ಚುನಾವಣೆ
ಸುಮಲತಾ ಅಂಬರೀಶ್‌ಗೆ ಬಿಟ್ಟು ಬಿಡದೆ ಕಾಡುತ್ತಿರುವ ಮೈತ್ರಿ ಕಂಟಕ..!
ಮಂಡ್ಯ, ಏಪ್ರಿಲ್ 01: ಅದ್ಯಾಕೋ ಗೊತ್ತಿಲ್ಲ ಸಂಸದೆ ಸುಮಲತಾ ಅವರನ್ನು ಮೈತ್ರಿ ಕಂಟಕ ಬಿಟ್ಟು ಹೋಗುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ಕಳೆದ ಬಾರಿಯ ಮೈತ್ರಿ ಕಂಟಕದಿಂದ ಸಂಕಷ್ಟ ಅನುಭವಿಸಿದ್ದರೂ ಬಳಿಕ ಒಳಿತೇ ಆಗಿತ್ತು. ಅದು ಅಲ್ಲಿಗೆ ಮುಗಿಯಿತು ಎಂದು ಕೊಳ್ಳುವಾಗಲೇ ಈ ಬಾರಿಯೂ ಅವರಿಗೆ ಮೈತ್ರಿ ಕಂಟಕ ಕಾಡುತ್ತಿದ್ದು, ಇದು ಒಳಿತು ಮಾಡುತ್ತಾ? ಅಥವಾ ಸಂಕಷ್ಟ ತರುತ್ತಾ? ಎಂಬ ಪ್ರಶ್ನೆಗಳು ಮಂಡ್ಯ ಲೋಕಸಭಾ ಕ್ಷೇತ್ರದ ತುಂಬಾ ಗಿರಿಕಿ ಹೊಡೆಯುತ್ತಿವೆ.
ನಿಜ ಹೇಳಬೇಕೆಂದರೆ ಲೋಕಸಭಾ ಚುನಾವಣೆ ಬಂದಾಗಲೆಲ್ಲ ಮಂಡ್ಯ ಒಂದಲ್ಲ ಒಂದು ಕಾರಣಕ್ಕೆ ಇಡೀ ದೇಶದ ಗಮನ ಸೆಳೆಯುತ್ತದೆ. ಈ ಬಾರಿಯೂ ಅದೇ ಆಗಿದೆ. ಸುಮಲತಾ ಅಂಬರೀಶ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಜನ ಮಾತ್ರವಲ್ಲದೆ, ರಾಜಕೀಯ ನಾಯಕರು ಕೂಡ ಕಾದು ಕುಳಿತಿದ್ದಾರೆ. ಅವರು ಪ್ರಕಟಿಸುವ ನಿರ್ಧಾರದ ಬಳಿಕ ರಾಜಕೀಯ ಚಿತ್ರಣ ಬದಲಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ.
ಕಳೆದ ಐದು ವರ್ಷಗಳ ಕಾಲ ಸುಮಲತಾ ಅಂಬರೀಶ್ ಅವರು ಸಂಸದೆಯಾಗುವ ಮೂಲಕ ಮಂಡ್ಯ ಜನರ ನಾಡಿಮಿಡಿತವನ್ನು ಅರಿತುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಐದು ವರ್ಷಗಳ ಅವಧಿಯಲ್ಲಿ ರಾಜಕೀಯದ ಒಳಗೆ, ಹೊರಗೆ ಎರಡನ್ನು ತಿಳಿದುಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗೆ ಬೆಂಬಲ ನೀಡುವ ಮೂಲಕ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಲೋಚನೆ ಮಾಡಿದ್ದರು.
