ಬೆಂಗಳೂರು
ವಾಹನ ಸವಾರರೆ ಇಲ್ಕೇಳಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅವಧಿ ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ, ಈ ಬಗ್ಗೆ ವಿಧಾನ ಪರಿಷತ್ನಲ್ಲಿ ಪ್ರಶ್ನೋತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ, ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್ಎಸ್ಆರ್ಸಿ ನೇಮ್ ಪ್ಲೇಟ್ ಅಳವಡಿಸಬೇಕು, ಆನ್ಲೈನ್ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು ಅಲ್ಲದೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡವು ವಿಸ್ತರಿಸಬೇಕು ಎಂದು ಹೇಳಿದರು, ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗರೆಡ್ಡಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವ ಗಡುವನ್ನು ಮೂರು ತಿಂಗಳ ವಿಸ್ತರಿಸಲಾಗುತ್ತದೆ ಇನ್ನು ಫೇಕ್ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ ಈ ಯೋಜನೆ ಪಾರದರ್ಶಕವಾಗಿದ ಎಂದು ಸದನಕ್ಕೆ ತಿಳಿಸಿದರು, ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೆçÃಷನ ಪ್ಲೇಟ್ ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು ಫೆಬ್ರವರಿ 17ರೊಳಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು, ಇದೀಗ ಈ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ,