ಬೆಂಗಳೂರು
ಸ್ವಂತ ಮನೆ ಕಟ್ಟೋರಿಗೆ ಆನ್ಲೈನ್ನಲ್ಲಿ ಅನುಮತಿ ಪಡೆಯಲು ನಂಬಿಕೆ ನಕ್ಷೆ ಯೋಜನೆ ಜಾರಿ: ಡಿಕೆಶಿ
ಬೆಂಗಳೂರು: ನಗರದಲ್ಲಿ 50 x 80 ಅಡಿ ವಿಸ್ತರ್ಣದವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ರ್ಕಿಟೆಕ್ಟ್) ಅಥವಾ ಎಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ ʼನಂಬಿಕೆ ನಕ್ಷೆʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಬಿಕೆ ನಕ್ಷೆ ಜತೆಗೆ ಬೆಂಗಳೂರಿಗರ ಸಮಸ್ಯೆಗೆ ಪರಿಹಾರ ನೀಡಲು ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಖಾತಾ ವಿತರಣೆಯಂತಹ ಕ್ರಾಂತಿಕಾರಕ ಹೆಜ್ಜೆ ಇಡಲಾಗಿದೆ. ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ರ್ಕಾರ ಈ ಪಾರರ್ಶಕ ಕರ್ಯಕ್ರಮಗಳನ್ನು ರೂಪಿಸಿದೆ ಎಂದು ಹೇಳಿದರು.
ನಂಬಿಕೆಯೊಂದಿಗೆ ಪರಿಶೀಲಿಸುವ ನಕ್ಷೆ ನಂಬಿಕೆ ನಕ್ಷೆ ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯಡಿ ಈ ಯೋಜನೆ ರೂಪಿಸಲಾಗಿದ್ದು, ಇನ್ನುಮುಂದೆ ಬೆಂಗಳೂರಿನಲ್ಲಿ ಮನೆ ಕಟ್ಟಲು ಮುಂದಾಗಿರುವವರು 50ಘಿ80 ವಿಸ್ತರ್ಣವರೆಗಿನ ನಿವೇಶನ ಹೊಂದಿರುವ, 4 ಯುನಿಟ್ ಮನೆ ಕಟ್ಟಿಕೊಳ್ಳುವವರಿಗೆ ಬಿಲ್ಡಿಂಗ್ ಪ್ಲಾನ್ ಅನ್ನು ನೋಂದಾಯಿತ ವಾಸ್ತುಶಿಲ್ಪಿ (ರ್ಕಿಟೆಕ್ಟ್) ಅಥವಾ ಎಂಜಿನಿಯರ್ ಮೂಲಕ ಆನ್ಲೈನ್ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿ ಪಡೆಯಬಹುದು. ಈ ಯೋಜನೆಯಿಂದಾಗಿ ಸರ್ವಜನಿಕರು ತಮ್ಮ ಕಟ್ಟಡದ ನಕ್ಷೆಗೆ ಅನುಮತಿ ಪಡೆಯಲು ಪಾಲಿಕೆ ಕಚೇರಿಗಳನ್ನು ಅಲೆಯುವಂತಿಲ್ಲ. ಜತೆಗೆ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿಯೂ ನರ್ಮಾಣವಾಗುವುದಿಲ್ಲ ಎಂದು ತಿಳಿಸಿದರು.
ಅನುಮತಿ ನೀಡುವ ವಾಸ್ತುಶಿಲ್ಪಿಗಳು ಹಾಗೂ ಎಂಜಿನಿಯರ್ಗಳು ರ್ಕಾರದ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿರಬೇಕು. ಕಟ್ಟಡದ ನಕ್ಷೆ ನಿಯಮಾನುಸಾರವಾಗಿ ತನ್ನದೇ ಆದ ರೀತಿಯಲ್ಲಿ ತಂತ್ರಜ್ಞಾನದ ಮೂಲಕ ಪರಿಶೀಲನೆ ಮಾಡಲಾಗುವುದು. ಆನ್ಲೈನ್ನಲ್ಲೇ ಶುಲ್ಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಳೆದ ರ್ಷ 9 ಸಾವಿರ ಕಟ್ಟಡ ನಕ್ಷೆ ಅನುಮತಿ ನೀಡಲಾಗಿದೆ. ಈ ಬಾರಿ 10 ಸಾವಿರ ನಕ್ಷೆ ಅನುಮತಿ ನೀಡಬಹುದು ಎಂದು ಅಂದಾಜು ಮಾಡಲಾಗಿದೆ ಎಂದು ಹೇಳಿದರು.
