Connect with us

ಚುನಾವಣೆ

ಮಂಡ್ಯ ಸ್ಪರ್ಧೆಯಿಂದ ಹಿಂದೆ ಸರಿದ ರೆಬಲ್‌ ಲೇಡಿ; ಕುಮಾರಸ್ವಾಮಿ ಜೊತೆ ಸಂಧಾನ ಯಶಸ್ವಿಯಾಗಿದ್ದು ಹೇಗೆ?

Published

on

ಮಂಡ್ಯ : ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದೆ. ಮಂಡ್ಯ ಬಿಟ್ಟು ಹೋಗಲ್ಲ ಅಂತಾ ಸಸ್ಪೆನ್ಸ್ ಉಳಿಸಿಕೊಂಡಿರುವ ಮಂಡ್ಯ ಹಾಲಿ ಸಂಸದೆ ಸುಮಲತಾ ಅವರ ನಡೆಯಿಂದ ಕಮಲ-ದಳ ದೋಸ್ತಿಗಳಿಗೆ ಟೆನ್ಷನ್ ಶುರುವಾಗಿತ್ತು. ಹೀಗಾಗಿ ಸುಮಲತಾರ ಮನವೊಲಿಕೆಗೆ ಖುದ್ದು ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಯೇ ಅಖಾಡಕ್ಕಿಳಿದ್ದರು.

ಹೌದು, ಸುಮಲಿತಾ ಅವರನ್ನ ಖುದ್ದಾಗಿ ಭೇಟಿ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್‌ ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮೋದಿ ಅವರ ಕೈ ಬಲ ಪಡಿಸುವ ನಿಟ್ಟಿನಲ್ಲಿ ಬೆಂಬಲಿಸಿ ಎಂದು ಸುಮಲತಾ ಅವರ ಜೊತೆಗೆ ಕುಮಾರಸ್ವಾಮಿ ಚರ್ಚೆ ನಡೆದಿದ್ದು, ಕೊನೆಗೂ ಸಂಧಾನ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.

2019 ರ ಲೋಕಸಭಾ ಚುನಾವಣೆಯಲ್ಲಿ ಕಳೆದು ಕೊಂಡ ಮಂಡ್ಯ ಕ್ಷೇತ್ರವನ್ನ ಈ ಬಾರಿಯ ಚುನಾವಣೆಯಲ್ಲಿ ವಶಕ್ಕೆ ಪಡೆಯಬೇಕು ಎಂದು ದಳಪತಿಗಳು ಮಾಸ್ಟರ್‌ ಪ್ಲಾನ್‌ ನಡೆಸಿದ್ದಾರೆ. ಅದರಂತೆ ಮೈತ್ರಿಯಾಗಿರುವ ಜೆಡಿಎಸ್‌ ನಾಯಕರು ಆರಂಭದಿಂದಲೂ ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣೀಟ್ಟಿದ್ದರು. ಅದರಂತೆ ಬಿಜೆಪಿ ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆ ನಡೆಸಿ, ಪಟ್ಟು ಹಿಡಿದಂತೆ ಮಂಡ್ಯ ಕ್ಷೇತ್ರವನ್ನ ಪಡೆಯುವಲ್ಲಿ ಮೊದಲ ಹಂತದಲ್ಲೇ ಯಶಸ್ವಿಯಾಗಿದ್ದಾರೆ. ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಕಣದಲ್ಲಿದ್ದು, ಮಂಡ್ಯದಲ್ಲಿ ಮತ್ತೆ ಸುಮಾಲಾತಾ ಸ್ಪರ್ಧೆ ಮಾಡುತ್ತಾರಾ ಎನ್ನುವ ಟೆನ್ಷನ್‌ ಶುರುವಾಗಿತ್ತು. ಆದರೆ, ಕುಮಾರಸ್ವಾಮಿ ಅವರು ಸುಮಲತಾ ಅವರ ಜೊತೆಗೆ ಮಾತುಕತೆ ನಡೆಸಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸುಮಾಲತಾ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿದು ಬಂದಿದೆ. ಇನ್ನೂ ಸುಮಲತಾ ಅಂಬರೀಶ್‌ ಅವರನ್ನ ಮನವೊಲಿಸುವಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಯಶಸ್ವಿಯಾಗಿದ್ದು, ಮುನಿಸು ಮರೆತು ಮೈತ್ರಿ ಧರ್ಮ ಪಾಲಿಸಲು ಕುಮಾರಸ್ವಾಮಿ ಪರ ಪ್ರಚಾರ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನನ್ನ ಬೆಂಬಲಿಸಿ. ಮುಂದಿನ ದಿನಗಳಲ್ಲಿ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯ ನಾನು ನೋಡಿಕೊಳ್ಳುತ್ತೇನೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್‌ ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಮಂಡ್ಯದಲ್ಲಿ ಕಾಂಗ್ರೆಸ್ ಸೋಲಿಸಲು ನನಗೆ ನೀವು ಸಹಕಾರಿಸಿ, ಅಂಬರೀಶ್ ಅವರಿಗೆ ರಾಜಕೀಯವಾಗಿ ಕಾಂಗ್ರೆಸ್ ಅನ್ಯಾಯ ಮಾಡಿದೆ. ನಾವು ಇಬ್ಬರು ಒಟ್ಟಾಗಿ ಕೆಲಸ ಮಾಡಿದ್ರೆ ಮಂಡ್ಯ ಕಾಂಗ್ರೆಸ್ ನಿರ್ನಾಮ ಮಾಡಬಹುದು. ಅಂಬರೀಶ್ ಮತ್ತು ನಮ್ಮ ಕುಟುಂಬದ ನಡುವೆ ಉತ್ತಮ ಸಂಬಂಧವಿತ್ತು. ಅದೇ ಸಂಬಂಧವನ್ನ ನಾವು ಮುಂದುವರೆಸಿಕೊಂಡು ಹೋಗಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಇಬ್ಬರು ಜೊತೆಗೆ ಕೆಲಸ ಮಾಡೋಣ. ದೇಶದಲ್ಲಿ ಮೋದಿ ಗೆಲುವಿಗೆ ಇಬ್ಬರು ಜೊತೆಗೆ ಕೆಲಸ ಮಾಡೋಣ, ಮುಂದೆ ನಿಮ್ಮನ್ನ ರಾಜ್ಯಸಭೆಗೆ ಕಳುಹಿಸಲು ನಾನು ಬಿಜೆಪಿ ನಾಯಕರು ಜೊತೆಗೆ ಮಾತನಾಡುತ್ತೇನೆ, ನಿಮ್ಮ ರಾಜಕೀಯ ಭವಿಷ್ಯವು ನಮಗೆ ಮುಖ್ಯ ಎಂದು ಕುಮಾರಸ್ವಾಮಿ ಭರವಸೆಯನ್ನ ನೀಡಿದ್ದು, ಸದ್ಯ ಮಂಡ್ಯ ಹಾಲಿ ಸಂಸದೆಯಾಗಿರುವ ಸುಮಲತಾ ಅಂಬರೀಶ್‌ ಅವರು ಮಂಡ್ಯದಿಂದ ಸ್ಪರ್ಧೆ ಮಾಡದಂತೆ ಕುಮಾರಸ್ವಾಮಿ ಅವರು ಮನವೊಲಿಸಿದ್ದು, ಮುನಿಸು ಮರೆತು ಮೈತ್ರಿ ಧರ್ಮ ಪಾಲನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಚುನಾವಣೆ

Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.

ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.

ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.

ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.

Continue Reading

ಚುನಾವಣೆ

ಜಿಬಿಎ ಚುನಾವಣೆಗೆ ಕೌಂಟ್‌ಡೌನ್ ಶುರು! ಜೂನ್‌ನಲ್ಲಿ ಡೇಟ್ ಫಿಕ್ಸ್

Published

on

ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.

ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.

ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Continue Reading

ಚುನಾವಣೆ

‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಗುರುವಾರ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.

ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.

ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.

ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending