Connect with us

ಚುನಾವಣೆ

ಓವೈಸಿ ವಿರುದ್ಧ ಅಖಾಡಕ್ಕೆ ಇಳಿದಿರೋ, ಮೋದಿ ಮೆಚ್ಚುಗೆ ಪಡೆದಿರೋ ಮಾಧವಿ ಲತಾ ಯಾರು?

Published

on

ಲೋಕಸಭಾ ಚುನಾವಣೆಯ (Loksabha Elections 2024) ದಿನ ಸಮೀಪಿಸುತ್ತಿದ್ದಂತೆಯೇ ಅದರ ಕಾವು ರಂಗೇರಿದೆ. ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ನಾಯಕರು ಪಣತೊಟ್ಟರೆ, ಇತ್ತ ಅಭ್ಯರ್ಥಿಗಳು ಕೂಡ ತಮ್ಮದೇ ಶೈಲಿಯಲ್ಲಿ, ವಿಭಿನ್ನ ರೀತಿಯಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಈ ನಡುವೆ ಗಮನಾರ್ಹ ವಿಷಯ ಅಂದರೆ ಮುಸ್ಲಿಂ ಪ್ರಾಬಲ್ಯವಿರುವ ಹೈದರಾಬಾದ್ ಭದ್ರಕೋಟೆ ಬೇಧಿಸಲು ಬಿಜೆಪಿ ಈ ಬಾರಿ ವಿಭಿನ್ನ ಅಸ್ತ್ರವೊಂದನ್ನು ಪ್ರಯೋಗ ಮಾಡಿದೆ.

ಹೌದು. ದೇಶದ ಅತಿಹೆಚ್ಚು ಜನಸಂಖ್ಯೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಕೂಡ ಒಂದಾಗಿದೆ. ಈ ಕ್ಷೇತ್ರದಲ್ಲಿ ಅಸಾದುದ್ದೀನ್‌ ಓವೈಸಿ (Asaduddin Owaisi) ಕುಟುಂಬವು ಕಳೆದ 40 ವರ್ಷಗಳಿಂದ ಸತತ ಗೆಲುವಿನ ಮೂಲಕ ಭದ್ರಕೋಟೆ ನಿರ್ಮಿಸಿದೆ. ಈ ಕ್ಷೇತ್ರದ ಮತದಾರರ ಪೈಕಿ ಶೇ. 70 ರಷ್ಟು ಮುಸ್ಲಿಮರಿದ್ದಾರೆ. ಆದರೂ ಇಲ್ಲಿ ಬಿಜೆಪಿಯು ಮುಸ್ಲಿಮೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಲಕ್ಷಕ್ಕಿಂತಲೂ ಅಧಿಕ ಮತಗಳಿಸುವ ಮೂಲಕ ಪ್ರತಿಬಾರಿ ಅಸಾದುದ್ದೀನ್‌ ಓವೈಸಿ ಗೆಲುವನ್ನು ಕಠಿಣಗೊಳಿಸುತ್ತಾ ಬಂದಿದೆ. ಅಂತೆಯೇ ಈ ಬಾರಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಓವೈಸಿಗೆ ಟಫ್‌ ಫೈಟ್‌ ಕೊಡಲು ಸಜ್ಜಾಗಿದೆ. ಹಾಗಿದ್ರೆ ಈ ಮಾಧವಿ ಲತಾ ಯಾರು?, ಅವರ ಹಿನ್ನೆಲೆ ಏನು..?, ಮಾಧವಿ ಲತಾ ಅವರನ್ನೇ ಬಿಜೆಪಿ ಯಾಕೆ ಅಖಾಡಕ್ಕಿ ಇಳಿಸಿದೆ ಎಂಬುದನ್ನು ನೋಡೋಣ.

ಮಾಧವಿ ಲತಾ ಯಾರು?: ಆರ್‌ಎಸ್‌ಎಸ್‌ನ ಕಟ್ಟಾ ಕಾರ್ಯಕರ್ತೆ, ಹೋರಾಟಗಾರ್ತಿ, ಭರತನಾಟ್ಯ ಕಲಾವಿದೆ ಮಾಧವಿ ಲತಾ (Madhavi Latha) ಅವರನ್ನು ಭಾರತೀಯ ಜನತಾ ಪಾರ್ಟಿ ಅಖಾಡಕ್ಕೆ ಇಳಿಸಿದೆ. ಈ ಮೂಲಕ ಓವೈಸಿ ವಿರುದ್ಧ ಈ ಬಾರಿ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿಜೆಪಿ ಬಿದ್ದಂತಿದೆ.

ನಿಜಾಮ್ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಪದವಿ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಧವಿ ಲತಾ ಅವರು ಪಡೆದಿದ್ದಾರೆ. ಇವರ ಮೂವರು ಮಕ್ಕಳಲ್ಲಿ ಇಬ್ಬರು ಐಐಟಿ ಮದ್ರಾಸ್‌ನಲ್ಲಿ ಓದುತ್ತಿದ್ದಾರೆ. ಹೋಮ್‌ ಸ್ಕೂಲಿಂಗ್‌ ನಡೆಸಿಯೇ ಮಕ್ಕಳನ್ನು ಐಐಟಿಗೆ ಕಳುಹಿಸಿರುವುದು ವಿಶೇಷವಾಗಿದೆ.

ವೃತ್ತಿಪರ ಭರತನಾಟ್ಯಂ ಡಾನ್ಸರ್‌ ಆಗಿರುವ 49 ವರ್ಷದ ಮಾಧವಿ ಲತಾ ಅವರು ಹೆಣ್ಣುಮಕ್ಕಳ ಶಿಕ್ಷಣದ ಪ್ರಾಯೋಜಕರಾಗಿದ್ದಾರೆ ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜಿಸುವಲ್ಲಿ ಮತ್ತು ಪ್ರವಾಹ ನೆರವು ನೀಡುವಲ್ಲಿನ ಪ್ರಯತ್ನಗಳಿಗೆ ಹೆಸರುವಾಸಿಯಾಗಿದ್ದಾರೆ. ಪ್ರಸ್ತುತ ಹೈದರಾಬಾದ್ ಮೂಲದ ಪ್ರಮುಖ ಆರೋಗ್ಯ ಸಂಸ್ಥೆಯಾದ ವಿರಿಂಚಿ ಹಾಸ್ಪಿಟಲ್ಸ್‌ನ ಅಧ್ಯಕ್ಷರಾಗಿದ್ದಾರೆ. ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ನಂತರ ಆರೋಗ್ಯ ಅಧಿಕಾರಿಗಳು ಕೋವಿಡ್‌-19 ಚಿಕಿತ್ಸೆಗಾಗಿ ಅದರ ಪರವಾನಗಿಯನ್ನು ರದ್ದುಗೊಳಿಸಿದಾಗ ವಿರಿಂಚಿ ಹಾಸ್ಪಿಟಲ್ಸ್‌ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಮೋದಿ ಮೆಚ್ಚುಗೆ: ಮಾಧವಿ ಲತಾ ಅವರು 2019 ರಲ್ಲಿ ಕಾನೂನುಬಾಹಿರವಾದ ತ್ರಿವಳಿ ತಲಾಖ್ ವಿರುದ್ಧ ಸಕ್ರಿಯವಾಗಿ ಪ್ರಚಾರ ಮಾಡಿದರು. ಅವರು ಹಳೇ ಹೈದರಾಬಾದ್‌ನಲ್ಲಿ ಈ ಸಮಸ್ಯೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಈ ಪದ್ಧತಿಯನ್ನು ರದ್ದುಗೊಳಿಸುವಂತೆ ಮುಸ್ಲಿಂ ಹೆಣ್ಣುಮಕ್ಕಳೊಂದಿಗೆ ಸೇರಿ ಒತ್ತಾಯಿಸಿದ್ದರು. ಮಾಧವಿ ಲತಾ ಅವರ ಈ ನಡೆ ಪ್ರಧಾನಿ ನರೇಂದ್ರ ಮೋದಿಯವರ ಗಮನಸೆಳೆದಿತ್ತು. ಕೆಲ ತಿಂಗಳ ಹಿಂದೆ ಪ್ರಚಾರದ ವೇಳೆ ಬುರ್ಕಾ ಧರಿಸಿದ್ದ ಸಾಕಷ್ಟು ಮುಸ್ಲಿಂ ಹೆಣ್ಣುಮಕ್ಕಳು ಇವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದ ಫೋಟೋ ಕೂಡ ವೈರಲ್‌ ಆಗಿತ್ತು. ಒಟ್ಟಿನಲ್ಲಿ ಪಕ್ಷದ ವಲಯದಲ್ಲಿ ಗುರುತಿಸಿಕೊಳ್ಳದಿದ್ದರೂ ಹೊರಗೆ ತಮ್ಮ ವಾಕ್ಚಾತುರ್ಯದಿಂದ ಭಾರೀ ಪ್ರಸಿದ್ಧಿ ಪಡೆದಿದ್ದಾರೆ. ಈ ಕಾರಣದಿಂದ ಇಂದು ಇವರನ್ನು ಬಿಜೆಪಿ ಚುನಾವಣಾ ಅಖಾಡಕ್ಕೆ ಇಳಿಸಿರುವ ಸಾಧ್ಯತೆಗಳಿವೆ.