ವಿಧಾನಸಭಾ ಚುನಾವಣೆ ಕಳೆದು ಫಲಿತಾಂಶದ ಬಳಿಕ ಕಾಂಗ್ರೆಸ್ ಅಧಿಕಾರ ಹಿಡಿದರೆ, ಜೆಡಿಎಸ್ ಮತ್ತು ಬಿಜೆಪಿ ಹೀನಾಯ ಸೋಲು ಕಂಡಿದ್ದವು. ಫಲಿತಾಂಶ ಬಂದ ಕೆಲವು ಸಮಯಗಳಲ್ಲಿ ಮತ್ತೊಂದು ಹೊಸ ಬೆಳವಣಿಗೆಯಾಗಿತ್ತು. ಅದು ಏನೆಂದರೆ ಜೆಡಿಎಸ್ ವರಿಷ್ಟ ದೇವೇಗೌಡರು ಬಿಜೆಪಿ ನಾಯಕರನ್ನು ಭೇಟಿ ಮಾಡಿ ಬಿಜೆಪಿ ನೇತೃತ್ವದ ಎನ್ ಡಿಎಯನ್ನು ಸೇರುವ ಸಂಕಲ್ಪ ಮಾಡಿದ್ದರು. ಯಾವಾಗ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗುತ್ತಿವೆ ಎಂಬುದು ಗೊತ್ತಾಯಿತೋ ಎಲ್ಲರ ಚಿತ್ತ ಸಂಸದೆ ಸುಮಲತಾ ಅಂಬರೀಶ್ ಅವರತ್ತ ನೆಟ್ಟಿತ್ತು.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ ಹೀಗೆ ಬಿಜೆಪಿಯ ಎಲ್ಲ ನಾಯಕರನ್ನು ಭೇಟಿ ಮಾಡಿ ಮಾಡಿ ಬಂದಿದ್ದಾರೆ. ಆದರೆ ಆ ಕಡೆಯಿಂದ ಏನು ಆಶ್ವಾಸನೆ ಸಿಕ್ಕಿದೆ ಎಂಬುದು ಮಾತ್ರ ರಹಸ್ಯವಾಗಿಯೇ ಉಳಿದಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೂಡ ಮಾತುಕತೆ ನಡೆಸಿ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವಂತೆ ಕೋರಿ ಬಂದಿದ್ದಾರೆ. ಹಾಗೆನೋಡಿದರೆ ಸುಮಲತಾ ಅಂಬರೀಶ್ ಅವರಿಗೆ ಮೈತ್ರಿ ಕಂಟಕವಂತೂ ಬಿಟ್ಟರೂ ಬಿಡುತ್ತಿಲ್ಲ. ಕಳೆದ 2019 ಲೋಕಸಭಾ ಚುನಾವಣೆಯನ್ನು ಮೆಲುಕು ಹಾಕುವುದಾದರೆ ಅವತ್ತು. ಅವರ ಪತಿ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗಲೇ ಸ್ವರ್ಗಸ್ಥರಾಗಿದ್ದರು. ಹೀಗಾಗಿ ಜನ ಸುಮಲತಾ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಬಹುದು ಎಂದು ನಂಬಿದ್ದರು. ಈ ವಿಷಯದ ಬಗ್ಗೆ ಸ್ವತಃ ಸುಮಲತಾ ಅವರೇ ಕಾಂಗ್ರೆಸ್ ನಾಯಕರನ್ನು ಕೇಳಿದ್ದರು. ಆದರೆ ಅವತ್ತು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತದಲ್ಲಿತ್ತು. ಹೀಗಾಗಿ ಮೈತ್ರಿ ಕಂಟಕ ಕಾಡಿತ್ತು.
ಚುನಾವಣೆ
BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.
ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಚುನಾವಣೆ
ವಿಜಯ್ ರಾಜಕೀಯ ಪ್ರವೇಶಕ್ಕೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ
ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎನ್‌ಡಿಟಿವಿ ಪ್ರಾಫಿಟ್ ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಅವರು, ವಿಜಯ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕಾರಣಕ್ಕೆ ಹೊಸ ತಿರುವು ನೀಡಲಿದೆ ಎಂದು ಅಭಿಪ್ರಾಯಪಟ್ಟರು.
