Connect with us

ಬೆಂಗಳೂರು

ಬಿಜೆಪಿಗೆ ಎಂದಿಗೂ ದ್ರೋಹ ಬಗೆಯುವುದಿಲ್ಲ – ಮಾರೇಗೌಡ

ಬೆಂಗಳೂರು: ಮಹಿಳೆಯರು ದೇಶದ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುತ್ತಿರುವ ಕಾರಣದಿಂದ ಬಿಜೆಪಿಯು ಮಹಿಳೆಯರಿಗೆ ಅತೀ ಹೆಚ್ಚು ಲೋಕಸಭಾ ಟಿಕೆಟ್ ನೀಡಿದೆ ಎಂದು ಯಶವಂತಪುರ ಮಾಜಿ ನಗರಮಂಡಲಾಧ್ಯಕ್ಷ ಸಿ.ಎಂ.ಮಾರೇಗೌಡ ಹೇಳಿದರು. ಹೊಸ ಸುದ್ದ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ದೇಶದ ಪ್ರಗತಿಯ ಬಗ್ಗೆ ಮಹಿಳೆಯರು ತಮ್ಮದೇ ಆದ ಆಲೋಚನಾ ಶಕ್ತಿ ಹೊಂದಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಬಹಳ ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದರು.

ವಿಶ್ವದಲ್ಲೇ ಭಾರತದ ಕೀರ್ತಿಯನ್ನು ಹೆಚ್ಚಿಸಿರುವ ಮೋದಿ ಹಾಗೂ ಅವರ ಅಡಳಿತಾವಧಿಯಲ್ಲಿ ಮಾಡಿರುವ ಕೆಲಸ ಲೋಕಾಸಭಾ ಚುನಾವಣೆಯಲ್ಲಿ ನಮಗೆ ಪ್ರಮುಖ ಆಯುಧ. ಅದರೆ ಸ್ಧಳೀಯ ಸಮಸ್ಯೆಗಳಿಗೆ ಕೂಡ ಆದ್ಯತೆ ನೀಡಿ ಅದನ್ನು ಸರಿಪಡಿಸುವುದು ಪ್ರತಿಯೊಬ್ಬ ಸಂಸದ ಹಾಗೂ ಶಾಸಕರ ಕರ್ತವ್ಯವಾಗಿದೆ. ನಮ್ಮ 10 ವರ್ಷದ ಅವಧಿಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಹಾಗೂ ಕೆಲಸಗಳು ಲೋಕಾಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಅತೀ ಹೆಚ್ಚು ಶಕ್ತಿಯನ್ನು ನೀಡಿದೆ ಆ ಕಾರಣದಿಂದ ನಾವು 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂದರು.

ಯುಪಿಎ ಸರ್ಕಾರವು ದೇಶವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿತ್ತು. 2014ರಲ್ಲಿ ನರೇಂದ್ರ ಮೋದಿ ಅವರ ಅಡಳಿತ ಬಂದ ನಂತರ ಇಂದು ಭಾರತ ಅಭಿವೃದ್ಧಿಪರ ಆರ್ಥಿಕ ದೇಶವಾಗಿ ಬೆಳೆಯುತ್ತಿದೆ. ಯುಪಿಎ ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿ ಹೋಗಿತ್ತು ಎಂಬ ವಿಚಾರ ಎಲ್ಲಿರಿಗೂ ತಿಳಿದಿರುವ ವಿಷಯವಾಗಿದ್ದು, ನರೇಂದ್ರ ಮೋದಿ ಅವರು ಪ್ರಧಾನಿ ಮಂತ್ರಿಯಾಗಿ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶ್ವದಲ್ಲೇ ಭಾರತ ದೇಶದ ಚಿತ್ರಣ ಬದಲಾಯಿತು.

ರಾಜ್ಯದಲ್ಲಿ ನಾವು ಆಡಳಿತದಲ್ಲಿ ಇದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ತಿಳಿಸಲು ಸಾಧ್ಯವಾಗಿಲ್ಲ ಹಾಗೂ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಮ್ಮ ಸರ್ಕಾರದ ವಿರುದ್ಧ ಮಾಡಿದ ಅಪಪ್ರಚಾರದಿಂದಾಗಿ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಸಾಧ್ಯವಾಗಿಲ್ಲ ಎಂಬುದು ನನ್ನ ಭಾವನೆ ಎಂದು ಮಾರೇಗೌಡ ಅಭಿಪ್ರಾಯಪಟ್ಟರು.

ಯಶವಂತಪುರ ಕ್ಷೇತ್ರದಲ್ಲಿ 2016ರಲ್ಲಿ ನಾನು ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡೆ. 2013ರ ಚುನಾವಣೆಯಲ್ಲಿ ಕಾರಣಾಂತಗಳಿಂದ 13,000 ಮತಗಳನ್ನು ಪಡೆದವು. ನಂತರ ಇಡೀ ಕ್ಷೇತ್ರಗದಲ್ಲಿ ಪಕ್ಷ ಸಂಘಟನೆ ಮಾಡಿ 2018ಕ್ಕೆ 60 ಸಾವಿರ ಮತಗಳನ್ನು ಪಡೆಯುವ ಸ್ಧಿತಿಗೆ ಪಕ್ಷ ಬೆಳೆಯಿತು. ಇದಕ್ಕೆ ಮುಖ್ಯ ಕಾರಣ ಕಾರ್ಯಕರ್ತರ ಶ್ರಮ ಹಾಗೂ ವರಿಷ್ಠರು ನೀಡಿದ ಮಾರ್ಗದರ್ಶನ ಎಂದೇ ಹೇಳಬಹುದು. 2028ರ ಚುನಾವಣೆಗೆ ನಾನು ಕೂಡ ಒಬ್ಬ ಎಂಎಲ್‌ಎ ಆಕಾಂಕ್ಷಿ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದರು.

ನಾನು ಯಾವುದೇ ಪಕ್ಷ ವಿರೋಧ ಕೆಲಸ ಮಾಡಿಲ್ಲ. ಆದರೆ ನನ್ನ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡಲಾಯಿತು. ಚುನಾವಣೆಯ ಸಂದರ್ಭದಲ್ಲಿ ಪಕ್ಷ ನನಗೆ ನೀಡಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವ ವ್ಯಕ್ತಿತ್ವ ನನದಲ್ಲ ಎಂದರು.

ಬೆಂಗಳೂರು

ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.

ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Continue Reading

ಬೆಂಗಳೂರು

ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ನಿಷೇಧ ಮಾಡಿದರುವಂತೆ ಮನವಿ ಮಾಡಿದ್ದಾರೆ,
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಪೋಷಕರು ಹಾಗೂ ದಿನಗೂಲಿ ಕಾರ್ಮಿಕರು ಬೈಕ್ ಟ್ಯಾಕ್ಸಿ ಸೇವೆಯಿಂದ ದಿನನಿತ್ಯ ಹೊಟ್ಟೆ ಹೊರೆದುಕೊಳ್ಳುತ್ತಿದ್ದಾರೆ, ಇವು ನಮ್ಮ ಬಿಡುವಿನ ವೇಳೆಯ ಕೆಲಸವಾಗಿರದೇ ಮೂಲ ಉದ್ಯೋಗವೇ ಆಗಿದೆ, ಈ ರೀತಿ ಏಕಾಏಕಿ ನಿಷೇಧ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ,
ಸುರಕ್ಷತೆ, ವಿಮೆ ನಿಯಮ ಹಾಗೂ ತರಬೇತಿ ನಿಯಮಗಳನ್ನು ಜಾರಿಗೆ ತಂದು ನಮ್ಮನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡುವ ಬದಲು ನಿಷೇಧಗೊಳಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಗಿಗ್ ಕಾರ್ಮಿಕರಾದ ನಮಗೆ ನೀವು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಮರೆತಿದ್ದೀರಿ ಎಂದು ಹೇಳಲಾಗಿದೆ,

Continue Reading

ಬೆಂಗಳೂರು

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಹೆಸರು-ಡಿಸಿಎಂ ಡಿಕೆಶಿ

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,
ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿಕೆ ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು,
ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ, ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ, ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಧೆ ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ, ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ, ಎಂದು ಬಣ್ಣೀಸಿದರು,

Continue Reading

Trending