ಕ್ರೀಡೆ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಅರ್ಜುನ ಪ್ರಶಸ್ತಿ ಹಾಕಿ ಆಟಗಾರನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ನವದೆಹಲಿ: ಮದುವೆಯಾಗುವುದಾಗಿ ನಂಬಿಸಿ ಬೆಂಗಳೂರಿನ 22 ವರ್ಷದ ಯುವತಿಗೆ ವಂಚಿಸಿದ ಆರೋಪ ಹಿನ್ನೆಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವರುಣ್ ಕುಮಾರ್ ವಿರುದ್ಧ ಯುವತಿ ಅತ್ಯಾಚಾರ ಆರೋಪ ಮಾಡಿದ್ದು ಪೋಕ್ಸೋ (Poಛಿso) ಪ್ರಕರಣ ದಾಖಲಾಗಿದೆ. ಯುವತಿ 17ನೇ ವಯಸ್ಸಿನಲ್ಲಿ ಇರುವಾಗ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ವರುಣ್ ಕುಮಾರ್ 2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದ ತಂಡದ ಸದಸ್ಯರಾಗಿದ್ದ ವರುಣ್ಗೆ ಹಿಮಾಚಲ ಪ್ರದೇಶ ಸರ್ಕಾರ 1 ಲಕ್ಷ ಬಹುಮಾನ ನೀಡಿ ಗೌರವಿಸಿತ್ತು.
ಹಾಕಿ ಪಂದ್ಯಗಳಿಗಾಗಿ ಬೆಂಗಳೂರಿನ ಸಾಯಿ ಸ್ಟೇಡಿಯಂಗೆ ಭೇಟಿ ನೀಡಿದ ಸಂದರ್ಭದಲ್ಲಿ ವರುಣ್ ಕುಮಾರ್ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನಲ್ಲಿ ವರಣು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಿಮಾಚಲ ಪ್ರದೇಶದವರಾದ ವರುಣ್ ಕುಮಾರ್ ಪಂಜಾಬ್ನ ಜಲಂಧರ್ನಲ್ಲಿ ವಾಸಿಸುತ್ತಿದ್ದರು. ಸದ್ಯ ಪರಾರಿಯಾಗಿರುವ ಅವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪ್ರಾಪ್ತೆಯಾಗಿದ್ದ ಯುವತಿಗೆ ಸಾಮಾಜಿಕ ಜಾಲತಾಣದ ಮೂಲಕ ವರುಣ್ ಕುಮಾರ್ ಪರಿಚಯವಾಗಿತ್ತು. 17 ವರ್ಷದವಳಾಗಿದ್ದ ದೂರುದಾರಳನ್ನ ಪ್ರೀತಿಸುವುದಾಗಿ ನಂಬಿಸಿದ್ದ ವರಣ್ ‘ಮನೆಯವರನ್ನು ಒಪ್ಪಿಸಿ ಮದುವೆಯಾಗುತ್ತೇನೆ. ಅಲ್ಲಿಯವರೆಗೂ ಪ್ರೇಮಿಗಳಾಗಿ ಇರೋಣ’ ಎಂದು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ. ಆದರೆ, ಈಗ ಮದುವೆಯಾಗದೇ ವಂಚನೆ ಮಾಡಿದ್ದಾನೆ ಎಂದು ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.
2019ರಲ್ಲಿ ನೈಟ್ ಡಿನ್ನರ್ ನೆಪದಲ್ಲಿ ಜಯನಗರಕ್ಕೆ ಕರೆದೊಯ್ದು ಬಲವಂತವಾಗಿ ದೈಹಿಕ ಸಂಪರ್ಕ ಬೆಳಸಿದ್ದ. ಇದಾದ ಬಳಿಕವೂ ಆಗಾಗ ದೈಹಿಕ ಸಂಪರ್ಕ ಮಾಡಿದ್ದ. ಒಂದು ವರ್ಷದ ಹಿಂದೆ ನನ್ನ ತಂದೆ ಮೃತಪಟ್ಟಾಗ ಮನೆ ಬಳಿ ಬಂದು ಸಾಂತ್ವನ ಹೇಳಿ ಹೋಗಿದ್ದ. ಆದರೆ ಈಗ ಸಂಪರ್ಕಕ್ಕೆ ಸಿಗದೇ ವಂಚಿಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ದೂರುದಾರ ಯುವತಿ ವಾಲಿಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಕ್ಷಿಣ ವಿಭಾಗದ ತರಬೇತಿ ಪಡೆಯುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಬಳಿಕ ದೈಹಿಕ ಸಂಬಂಧ ಹೊಂದಿದ್ದರು.
ಭಾರತ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಮೂಲತಃ ಹಿಮಾಚಲ ಪ್ರದೇಶದವನು. 2017ರಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡಿದ ಅವರು 2022ರ ಬರ್ಮಿಂಗ್ ಹ್ಯಾಂ – ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. 2022 ರ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ತಂಡದಲ್ಲಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಸದಸ್ಯನೂ ಕೂಡ ಆಗಿದ್ದರು. ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.