ಇತ್ತೀಚೆಗೆ ಆಪ್‌ ಕೀ ಅದಾಲತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಧವಿ ಲತಾಗೆ ಪ್ರಮುಖ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಮುಸ್ಲಿಂ ಸಮುದಾಯದ ಆಂತರಿಕ ವಿಚಾರಗಳಲ್ಲಿ ನೀವು ಮೂಗು ತೂರಿಸೋದ್ಯಾಕೆ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ಕಡ್ಡಿಮುರಿದಂತೆ ಉತ್ತರ ನೀಡಿದ್ದ ಮಾಧವಿ ಲತಾ, ಮುಸ್ಲಿಂ ಹೆಣ್ಣುಮಕ್ಕಳು ಬೇರೆಯವರಲ್ಲ. ಅವರೂ ನಮ್ಮ ಪ್ರಜೆಗಳು. ದೇಶದ ಪ್ರಜೆಯಾಗಿ ನಾನು ಇದರ ಬಗ್ಗೆ ಮಾತನಾಡಬಹುದು ಎಂದಿದ್ದರು.

ಟಿಕೆಟ್‌ ಘೋಷಣೆ ಬಳಿಕ ಲತಾ ಹೇಳಿದ್ದೇನು?: ವಿಶೇಷವೆಂದರೆ, ಮುಂಬರುವ ಲೋಕಸಭಾ ಚುನಾವಣೆ 2024 ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿರುವ ಮಾಧವಿ ಲತಾ ಅವರು ಮಾರ್ಚ್ 2 ರವರೆಗೂ ರಾಜಕೀಯ ವಲಯಗಳಲ್ಲಿ ಹೆಚ್ಚು ಪರಿಚಿತರಾಗಿರಲಿಲ್ಲ. ಅಂದರೆ ಟಿಕೆಟ್‌ ಘೋಷಣೆ ಮಾಡುವ ವೇಳೆ ಮಾಧವಿ ಲತಾ ಬಿಜೆಪಿಯ ಸದಸ್ಯೆ ಕೂಡ ಆಗಿರಲಿಲ್ಲ. ಟಿಕೆಟ್‌ ಘೋಷಣೆ ಬಳಿಕ ಪ್ರತಿಕ್ರಿಯಿಸಿದ್ದ ಮಾಧವಿ, ಕಳೆದ ಒಂದು ವರ್ಷದಿಂದ ಪ್ರತಿದಿನ ಎಲ್ಲಾ ಪ್ರದೇಶಗಳಿಗೆ ಭೇಟಿ ನೀಡಿ 11 ರಿಂದ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಏನೂ ಇಲ್ಲ, ಸ್ವಚ್ಛತೆ ಇಲ್ಲ, ಶಿಕ್ಷಣವಿಲ್ಲ, ಮದರಸಾಗಳಲ್ಲಿ ಮಕ್ಕಳಿಗೆ ಆಹಾರವಿಲ್ಲ. ಮುಸ್ಲಿಂ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಹಿಂದೂ ದೇವಾಲಯಗಳು ಮತ್ತು ಮನೆಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದರು.

ಚುನಾವಣೆ

TN 2026 ಟೀಸರ್‌ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ

Published

on

By

ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್‌ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.

ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.

ಟೀಸರ್‌ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.

ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.

Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ಚುನಾವಣೆ

“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ

Published

on

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಕಾವು ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಗೃಹ ಸಚಿವ Amit Shah ಮಹತ್ವದ ಘೋಷಣೆ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಗೋಲ್ಪಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, “ಅಕ್ರಮ ನುಸುಳುಕೋರರು ನಾಲ್ಕು ಮದುವೆಯಾಗುವುದನ್ನು ತಡೆಯಲು ಯುಸಿಸಿ ಅಗತ್ಯ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು. ಪ್ರಧಾನಿ Narendra Modi ಮತ್ತು ಅಸ್ಸಾಂ ಮುಖ್ಯಮಂತ್ರಿ Himanta Biswa Sarma ಬುಡಕಟ್ಟು ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿದ್ದಾರೆ ಎಂದರು.

ಬುಡಕಟ್ಟು ಪ್ರದೇಶಗಳಲ್ಲಿ ಯುಸಿಸಿ ಜಾರಿಯಾಗುವುದಿಲ್ಲ ಎಂಬುದನ್ನು ಶಾ ಸ್ಪಷ್ಟಪಡಿಸಿ, ಕಾಂಗ್ರೆಸ್ ಹರಡುತ್ತಿರುವ ಗಾಳಿಸುದ್ದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಬುಡಕಟ್ಟು ಪ್ರದೇಶಗಳನ್ನು ಯುಸಿಸಿಯಿಂದ ಹೊರಗಿಡಲಾಗುತ್ತದೆ” ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “70 ವರ್ಷ ಆಡಳಿತ ನಡೆಸಿದರೂ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯಾಗಿಸಲು ಸಾಧ್ಯವಾಗಲಿಲ್ಲ. ಆದರೆ ಮೋದಿ ನಾಯಕತ್ವದಲ್ಲಿ ಅದು ಸಾಧ್ಯವಾಯಿತು” ಎಂದು ಟೀಕಿಸಿದರು.