ನಾವು ನಾಗರಿಕರನ್ನು ನಂಬಬೇಕು. ಪ್ರಮಾಣಿಕೃತ ಎಂಜಿನಿಯರ್ ಹಾಗೂ ವಾಸ್ತುಶಿಲ್ಪಿ ಗಳನ್ನು ನಂಬಬೇಕು. ಬ್ರ್ಯಾಂಡ್ ಬೆಂಗಳೂರಿಗೆ ಸಂಬಂಧಿಸಿದಂತೆ ನಮಗೆ ಬಂದ 70 ಸಾವಿರಕ್ಕೂ ಹೆಚ್ಚು ಸಲಹೆ ಗಳಲ್ಲಿ ಜನರು ತಮಗಾಗುತ್ತಿರುವ ತೊಂದರೆ ಬಗ್ಗೆ ಮಾಹಿತಿ ನೀಡಿದ್ದರು. ನಾವು ಒಂದೊಂದಾಗಿ ಅವರ ಸಮಸ್ಯೆ ಬಗೆಹರಿಸಿ ಅವರ ಸಲಹೆಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.
ಈ ಯೋಜನೆಯನ್ನು ಮೊದಲ ಹಂತದಲ್ಲಿ ರಾಜರಾಜೇಶ್ವರಿನಗರ ಹಾಗೂ ದಾಸರಹಳ್ಳಿ ವಲಯದ ಎಲ್ಲಾ ವರ್ಡ್ ಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡುತ್ತೇವೆ. ನಂತರ ಬೆಂಗಳೂರಿಗೆ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಹೊಸ ತೆರಿಗೆ ಪದ್ಧತಿ
2020ರಲ್ಲಿ ಬಿಜೆಪಿ ರ್ಕಾರ ತೆರಿಗೆ ಕಾಯ್ದೆ ವಿಚಾರವಾಗಿ ತಿದ್ದುಪಡಿ ಮಾಡಿದರು. ಅದರಲ್ಲಿ ತೆರಿಗೆ ಪಾವತಿ ವಿಚಾರದಲ್ಲಿ ಅನೇಕ ಏರುಪೇರುಗಳಾದವು. ʼಬಾಗಿಲಿಗೆ ಬಂತು ರ್ಕಾರ-ಸೇವೆಗೆ ಇರಲಿ ಸಹಕಾರʼ ಕರ್ಯಕ್ರಮದಲ್ಲಿ ಈ ಬಗ್ಗೆ ಅನೇಕ ದೂರುಗಳು ವ್ಯಕ್ತವಾದವು. ಇದಕ್ಕೆ ಪರಿಹಾರ ನೀಡಲು ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ ತಂದು ಎಲ್ಲೆಲ್ಲಿ ದಂಡದ ಸಮಸ್ಯೆ ಇದೆ ಅಲ್ಲೆಲ್ಲಾ 2024ರ ಜುಲೈ 31ರವರೆಗೂ ತೆರಿಗೆ ಕಟ್ಟಿದವರಿಗೆ ದಂಡ ಹಾಗೂ ಬಡ್ಡಿ ಮನ್ನಾ ಮಾಡುವ ತರ್ಮಾನ ಮಾಡಿದ್ದೇವೆ. ಬೆಂಗಳೂರಿನ ನಾಗರಿಕರು ಇದರ ಉಪಯೋಗ ಪಡೆಯಬೇಕು. ದಂಡವನ್ನು ಶೇ.200 ರಿಂದ ಶೇ.100ಕ್ಕೆ ಇಳಿಸಿದ್ದೇವೆ. ಇನ್ನು ನಾವು 5 ರ್ಷದವರೆಗೂ ಲೆಕ್ಕಾಚಾರದಲ್ಲಿ ತೆರಿಗೆ ಬಾಕಿಯನ್ನು ವಸೂಲಿ ಮಾಡಲು ತರ್ಮಾನಿಸಿದ್ದೇವೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಪ್ರಸ್ತುತ ಇದ್ದ ಯುನಿಟ್ ವಿಸ್ತರ್ಣ ಮೌಲ್ಯ ಆಸ್ತಿ ತೆರಿಗೆ ಪದ್ಧತಿಯನ್ನು 2008ರಲ್ಲಿ ಜಾರಿಗೊಳಿಸಲಾಗಿತ್ತು. ಆಗ ಆಸ್ತಿಗಳನ್ನು 18 ರ್ಗೀಕರಣ ಮಾಡಲಾಗಿತ್ತು. ಇದರಿಂದ ತೆರಿಗೆ ಪಾವತಿಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮರ್ಗಸೂಚಿ ದರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಏಕರೂಪದ ಆಸ್ತಿ ತೆರಿಗೆ ನಿಗದಿ ಮಾಡಲಾಗಿದೆ. ಈ ವ್ಯವಸ್ಥೆಯಿಂದ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಲಾಗಿದೆ. ಈಗ ನಾವು 6 ರ್ಗೀಕರಣಗಳನ್ನು ಮಾಡಿದ್ದು, ವಸತಿ (ಸ್ವಂತ ಬಳಕೆ ಹಾಗೂ ಬಾಡಿಗೆದಾರರ ಬಳಕೆ), ವಾಣಿಜ್ಯ, ಕೈಗಾರಿಕಾ, ಸ್ಟಾರ್ ಹೊಟೇಲ್, ವಿನಾಯಿತಿ ನೀಡಲಾದ ಹಾಗೂ ಸಂಪರ್ಣ ಖಾಲಿ ಜಮೀನುಗಳು ಎಂಬ ರ್ಗೀಕರಣ ಮಾಡಲಾಗಿದೆ ಎಂದು ಹೇಳಿದರು.
