Connect with us

ಚುನಾವಣೆ

ಮೋದಿ ಸರ್ಕಾರದಿಂದ CAA ಜಾರಿ; ಏನಿದು ಪೌರತ್ವ ತಿದ್ದುಪಡಿ ಕಾಯ್ದೆ?, ಯಾರಿಗೆ ಅನ್ವಯ? ಮುಸ್ಲಿಮರ ವಿರೋಧ ಏಕೆ?

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಸೋಮವಾರದಿಂದ ಜಾರಿಗೆ ಬಂದಿದ್ದು, ಗೃಹ ಸಚಿವಾಲಯವು ಸಿಎಎ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ. ಈ ಮಸೂದೆಯನ್ನು 2019ರ ಡಿಸೆಂಬರ್ 11ರಂದು ಸಂಸತ್ತಿನಲ್ಲಿ ಮಂಡಿಸಿದಾಗ ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. ಆದರೆ ಇದೀಗ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಮೋದಿ ಸರ್ಕಾರ ಇದನ್ನು ಜಾರಿಗೆ ತಂದಿದೆ.

ಇಷ್ಟಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

ದೌರ್ಜನ್ಯಕ್ಕೊಳಗಾಗಿ ಭಾರತಕ್ಕೆ ವಲಸೆ ಬಂದಿರುವ ವಿದೇಶಿ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಯೋಜನೆಯೇ ಪೌರತ್ವ ತಿದ್ದುಪಡಿ ಕಾಯ್ದೆ (CAA). ಇದರಲ್ಲಿ 1955ರ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, 2014ರ ಡಿಸೆಂಬರ್‌ಗಿಂತ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಬೇಸತ್ತು ಭಾರತಕ್ಕೆ ಆಗಮಿಸಿದ ಅಲ್ಪಸಂಖ್ಯಾತ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. 2016 ರಲ್ಲಿ ಲೋಕಸಭೆಯಲ್ಲಿ ಮೊದಲ ಬಾರಿಗೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆಯಿಂದ ಅತಂತ್ರ ಸ್ಥಿತಿಯಲ್ಲಿ ತಲುಪಿತ್ತು. ಬಳಿಕ ಅದನ್ನು ಸಂಸದೀಯ ಸಮಿತಿಗೆ (Cabinet Committee) ಕಳುಹಿಸಲಾಯಿತು. ಬಳಿಕ ಮತ್ತೆ ಡಿಸೆಂಬರ್ 2019 ರಲ್ಲಿ ಲೋಕಸಭೆಯಲ್ಲಿ ಮಂಡಿಸಲಾಯಿತು. ಅಲ್ಲಿಂದ ಅಂಗೀಕಾರವಾದ ಬಳಿಕ ರಾಜ್ಯಸಭೆಯಲ್ಲೂ ಅದನ್ನು ಅಂಗೀಕರಿಸಲಾಯಿತು. ಜನವರಿ 10, 2020 ರಂದು ರಾಷ್ಟ್ರಪತಿಗಳ ಆಂಕಿತ ಕೂಡ ಅದಕ್ಕೆ ಲಭಿಸಿತು.

6 ವರ್ಷಗಳಲ್ಲಿ ಭಾರತೀಯ ಪೌರತ್ವ

ಈ ಕಾಯ್ದೆಯ ಅನ್ವಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಿಂದ ಭಾರತಕ್ಕ ಆಗಮಿಸಿದ ಈ ನಿರಾಶ್ರಿತರಿಗೆ 6 ವರ್ಷಗಳೊಳಗೆ ಭಾರತೀಯ ಪೌರತ್ವ ನೀಡಲಾಗುವುದು. ತಿದ್ದುಪಡಿಯ ಮೂಲಕ, ಈ ನಿರಾಶ್ರಿತರ ಸ್ವಾಭಾವಿಕತೆಯ ನಿವಾಸದ ಅಗತ್ಯವನ್ನು 11 ವರ್ಷಗಳಿಂದ ಐದು ವರ್ಷಗಳಿಗೆ ಕಡಿಮೆ ಮಾಡಲಾಗಿದೆ. ಮಹತ್ವದ ವಿಷಯ ಎಂದರೆ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ… ಬದಲಿಗೆ ಅದು ಪೌರತ್ವವನ್ನು ನೀಡುವ ಕಾನೂನು ಆಗಿದೆ.

ದೇಶದ ಮುಸ್ಲಿಮರ ವಿರೋಧವೇಕೆ?

ಈ ಕಾಯ್ದೆಯಲ್ಲಿ ಅಥವಾ ಈ ಕಾನೂನಿನಲ್ಲಿ ಮುಸ್ಲಿಮರನ್ನು ಸೇರಿಸಲಾಗಿಲ್ಲ ಅಲ್ಲದೆ ದೇಶದ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳಲಾಗುತ್ತದೆ ಎಂಬ ವಾದ ಕೂಡ ಈ ಕಾಯ್ದೆಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ. ಈ ಕಾಯಿದೆಯ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಲಾಗುತ್ತದೆ ಮತ್ತು ಇದು ಸಂವಿಧಾನದ 14 ನೇ ವಿಧಿ ಮತ್ತು ಸಮಾನತೆಯ ಹಕ್ಕಿನ

ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮೂರು ದೇಶಗಳ ಮುಸ್ಲಿಮರಿಗೆ ಪೌರತ್ವ ನೀಡಬೇಕು ಎಂಬ ಬೇಡಿಕೆಯೂ ಇದೆ.

ಭಾರತೀಯ ಮುಸ್ಲಿಮರಿಗೆ ಬೇಕಿಲ್ಲ ಆತಂಕ

ಇನ್ನು ಮೋದಿ ಸರ್ಕಾರ ಹೇಳಿರುವಂತೆ ಈ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ಆತಂಕವಿಲ್ಲ. ಭಾರತೀಯ ಮುಸ್ಲಿಮರ ಪೌರತ್ವವನ್ನು ಈ ಕಾಯ್ದೆ ಕಸಿಯುವುದಿಲ್ಲ. ಆದರೆ ಭಾರತೀಯರಲ್ಲದ ಮುಸ್ಲಿಮರಿಗೆ ಪೌರತ್ವ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದುವರೆಗೆ ಅವರಿಗೆ ಪೌರತ್ವ ಹೇಗೆ ಸಿಗುತ್ತಿತ್ತು?

ಯಾರಾದರೂ ಭಾರತದ ಪೌರತ್ವವನ್ನು ಬಯಸಿದರೆ, ಅವರು ಕನಿಷ್ಠ 11 ವರ್ಷಗಳ ಕಾಲ ಭಾರತದಲ್ಲಿ ವಾಸಿಸಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಹೊಸ ಕಾನೂನಿನ ಪ್ರಕಾರ, ಮೂರು ದೇಶಗಳಿಂದ ಬರುವ ಮುಸ್ಲಿಮೇತರರಿಗೆ 11 ವರ್ಷಗಳ ಬದಲಿಗೆ 6 ವರ್ಷಗಳ ಒಳಗೆ ಪೌರತ್ವ ನೀಡಲಾಗುವುದು ಎನ್ನಲಾಗಿದೆ. ಆದರೆ ಈ ದೇಶಗಳನ್ನು ಹೊರತುಪಡಿಸಿ ಬೇರೆ ದೇಶಗಳಿಂದ ಬರುವ ಜನರು ಯಾವುದೇ ಧರ್ಮ ಅಥವಾ ಸಮುದಾಯಕ್ಕೆ ಸೇರಿದವರಾಗಿದ್ದರೂ ಭಾರತದಲ್ಲಿ 11 ವರ್ಷಗಳ ಕಾಲಾವಧಿ ಪೂರ್ಣಗೊಳಿಸಬೇಕು.

ಸಿಎಎ ಜಾರಿ ಅನುಕೂಲಗಳೇನು?

ಮೋದಿ ಸರ್ಕಾರ ಹೇಳಿದಂತೆ ದಶಕಗಳಿಂದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳ ಎದುರಿಸುತ್ತಿರುವ ಮುಸ್ಲಿಮೇತರರಿಗೆ ಗೌರವಯುತ ಜೀವನವನ್ನು ಒದಗಿಸುವುದು ಇದರ ಮತ್ತೊಂದು ಉದ್ದೇಶವಾಗಿದೆ. ಪೌರತ್ವ ಹಕ್ಕುಗಳು ಅವರ ಭಾಷೆ, ಸಾಂಸ್ಕೃತಿಕ ಮ

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚುನಾವಣೆ

ವಿಜಯ್ ರಾಜಕೀಯ ಪ್ರವೇಶಕ್ಕೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎನ್‌ಡಿಟಿವಿ ಪ್ರಾಫಿಟ್ ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಅವರು, ವಿಜಯ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕಾರಣಕ್ಕೆ ಹೊಸ ತಿರುವು ನೀಡಲಿದೆ ಎಂದು ಅಭಿಪ್ರಾಯಪಟ್ಟರು.

“ದಳಪತಿ ವಿಜಯ್ ಖಂಡಿತವಾಗಿಯೂ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಾರೆ. ಆದರೆ ಅವರು ಯಾವ ಮಟ್ಟಿಗೆ, ಯಾವ ಪಕ್ಷಗಳ ಮತಗಳನ್ನು ಕಸಿದುಕೊಳ್ಳುತ್ತಾರೆ ಎಂಬುದು ಇನ್ನೂ ನೋಡಬೇಕಿದೆ. ವಿಶೇಷವಾಗಿ ಮಹಿಳಾ ಮತಗಳ ಮೇಲೆ ಅವರ ಪ್ರಭಾವ ಎಷ್ಟಿರುತ್ತದೆ ಎಂಬುದೇ ಮುಖ್ಯ ಅಂಶ” ಎಂದು ಸೀತಾರಾಮನ್ ಹೇಳಿದರು. ತಮಿಳುನಾಡು ರಾಜಕೀಯದಲ್ಲಿ ಮಹಿಳೆಯರು ಶಕ್ತಿಶಾಲಿ ಹಾಗೂ ನಿರ್ಧಾರಾತ್ಮಕ ಪಾತ್ರ ವಹಿಸುತ್ತಾರೆ. ಆ ಕಾರಣದಿಂದ ಮುಂದಿನ ಚುನಾವಣೆ ಅತ್ಯಂತ ಆಸಕ್ತಿದಾಯಕವಾಗಲಿದೆ ಎಂದರು.

ಇದೇ ವೇಳೆ, ಆಡಳಿತಾರೂಢ ಡಿಎಂಕೆಗೆ (DMK) ಈ ಬಾರಿ ಎನ್‌ಡಿಎ ಮೈತ್ರಿಕೂಟ (NDA Alliance) ಪ್ರಬಲ ಪೈಪೋಟಿ ನೀಡಲಿದೆ ಎಂದು ಅವರು ಪ್ರತಿಪಾದಿಸಿದರು. “ಬೃಹತ್ ಎನ್‌ಡಿಎ ಒಕ್ಕೂಟವನ್ನು ಎದುರಿಸುತ್ತಿರುವ ಡಿಎಂಕೆ ತನ್ನ ಗೆಲುವಿನ ಬಗ್ಗೆ ಆತ್ಮವಿಶ್ವಾಸದಲ್ಲಿಲ್ಲ. ಕಳೆದ ಒಂದು ವರ್ಷದಲ್ಲಿ ಅವರ ನಡೆ-ನುಡಿಗಳು ಆತಂಕ ಮತ್ತು ಅಸ್ಥಿರತೆಯನ್ನು ತೋರಿಸುತ್ತಿವೆ” ಎಂದು ಟೀಕಿಸಿದರು.

ಡಿಎಂಕೆ ಮಂತ್ರಿಗಳ ವಿವಾದಾತ್ಮಕ ಹೇಳಿಕೆಗಳು, ಉಚಿತ ಕೊಡುಗೆಗಳ ಘೋಷಣೆ, ದೇವಾಲಯ ಬೇಟಿ ಮುಂತಾದ ಕ್ರಮಗಳು ಪಕ್ಷದ ಆತಂಕವನ್ನು ಸ್ಪಷ್ಟಪಡಿಸುತ್ತವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. “ತಮಿಳುನಾಡಿನ ಅಭಿವೃದ್ಧಿ ಬಗ್ಗೆ ಮಾತನಾಡುವುದರಿಂದ ಮಾತ್ರ ಮತಗಳನ್ನು ಗಳಿಸಲು ಸಾಧ್ಯವಿಲ್ಲ. ಇದು ಡಿಎಂಕೆಯ ಪ್ರಮುಖ ಮಿತಿ. ಈ ಸತ್ಯವನ್ನು ಡಿಎಂಕೆಯೂ ಅರಿತಿದೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ದಳಪತಿ ವಿಜಯ್ ರಾಜಕೀಯ ಪ್ರವೇಶ, ಮಹಿಳಾ ಮತಗಳ ಪಾತ್ರ ಮತ್ತು ಎನ್‌ಡಿಎ–ಡಿಎಂಕೆ ನಡುವಿನ ಪೈಪೋಟಿ ತಮಿಳುನಾಡು ಚುನಾವಣೆಯನ್ನು ಮತ್ತಷ್ಟು ಕುತೂಹಲಕಾರಿಯಾಗಿಸುತ್ತಿದೆ.

Continue Reading

ಚುನಾವಣೆ

BENGALURU ಜಿಬಿಎ ಚುನಾವಣೆ ಮುನ್ನ ಶಿವನಪಾಳ್ಯ ವಾರ್ಡ್‌ನಲ್ಲಿ ಮತಗಟ್ಟೆ ಗೊಂದಲ

ಬೆಂಗಳೂರು, ಫೆಬ್ರವರಿ 7, 2026: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್ (ಸಂಖ್ಯೆ 19) ವ್ಯಾಪ್ತಿಯಲ್ಲಿ ಮತಗಟ್ಟೆಗಳ ವಿಂಗಡಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಬಿಎ ಚುನಾವಣೆ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಸಿ.ಎಂ. ಸತ್ಯನಾರಾಯಣ್ (CMC) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಗಟ್ಟೆಗಳ ಪಟ್ಟಿಯಲ್ಲಿ ಗಂಭೀರ ತಪ್ಪುಗಳಿರುವುದನ್ನು ಉಲ್ಲೇಖಿಸಿ, ಬಿಜೆಪಿಯ ಬಿಎಲ್‍ಎ1 ದೀಪಕ್ ಕುಮಾರ್ ಅವರ ಮೂಲಕ ಕಂದಾಯ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, ಸ್ಥಳ ಪರಿಶೀಲನೆ ನಡೆಸದೇ ಮತಗಟ್ಟೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿರುವುದೇ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.

ದೂರು ಪ್ರಕಾರ, ಲಿಂಗಾಯತರ ಬೀದಿ, ಅಂಗಡಿ ಬೀದಿ, ಹಸಿ ಕರಗ ಮಂಟಪ ಹಾಗೂ ಹರ್ಷ ಲೇಔಟ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 21 ರಿಂದ 31 ರವರೆಗಿನ ಪ್ರದೇಶಗಳು ವಾಸ್ತವವಾಗಿ ಕೆಂಗೇರಿ ವಾರ್ಡ್‌ಗೆ ಸೇರಬೇಕಿದ್ದರೂ, ತಪ್ಪಾಗಿ ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ. ಇದೇ ರೀತಿ, ಬಾಬಾ ಸಾಬ್ ಪಾಳ್ಯ ಗ್ರಾಮಕ್ಕೆ ಸೇರಿದ ಮತಗಟ್ಟೆ ಸಂಖ್ಯೆ 32 ಮತ್ತು 33 ಕೂಡ ಶಿವನಪಾಳ್ಯ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಇದಲ್ಲದೆ, ಬಂಡೆ ಮಠ ರಸ್ತೆಯ ಮತಗಟ್ಟೆ ಸಂಖ್ಯೆ 34 ಮತ್ತು 35 ಕೆಂಗಲ್ ಹನುಮಂತಯ್ಯ ವಾರ್ಡ್‌ಗೆ (ವಾರ್ಡ್ 18) ಸೇರಬೇಕಿದ್ದರೂ, ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮತಗಟ್ಟೆ ಸಂಖ್ಯೆ 19ರ ಮಾಹಿತಿ ಲಭ್ಯವಿಲ್ಲದಿರುವುದು ಮತದಾರರಲ್ಲಿ ಗೊಂದಲ ಮತ್ತು ಆತಂಕವನ್ನು ಹೆಚ್ಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಿ.ಎಂ. ಸತ್ಯನಾರಾಯಣ್, “ಕ್ಷೇತ್ರ ಸಮೀಕ್ಷೆ ಇಲ್ಲದೆ ಮತದಾರರ ಪಟ್ಟಿ ಸಿದ್ಧಪಡಿಸಿರುವುದು ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಧಕ್ಕೆ ತರುತ್ತದೆ. ಕೂಡಲೇ ತಪ್ಪುಗಳನ್ನು ಸರಿಪಡಿಸಿ, ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಮತಗಟ್ಟೆ ಮರುಹಂಚಿಕೆ ಮಾಡಬೇಕು,” ಎಂದು ಆಗ್ರಹಿಸಿದರು. ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

Continue Reading

Trending