ರಾಜ್ಯ
ಗೀತಾ ಜಯಂತಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕು ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
ಮಂಗಳೂರು: ಎಲ್ಲ ಮಕ್ಕಳಿಗೆ ಗೀತೆಯ ಆರಾಧನೆ ಮಾಡಲು ಅವಕಾಶ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಗೀತಾ ಜಯಂತಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಉಡುಪಿ ಭಾವಿ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶಿಸಿದ್ದಾರೆ.
ಮಂಗಳೂರು ಕದ್ರಿ ಕಂಬಳದ ಮಂಜು ಪ್ರಾಸಾದ ನಿವಾಸದಲ್ಲಿ ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರಿಂದ ಗುರುವಂದನಾ ಮತ್ತು ಪಟ್ಟದ ದೇವರ ತುಲಾಭಾರಕ್ಕೆ ಮುನ್ನ ಪುತ್ತಿಗೆಶ್ರೀಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಮ್ಮ ಪರ್ಯಾಯ ಅವಧಿ ಜ.೧೮ರಿಂದ ಆರಂಭವಾಗಲಿದೆ. ಅಂದಿನಿಂದ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯವನ್ನು ನಿರಾತಂಕವಾಗಿ ನೆರವೇರಿಸಲಾಗುವುದು. ಈ ಅವಧಿಯಲ್ಲಿ ಈಗಾಗಲೇ ಆರಂಭಿಸಿರುವ ಕೋಟಿ ಗೀತಾ ಲೇಖನ ಯಜ್ಞವನ್ನು ಸಮಾಪ್ತಿಗೊಳಿಸಲಾಗುವುದು. ಸುಮಾರು ಒಂದು ಕೋಟಿ ಜ ನತೆ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ತಾವು ಬರೆದ ಭಗವದ್ಗೀತೆ ಶ್ಲೋಕವನ್ನು ಶ್ರೀಕೃಷ್ಣನಿಗೆ ಅರ್ಪಿಸಬೇಕು. ಬಳಿಕ ಅದನ್ನೇ ಪ್ರಸಾದ ರೂಪದಲ್ಲಿ ನೀಡಲಾಗುವುದು. ಆ ಗೀತಾ ಲೇಖನ ಪುಸ್ತಕವನ್ನು ಮನೆಯ ಪೂಜಾ ಮಂದಿರದಲ್ಲಿ ಇರಿಸಿ ನಿತ್ಯವೂ ಶ್ಲೋಕ ಪಠಣ ಮೂಲಕ ಅರ್ಚಿಸಬೇಕು. ಪ್ರತಿ ಕುಟುಂಬವೂ ಭಗವದ್ಗೀತಾ ಯಜ್ಞದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪುತ್ತಿಗೆಶ್ರೀ ಹೇಳಿದರು.
ಪರ್ಯಾಯ ವೇಳೆ ಐದು ಯೋಜನೆ ಜಾರಿ:
ಈ ಬಾರಿ ನಮ್ಮದು ನಾಲ್ಕನೇ ಪರ್ಯಾಯವಾಗಿದ್ದು, ಇದನ್ನು ವಿಶ್ವ ಗೀತಾ ಪರ್ಯಾಯ ಎಂದು ಕರೆಯುತ್ತೇವೆ. ಈ ಪರ್ಯಾಯದಲ್ಲಿ ಭಗವದ್ಗೀತೆ ಬಗ್ಗೆ ಅರ್ಥಪೂರ್ಣ ಜಾಗೃತಿ ಮೂಡಿಸಲಾಗುವುದು. ಉಡುಪಿ ಕೃಷ್ಣ ಮಠದ ಗೀತಾ ಮಂದಿರದಲ್ಲಿ ಅಖಂಡ ಗೀತಾ ಪಾರಾಯಣ ನಡೆಸಿ ಕೃಷ್ಣನಿಗೆ ಅರ್ಪಿಸಲಾಗುವುದು. ೭೦೦ ಶ್ಲೋಕಗಳಿಂದ ಭಗವಗ್ದೀತಾ ಮಹಾಯಾಗ ನಡೆಸಲಾಗುವುದು. ಅಂತಾರಾಷ್ಟ್ರೀಯ ಗೀತಾ ಸಮ್ಮೇಳನ ಆಯೋಜಿಸಲಾಗುವುದು. ಸನ್ಯಾಸ ಸ್ವೀಕರಿಸಿ ೫೦ ವರ್ಷ ಸಲ್ಲುವ ಹಿನ್ನೆಲೆಯಲ್ಲಿ ಶ್ರೀಕೃಷ್ಣನಿಗೆ ಬಂಗಾರದ ರಥ ಸಮರ್ಪಿಸಲಾಗುವುದು. ಈ ರಥವನ್ನು ಶ್ರೀಕೃಷ್ಣನ ಗರ್ಭಗುಡಿಯ ಸುತ್ತಲೂ ಎಳೆಯಲು ಅವಕಾಶ ಇದೆ. ಮಳೆ ಬಂದರೂ ರಥೋತ್ಸವಕ್ಕೆ ತೊಂದರೆಯಾಗದು. ಯಾತ್ರಿಗಳ ಅನುಕೂಲಕ್ಕೆ ಉಡುಪಿಯಲ್ಲಿ ೧೦೮ ಕೊಠಡಿಗಳ ಅಷ್ಟೋತ್ತರ ಭವನ ನಿರ್ಮಿಸಲು ಸಂಕಲ್ಪಿಸಲಾಗಿದೆ ಎಂದರು.
