Connect with us

ಬೆಂಗಳೂರು

ಬಿಬಿಎಂಪಿ ಮತದಾರರ ಪರಿಷ್ಕರಣೆ ಪಟ್ಟಿ ಪ್ರಕಟ.

Published

on

ಬಿಬಿಎಂಪಿ ಮತದಾರರ ಪರಿಷ್ಕರಣೆ ಪಟ್ಟಿ ಪ್ರಕಟ.

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತದಾರರ ಪರಿಷ್ಕರಣೆ ಪಟ್ಟಿಯನ್ನು ಪ್ರಕಟಿಸಿದೆ. ಪರಿಷ್ಕೃತ ಮತದಾರರ ಪಟ್ಟಿಯ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ. ಈ ಪೈಕಿ 50,78,525 ಪುರುಷ ಮತದಾರರು ಇದ್ದರೆ, 47,63,268 ಮಹಿಳಾ ಮತದಾರರು ಇದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮತ್ತು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿ ನಾಥ್ ಮಾಹಿತಿ ನೀಡಿದ್ದಾರೆ.ಇನ್ನು ಲೋಕಸಭಾ ಕ್ಷೇತ್ರವಾರು ಮತದಾರರ ಅಂಕಿಸಂಖ್ಯೆಯನ್ನು ನೋಡುವುದಾದರೆ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ 18,09,372 ಮತದಾರರು ಇದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರ- 22,18,437, ಬೆಂಗಳೂರು ದಕ್ಷಿಣ-20,56,109, ಬೆಂಗಳೂರು ನಗರ-ಬೆಂಗಳೂರು ನಗರ ಲೋಕಸಭಾ ಕ್ಷೇತ್ರದಲ್ಲಿ 37,19,723 ಮತದಾರರಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ಒಟ್ಟು ನಾಲ್ಕು ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಮತದಾರರು ಇದ್ದಾರೆ. ಇನ್ನು ಬೆಂಗಳೂರು ಕೇಂದ್ರ ಕ್ಷೇತ್ರ ಕಡಿಮೆ ಮತದಾರರನ್ನು ಹೊಂದಿದೆ.

ಮೇಲೆ ತಿಳಿಸಿದ ಮತದಾರರನ್ನು 2024, ಜನವರಿ 1ರ ವರೆಗೆ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಎಲ್ಲಾ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರ ಸಲಹೆಗಳನ್ನು ಸ್ವೀಕರಿಸಿದ ನಂತರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಬಿಬಿಎಂಪಿ ಕಳೆದ ವರ್ಷ ಅಕ್ಟೋಬರ್ 27 ರಂದು ಕರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು, ಅದರಲ್ಲಿ 97,90,499 ಮತದಾರರು ಇದ್ದರು. ಇದೀಗ ಹೊಸದಾಗಿ 53,000ಕ್ಕೂ ಹೆಚ್ಚು ಮತದಾರರು ಹೆಚ್ಚಳವಾಗಿದ್ದಾರೆ. ಇನ್ನು ಇದೀಗ ಪ್ರಕಟಿಸಲಾಗಿರುವ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದವರು ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್ ಮೂಲಕ ತಮ್ಮ ಹೆಸರನ್ನು ಪಟ್ಟಿಗೆ ಸೇರಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶ

ಬೆಂಗಳೂರು ಬಿಸಿ ಏರಿಕೆ: 38 ಡಿಗ್ರಿ ತಲುಪುವ ಸಾಧ್ಯತೆ

Published

on

By

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ Bengaluru ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ ಏರಿಕೆ ಕಂಡುಬರುತ್ತಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಬಿಸಿಲಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು India Meteorological Department (IMD) ಎಚ್ಚರಿಕೆ ನೀಡಿದೆ.

ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸನಿಹ ತಲುಪಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಸದ್ಯ ತಾಪಮಾನ 35 ಡಿಗ್ರಿ ಸುತ್ತಮುತ್ತ ದಾಖಲಾಗುತ್ತಿದ್ದು, ಮುಂದಿನ ಐದು ದಿನಗಳಲ್ಲಿ 37 ರಿಂದ 38 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ತೀವ್ರ ಬಿಸಿಲು ಇರುವುದರಿಂದ ಅನಗತ್ಯ ಹೊರಗಡೆ ಓಡಾಟವನ್ನು ತಪ್ಪಿಸಿ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಸೂಚಿಸಲಾಗಿದೆ.

ಇನ್ನೂ ಉತ್ತರ ಒಳನಾಡಿನ ಬೀದರ್, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತಾಪಮಾನ 42 ರಿಂದ 44 ಡಿಗ್ರಿವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ 2 ಡಿಗ್ರಿ ಏರಿಕೆ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲೂ 2 ರಿಂದ 3 ಡಿಗ್ರಿವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು IMD ತಿಳಿಸಿದೆ.

Continue Reading

ದೇಶ

ಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!

Published

on

By

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿದ್ದ Abdul Jabbar ಅವರ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ D. K. Shivakumar ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.

ಜಬ್ಬಾರ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದಲೇ ವಿಸರ್ಜಿಸಲಾಗಿದೆ ಎಂದು ಶಿವಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೊಸ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ತೀವ್ರಗೊಂಡಿದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಚುನಾವಣೆಯ ನಂತರವೂ ಮುಂದುವರಿದಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಬಂಡಾಯ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಘಟಕದ ಮೇಲೂ ಪರಿಣಾಮ ಬೀರಿದೆ.