ಕಳೆದ ಬಾರಿ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದ್ದು 2016ರಲ್ಲಿ. ಆಗ ವಸತಿ ಆಸ್ತಿಗಳಿಗೆ ಶೇ.20, ವಸತಿಯೇತರ ಉದ್ದೇಶದ ಆಸ್ತಿಗಳಿಗೆ ಶೇ.25 ಏರಿಕೆಯಾಗಿತ್ತು. ಕಳೆದ ಎಂಟು ರ್ಷಗಳಿಂದ ಆಸ್ತಿ ಮೌಲ್ಯ ಏರಿಕೆಯಾಗಿರಲಿಲ್ಲ. ಈಗ ನಾವು ಈ ಬಗ್ಗೆ ರ್ಚೆ ಮಾಡಿ ಇದನ್ನು ಕಡಿಮೆ ಮಾಡಲು, ಆಸ್ತಿ ತೆರಿಗೆ ಹೆಚ್ಚಳದ ಮಿತಿಯನ್ನು ಶೇ.10ಕ್ಕೆ ನಿಗದಿ ಪಡಿಸಲಾಗಿದೆ. ಬೆಂಗಳೂರಿನಲ್ಲಿ 18 ಲಕ್ಷ ಆಸ್ತಿ ಮಾಲೀಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ. ಇವರೆಲ್ಲರೂ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯೊಳಗೆ ಬರಬೇಕು ಎಂದು ತಿಳಿಸಿದರು.
ಅಪರಾಧ
ಆವಲಹಳ್ಳಿ ದಾಳಿ: ಅಕ್ರಮ ಜಿಲೆಟಿನ್ ದಾಸ್ತಾನು ಪತ್ತೆ, 225 ಕಡ್ಡಿ ವಶ
ಬೆಂಗಳೂರು: ರಾಜ್ಯ ರಾಜಧಾನಿಯ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಭಾರಿ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸೌಧ ಲೇಔಟ್ ಸಮೀಪದ ಯರಪ್ಪನಹಳ್ಳಿ ಗ್ರಾಮದ ಕ್ವಾರಿ ಮೇಲೆ ದಾಳಿ ನಡೆಸಿದ ಪೊಲೀಸರು ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್ಗಳನ್ನು ಪತ್ತೆಹಚ್ಚಿದ್ದಾರೆ.
ಪೊಲೀಸರ ಪ್ರಕಾರ, ವೆಂಕಟೇಶ್ವರ ಗ್ರಾನೈಟ್ಸ್ ಕ್ರಶರ್ಗೆ ಸೇರಿದ ಕ್ವಾರಿಯಲ್ಲಿ ಕಲ್ಲುಬಂಡೆಗಳನ್ನು ಸ್ಫೋಟಿಸಲು ಬಳಸುವ 225 ಜಿಲೆಟಿನ್ ಕಡ್ಡಿಗಳು ಹಾಗೂ 50 ಡಿಟೊನೇಟರ್ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಸ್ಥಳೀಯರಿಂದ ಬಂದ ಮಾಹಿತಿಯ ಆಧಾರದ ಮೇಲೆ ಆವಲಹಳ್ಳಿ ಠಾಣೆ ಪೊಲೀಸರು ದಾಳಿ ನಡೆಸಿ ಈ ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಕ್ವಾರಿ ಮಾಲೀಕರಾದ ವೆಂಕಟರಮಣರೆಡ್ಡಿ ಹಾಗೂ ಉಸ್ತುವಾರಿ ಲೋಕೇಶ್ರೆಡ್ಡಿ ಅವರು ಸರ್ಕಾರದಿಂದ ಅಗತ್ಯವಾದ ಪರವಾನಗಿ ಪಡೆಯದೇ ಈ ಸ್ಪೋಟಕಗಳನ್ನು ಸಂಗ್ರಹಿಸಿ ಬಳಸುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಜೊತೆಗೆ, ಸುರಕ್ಷತಾ ನಿಯಮಗಳನ್ನು ಪಾಲಿಸದೇ ರಾತ್ರಿ ವೇಳೆ ಕಲ್ಲುಬಂಡೆಗಳನ್ನು ಸ್ಫೋಟಿಸುತ್ತಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಶರ್ ಮಾಲೀಕರು, ಉಸ್ತುವಾರಿ ಹಾಗೂ ಕ್ವಾರಿಯಲ್ಲಿ ಸ್ಫೋಟಕ ಬಳಕೆಯಲ್ಲಿ ತೊಡಗಿದ್ದ ವಿಕಾಸ್, ತೋಹಿದ್ ಮತ್ತು ಸಂದೀಪ್ ವಿರುದ್ಧ ನಿರ್ಲಕ್ಷ್ಯ ಆರೋಪ ಹಾಗೂ ಸ್ಫೋಟಕಗಳ ಕಾಯಿದೆ 1884 ಅಡಿ ಪ್ರಕರಣ ದಾಖಲಿಸಿದ್ದಾರೆ.
ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಸ್ಪೋಟಕಗಳನ್ನು ಕೇವಲ ಕಲ್ಲುಬಂಡೆ ಸ್ಫೋಟಕ್ಕೆ ಮಾತ್ರ ಬಳಸಲಾಗಿತ್ತೇ ಅಥವಾ ಬೇರೆ ದುರುದ್ದೇಶವಿದೆಯೇ ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ. ಈ ನಡುವೆ, ವೈಟ್ಫೀಲ್ಡ್ ಉಪ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಸ್ಥಳೀಯ ಪ್ರದೇಶದಲ್ಲಿ ಈ ಘಟನೆ ಆತಂಕ ಮೂಡಿಸಿದ್ದು, ಭದ್ರತಾ ಕ್ರಮಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.
ಅಪರಾಧ
ಬಿಟ್ಕಾಯಿನ್ ಹಗರಣ: ನಲಪಾಡ್ಗೆ ಎಸ್ಐಟಿ ಚಾರ್ಜ್ಶೀಟ್ ಶಾಕ್
ಬೆಂಗಳೂರು: 6 ವರ್ಷಗಳ ಹಿಂದಿನ ಬಿಟ್ಕಾಯಿನ್ ಹಗರಣವು (Karnataka Bitcoin Scam) ಮತ್ತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ Mohammed Nalapad ಅವರಿಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ.
ವಿಶೇಷ ತನಿಖಾ ದಳ (SIT) ಇದೀಗ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದು, ನಲಪಾಡ್ ಕೂಡ ಈ ಹಗರಣದಲ್ಲಿ ಪಾಲುದಾರರಾಗಿದ್ದು ಹಣದ ಲಾಭ ಪಡೆದಿದ್ದಾರೆ ಎಂಬುದನ್ನು ಉಲ್ಲೇಖಿಸಿದೆ. ಹಗರಣದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿರುವ ಹ್ಯಾಕರ್ ಶ್ರೀಕೃಷ್ಣ @ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರೊಂದಿಗೆ ನಲಪಾಡ್ ನಂಟು ಹೊಂದಿದ್ದರೆಂಬ ಅಂಶವೂ ಚಾರ್ಜ್ಶೀಟ್ನಲ್ಲಿ ಸೇರಿಸಲಾಗಿದೆ.
ಎಸ್ಐಟಿ ಆರೋಪಗಳ ಪ್ರಕಾರ, ಬಿಟ್ಕಾಯಿನ್ ನಗದೀಕರಣಕ್ಕಾಗಿ ನಲಪಾಡ್ ಅವರು ಹ್ಯಾಕರ್ ಶ್ರೀಕಿಯನ್ನು ಸಂಪರ್ಕಿಸಿದ್ದರೆಂದು ತಿಳಿದುಬಂದಿದೆ. ಮುಂಬೈ ಮೂಲದ ಸ್ನೇಹಿತ ಹಾಗೂ ಖಂಡೇವಾಲ ಮೂಲಕ ಹವಾಲಾ ಜಾಲದ ಮೂಲಕ ಹಣವನ್ನು ನಗದೀಕರಿಸಿರುವ ಆರೋಪವೂ ಇದೆ. ಈ ಪ್ರಕ್ರಿಯೆಯಲ್ಲಿ ಕಮಿಷನ್ ರೂಪದಲ್ಲಿ ನಲಪಾಡ್ಗೂ ಹಣ ಸಂದಾಯವಾಗಿರುವುದಾಗಿ ತನಿಖಾ ವರದಿಯಲ್ಲಿ ಹೇಳಲಾಗಿದೆ.
