Connect with us

ರಾಜಕೀಯ

ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು? ಶಿವರಾಜ್ ಕುಮಾರ್

Published

on

ಬೆಂಗಳೂರು: ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು? ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಈ ಬಾರಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ಪಕ್ಷವು ಗೀತಾ ಶಿವರಾಜ್‌ಕುಮಾರ್ ಅವರನ್ನು ತಮ್ಮ ಪಕ್ಷದಿಂದ ಕಣಕ್ಕಿಳಿಸಲು ನಿರ್ಧಾರ ಮಾಡಿದೆ. 10 ವರ್ಷಗಳ ನಂತರ ಪುನಃ ಚುನಾವಣಾ ಅಖಾಡಕ್ಕೆ ಗೀತಾ ಇಳಿಯುತ್ತಿದ್ದಾರೆ. ಈ ಬಗ್ಗೆ ಪತಿ ಶಿವರಾಜ್‌ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪತ್ನಿ ಪರವಾಗಿ ಚುನಾವಣಾ ಪ್ರಚಾರಕ್ಕೂ ತೆರಳುವುದಾಗಿ ಹೇಳಿದ್ದಾರೆ. ಬಂಗಾರಪ್ಪ ಕುಟುಂಬ ಒಂದಾಗಿಸಲು ಶಿವಕುಮಾರ್ ಮುಂದಾಗುತ್ತಿಲ್ಲ ಯಾಕೆ ಎಂಬ ಪ್ರಶ್ನೆಗೆ‌ ಉತ್ತರಿಸಿದ ಅವರು, ನೋಡಿ ಅವರನ್ನ ಒಂದು ಮಾಡೋಕೆ ನಾನ್ಯಾರು. ಅವರಾಗಿಯೇ ಒಂದಾಗಬೇಕು ಅಷ್ಟೇ ನಾನೇನು ಮಾಡಕ್ಕಾಗಲ್ಲ. ನಾನು ಆ ಮನೆಯ ಅಳಿಯನೇ ಹೊರತು ಅವರ ಮನೆ ಮಗನಲ್ಲ, ಲೋಕಸಭೆ ಚುನಾವಣೆ ಸಿದ್ಧತೆ ನಡೆಯುತ್ತಿದೆ. ಯಾವಾನಿಗಿಂದ ಚುನಾವಣಾ ಪ್ರಚಾರಕ್ಕೆ ಹೋಗಬೇಕು ಅನ್ನೋದು ತೀರ್ಮಾನ ಆಗಿಲ್ಲ. ಯಾವಾಗ ಹೋಗಬೇಕು ಅವಾಗ ಹೋಗ್ತೀನಿ. ಈ ಬಾರಿ ಪೂರ್ತಿ ಚುನಾವಣೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಸಂಸದರಾಗಬೇಕೆಂದೆ ಚುನಾವಣೆಗೆ ಬಂದಿರೋದು. ಕುಮಾರ್ ಬಂಗಾರಪ್ಪ ಬರ್ತಾರಾ ಚುನಾವಣೆ ಪ್ರಚಾರಕ್ಕೆ, ಅದೆಲ್ಲವೂ ಗೊತ್ತಿಲ್ಲ ‌ಸರ್ ನನಗೆ ಎಂದರು‌. ಸ್ಟಾರ್ ನಟರು ಚುನಾವಣಾ ಪ್ರಚಾರಕ್ಕೆ ಬರ್ತಾರೆ ಎಂಬ ಪ್ರಶ್ನೆಗೆ ಇನ್ನೂ ನಾವು ಯಾರಿಗೂ ತೊಂದರೆ ಕೊಡುವುದಕ್ಕೆ ಹೋಗಿಲ್ಲ. ಈ ಬಾರಿ ಬಿಸಿಲು ಜಾಸ್ತಿಯಿದೆ. ಅವರು ಪಾಪ ಒತ್ತಡದಿಂದ ಚುನಾವಣಾ ಪ್ರಚಾರಕ್ಕೆ ಬರಬಾರದು. ನಾನು ಕರೆದ್ರೆ ಬರ್ತಾರೆ ಹಾಗಂತ ಅವರನ್ನ ಕರೆಯುವುದಕ್ಕೆ ಹೋಗಬಾರದು. ನಮ್ಮ ನಟರಿಗೆ ಯಾವಾಗಲೂ ಸ್ಪೇಸ್ ಕೊಡಬೇಕು. ಇರೋ ಪ್ರೀತಿ ವಿಶ್ವಾಸ ಹಾಗೇ ಉಳಿಸಿಕೊಳ್ಳಬೇಕು ಎಂದರು. ಜೀವನದಲ್ಲಿ ಯಾವಾಗಲೂ ಕಾನ್ಫಿಡೆಂಟ್ ಆಗಿ ಇರಬೇಕು. ಇದು ಎಲೆಕ್ಷನ್ ಅಷ್ಟೇ, ಅದನ್ನು ನಾವೆಲ್ಲರೂ ಎದುರಿಸಬೇಕು, ಎದುರಿಸುತ್ತೇವೆ. ಮನುಷ್ಯ ಬದುಕಿರುವುದೇ ಭರವಸೆ, ನಂಬಿಕೆ ಮೇಲೆ. ಎಲ್ಲರೂ ಗೆಲ್ಲುತ್ತೇವೆ ಅಂತಾನೇ ಹೋಗೋದಲ್ವಾ? ರೇಸ್‌ ಹೋಗುವವರು ಗೆಲ್ಲುತ್ತೇನೆ ಅಂತಾನೇ ಹೋಗೋದು. ಸೋಲುತ್ತೇನೆ ಅಂತ ಯಾರೂ ಹೋಗಲ್ಲ. ಅಖಾಡದಲ್ಲಿ ಯಾರು ಬಂದ್ರೆ ಏನು? ಒಂದೇ ಸಲಕ್ಕೆ ಸ್ಟಾರ್ ಆಗೋಕೆ ಆಗಲ್ಲ. ನಿಧಾನಕ್ಕೆ ಹೆಜ್ಜೆ ಇಡಬೇಕು.

ದೇಶ

“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ

Published

on

By

ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.

ಟಿಕೆಟ್‌ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್‌ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್‌ ಅಸಮಾಧಾನಗೊಂಡಿದ್ದರು.

ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್‌ ಅವರನ್ನು ಸ್ವತಃ ಮಲ್ಲಿಕಾರ್ಜುನ್‌ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್‌, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.

ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ ಬಲ ಹೆಚ್ಚಿದಂತೆ ಕಾಣುತ್ತಿದೆ.

Continue Reading

ದೇಶ

ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”

Published

on

By

ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.

ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.

ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.

ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

Continue Reading

Trending