ಶನಿವಾರವೇ ಅಬ್ದುಲ್ ಜಬ್ಬಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ ಇನ್ನಷ್ಟೇ ಬಾಕಿ ಇದ್ದರೂ, ಕಾಂಗ್ರೆಸ್‌ನಲ್ಲಿ ಉಂಟಾದ ಒಳಜಗಳ ಪಕ್ಷಕ್ಕೆ ತಲೆನೋವಾಗುವ ಸಾಧ್ಯತೆ ಇದೆ. ಹೊಸ ಸಮಿತಿಯ ರಚನೆ ಮೂಲಕ ಅಸಮಾಧಾನ ಶಮನಗೊಳಿಸಲು ನಾಯಕತ್ವ ಮುಂದಾಗಿದೆ.

Continue Reading

ದೇಶ

ಬೆಂಗಳೂರು ಜೀವನ ವೆಚ್ಚಕ್ಕೆ ಸವಾಲು: ಮಹಿಳೆಯ ಬಜೆಟ್ ಟ್ರಾವೆಲ್ ಸ್ಟೋರಿ

Published

on

By

ಬೆಂಗಳೂರು: ಐಷಾರಾಮಿ ಜೀವನಶೈಲಿ ಮತ್ತು ಹೆಚ್ಚುತ್ತಿರುವ ವೆಚ್ಚಗಳಿಗೆ ಹೆಸರಾದ Bengaluru ನಗರದಲ್ಲಿ ಕೇವಲ 500 ರೂ.ಗಳಲ್ಲಿ ದಿನ ಕಳೆಯಲು ಸಾಧ್ಯವೇ ಎಂಬ ಪ್ರಶ್ನೆಗೆ ಯುವತಿ ನೀಡಿದ ಉತ್ತರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಶ್ಚಿಮ ಬಂಗಾಳ ಮೂಲದ ಪ್ರಿಯಾಂಕಾ ಮಂಡಲ್ ಎಂಬ ಮಹಿಳೆ, ಸೀಮಿತ ಬಜೆಟ್‌ನಲ್ಲಿ ನಗರ ಜೀವನ ಹೇಗಿರುತ್ತದೆ ಎಂಬುದನ್ನು ಪರೀಕ್ಷಿಸಲು ಮುಂದಾಗಿದ್ದರು. ದಿನವನ್ನು ಇಡ್ಲಿ ಉಪಹಾರದಿಂದ ಆರಂಭಿಸಿದ ಅವರು, ಕ್ಯಾಬ್ ಬದಲು ಮೆಟ್ರೋ ಪ್ರಯಾಣವನ್ನು ಆಯ್ಕೆ ಮಾಡಿಕೊಂಡರು. ಇದರಿಂದ ಖರ್ಚನ್ನು ಕಡಿಮೆ ಮಾಡಲು ಸಹಾಯವಾಯಿತು.

ಹಗಲಿನಲ್ಲಿ ಚಹಾ ತೆಗೆದುಕೊಂಡು ಸಣ್ಣ ವಿರಾಮ ಮಾಡಿಕೊಂಡ ಅವರು, ಮಧ್ಯಾಹ್ನ ಊಟದ ವೇಳೆಗೆ ಸವಾಲು ಎದುರಿಸಿದರು. ಆಹಾರದ ಬೆಲೆಗಳು ಹೆಚ್ಚಿರುವುದರಿಂದ, 120 ರೂ. ಒಳಗೆ ಊಟ ಮುಗಿಸುವ ಗುರಿ ಇಟ್ಟುಕೊಂಡು ಖರ್ಚನ್ನು ನಿಯಂತ್ರಿಸಿದರು.

ಸಂಜೆ ವೇಳೆ ವಡಾ ಪಾವ್ ಮತ್ತು ಚಹಾ ಸೇವಿಸಿ ದಿನವನ್ನು ಮುಗಿಸಿದ ಪ್ರಿಯಾಂಕಾ, ಅಚ್ಚರಿಯ ರೀತಿಯಲ್ಲಿ ತಮ್ಮ ಬಜೆಟ್‌ನಿಂದ ಸುಮಾರು 200 ರೂ. ಉಳಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಕಡಿಮೆ ಹಣದಲ್ಲೂ ಸರಿಯಾದ ಯೋಜನೆ ಇದ್ದರೆ ದಿನವನ್ನು ನಿರ್ವಹಿಸಬಹುದು ಎಂಬುದನ್ನು ಅವರು ತೋರಿಸಿದ್ದಾರೆ.

ಈ ವಿಡಿಯೋ ವೈರಲ್ ಆದ ಬಳಿಕ, ಹಲವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೆಲವರು Indira Canteen ನಲ್ಲಿ ಕಡಿಮೆ ದರದಲ್ಲಿ ಊಟ ಸಿಗುತ್ತದೆ ಎಂದು ಸಲಹೆ ನೀಡಿದ್ದಾರೆ. ಮತ್ತೊಬ್ಬರು, ಇದು ಒಬ್ಬರಿಗೆ ಮಾತ್ರ ಸಾಧ್ಯ, ಕುಟುಂಬದೊಂದಿಗೆ ಬದುಕುವುದು ಬೆಂಗಳೂರಿನಲ್ಲಿ ಕಷ್ಟಕರ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಈ ಪ್ರಯೋಗ ನಗರ ಜೀವನದ ಖರ್ಚು ಹಾಗೂ ಬಜೆಟ್ ನಿರ್ವಹಣೆ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending