Connect with us

ಬೆಂಗಳೂರು

ನೀರಿಗಾಗಿ ಪರದಾಟ – ಶಾಸಕರಿಂದ ಪರಿಹಾರ!

Published

on

ನೀರಿಗಾಗಿ ಪರದಾಟ - ಶಾಸಕರಿಂದ ಪರಿಹಾರ!
ನೀರಿಗಾಗಿ ಪರದಾಟ - ಶಾಸಕರಿಂದ ಪರಿಹಾರ!

ಬೆಂಗಳೂರು  : ಈ ವರ್ಷ ಮಳೆ ಕೈಕೊಟ್ಟಿದ್ದು ಬೇಸಿಗೆಕಾಲ ಪ್ರಾರಂಭವಾಗಲು ಇನ್ನೂ ಎರಡು ತಿಂಗಳು ಇರುವಾಗಲೇ ಯಶವಂತಪುರ ಕ್ಷೇತ್ರದ ಹೆಮ್ಮಿಗೆಪುರ ವಾರ್ಡ್ ನ  ಬಿಎಚ್ಇಎಲ್ ಬಡಾವಣೆ ಬಲರಾಮ ಬಡಾವಣೆ,ಕೃಷ್ಣ ಗಾರ್ಡನ್,ಕಾನ್ ಕಾರ್ಡ್ ಬಡಾವಣೆ ಕೋಡಿಪಾಳ್ಯ,ಮೈಲಸಂದ್ರ, ಬಾಗೇಗೌಡ ಬಡಾವಣೆ ಸಪ್ತಗಿರಿ ಬಡಾವಣೆ, ಭೂಮಿಕಾ ಬಡಾವಣೆ ಕಿತ್ತೂರು ರಾಣಿ ಚೆನ್ನಮ್ಮ ಬಡಾವಣೆಯ ನಿವಾಸಿಗಳು, ನೀರಿಗಾಗಿ ಪರದಾಡುತ್ತಿದ್ದು, ಬಿಎಚ್ಇಎಲ್ ಬಡಾವಣೆಯ ಸಾಯಿಬಾಬಾ ದೇವಸ್ಥಾನದಲ್ಲಿ ಕರೆದಿದ್ದ ವಾರ್ಡ್ ನ ಕುಂದು ಕೊರತೆ ಸಭೆಯಲ್ಲಿ  ಜಲಮಂಡಳಿಯ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಹೆಚ್ಚಾಗಿ ಮಧ್ಯಮ ವರ್ಗದ ಜನರೇ ವಾಸಿಸುತ್ತಿದ್ದು ಪ್ರತಿ ಮನೆಯಲ್ಲೂ ಬೋರ್ವೆಲ್ ಕೊರೆಸಲು ಸಾಧ್ಯವಿಲ್ಲ, ಇಲ್ಲಿನ ನಿವಾಸಿಗಳು  ಬಿಬಿಎಂಪಿ ಹಾಗೂ ಕಾವೇರಿ ನೀರನ್ನೇ  ಆಶ್ರಯಿಸಿದ್ದು 15 ದಿನಗಳಾದರೂ ಯಾವುದೇ ನೀರು ಬರದೆ ದಿನನಿತ್ಯದ ಕೆಲಸ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ಬಿಎಚ್ಎಲ್ ಬಡಾವಣೆಯ ಅರುಣ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

 4 ದಿನಕ್ಕೆ ಒಮ್ಮೆ ಕಾವೇರಿ ನೀರು ಒದಗಿಸುತ್ತಾರೆ. ತಿಂಗಳಲ್ಲಿ 2 ಬಾರಿಯಾದರೂ ಪೈಪ್ ಲೈನ್ ಓಡೆದಿದೆ ಎಂದು ನೀರು ಬಿಡುವುದಿಲ್ಲ. 4 ದಿನಕ್ಕೆ ಬಿಡುವ ನೀರು 8 ದಿನವಾದರೂ ಬಿಡುವುದಿಲ್ಲ, ಒಂದು ಟ್ಯಾಂಕರ್ ನೀರು 600 ರಿಂದ 2,000 ದವರೆಗೆ ಕೇಳುತ್ತಾರೆ. ಅಧಿಕಾರಿಗಳಿಗೆ ಕರೆ ಮಾಡಿದರೆ ಅವರು ಕರೆ ಸ್ವೀಕರಿಸುವುದಿಲ್ಲ ನಮ್ಮ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ ಇದಕ್ಕೆ ಪರಿಹಾರವೇನು ಎಂದು ಕೋಡಿಪಾಳ್ಯದ ನಿವಾಸಿ ಪರಮೇಶ್ವರ್ ತಮ್ಮ ಅಳಲನ್ನು ತೋಡಿಕೊಂಡರು.  ಜಲ ಮಂಡಳಿ ಅಧಿಕಾರಿ ಮಲ್ಲಿಕಾರ್ಜುನ್ ಮಾತನಾಡಿ, ಕಾವೇರಿ ಐದನೇ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಸಂಪೂರ್ಣವಾಗಲಿದೆ. ಮಳೆ ಅಭಾವದಿಂದ ಅಂತರ್ಜಲ ಕುಸಿದಿದ್ದು ಕೆಲವು ಬೋರವೆಲ್ ಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು 20 ರಿಂದ 40 ಅಡಿ ಆಳದ ಪೈಪ್‍ಗಳನ್ನು ಬಿಟ್ಟು ತ್ವರಿತಗತಿಯಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದರು.  ಸಮಸ್ಯೆಯನ್ನು ಆಲಿಸಿದ ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಮಾತನಾಡಿ, ಈ ವರ್ಷ ಮಳೆ ಅಭಾವದಿಂದ  ಕೆರೆ ಕುಂಟೆಗಳಲ್ಲಿ ನೀರು ಬತ್ತಿ ಹೋಗಿದ್ದು ಅಂತರ್ಜಲ ಕುಸಿತದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ನೀರಿನ ಸಮಸ್ಯೆ ಪರಿಹರಿಸಲು 110 ಹಳ್ಳಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮ, ವಾರ್ಡ್ ಗಳಿಗೂ ಕೊಳವೆ ಬಾವಿ ಕೊರೆಸಲು ಸರ್ಕಾರದ ವತಿಯಿಂದ ಅನುದಾನ ಒದಗಿಸಲಾಗುವುದು. ಒಂದು ವಾರದ ಒಳಗೆ ಸಮಸ್ಯೆ ಪರಿಹರಿಸಲು  ಬಿಬಿಎಂಪಿ ಹಾಗೂ ಜಲ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದ ಅವರು  ನೀರಿನ ಅಭಾವ ಹೆಚ್ಚಾಗಿದ್ದು, ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿ ಸರ್ಕಾರದ ಜೊತೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.

 ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್ ಸೇರಿದಂತೆ  ಬಿಬಿಎಂಪಿ, ಕೊಳಚೆ ಮಂಡಳಿ,ಜಲಮಂಡಳಿ, ಬೆಸ್ಕಾಂ, ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ದೇಶ

‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ

Published

on

ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ Narendra Modi ಹಾಗೂ ಕೇಂದ್ರ ಶಿಕ್ಷಣ ಸಚಿವ Dharmendra Pradhan ನೇರ ಹೊಣೆ ಹೊರಬೇಕು ಎಂದು ಮುಖ್ಯಮಂತ್ರಿ Siddaramaiah ಒತ್ತಾಯಿಸಿದರು.

ಬೆಂಗಳೂರಿನ Freedom Park ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, “ಈ ಹಿಂದೆ ರಾಜ್ಯಗಳು ತಮ್ಮದೇ CET ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿದ್ದರು. ಆದರೆ 2016ರಲ್ಲಿ ಮೋದಿ ಸರ್ಕಾರ ಬಲವಂತವಾಗಿ NEET ಜಾರಿಗೆ ತಂದ ಬಳಿಕ ಅಕ್ರಮಗಳು ಹೆಚ್ಚಾಗಿವೆ” ಎಂದು ಆರೋಪಿಸಿದರು.

“ಶಿಕ್ಷಣ ಸಂವಿಧಾನದ ಸಮವರ್ತಿ ಪಟ್ಟಿಯ ವಿಷಯ. ರಾಜ್ಯಗಳಿಗೆ ಸ್ವಾಯತ್ತತೆ ಇರಬೇಕು. ಆದರೆ ಕೇಂದ್ರ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನಲ್ಲೇ ಕೇಂದ್ರೀಕರಿಸಿಕೊಂಡ ಪರಿಣಾಮ ಇಂತಹ ಹಗರಣಗಳು ಮರುಕಳಿಸುತ್ತಿವೆ” ಎಂದು ಅವರು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ವರ್ಷವಿಡೀ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪೇಪರ್ ಲೀಕ್ ಮೂಲಕ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಸಿಎಂ, “ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಆಡಳಿತದಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ PSI ನೇಮಕಾತಿ ಹಗರಣವನ್ನೂ ಉಲ್ಲೇಖಿಸಿದರು. “ದೇಶದ ಯುವಜನತೆ ಆಕ್ರೋಶದಲ್ಲಿದ್ದರೂ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ” ಎಂದು ಟೀಕಿಸಿದರು.