“ದಳಪತಿ ವಿಜಯ್ ಖಂಡಿತವಾಗಿಯೂ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಾರೆ. ಆದರೆ ಅವರು ಯಾವ ಮಟ್ಟಿಗೆ, ಯಾವ ಪಕ್ಷಗಳ ಮತಗಳನ್ನು ಕಸಿದುಕೊಳ್ಳುತ್ತಾರೆ ಎಂಬುದು ಇನ್ನೂ ನೋಡಬೇಕಿದೆ. ವಿಶೇಷವಾಗಿ ಮಹಿಳಾ ಮತಗಳ ಮೇಲೆ ಅವರ ಪ್ರಭಾವ ಎಷ್ಟಿರುತ್ತದೆ ಎಂಬುದೇ ಮುಖ್ಯ ಅಂಶ” ಎಂದು ಸೀತಾರಾಮನ್ ಹೇಳಿದರು. ತಮಿಳುನಾಡು ರಾಜಕೀಯದಲ್ಲಿ ಮಹಿಳೆಯರು ಶಕ್ತಿಶಾಲಿ ಹಾಗೂ ನಿರ್ಧಾರಾತ್ಮಕ ಪಾತ್ರ ವಹಿಸುತ್ತಾರೆ. ಆ ಕಾರಣದಿಂದ ಮುಂದಿನ ಚುನಾವಣೆ ಅತ್ಯಂತ ಆಸಕ್ತಿದಾಯಕವಾಗಲಿದೆ ಎಂದರು.
ಇದೇ ವೇಳೆ, ಆಡಳಿತಾರೂಢ ಡಿಎಂಕೆಗೆ (DMK) ಈ ಬಾರಿ ಎನ್‌ಡಿಎ ಮೈತ್ರಿಕೂಟ (NDA Alliance) ಪ್ರಬಲ ಪೈಪೋಟಿ ನೀಡಲಿದೆ ಎಂದು ಅವರು ಪ್ರತಿಪಾದಿಸಿದರು. “ಬೃಹತ್ ಎನ್‌ಡಿಎ ಒಕ್ಕೂಟವನ್ನು ಎದುರಿಸುತ್ತಿರುವ ಡಿಎಂಕೆ ತನ್ನ ಗೆಲುವಿನ ಬಗ್ಗೆ ಆತ್ಮವಿಶ್ವಾಸದಲ್ಲಿಲ್ಲ. ಕಳೆದ ಒಂದು ವರ್ಷದಲ್ಲಿ ಅವರ ನಡೆ-ನುಡಿಗಳು ಆತಂಕ ಮತ್ತು ಅಸ್ಥಿರತೆಯನ್ನು ತೋರಿಸುತ್ತಿವೆ” ಎಂದು ಟೀಕಿಸಿದರು.
ಡಿಎಂಕೆ ಮಂತ್ರಿಗಳ ವಿವಾದಾತ್ಮಕ ಹೇಳಿಕೆಗಳು, ಉಚಿತ ಕೊಡುಗೆಗಳ ಘೋಷಣೆ, ದೇವಾಲಯ ಬೇಟಿ ಮುಂತಾದ ಕ್ರಮಗಳು ಪಕ್ಷದ ಆತಂಕವನ್ನು ಸ್ಪಷ್ಟಪಡಿಸುತ್ತವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. “ತಮಿಳುನಾಡಿನ ಅಭಿವೃದ್ಧಿ ಬಗ್ಗೆ ಮಾತನಾಡುವುದರಿಂದ ಮಾತ್ರ ಮತಗಳನ್ನು ಗಳಿಸಲು ಸಾಧ್ಯವಿಲ್ಲ. ಇದು ಡಿಎಂಕೆಯ ಪ್ರಮುಖ ಮಿತಿ. ಈ ಸತ್ಯವನ್ನು ಡಿಎಂಕೆಯೂ ಅರಿತಿದೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ದಳಪತಿ ವಿಜಯ್ ರಾಜಕೀಯ ಪ್ರವೇಶ, ಮಹಿಳಾ ಮತಗಳ ಪಾತ್ರ ಮತ್ತು ಎನ್‌ಡಿಎ–ಡಿಎಂಕೆ ನಡುವಿನ ಪೈಪೋಟಿ ತಮಿಳುನಾಡು ಚುನಾವಣೆಯನ್ನು ಮತ್ತಷ್ಟು ಕುತೂಹಲಕಾರಿಯಾಗಿಸುತ್ತಿದೆ.
ಚುನಾವಣೆ
BENGALURU ಜಿಬಿಎ ಚುನಾವಣೆ ಮುನ್ನ ಶಿವನಪಾಳ್ಯ ವಾರ್ಡ್‌ನಲ್ಲಿ ಮತಗಟ್ಟೆ ಗೊಂದಲ
ಬೆಂಗಳೂರು, ಫೆಬ್ರವರಿ 7, 2026: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್ (ಸಂಖ್ಯೆ 19) ವ್ಯಾಪ್ತಿಯಲ್ಲಿ ಮತಗಟ್ಟೆಗಳ ವಿಂಗಡಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಬಿಎ ಚುನಾವಣೆ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಸಿ.ಎಂ. ಸತ್ಯನಾರಾಯಣ್ (CMC) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಗಟ್ಟೆಗಳ ಪಟ್ಟಿಯಲ್ಲಿ ಗಂಭೀರ ತಪ್ಪುಗಳಿರುವುದನ್ನು ಉಲ್ಲೇಖಿಸಿ, ಬಿಜೆಪಿಯ ಬಿಎಲ್‍ಎ1 ದೀಪಕ್ ಕುಮಾರ್ ಅವರ ಮೂಲಕ ಕಂದಾಯ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, ಸ್ಥಳ ಪರಿಶೀಲನೆ ನಡೆಸದೇ ಮತಗಟ್ಟೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿರುವುದೇ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.
ದೂರು ಪ್ರಕಾರ, ಲಿಂಗಾಯತರ ಬೀದಿ, ಅಂಗಡಿ ಬೀದಿ, ಹಸಿ ಕರಗ ಮಂಟಪ ಹಾಗೂ ಹರ್ಷ ಲೇಔಟ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 21 ರಿಂದ 31 ರವರೆಗಿನ ಪ್ರದೇಶಗಳು ವಾಸ್ತವವಾಗಿ ಕೆಂಗೇರಿ ವಾರ್ಡ್‌ಗೆ ಸೇರಬೇಕಿದ್ದರೂ, ತಪ್ಪಾಗಿ ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ. ಇದೇ ರೀತಿ, ಬಾಬಾ ಸಾಬ್ ಪಾಳ್ಯ ಗ್ರಾಮಕ್ಕೆ ಸೇರಿದ ಮತಗಟ್ಟೆ ಸಂಖ್ಯೆ 32 ಮತ್ತು 33 ಕೂಡ ಶಿವನಪಾಳ್ಯ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಇದಲ್ಲದೆ, ಬಂಡೆ ಮಠ ರಸ್ತೆಯ ಮತಗಟ್ಟೆ ಸಂಖ್ಯೆ 34 ಮತ್ತು 35 ಕೆಂಗಲ್ ಹನುಮಂತಯ್ಯ ವಾರ್ಡ್‌ಗೆ (ವಾರ್ಡ್ 18) ಸೇರಬೇಕಿದ್ದರೂ, ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮತಗಟ್ಟೆ ಸಂಖ್ಯೆ 19ರ ಮಾಹಿತಿ ಲಭ್ಯವಿಲ್ಲದಿರುವುದು ಮತದಾರರಲ್ಲಿ ಗೊಂದಲ ಮತ್ತು ಆತಂಕವನ್ನು ಹೆಚ್ಚಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಿ.ಎಂ. ಸತ್ಯನಾರಾಯಣ್, “ಕ್ಷೇತ್ರ ಸಮೀಕ್ಷೆ ಇಲ್ಲದೆ ಮತದಾರರ ಪಟ್ಟಿ ಸಿದ್ಧಪಡಿಸಿರುವುದು ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಧಕ್ಕೆ ತರುತ್ತದೆ. ಕೂಡಲೇ ತಪ್ಪುಗಳನ್ನು ಸರಿಪಡಿಸಿ, ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಮತಗಟ್ಟೆ ಮರುಹಂಚಿಕೆ ಮಾಡಬೇಕು,” ಎಂದು ಆಗ್ರಹಿಸಿದರು. ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
-
ಕ್ರೀಡೆ20 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ20 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
-
ದೇಶ23 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ23 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ದೇಶ19 hours agoವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಎಚ್ಚರಿಕೆ: “ಭಾರತಕ್ಕೆ ಮರಳದಿದ್ದರೆ ಅರ್ಜಿ ವಿಚಾರಣೆ ಇಲ್ಲ”
-
ದೇಶ20 hours agoಜೈರಾಮ್ ರಮೇಶ್ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”
-
ದೇಶ24 hours agoBHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ
-
ದೇಶ22 hours agoಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ
