ಚುನಾವಣೆ
ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ : ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ನವೀನ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ ನಡೆದಿದೆ, ರಾಜಕೀಯ ದ್ವೇಷಕ್ಕಾಗಿ ಈ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ,
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಗೂಂಡಾಗಳು ಸಕ್ರಿಯಗೊಂಡಿದ್ದಾರೆ ಅಲ್ಲದೆ ಅವರನ್ನು ಮಜಾವಾದಿ ಸಿದ್ದರಾಮಯ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ, ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ನವೀನ್ ಮೇಲೆ ಕಂಗ್ರೆಸ್ಸಿನ ಗೂಂಡಾ ಮಾರಣಾಂತಿಕ ಹಲ್ಲೆ ಮಾಡಿದ್ದರೂ ಅತನನ್ನು ಬಂಧಿಸಿದೆ ಸಣ್ಣ ಕೇಸ್ ಹಾಕಿ ರಾಜಾರೋಷವಾಗಿ ಬೀದಿಗೆ ಬಿಟ್ಟಿದೆ ಎಂದು ಬಿಜೆಪಿ ಕಿಡಿಕಾರಿದೆ,
ಆ ದಿನಗಳಂತೆ ಚುನಾವಣೆ ಗೆಲ್ಲಲು ಗೂಂಡಾಗಿರಿ ಮಾಡುತ್ತಿರುವ ಅಣ್ಣ ತಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ, ಅದರ ಮುಂದುವರಿದ ಭಾಗವೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಮತದಾರರನ್ನು ಬೆದರಿಸುವ ಕೆಲಸ ಮಾಡಲಾಗುತ್ತಿದೆ, ಕೂಡಲೇ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ರಾಜ್ಯದಲ್ಲಿ ಚುನಾವಣೆ ನಡೆಯಲು ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ ತುಂಬಬೇಕಿದೆ ಎಂದು ಆಗ್ರಹಿಸಿದೆ,