ವಿದೇಶಗಳಲ್ಲೂ ಪುತ್ತಿಗೆ ಮಠ ಶಾಖೆ:
ದೇಶ, ವಿದೇಶ ಸೇರಿದಂತೆ ಒಟ್ಟು ೧೫ ಕಡೆಗಳಲ್ಲಿ ಪುತ್ತಿಗೆ ಮಠದ ಶಾಖೆ ಇದೆ. ಇದನ್ನು ೧೦೮ ಕಡೆಗಳಿಗೆ ವಿಸ್ತರಿಸಲು ಯೋಚನೆ ಮಾಡಲಾಗಿದೆ. ನಾವು ೨೮ ದೇಶಗಳಲ್ಲಿ ಸಂಚಾರ ಮಾಡಿದ್ದು, ಪ್ರಮುಖ ೬೦ ನಗರಗಳ ಪೈಕಿ ೧೧ ನಗರಗಳಲ್ಲಿ ಶಾಖೆ ಇದೆ. ವಿದ್ಯಾಪೀಠಗಳನ್ನು ತೆರೆದು ಅಲ್ಲಿ ಭಗವದ್ಗೀತೆ ಪ್ರಸಾರಕ್ಕೆ ಯೋಜನೆ ರೂಪಿಸಲಾಗುವುದು. ವಿಶ್ವವಿದ್ಯಾಲಯಗಳಲ್ಲಿ ಸಂವಾದ, ಪ್ರವಚನ ಮೂಲಕ ಗೀತೆ ಪ್ರಸಾರ ಮಾಡಲಾಗುತ್ತದೆ ಎಂದರು.
ಮಂಗಳೂರಲ್ಲಿ ವಿಶ್ವಸಂಚಾರ ಸಮಾಪ್ತಿ:
ಪರ್ಯಾಯ ಪೀಠಾರೋಹಣ ಪೂರ್ವಭಾವಿಯಾಗಿ ಕಳೆದ ಎರಡು ವರ್ಷಗಳಿಂದ ನಾವು ವಿಶ್ವ ಸಂಚಾರ ಕೈಗೊಳ್ಳಲಾಗಿದೆ. ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾ, ಗಲ್ಫ್ ರಾಷ್ಟ್ರ, ಉತ್ತರ ಹಾಗೂ ದಕ್ಷಿಣ ಭಾರತದ ತೀರ್ಥ ಕ್ಷೇತ್ರಗಳನ್ನು ಸಂಚರಿಸಿ ಶನಿವಾರ ಮಂಗಳೂರಿನಲ್ಲಿ ವಿಶ್ವ ಸಂಚಾರಕ್ಕೆ ಮಂಗಳ ಹಾಡಲಾಗಿದೆ. ಜ.೭ರಂದು ಮಂಗಳೂರಲ್ಲಿ ಪೌರ ಸನ್ಮಾನ ಸ್ವೀಕರಿಸಿ, ಅಲ್ಲಿಂದ ಜ.೮ರಂದು ಉಡುಪಿ ಪುರಪ್ರವೇಶ ಮಾಡಲಾಗುವುದು. ಬಳಿಕ ಪರ್ಯಾಯ ಮಹೋತ್ಸವದ ವಿಧಿವತ್ತಾದ ಕಾರ್ಯಕ್ರಮಗಳು ಆರಂಭವಾಗಲಿದೆ ಎಂದು ಪುತ್ತಿಗೆಶ್ರೀ ಹೇಳಿದರು.
ಪರ್ಯಾಯಕ್ಕೆ ವಿದೇಶಿ ಗಣ್ಯರು:
ಜ.೧೭ರಂದು ನಡೆಯುವ ಪುತ್ತಿಗೆ ಪರ್ಯಾಯದಲ್ಲಿ ಪಾಲ್ಗೊಳ್ಳಲು ವಿದೇಶಿಯರಿಗೂ ಆಹ್ವಾನ ನೀಡಲಾಗಿದೆ. ನಾವು ವಿದೇಶಿ ಸಂಚಾರ ವೇಳೆ ಜಾಗತಿಕ ವಿಶ್ವಶಾಂತಿ ಸಂಘಟ ನೆಗೆ ಮೂರು ಬಾರಿ ಅಧ್ಯಕ್ಷರಾಗಿದ್ದು, ಪ್ಯಾರಿಸ್ ಒಪ್ಪಂದಕ್ಕೆ ರಷ್ಯಾ ಅಧ್ಯಕ್ಷ ಪುತಿನ್, ಪೋಪ್ ಜತೆ ಸಹಿ ಹಾಕಲಾಗಿದೆ. ಹೀಗೆ ವಿದೇಶಗಳಲ್ಲಿ ಗೀತೆ ಪ್ರಸಾರಕ್ಕೆ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಈ ಎಲ್ಲ ಕಾರಣಕ್ಕೆ ವಿದೇಶಿ ಗಣ್ಯರು ಕೂಡ ನಮ್ಮ ಪೀಠಾರೋಹಣಕ್ಕೆ ಸಾಕ್ಷಿಯಾಗಲಿದ್ದಾರೆ. ನಮ್ಮದು ಸಾವಯವ, ಹಸಿರು ಪರ್ಯಾಯ ಎಂದರು.
ಕಲ್ರೂಪ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಪ್ರೊ.ಎಂ.ಬಿ.ಪುರಾಣಿಕ್, ಪುತ್ತಿಗೆ ಮಠದ ಅಂತಾರಾಷ್ಟ್ರೀಯ ದಿವಾನ ಪ್ರಸನ್ನ ಇದ್ದರು.
ದೇಶ
ಬೆಂಗಳೂರು ಬಿಸಿ ಏರಿಕೆ: 38 ಡಿಗ್ರಿ ತಲುಪುವ ಸಾಧ್ಯತೆ
ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ Bengaluru ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ ಏರಿಕೆ ಕಂಡುಬರುತ್ತಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಬಿಸಿಲಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು India Meteorological Department (IMD) ಎಚ್ಚರಿಕೆ ನೀಡಿದೆ.
ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸನಿಹ ತಲುಪಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಸದ್ಯ ತಾಪಮಾನ 35 ಡಿಗ್ರಿ ಸುತ್ತಮುತ್ತ ದಾಖಲಾಗುತ್ತಿದ್ದು, ಮುಂದಿನ ಐದು ದಿನಗಳಲ್ಲಿ 37 ರಿಂದ 38 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ತೀವ್ರ ಬಿಸಿಲು ಇರುವುದರಿಂದ ಅನಗತ್ಯ ಹೊರಗಡೆ ಓಡಾಟವನ್ನು ತಪ್ಪಿಸಿ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಸೂಚಿಸಲಾಗಿದೆ.
ಇನ್ನೂ ಉತ್ತರ ಒಳನಾಡಿನ ಬೀದರ್, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತಾಪಮಾನ 42 ರಿಂದ 44 ಡಿಗ್ರಿವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ 2 ಡಿಗ್ರಿ ಏರಿಕೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲೂ 2 ರಿಂದ 3 ಡಿಗ್ರಿವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು IMD ತಿಳಿಸಿದೆ.
ದೇಶ
ಅಲದಾಳ ಸಭೆ: ದಡ್ಡಿ ಗ್ರಾಮದ ಸಮಸ್ಯೆ ಫೋಕಸ್‌ನಲ್ಲಿ
ಅಲದಾಳ: ಸಮೀಪದ ಗೆಸ್ಟ್‌ಹೌಸ್‌ನಲ್ಲಿ ಸಚಿವ Satish Jarkiholi ಭಾನುವಾರ ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು. ವಿವಿಧ ಗ್ರಾಮಗಳಿಂದ ಬಂದ ನಾಗರಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಚಿವರಿಗೆ ತಿಳಿಸಿದರು.
ದಡ್ಡಿ ಗ್ರಾಮದ ಮುಸ್ಲಿಂ ಗಲ್ಲಿಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ಚರಂಡಿ ಸಮಸ್ಯೆ ಕುರಿತು ಸ್ಥಳೀಯರು ಗಂಭೀರ ಆತಂಕ ವ್ಯಕ್ತಪಡಿಸಿದರು. ಸಮರ್ಪಕ ಒಳಚರಂಡಿ ವ್ಯವಸ್ಥೆಯ ಕೊರತೆಯಿಂದ ಪ್ರತಿ ವರ್ಷ ಮಳೆ ನೀರು ಮನೆಗಳಿಗೆ ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ವಿವರಿಸಿದರು.
