತ್ತಿದ್ದರು. ಆದರೆ ನೀವು ಅವರನ್ನು ಗಮನಿಸುವುದಿಲ್ಲ, ಯಶವಂತಪುರ ಶಾಸಕರನ್ನು ಮಾತ್ರ ಗಮನಿಸುತ್ತೀರಿ ಎಂದು ಪ್ರತಿಕ್ರಿಯಿಸಿದರು.
ಆದರೆ ಅವರ ಭೇಟಿಯ ಬಗ್ಗೆ ಅವರು ಹೆಚ್ಚಿನ ವಿಷಯ ಬಹಿರಂಗಪಡಿಸಲಿಲ್ಲ. ಇತ್ತೀಚೆಗೆ ಅವರು ಮಾಜಿ ಸಚಿವ ಶಿವರಾಮ ಹೆಬ್ಬಾರ್ ಅವರೊಂದಿಗೆ ಇತ್ತೀಚೆಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯ ನಂತರ ಎಂಎಲ್ಸಿ ಹೆಚ್ ವಿಶ್ವನಾಥ್ ಅವರೊಂದಿಗೆ ಕಾಂಗ್ರೆಸ್ ನಾಯಕರ ಔತಣ ಕೂಟದಲ್ಲಿ ಭಾಗಿಯಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವಿಜಯೇಂದ್ರ ಅವರು ಇದನ್ನು ಗಂಭೀರ ವಿಷಯ ಎಂದು ಬಣ್ಣಿಸಿದ್ದು, ಸೋಮಶೇಖರ್ ಮತ್ತು ಹೆಬ್ಬಾರ್ ಅವರಿಂದ ವಿವರಣೆ ಕೇಳಿದ್ದಾರೆ.
ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷದಿಂದ ಉತ್ತರ ಕನ್ನಡ ಲೋಕಸಭಾ ಸ್ಥಾನದ ಆಕಾಂಕ್ಷಿಯಾಗಿದ್ದರು, ಅದಕ್ಕಾಗಿಯೇ ಅವರು ಸೋಮಶೇಖರ್ ಅವರೊಂದಿಗೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದರು. ಇವರಿಬ್ಬರು ಮೂಲತಃ ಕಾಂಗ್ರೆಸ್ ಪಕ್ಷದವರು ಆದರೆ 2019 ರಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಆಪರೇಷನ್ ಕಮಲದ ಕಾರಣ ಪಕ್ಷ ಬದಲಾಯಿಸಿದರು.
ಬಿಜೆಪಿಯ ಹಾಲಿ ಸಂಸದ ಅನಂತಕುಮಾರ ಹೆಗಡೆ ಲೋಕಸಭೆ ಚುನಾವಣೆಯಿಂದ ದೂರ ಉಳಿದರೆ ಬಿಜೆಪಿಗೆ ಪರ್ಯಾಯ ಅಭ್ಯರ್ಥಿ ಹುಡುಕುವುದು ಕಷ್ಟ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಬ್ಬಾರ್ ಸದುಪಯೋಗಪಡಿಸಿಕೊಳ್ಳಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಉತ್ತರ ಕನ್ನಡದ ಬಿಜೆಪಿ ನಾಯಕರು ಹಿಂದೂ ಫೈರ್ ಬ್ರ್ಯಾಂಡ್ ಹೆಗ್ಡೆ ಅವರನ್ನು ಮತ್ತೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.
ಚುನಾವಣೆ
Bhabanipur Shock: 700 ಮತದಾರರ ಬೂತ್ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್ಗಳ ಪೈಕಿ 207 ಬೂತ್ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
ಚುನಾವಣೆ
ಜಿಬಿಎ ಚುನಾವಣೆಗೆ ಕೌಂಟ್ಡೌನ್ ಶುರು! ಜೂನ್ನಲ್ಲಿ ಡೇಟ್ ಫಿಕ್ಸ್
ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.
ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.
ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚುನಾವಣೆ
‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಗುರುವಾರ ಕಾಲಿಘಾಟ್ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.
ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.
ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
-
ಕ್ರೀಡೆ7 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ11 hours ago59 ವರ್ಷಗಳ ಬಳಿಕ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್ ಎಂಟ್ರಿ! ಇಂದು ವಿಜಯ್ ಕ್ಯಾಬಿನೆಟ್ ವಿಸ್ತರಣೆ
-
ದೇಶ10 hours agoಬಿಜೆಪಿಗಿಂತ ವೇಗವಾಗಿ ಬೆಳೆದ ‘Cockroach Janta Party’!
-
ದೇಶ5 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ5 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ಅಪರಾಧ9 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
-
ದೇಶ9 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ9 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