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೊರೆಯುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

Continue Reading

ದೇಶ

ಪೆಟ್ರೋಲ್-ಡಿಸೇಲ್ ತೆರಿಗೆ ಕಡಿತಕ್ಕೆ ಸಿಎಂ ಸ್ಪಷ್ಟ ನಕಾರ

Published

on

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಕುರಿತು ಚರ್ಚೆಗಳು ತೀವ್ರವಾಗಿರುವ ನಡುವೆ ಮುಖ್ಯಮಂತ್ರಿ Siddaramaiah ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಇಂಧನ ದರ ಹೆಚ್ಚಿಸಿದರೆ ನಾವು ತೆರಿಗೆ ಕಡಿಮೆ ಮಾಡಬೇಕಾ? ಅವರು ಬೆಲೆ ಏರಿಕೆ ಮಾಡಿದಾಗ ಯಾಕೆ ಪ್ರಶ್ನೆ ಕೇಳುವುದಿಲ್ಲ?” ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಂಧನ ದರ ಏರಿಕೆಗೆ ಪ್ರಮುಖ ಕಾರಣ ಕೇಂದ್ರ ಸರ್ಕಾರವೇ ಎಂದು ಆರೋಪಿಸಿದರು.

ಮುಂದುವರಿದು ಅವರು, “Narendra Modi ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮತ್ತು ಡಿಸೇಲ್ ದರ ಎಷ್ಟು ಇತ್ತು? ಮಾಜಿ ಪ್ರಧಾನಿ Manmohan Singh ಅವಧಿಯಲ್ಲಿ ಪೆಟ್ರೋಲ್ ₹70 ಮತ್ತು ಡಿಸೇಲ್ ₹48 ಇತ್ತು. ಗ್ಯಾಸ್ ಸಿಲಿಂಡರ್ ಬೆಲೆ ₹414 ಇತ್ತು. ಈಗ ದರ ಎಷ್ಟು ಏರಿದೆ ಎಂಬುದನ್ನು ಜನರು ಗಮನಿಸಬೇಕು” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಜನರಿಗೆ ಯಾವುದೇ ನೆರವು ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಕೇಂದ್ರ ಸರ್ಕಾರ ದರ ಹೆಚ್ಚಿಸಿದಾಗ ಅವರ ವಿರುದ್ಧ ಪ್ರಶ್ನೆ ಕೇಳುವುದಿಲ್ಲ. ಆದರೆ ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡಬೇಕೆಂದು ಕೇಳುತ್ತೀರಿ. ನಿಮ್ಮ ಪ್ರಶ್ನೆಗಳಲ್ಲೇ ಕೇಂದ್ರ ಸರ್ಕಾರದ ಪರ ನಿಲುವು ಕಾಣಿಸುತ್ತದೆ” ಎಂದು ಮಾಧ್ಯಮಗಳ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿದರು.

ಇಂಧನ ದರ ಏರಿಕೆ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.

Continue Reading

ದೇಶ

‘ಹೈದರಾಬಾದ್‌ನಲ್ಲಿ ಗುಂಡಿಗಳೇ ಇಲ್ಲ, ಬೆಂಗಳೂರಿನಲ್ಲಿ ಯಾಕೆ?’: ವಿದೇಶಿಗನ ಪ್ರಶ್ನೆ ವೈರಲ್

Published

on

ಹೈದರಾಬಾದ್: Bengaluru ನಗರದ ಟ್ರಾಫಿಕ್ ಮತ್ತು ರಸ್ತೆ ಸಮಸ್ಯೆಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ. ಈ ಬಾರಿ ಕೆನಡಾ ಮೂಲದ ಕ್ಯಾಲೆಬ್ ಫ್ರೀಸೆನ್ ಎಂಬುವವರು Hyderabad ನಗರದ ರಸ್ತೆಗಳನ್ನು ಹೊಗಳಿ, ಬೆಂಗಳೂರಿನ ಮೂಲಸೌಕರ್ಯವನ್ನು ಪ್ರಶ್ನಿಸಿರುವ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ X ನಲ್ಲಿ ವಿಡಿಯೋ ಹಂಚಿಕೊಂಡಿರುವ ಕ್ಯಾಲೆಬ್, “ಹೈದರಾಬಾದ್‌ನಲ್ಲಿ ರಸ್ತೆಗಳು ಅತ್ಯುತ್ತಮವಾಗಿವೆ. ನಗರದ ಮಧ್ಯಭಾಗದಲ್ಲಿದ್ದರೂ ಸಂಚಾರ ಸುಲಭವಾಗಿದೆ. ಎಲ್ಲೆಡೆ ಉತ್ತಮ ರಸ್ತೆ ಸಂಪರ್ಕವಿದ್ದು, ಗುಂಡಿಗಳ ಸಮಸ್ಯೆ ಕಾಣುತ್ತಿಲ್ಲ” ಎಂದು ಹೇಳಿದ್ದಾರೆ.

ಮುಂದುವರಿದು ಅವರು, “ಇಲ್ಲಿ ರಸ್ತೆಗಳ ಮೇಲೆ ಪ್ರಾಣಿಗಳ ಓಡಾಟ ಇಲ್ಲ, ಪಾದಚಾರಿಗಳು ಹಠಾತ್ ವಾಹನಗಳ ಮುಂದೆ ಬರುತ್ತಿಲ್ಲ. ಹೈದರಾಬಾದ್‌ನಲ್ಲಿ ಇಷ್ಟು ಉತ್ತಮ ರಸ್ತೆ ವ್ಯವಸ್ಥೆ ಇರುವಾಗ ಬೆಂಗಳೂರಿನಲ್ಲಿ ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಹೈದರಾಬಾದ್‌ನಲ್ಲಿ ಟ್ರಾಫಿಕ್ ದಟ್ಟಣೆ ಕಡಿಮೆ ಇರುವುದನ್ನೂ ಅವರು ಮೆಚ್ಚಿಕೊಂಡಿದ್ದಾರೆ.

ಈ ವಿಡಿಯೋ ವೈರಲ್ ಆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ‘ಬೆಂಗಳೂರು Vs ಹೈದರಾಬಾದ್’ ಚರ್ಚೆ ಜೋರಾಗಿದೆ. ಹಲವರು ಬೆಂಗಳೂರಿನಲ್ಲಿ ಯೋಜಿತ ರಸ್ತೆ ಅಭಿವೃದ್ಧಿ ಹಾಗೂ ಪರಿಣಾಮಕಾರಿ ಟ್ರಾಫಿಕ್ ನಿರ್ವಹಣೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವರು ಬಿಬಿಎಂಪಿ ಆಡಳಿತದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ಬೆಂಗಳೂರು ಪರವಾಗಿ ಪ್ರತಿಕ್ರಿಯಿಸಿದ ಕೆಲ ನೆಟ್ಟಿಗರು, “ಎಲ್ಲಾ ನಗರಗಳಲ್ಲೂ ಒಳ್ಳೆಯ ಮತ್ತು ಕೆಟ್ಟ ರಸ್ತೆಗಳು ಇರುತ್ತವೆ. ಹೈದರಾಬಾದ್‌ನ ಪ್ರಮುಖ ಪ್ರದೇಶಗಳನ್ನು ನೋಡಿ ಮಾತ್ರ ಇಂತಹ ಅಭಿಪ್ರಾಯ ನೀಡಲಾಗಿದೆ” ಎಂದು ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಹೈದರಾಬಾದ್ ನಿವಾಸಿಯೊಬ್ಬರು, “ದಯವಿಟ್ಟು ನಮ್ಮ ನಗರವನ್ನು ಇಷ್ಟು ಹೊಗಳಬೇಡಿ. ಇಲ್ಲದಿದ್ದರೆ ಬೆಂಗಳೂರಿನಂತೆ ಮನೆ ಬಾಡಿಗೆಗಳು ಏರಿಬಿಡುತ್ತವೆ” ಎಂದು ಹಾಸ್ಯಭರಿತ ಕಾಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ರಸ್ತೆ ಅಭಿವೃದ್ಧಿ ಮತ್ತು ನಗರ ಯೋಜನೆ ಕುರಿತು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

Continue Reading

Trending