ಈ ಸಮಸ್ಯೆಯಿಂದಾಗಿ ನಿವಾಸಿಗಳಿಗೆ ವಾಸಿಸಲು ಅನಾನುಕೂಲಕರ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಮನವಿ ಮಾಡಿದರು.
ಸಮಸ್ಯೆಯ ತೀವ್ರತೆಯನ್ನು ಅರಿತ ಸಚಿವ ಸತೀಶ ಜಾರಕಿಹೊಳಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಬಗ್ಗೆ ತಹಶೀಲ್ದಾರ್ ಜೊತೆ ಚರ್ಚೆ ನಡೆಸಿ ಶಾಶ್ವತ ಪರಿಹಾರ ಕಂಡುಹಿಡಿಯಲು ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ದಯಾನಂದ ಪಾಟೀಲ, ಸಂಜು ಮಡಲಗಿ, ವಿಲಾಸ ನಾರ್ವೆಕರ್, ದತ್ತಾ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಮೂಲಕ ಸರ್ಕಾರ ಜನರ ಬಳಿ ಬರುತ್ತಿದೆ ಎಂಬ ಸಂದೇಶ ನೀಡಲಾಯಿತು.
ದೇಶ
ಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿದ್ದ Abdul Jabbar ಅವರ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ D. K. Shivakumar ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಜಬ್ಬಾರ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದಲೇ ವಿಸರ್ಜಿಸಲಾಗಿದೆ ಎಂದು ಶಿವಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೊಸ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ತೀವ್ರಗೊಂಡಿದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಚುನಾವಣೆಯ ನಂತರವೂ ಮುಂದುವರಿದಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಬಂಡಾಯ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಘಟಕದ ಮೇಲೂ ಪರಿಣಾಮ ಬೀರಿದೆ.
ಶನಿವಾರವೇ ಅಬ್ದುಲ್ ಜಬ್ಬಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ ಇನ್ನಷ್ಟೇ ಬಾಕಿ ಇದ್ದರೂ, ಕಾಂಗ್ರೆಸ್‌ನಲ್ಲಿ ಉಂಟಾದ ಒಳಜಗಳ ಪಕ್ಷಕ್ಕೆ ತಲೆನೋವಾಗುವ ಸಾಧ್ಯತೆ ಇದೆ. ಹೊಸ ಸಮಿತಿಯ ರಚನೆ ಮೂಲಕ ಅಸಮಾಧಾನ ಶಮನಗೊಳಿಸಲು ನಾಯಕತ್ವ ಮುಂದಾಗಿದೆ.
-
ದೇಶ19 hours agoಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!
-
ದೇಶ20 hours agoಸೌದಿ ರಕ್ಷಣೆಗೆ ಪಾಕ್ ಸೇನೆ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಹೆಚ್ಚಳ
-
ಚುನಾವಣೆ20 hours agoದಾವಣಗೆರೆ ಟಿಕೆಟ್ ವಿವಾದ: ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೇ?
-
ದೇಶ19 hours agoAmarnath Yatra 2026: ಬಾಬಾ ಬರ್ಫಾನಿ ದರ್ಶನಕ್ಕೆ ಸಜ್ಜಾಗಿ: ಅಮರನಾಥ ಯಾತ್ರೆ ಸಂಪೂರ್ಣ ಮಾಹಿತಿ
-
ಚುನಾವಣೆ2 hours agoಸೈಕಲ್ ರೈಡ್ ವೇಳೆ ಶಾಕ್: ಬಾಂಬ್ ಅನ್ನಿಸಿ ಓಡಿದ ದಳಪತಿ ವಿಜಯ್
-
ದೇಶ3 hours agoಅಲದಾಳ ಸಭೆ: ದಡ್ಡಿ ಗ್ರಾಮದ ಸಮಸ್ಯೆ ಫೋಕಸ್‌ನಲ್ಲಿ
-
ದೇಶ20 hours ago8 ದಶಕಗಳ ಗಾನಯಾನ ಅಂತ್ಯ: ಆಶಾ ಭೋಸ್ಲೆ ಇನ್ನು ಇಲ್ಲ
-
ಕ್ರೀಡೆ2 hours agoIPL 2026: ಮುಂಬೈ ಇಂಡಿಯನ್ಸ್ ಸಂಕಷ್ಟದಲ್ಲಿ! ಹಾರ್ದಿಕ್ ಪಾಂಡ್ಯ ಆತ್ಮಾವಲೋಕನದ ಮಾತು