Assam ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡು ಅವಧಿಗೆ ಮುಖ್ಯಮಂತ್ರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಧಿಕಾರಕ್ಕೇರಲು ಯತ್ನಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರ ಮರುಪಡೆಯಲು ಹೋರಾಟ ನಡೆಸುತ್ತಿದೆ.

ಒಟ್ಟಿನಲ್ಲಿ, ಯುಸಿಸಿ ವಿಚಾರ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಿದ್ದು, ಅಸ್ಸಾಂ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Continue Reading

ಚುನಾವಣೆ

‘ಸಿಂಗಂ’ ಅಣ್ಣಾಮಲೈ ನಡೆಗೆ ಅಭಿಮಾನಿಗಳ ಸಲಾಂ

Published

on

By

ಕಣ್ಣೂರು: ತಮಿಳುನಾಡಿನಲ್ಲಿ ಬಿಜೆಪಿ ಪ್ರಚಾರಕ್ಕೆ ಸಂಪೂರ್ಣ ಶಕ್ತಿ ಹಾಕುವುದಾಗಿ K. Annamalai ಘೋಷಿಸಿದ್ದು, ಅವರ ಪಕ್ಷನಿಷ್ಠೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡ್ ನೀಡಿದ ಜವಾಬ್ದಾರಿಯಂತೆ ರಾಜ್ಯದ ಮೂಲೆಮೂಲೆಗೂ ತೆರಳಿ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, “ಪಕ್ಷ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು ನನ್ನ ಕರ್ತವ್ಯ. 7ರಿಂದ 23ರವರೆಗೆ ತಮಿಳುನಾಡಿನಾದ್ಯಂತ ಪ್ರಚಾರ ನಡೆಸುತ್ತೇನೆ” ಎಂದು ಸ್ಪಷ್ಟಪಡಿಸಿದರು. ಪುದುಚೇರಿ ಮತ್ತು ಕೇರಳದಲ್ಲಿಯೂ ಪ್ರಚಾರದ ಹೊಣೆಗಾರಿಕೆ ನೀಡಲಾಗಿದೆ ಎಂದೂ ಹೇಳಿದರು.

ಟಿಕೆಟ್ ಸಿಗದಿದ್ದರೂ ಯಾವುದೇ ಅಸಮಾಧಾನ ವ್ಯಕ್ತಪಡಿಸದೇ ಪಕ್ಷದ ಪರವಾಗಿ ನಿಂತಿರುವ ಅಣ್ಣಾಮಲೈ ನಡೆ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. Bharatiya Janata Party ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಇರದಿದ್ದರೂ, ಪ್ರಚಾರಕ್ಕೆ ಸಜ್ಜಾಗಿರುವುದು ಅವರ ಬದ್ಧತೆಯನ್ನು ತೋರಿಸುತ್ತದೆ.

ಅಣ್ಣಾಮಲೈ ಅವರ ಈ ನಿರ್ಧಾರಕ್ಕೆ ಅಭಿಮಾನಿಗಳಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವರು ಅವರನ್ನು “ಸಿಂಗಂ” ಎಂದು ಕೊಂಡಾಡುತ್ತಿದ್ದು, ಪಕ್ಷನಿಷ್ಠೆ ಮತ್ತು ಶಿಸ್ತಿನ ಉದಾಹರಣೆಯಾಗಿ ಗುರುತಿಸಿದ್ದಾರೆ. ಇತ್ತೀಚಿನ ರಾಜಕೀಯದಲ್ಲಿ ಟಿಕೆಟ್ ಸಿಗದಿದ್ದರೆ ಪಕ್ಷಾಂತರ ಮಾಡುವ ಪ್ರವೃತ್ತಿ ಹೆಚ್ಚಿರುವ ನಡುವೆಯೇ, ಅವರ ನಿಲುವು ವಿಭಿನ್ನವಾಗಿ ಕಾಣುತ್ತಿದೆ.

ಒಟ್ಟಿನಲ್ಲಿ, ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದರೂ ಪಕ್ಷವನ್ನು ಬಲಪಡಿಸುವತ್ತ ಅಣ್ಣಾಮಲೈ ಗಮನ ಹರಿಸಿರುವುದು ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Continue Reading

Trending