ಇದೀಗ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಕೂಡ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿಗೊಳಿಸಿದೆ. ಇದಕ್ಕೂ ಮುನ್ನ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಅವರನ್ನು ಇಡಿ ಸುಮಾರು 16 ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.
ಈ ನಡುವೆ, Enforcement Directorate ಹಾಗೂ Special Investigation Team Karnataka ತನಿಖೆ ಮುಂದುವರೆಸುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.
ದೇಶ
ಕನಕಪುರದಲ್ಲಿ ಡಿಕೆಶಿ ವರ್ತನೆಗೆ ಬಿಜೆಪಿ ತೀವ್ರ ಆಕ್ರೋಶ
ಬೆಂಗಳೂರು: ತಮ್ಮ ತವರು ಕ್ಷೇತ್ರ ಕನಕಪುರದಲ್ಲಿ ನಡೆದ ಒಂದು ಘಟನೆ ಇದೀಗ ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿಗಳೂ ಆಗಿರುವ D. K. Shivakumar ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಅರ್ಧ ತಿಂದ ಸೇಬುಗಳನ್ನು ಕಾರ್ಯಕರ್ತರತ್ತ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ಭಾನುವಾರ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ, ಸೇಬುಗಳಿಂದ ತಯಾರಿಸಿದ ಬೃಹತ್ ಹಾರವನ್ನು ಕ್ರೇನ್ ಮೂಲಕ ಡಿ.ಕೆ.ಶಿವಕುಮಾರ್ ಅವರಿಗೆ ಹಾಕಲಾಗಿತ್ತು. ಕಾರ್ಯಕ್ರಮದ ಬಳಿಕ ಅವರು ಎರಡು ಸೇಬುಗಳನ್ನು ಕಚ್ಚಿ ತಿಂದ ನಂತರ ಉಳಿದ ಅರ್ಧ ಸೇಬುಗಳನ್ನು ಒಂದರ ನಂತರ ಒಂದಾಗಿ ಪಕ್ಷದ ಕಾರ್ಯಕರ್ತರತ್ತ ಎಸೆದು ಸ್ಥಳದಿಂದ ತೆರಳಿದ್ದಾರೆ. ಈ ಘಟನೆ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ರಾಜಕೀಯ ಚರ್ಚೆ ತೀವ್ರಗೊಂಡಿದೆ.
ಈ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿರುವ Bharatiya Janata Party, ಈ ನಡೆ ಕಾಂಗ್ರೆಸ್ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದೆ. ಎಕ್ಸ್ (ಹಳೆಯ ಟ್ವಿಟರ್)ನಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಮತದಾರರ ಮೇಲೆ ಗೌರವವಿಲ್ಲದ ವರ್ತನೆ ಇದು ಎಂದು ಕಿಡಿಕಾರಿದೆ. “ಯಾರ ಮತಗಳಿಂದ ಅಧಿಕಾರಕ್ಕೆ ಬಂದಿದ್ದಾರೋ ಅವರ ಮೇಲೆಯೇ ಅವಮಾನಕಾರಿ ನಡೆ ತೋರಿಸುವುದು ಸರಿಯಲ್ಲ” ಎಂದು ಬಿಜೆಪಿ ಹೇಳಿದೆ.
ಇದೇ ವೇಳೆ, ಸಾರ್ವಜನಿಕ ಗೌರವವನ್ನು ಮಾತಿನಲ್ಲಿ ಅಲ್ಲ, ನಡೆ-ನುಡಿಯಲ್ಲಿ ತೋರಿಸಬೇಕು ಎಂಬ ಸಂದೇಶವನ್ನು ಬಿಜೆಪಿ ನೀಡಿದೆ. ಸಾರ್ವಜನಿಕರು ಭಿಕ್ಷೆ ಬೇಡುವವರಲ್ಲ, ಗೌರವಕ್ಕೆ ಅರ್ಹರು ಎಂದು ಕೂಡ ಪೋಸ್ಟ್ನಲ್ಲಿ ಉಲ್ಲೇಖಿಸಲಾಗಿದೆ.
ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ರಾಜಕೀಯ ವಾಗ್ವಾದವನ್ನು ಮತ್ತಷ್ಟು ತೀವ್ರಗೊಳಿಸಿದೆ.
