Connect with us

ರಾಜಕೀಯ

ಪ್ರೊ. ರಾಜೀವ್ ಗೌಡ ಗೆಲುವು ನೂರಕ್ಕೆ ನೂರು ಖಚಿತ – ಮಂಜುನಾಥ್

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಗೆಲ್ಲುವುದು ಶೇ ನೂರಕ್ಕೆ ನೂರು ಖಚಿತ ಎಂದು ಕೆಂಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹೇಳಿದರು. ಹೊಸ ಸುದ್ದಿ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ರಾಜ್ಯದಲ್ಲಿ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿದೆ. ಹಿಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಬಡ ಕುಟುಂಬಗಳು ಸರ್ಕಾರದ ವೈಫಲ್ಯದಿಂದ ಬೆಂದು ಹೋಗಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರ ಎಂದರೆ ಹಗರಣ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 40 % ಕಮಿಷನ್ ಹಗರಣ, ಹಾಗೂ ಅವರ ಬಡವರ ವಿರೋಧಿ ನೀತಿಗಳ ಕಾರಣದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿದೆ ಎಂದರು.

ಇಂದು ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರೆಂಟಿ ಯೋಜನೆಗಳು ನಮ್ಮ ಶಕ್ತಿ. ಈ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಸರ್ಕಾರ ಕೆಲಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆಯೇ ಹೊರತು ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇಲ್ಲ ಎಂದರು.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 10- 15 ಲಕ್ಷ ಮತಗಳನ್ನು ಪಡೆದು ಗೆಲ್ಲುತ್ತಾರೆ ಎಂದು ನಾನು ಭಾವಿಸಿದ್ದೇನೆ. ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅವರು ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸುತ್ತಾರೆ ಹಾಗೂ ಅವರ ಕ್ಷೇತ್ರದಲ್ಲಿ ಇರುವ ಸಮಸ್ಯೆಗಳ ಕಡೆ ಗಮನ ನೀಡಿ ಕೆಲಸ ಮಾಡುತ್ತಾರೆ. ಕ್ಷೇತ್ರದಲ್ಲಿ ಅವರು ಜನರ ಪರ ಕೆಲಸ ಮಾಡುವ ಶಾಸಕರು ಎಂದೇ ಹೆಸರುವಾಸಿಯಾಗಿದ್ದಾರೆ. ಅವರು ಯಾವುದೇ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾರೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡುತ್ತಾರೆ ಹೊರತು ಅವರು ಅಭಿವೃದ್ಧಿ ಕೆಲಸಗಳಲ್ಲಿ ಪಕ್ಷ ಭೇದ ಮಾಡದೆ ಕ್ಷೇತ್ರಕ್ಕೆ ದುಡಿಯುತ್ತಾರೆ ಎಂದರು.

ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿ ಮಾಡಿದರೆ ಅನೇಕ ಬಡ ಕುಟುಂಬಗಳಿಗೆ ಅನುಕೂಲವಾಗುತ್ತದೆ. ಮೆಡಿಕಲ್, ಶಿಕ್ಷಣ ಕ್ಷೇತ್ರದಲ್ಲಿ ಬಡ ಕುಟಂಬಗಳಿಗೆ ಅನುಕೂಲವಾಗುವ ಯೋಜನೆ ಕೇಂದ್ರ ಸರ್ಕಾರ ತರಬೇಕು. ಪ್ರಧಾನಿ ಮೋದಿ ಅವರು ಅಭಿವೃದ್ಧಿ ಕೆಲಸ ಮಾಡಿಲ್ಲ. ಇಂದು ದೇಶದಲ್ಲಿ ಇರುವ ಅಭಿವೃದ್ಧಿ ಯೋಜನೆಗಳು ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದು ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ಉಳಿಯುವುದಿಲ್ಲ. ಬಿಜೆಪಿ ತತ್ವ ಸಿದ್ದಂತಗಳನ್ನು ಜೆಡಿಎಸ್ ಕಾರ್ಯಕರ್ತರು ಒಪ್ಪುವುದಿಲ್ಲ. ಕಳೆದ ಚುನಾವಣೆಯಲ್ಲಿ ಬಿಜೆಪಿ ಮುಖಂಡರುಗಳು ಎಸ್ ಟಿ ಸೋಮಶೇಖರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಜೆಡಿಎಸ್ ಪಕ್ಷದ ಮುಖಂಡರ ಜೊತೆ ಷಡ್ಯಂತ್ರ ಮಾಡಿದರು. ಕ್ಷೇತ್ರದ ಬಿಜೆಪಿ ಮುಖಂಡರುಗಳು ಪಕ್ಷ ವಿರೋಧ ಚಟುವಟಿಕೆ ಮಾಡಿ ಇಂದು ನಾನು ಮೂಲ ಬಿಜೆಪಿಗ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಯಶವಂತಪುರ ಕ್ಷೇತ್ರ ಅಭಿವೃದ್ಧಿ ಆಗಿದೆಯೆಂದರೆ ಅದಕ್ಕೆ ಮುಖ್ಯ ಕಾರಣ ನಮ್ಮ ಕ್ಷೇತ್ರದ ಶಾಸಕರು. ಅದರಲ್ಲಿ ಯಾವುದೇ ರೀತಿಯ ಅನುಮಾನ ಕ್ಷೇತ್ರದ ಜನರಿಗೆ ಇಲ್ಲ. ಎಲ್ಲಾ ವಾರ್ಡ್ ಹಾಗೂ ಪಂಚಾಯಿತಿಗಳನ್ನು ಅಭಿವೃದ್ಧಿ ಮಾಡಬೇಕು ಎಂದು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ದೊಡ್ಡಬಿದ್ದರಕಲ್ಲು ಮತ್ತಿತರ ವಾರ್ಡ್‌ಗಳಲ್ಲಿ ಇರುವ ಅವರ ಬೆಂಬಲಿಗರು ಹಾಗೂ ಕ್ಷೇತ್ರದ ಮತದಾರರು ಅವರ ಜೊತೆ ನಿಂತು ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುತ್ತೇವೆ ಎಂದರು.

ರಾಜಕೀಯ

DK Shivakumar ಸಿಎಂ ಆಗಬೇಕು: ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷ ಆಗ್ರಹ

ರಾಮನಗರ:
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಆಗ್ರಹವನ್ನು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “DK Shivakumar ನಮ್ಮ ನಾಯಕರು. ಅವರ ಶ್ರಮ ಹಾಗೂ ಹೋರಾಟಕ್ಕೆ ಪ್ರತಿಫಲ ಸಿಗಬೇಕು. ನಾನು ಈ ಜಿಲ್ಲೆಯಲ್ಲಿ ಹುಟ್ಟಿದ್ದು, ಅವರು ಕೂಡ ನಮ್ಮ ಜನರು. ಅವರಿಗೆ ಗೌರವ ಸಿಗಬೇಕು ಎಂದು ಹೇಳುವುದು ನನ್ನ ಹಕ್ಕು,” ಎಂದು ಸ್ಪಷ್ಟಪಡಿಸಿದರು.

“ನಾನು ಈಗಲೂ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. DK Shivakumar ಸಿಎಂ ಆಗಬೇಕು ಎಂಬ ಮಾತು ಹಿಂದೆ ಹೇಳಿದ್ದೆ, ಈಗಲೂ ನಿಂತಿದ್ದೇನೆ,” ಎಂದರು.

ಆ.8ರಂದು ಕಾಂಗ್ರೆಸ್ ಹೋರಾಟ:
ಆಗಸ್ಟ್ 8ರಂದು ನಡೆಯಲಿರುವ ಚುನಾವಣಾ ಅಕ್ರಮದ ವಿರುದ್ಧದ ಕಾಂಗ್ರೆಸ್ ಹೋರಾಟ ಕುರಿತು ಮಾತನಾಡಿದ ಅವರು, “ಈ ಹೋರಾಟಕ್ಕೆ ಹೈಕಮಾಂಡ್ ರೂಪುರೇಷೆ ನೀಡಿದೆ. ರಾಷ್ಟ್ರೀಯ ನಾಯಕರು ನೇತೃತ್ವ ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯಿಂದ 20,000 ಮಂದಿ ಪಾಲ್ಗೊಳ್ಳುತ್ತಾರೆ,” ಎಂದು ಹೇಳಿದರು.

ಇವಿಎಂ ಅಕ್ರಮ ಕುರಿತು ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲವಾದರೂ, “ನಮ್ಮ ರಾಷ್ಟ್ರ ನಾಯಕರು ಎಲ್ಲಾ ವಿವರಗಳನ್ನು ಬಹಿರಂಗಪಡಿಸುತ್ತಾರೆ,” ಎಂದು ತಿಳಿಸಿದರು.

Continue Reading

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

Trending