ಬೆಂಗಳೂರು
ನೀರಿಗಾಗಿ ಪರದಾಟ – ಶಾಸಕರಿಂದ ಪರಿಹಾರ!
ಬೆಂಗಳೂರು : ಈ ವರ್ಷ ಮಳೆ ಕೈಕೊಟ್ಟಿದ್ದು ಬೇಸಿಗೆಕಾಲ ಪ್ರಾರಂಭವಾಗಲು ಇನ್ನೂ ಎರಡು ತಿಂಗಳು ಇರುವಾಗಲೇ ಯಶವಂತಪುರ ಕ್ಷೇತ್ರದ ಹೆಮ್ಮಿಗೆಪುರ ವಾರ್ಡ್ ನ ಬಿಎಚ್ಇಎಲ್ ಬಡಾವಣೆ ಬಲರಾಮ ಬಡಾವಣೆ,ಕೃಷ್ಣ ಗಾರ್ಡನ್,ಕಾನ್ ಕಾರ್ಡ್ ಬಡಾವಣೆ ಕೋಡಿಪಾಳ್ಯ,ಮೈಲಸಂದ್ರ, ಬಾಗೇಗೌಡ ಬಡಾವಣೆ ಸಪ್ತಗಿರಿ ಬಡಾವಣೆ, ಭೂಮಿಕಾ ಬಡಾವಣೆ ಕಿತ್ತೂರು ರಾಣಿ ಚೆನ್ನಮ್ಮ ಬಡಾವಣೆಯ ನಿವಾಸಿಗಳು, ನೀರಿಗಾಗಿ ಪರದಾಡುತ್ತಿದ್ದು, ಬಿಎಚ್ಇಎಲ್ ಬಡಾವಣೆಯ ಸಾಯಿಬಾಬಾ ದೇವಸ್ಥಾನದಲ್ಲಿ ಕರೆದಿದ್ದ ವಾರ್ಡ್ ನ ಕುಂದು ಕೊರತೆ ಸಭೆಯಲ್ಲಿ ಜಲಮಂಡಳಿಯ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಹೆಚ್ಚಾಗಿ ಮಧ್ಯಮ ವರ್ಗದ ಜನರೇ ವಾಸಿಸುತ್ತಿದ್ದು ಪ್ರತಿ ಮನೆಯಲ್ಲೂ ಬೋರ್ವೆಲ್ ಕೊರೆಸಲು ಸಾಧ್ಯವಿಲ್ಲ, ಇಲ್ಲಿನ ನಿವಾಸಿಗಳು ಬಿಬಿಎಂಪಿ ಹಾಗೂ ಕಾವೇರಿ ನೀರನ್ನೇ ಆಶ್ರಯಿಸಿದ್ದು 15 ದಿನಗಳಾದರೂ ಯಾವುದೇ ನೀರು ಬರದೆ ದಿನನಿತ್ಯದ ಕೆಲಸ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ಬಿಎಚ್ಎಲ್ ಬಡಾವಣೆಯ ಅರುಣ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
4 ದಿನಕ್ಕೆ ಒಮ್ಮೆ ಕಾವೇರಿ ನೀರು ಒದಗಿಸುತ್ತಾರೆ. ತಿಂಗಳಲ್ಲಿ 2 ಬಾರಿಯಾದರೂ ಪೈಪ್ ಲೈನ್ ಓಡೆದಿದೆ ಎಂದು ನೀರು ಬಿಡುವುದಿಲ್ಲ. 4 ದಿನಕ್ಕೆ ಬಿಡುವ ನೀರು 8 ದಿನವಾದರೂ ಬಿಡುವುದಿಲ್ಲ, ಒಂದು ಟ್ಯಾಂಕರ್ ನೀರು 600 ರಿಂದ 2,000 ದವರೆಗೆ ಕೇಳುತ್ತಾರೆ. ಅಧಿಕಾರಿಗಳಿಗೆ ಕರೆ ಮಾಡಿದರೆ ಅವರು ಕರೆ ಸ್ವೀಕರಿಸುವುದಿಲ್ಲ ನಮ್ಮ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ ಇದಕ್ಕೆ ಪರಿಹಾರವೇನು ಎಂದು ಕೋಡಿಪಾಳ್ಯದ ನಿವಾಸಿ ಪರಮೇಶ್ವರ್ ತಮ್ಮ ಅಳಲನ್ನು ತೋಡಿಕೊಂಡರು. ಜಲ ಮಂಡಳಿ ಅಧಿಕಾರಿ ಮಲ್ಲಿಕಾರ್ಜುನ್ ಮಾತನಾಡಿ, ಕಾವೇರಿ ಐದನೇ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಸಂಪೂರ್ಣವಾಗಲಿದೆ. ಮಳೆ ಅಭಾವದಿಂದ ಅಂತರ್ಜಲ ಕುಸಿದಿದ್ದು ಕೆಲವು ಬೋರವೆಲ್ ಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು 20 ರಿಂದ 40 ಅಡಿ ಆಳದ ಪೈಪ್‍ಗಳನ್ನು ಬಿಟ್ಟು ತ್ವರಿತಗತಿಯಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದರು. ಸಮಸ್ಯೆಯನ್ನು ಆಲಿಸಿದ ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಮಾತನಾಡಿ, ಈ ವರ್ಷ ಮಳೆ ಅಭಾವದಿಂದ ಕೆರೆ ಕುಂಟೆಗಳಲ್ಲಿ ನೀರು ಬತ್ತಿ ಹೋಗಿದ್ದು ಅಂತರ್ಜಲ ಕುಸಿತದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ನೀರಿನ ಸಮಸ್ಯೆ ಪರಿಹರಿಸಲು 110 ಹಳ್ಳಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮ, ವಾರ್ಡ್ ಗಳಿಗೂ ಕೊಳವೆ ಬಾವಿ ಕೊರೆಸಲು ಸರ್ಕಾರದ ವತಿಯಿಂದ ಅನುದಾನ ಒದಗಿಸಲಾಗುವುದು. ಒಂದು ವಾರದ ಒಳಗೆ ಸಮಸ್ಯೆ ಪರಿಹರಿಸಲು ಬಿಬಿಎಂಪಿ ಹಾಗೂ ಜಲ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದ ಅವರು ನೀರಿನ ಅಭಾವ ಹೆಚ್ಚಾಗಿದ್ದು, ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿ ಸರ್ಕಾರದ ಜೊತೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್ ಸೇರಿದಂತೆ ಬಿಬಿಎಂಪಿ, ಕೊಳಚೆ ಮಂಡಳಿ,ಜಲಮಂಡಳಿ, ಬೆಸ್ಕಾಂ, ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
ಕ್ರೀಡೆ
ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್‌ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್‌ಗೆ 77ನೇ ವಸಂತ
ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್‌ಮನ್‌ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!
1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್‌ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.
ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ
“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್‌ಂತಹ ವೇಗದ ಬೌಲರ್‌ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.
ಕ್ರೀಡಾಸ್ಪೂರ್ತಿಗೆ ಮಾದರಿ
1980ರ ಸುವರ್ಣ ಮಹೋತ್ಸವ ಟೆಸ್ಟ್‌ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.
ರಣಜಿ ಫೈನಲ್‌ಗೂ ಮದುವೆಯೂ ಒಂದೇ ಸಮಯ
1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್‌ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.
ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್
- 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
- 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
- 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್
77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.
ದೇಶ
ಹೊಸಕೋಟೆಗೆ ಬಜೆಟ್ ಬಲ ಸಿಗುತ್ತಾ? ಮೆಟ್ರೋ, ನೀರಾವರಿ, ಒಳಚರಂಡಿ ಯೋಜನೆಗಳ ನಿರೀಕ್ಷೆ
ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡು ವೇಗವಾಗಿ ವಿಸ್ತರಿಸುತ್ತಿರುವ ಹೊಸಕೋಟೆ ತಾಲೂಕು ಮುಂದಿನ ರಾಜ್ಯ ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ನೀರಾವರಿ, ಕೃಷಿ, ರಸ್ತೆ, ಮೆಟ್ರೋ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬೇಕು ಎಂದು ಜನತೆ ಆಗ್ರಹಿಸುತ್ತಿದ್ದಾರೆ.
2 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಹೊಸಕೋಟೆ, ವಾಣಿಜ್ಯ ಹಾಗೂ ವಸತಿ ವಿಸ್ತಾರದಲ್ಲಿ ಮಹತ್ವ ಪಡೆದುಕೊಂಡಿದೆ. ಶಾಸಕರು ಈಗಾಗಲೇ ಮೆಟ್ರೋ ವಿಸ್ತರಣೆಗೆ ಹೆಜ್ಜೆಯಿಟ್ಟಿದ್ದು, ಕೆ.ಆರ್.ಪುರಂ ಮೂಲಕ ಹೊಸಕೋಟೆಗೆ ಮೆಟ್ರೋ ಸಂಪರ್ಕ ನೀಡುವ ಬಗ್ಗೆ ಬಿಎಂಆರ್‌ಸಿಎಲ್ ಅಧ್ಯಯನ ಆರಂಭಿಸಿದೆ. ಬಜೆಟ್‌ನಲ್ಲಿ ಆರ್ಥಿಕ ಮಂಜೂರು ಸಿಗುತ್ತದೆಯೇ ಎಂಬುದು ಕುತೂಹಲ.
ಗ್ರಾಮಾಂತರ ಪೊಲೀಸ್ ಠಾಣೆ ಬೇಡಿಕೆ
ಪ್ರಸ್ತುತ ಹೊಸಕೋಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 31 ವಾರ್ಡ್‌ಗಳು ಹಾಗೂ 15 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಜನಸಂಖ್ಯೆ ಒಳಗೊಂಡಿದೆ. ಪ್ರತ್ಯೇಕ ಗ್ರಾಮಾಂತರ ಪೊಲೀಸ್ ಠಾಣೆ ತೆರೆಯುವಂತೆ ಶಾಸಕರು ಸದನದಲ್ಲಿ ಮನವಿ ಮಾಡಿದ್ದು, ಗೃಹ ಸಚಿವರು ಬಜೆಟ್‌ನಲ್ಲಿ ಸ್ಪಂದನೆ ಸಿಗುವ ಭರವಸೆ ನೀಡಿದ್ದಾರೆ.
ನೀರಾವರಿ ಮತ್ತು ಒಳಚರಂಡಿಗೆ ಒತ್ತು
ವಂಗಯ್ಯನ ಕೆರೆ ಏತ ನೀರಾವರಿ ಯೋಜನೆ ಅನುಷ್ಠಾನಗೊಂಡಿದ್ದರೂ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಜೊತೆಗೆ ₹100 ಕೋಟಿ ವೆಚ್ಚದ ಶಾಶ್ವತ ಒಳಚರಂಡಿ ಕಾಮಗಾರಿ ಮಂಜೂರಾಗಬೇಕು ಎಂಬುದು ನಾಗರಿಕರ ಬೇಡಿಕೆ.
ದೊಡ್ಡ ಅಮಾನಿಕೆರೆ ಪ್ರವಾಸಿ ತಾಣವಾಗುತ್ತದೆಯೇ?
ನಗರದ ದೊಡ್ಡ ಹಾಗೂ ಚಿಕ್ಕ ಅಮಾನಿಕೆರೆಗಳಲ್ಲಿ 200ಕ್ಕೂ ಹೆಚ್ಚು ಜೀವ ವೈವಿಧ್ಯ ಪ್ರಭೇದಗಳಿವೆ. ಇದನ್ನು ಪ್ರವಾಸಿ ಹಾಗೂ ಜೀವ ವೈವಿಧ್ಯ ತಾಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಅಭಿಲಾಷೆ ವ್ಯಕ್ತವಾಗಿದೆ.
🔹 ಬಜೆಟ್ ನಿರೀಕ್ಷೆಯ ಪ್ರಮುಖ ಅಂಶಗಳು:
- ಚೆನ್ನ ಬೈರೇಗೌಡ ಕ್ರೀಡಾಂಗಣ ಮೆಲ್ದರ್ಜೆ
- ಶಾಶ್ವತ ಒಳಚರಂಡಿ ಕಾಮಗಾರಿ
- ನೂತನ ನ್ಯಾಯಾಲಯ ಸಂಕೀರ್ಣ
- ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಮತ್ತು ಡಿಪೊ
- ಸರ್ಕಾರಿ ಮಹಿಳಾ ಪದವಿ ಕಾಲೇಜು
-
ಬೆಂಗಳೂರು3 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ21 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ20 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ21 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ19 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ18 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ಅಪರಾಧ20 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ21 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
