Connect with us

ಚುನಾವಣೆ

ಭಾರತದಲ್ಲಿ ಚುನಾವಣೆ ಸ್ಪರ್ಧಿಸಲು ಎಷ್ಟು ಹಣ ಬೇಕು? ನಿರ್ಮಲಾ ಹೇಳಿಕೆಯಿಂದ ಮೂಡಿದ ಪ್ರಶ್ನೆಗೆ ಇಲ್ಲಿದೆ ಉತ್ತರ

Published

on

ನವದೆಹಲಿ, ಮಾರ್ಚ್ 29: ‘ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸ್ಪರ್ಧಿಸಲು ಬೇಕಾದಷ್ಟು ಹಣ ನನ್ನ ಬಳಿ ಇಲ್ಲ. ಹಾಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಡಿರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ದೇಶದ ಹಣಕಾಸು ಸಚಿವರೇ ಚುನಾವಣೆ ಎದುರಿಸಲು ಬೇಕಾದಷ್ಟು ಹಣವಿಲ್ಲ ಎಂದು ಹೇಳುತ್ತಾರೆ ಎಂದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಎಷ್ಟು ದುಡ್ಡು ಬೇಕಾಗುತ್ತದೆ ಎಂಬ ಪ್ರಶ್ನೆ ಮೂಡುವುದು ಸಹಜ.

ಹಣಕಾಸು ಖಾತೆಯನ್ನೇ ಹೊಂದಿರುವ ಕೇಂದ್ರ ಸಚಿವರ ಬಳಿ ಚುನಾವಣೆಯಲ್ಲಿ ಸೆಣಸಲು ಬೇಕಾದಷ್ಟು ಹಣವಿಲ್ಲದಿದ್ದರೆ, ಭಾರತದಲ್ಲಿ ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಯ ಬಳಿ ಎಷ್ಟು ಹಣ ಬೇಕಾಗುತ್ತದೆ? ಈ ಬಗ್ಗೆ ತಿಳಿಯುವ ಪ್ರಯತ್ನ ಇಲ್ಲಿದೆ.

ಚುನಾವಣೆಗೆ ಸ್ಪರ್ಧಿಸುವ ವೆಚ್ಚವು ಅಭ್ಯರ್ಥಿಯ ಸಂಪತ್ತಿನ ಮೇಲೆ ಅವಲಂಬಿತವಾಗಿರುವುದೇನೋ ನಿಜ. ಆದರೆ ಭಾರತದ ಚುನಾವಣಾ ಆಯೋಗದ ಕೂಡ ಚುನಾವಣಾ ವೆಚ್ಚದ ಮೇಲೆ ಮಿತಿ ನಿಗದಿಪಡಿಸಿದೆ.

ಲೋಕಸಭೆಗೆ ಚುನಾವಣೆಗೆ 95 ಲಕ್ಷ ರೂ. ಮಿತಿ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯು ಹೆಚ್ಚು ಮತದಾರರನ್ನು ಹೊಂದಿರುವ ದೊಡ್ಡ ಕ್ಷೇತ್ರಗಳಲ್ಲಾದರೆ 95 ಲಕ್ಷ ರೂ.ವರೆಗೆ ಖರ್ಚು ಮಾಡಬಹುದು. ಅದಕ್ಕಿಂತ ಹೆಚ್ಚು ಮಾಡುವಂತಿಲ್ಲ. ಸಣ್ಣ ಕ್ಷೇತ್ರಗಳಲ್ಲಾದರೆ 75 ಲಕ್ಷ ರೂಪಾಯಿವರೆಗೆ ಖರ್ಚು ಮಾಡಬಹುದು.

ವಿಧಾನಸಭಾ ಚುನಾವಣೆ ವೇಳೆ ದೊಡ್ಡ ಕ್ಷೇತ್ರಗಳ ಅಭ್ಯರ್ಥಿಯ ಚುನಾವಣಾ ಖರ್ಚಿನ ಮಿತಿ 40 ಲಕ್ಷ ರೂ. ಇದ್ದರೆ, ಚಿಕ್ಕದಾದ ಮತ್ತು ಕಡಿಮೆ ಮತದಾರರಿರುವ ಕ್ಷೇತ್ರಗಳ ಅಭ್ಯರ್ಥಿಯ ಚುನಾವಣಾ ಖರ್ಚಿನ ಮಿತಿ 20 ಲಕ್ಷ ರೂ. ಆಗಿದೆ.

ಆದರೆ ವಾಸ್ತವದಲ್ಲಿ, ಈ ಮಿತಿಯನ್ನು ಅನುಸರಿಸುತ್ತಿರುವುದು ವಿರಳ ಎಂದೇ ಹೇಳಬೇಕಷ್ಟೆ. ಪ್ರಚಾರದ ವೆಚ್ಚದ ಹೊರತಾಗಿ, ಮತದಾರರಿಗೆ ಆಮಿಷವೊಡ್ಡಲು ಅಭ್ಯರ್ಥಿಗಳು ಉಚಿತ ಕೊಡುಗೆಗಳಿಗಾಗಿ ವಿಪರೀತ ಖರ್ಚು ಮಾಡುವುದು ಗುಟ್ಟಾಗಿ ಉಳಿದಿಲ್ಲ. ಚುನಾವಣಾ ಸಂದರ್ಭದಲ್ಲಿ ಆಯೋಗದ ಅಧಿಕಾರಿಗಳು ಅಪಾರ ಪ್ರಮಾಣದಲ್ಲಿ ವಶಪಡಿಸಿಕೊಳ್ಳುವ ನಗದು, ಆಭರಣ, ಗೃಹ ಬಳಕೆಯ ವಸ್ತುಗಳು ಹಾಗೂ ಇತರ ವಸ್ತುಗಳಿಂದ ಇದನ್ನು ತಿಳಿಯಬಹುದಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿಲ್ಲ. ಅವರು ರಾಜ್ಯಸಭಾ ಸದಸ್ಯರಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಲೋಕಸಭೆ ಚುನಾವಣೆಯಷ್ಟು ಹಣ ಖರ್ಚು ಮಾಡಬೇಕಾಗಿ ಬರುವುದಿಲ್ಲ ಎಂಬುದೇ ಇದಕ್ಕೆ ಕಾರಣವಾಗಿದೆ. ನಿರ್ಮಲಾ ಸೀತಾರಾಮನ್ 2016 ರಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅಫಿಡವಿಟ್‌ನಲ್ಲಿ ಸುಮಾರು 2.5 ಕೋಟಿ ರೂ. ನಿವ್ವಳ ಆಸ್ತಿ ಮೌಲ್ಯ ಘೋಷಿಸಿದ್ದರು.

ಡಿಕೆ ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಈವರೆಗೆ ಆಸ್ತಿ ವಿವರ ಘೋಷಿಸಿರುವವರಲ್ಲಿ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ 593 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಇವರು ಕಣದಲ್ಲಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ.

ಇನ್ನುಳಿದಂತೆ, ಈರೋಡ್ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಅಶೋಕ್ ಕುಮಾರ್ 583 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಪ್ರಸ್ತುತ ಚುನಾವಣೆಗಳು ಮತ್ತು ಹಣದ ನಡುವಣ ನಂಟು ಹೆಚ್ಚಾಗಿದೆ. ಅಭ್ಯರ್ಥಿಗಳು ಎಷ್ಟು ಶ್ರೀಮಂತರಾಗಿದ್ದಾರೆಯೋ, ಚುನಾವಣೆಯಲ್ಲಿ ಸ್ಪರ್ಧಿಸುವುದು ಅಷ್ಟು ಸುಲಭವಾಗುತ್ತದೆ. ಆದರೆ, ಶ್ರೀಮಂತರಾಗಿದ್ದ ಮಾತ್ರಕ್ಕೆ ಚುನಾವಣೆಯಲ್ಲಿ ಗೆಲುವು ಖಾತರಿಯಾಗದು. ಕಳೆದ ಚುನಾವಣೆಯಲ್ಲಿ ಕೆಲವು ಶ್ರೀಮಂತ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿರುವ ಉದಾಹರಣೆಗಳಿವೆ.

ಚುನಾವಣೆ

TN 2026 ಟೀಸರ್‌ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ

Published

on

By

ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್‌ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.

ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.

ಟೀಸರ್‌ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.

ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.

Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ಚುನಾವಣೆ

“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ

Published

on

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಕಾವು ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಗೃಹ ಸಚಿವ Amit Shah ಮಹತ್ವದ ಘೋಷಣೆ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಗೋಲ್ಪಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, “ಅಕ್ರಮ ನುಸುಳುಕೋರರು ನಾಲ್ಕು ಮದುವೆಯಾಗುವುದನ್ನು ತಡೆಯಲು ಯುಸಿಸಿ ಅಗತ್ಯ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು. ಪ್ರಧಾನಿ Narendra Modi ಮತ್ತು ಅಸ್ಸಾಂ ಮುಖ್ಯಮಂತ್ರಿ Himanta Biswa Sarma ಬುಡಕಟ್ಟು ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿದ್ದಾರೆ ಎಂದರು.

ಬುಡಕಟ್ಟು ಪ್ರದೇಶಗಳಲ್ಲಿ ಯುಸಿಸಿ ಜಾರಿಯಾಗುವುದಿಲ್ಲ ಎಂಬುದನ್ನು ಶಾ ಸ್ಪಷ್ಟಪಡಿಸಿ, ಕಾಂಗ್ರೆಸ್ ಹರಡುತ್ತಿರುವ ಗಾಳಿಸುದ್ದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಬುಡಕಟ್ಟು ಪ್ರದೇಶಗಳನ್ನು ಯುಸಿಸಿಯಿಂದ ಹೊರಗಿಡಲಾಗುತ್ತದೆ” ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “70 ವರ್ಷ ಆಡಳಿತ ನಡೆಸಿದರೂ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯಾಗಿಸಲು ಸಾಧ್ಯವಾಗಲಿಲ್ಲ. ಆದರೆ ಮೋದಿ ನಾಯಕತ್ವದಲ್ಲಿ ಅದು ಸಾಧ್ಯವಾಯಿತು” ಎಂದು ಟೀಕಿಸಿದರು.

Assam ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡು ಅವಧಿಗೆ ಮುಖ್ಯಮಂತ್ರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಧಿಕಾರಕ್ಕೇರಲು ಯತ್ನಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರ ಮರುಪಡೆಯಲು ಹೋರಾಟ ನಡೆಸುತ್ತಿದೆ.

ಒಟ್ಟಿನಲ್ಲಿ, ಯುಸಿಸಿ ವಿಚಾರ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಿದ್ದು, ಅಸ್ಸಾಂ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Continue Reading

ಚುನಾವಣೆ

‘ಸಿಂಗಂ’ ಅಣ್ಣಾಮಲೈ ನಡೆಗೆ ಅಭಿಮಾನಿಗಳ ಸಲಾಂ

Published

on

By

ಕಣ್ಣೂರು: ತಮಿಳುನಾಡಿನಲ್ಲಿ ಬಿಜೆಪಿ ಪ್ರಚಾರಕ್ಕೆ ಸಂಪೂರ್ಣ ಶಕ್ತಿ ಹಾಕುವುದಾಗಿ K. Annamalai ಘೋಷಿಸಿದ್ದು, ಅವರ ಪಕ್ಷನಿಷ್ಠೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡ್ ನೀಡಿದ ಜವಾಬ್ದಾರಿಯಂತೆ ರಾಜ್ಯದ ಮೂಲೆಮೂಲೆಗೂ ತೆರಳಿ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, “ಪಕ್ಷ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು ನನ್ನ ಕರ್ತವ್ಯ. 7ರಿಂದ 23ರವರೆಗೆ ತಮಿಳುನಾಡಿನಾದ್ಯಂತ ಪ್ರಚಾರ ನಡೆಸುತ್ತೇನೆ” ಎಂದು ಸ್ಪಷ್ಟಪಡಿಸಿದರು. ಪುದುಚೇರಿ ಮತ್ತು ಕೇರಳದಲ್ಲಿಯೂ ಪ್ರಚಾರದ ಹೊಣೆಗಾರಿಕೆ ನೀಡಲಾಗಿದೆ ಎಂದೂ ಹೇಳಿದರು.

ಟಿಕೆಟ್ ಸಿಗದಿದ್ದರೂ ಯಾವುದೇ ಅಸಮಾಧಾನ ವ್ಯಕ್ತಪಡಿಸದೇ ಪಕ್ಷದ ಪರವಾಗಿ ನಿಂತಿರುವ ಅಣ್ಣಾಮಲೈ ನಡೆ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. Bharatiya Janata Party ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಇರದಿದ್ದರೂ, ಪ್ರಚಾರಕ್ಕೆ ಸಜ್ಜಾಗಿರುವುದು ಅವರ ಬದ್ಧತೆಯನ್ನು ತೋರಿಸುತ್ತದೆ.

ಅಣ್ಣಾಮಲೈ ಅವರ ಈ ನಿರ್ಧಾರಕ್ಕೆ ಅಭಿಮಾನಿಗಳಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವರು ಅವರನ್ನು “ಸಿಂಗಂ” ಎಂದು ಕೊಂಡಾಡುತ್ತಿದ್ದು, ಪಕ್ಷನಿಷ್ಠೆ ಮತ್ತು ಶಿಸ್ತಿನ ಉದಾಹರಣೆಯಾಗಿ ಗುರುತಿಸಿದ್ದಾರೆ. ಇತ್ತೀಚಿನ ರಾಜಕೀಯದಲ್ಲಿ ಟಿಕೆಟ್ ಸಿಗದಿದ್ದರೆ ಪಕ್ಷಾಂತರ ಮಾಡುವ ಪ್ರವೃತ್ತಿ ಹೆಚ್ಚಿರುವ ನಡುವೆಯೇ, ಅವರ ನಿಲುವು ವಿಭಿನ್ನವಾಗಿ ಕಾಣುತ್ತಿದೆ.

ಒಟ್ಟಿನಲ್ಲಿ, ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದರೂ ಪಕ್ಷವನ್ನು ಬಲಪಡಿಸುವತ್ತ ಅಣ್ಣಾಮಲೈ ಗಮನ ಹರಿಸಿರುವುದು ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Continue Reading

Trending