ಚುನಾವಣೆ
ಪಕ್ಷ ಯಾವುದೇ ಕಾರಣಕ್ಕೂ ದ್ರೋಹ ಮಾಡಿಲ್ಲ ರ.ಅಂಜನಪ್ಪ
ಬೆಂಗಳೂರು: ರಾಜ್ಯದಲ್ಲಿ 25 ಸೀಟ್ನ್ನು ಗೆಲ್ಲುತ್ತೇವೆ ಎಂದು ಕೆಂಗೇರಿ ಮಾಜಿ ಪಾಲಿಕೆ ಸದಸ್ಯ ರ.ಅಂಜನಪ್ಪ ಹೇಳಿದರು, ಹೊಸ ಸುದ್ದಿಯ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಅಭಿವೃದ್ಧಿ ಕುಂಟಿತವಾಗಿದೆ, ಕೇಂದ್ರದಲ್ಲಿ ಸಧೃಡ ಹಾಗೂ ಜನಪರ ಸರ್ಕಾರ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ಸರ್ಕಾರ ರಚಿಸುವುದು ಖಚಿತ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ಣಾಮ ಮಾಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಗುರಿಯನ್ನು ಹೊಂದಿದೆ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜಿ ಅವರು ಸುಮಾರು 3 ಲಕ್ಷ ಮತಗಳ ಅಂತರದಿAದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸುತ್ತಾರೆ,
ನನ್ನ 36 ವರ್ಷದ ರಾಜಕೀಯ ಜೀವನದಲ್ಲಿ ಎಸ್ ಟಿ ಸೋಮಶೇಖರ ಅವರ ತರಹ ಬಂಡತನ ಇರುವ ರಾಜಕೀಯ ವ್ಯಕ್ತಿ ಹಾಗೂ ಶಾಸಕನ್ನು ನೋಡಿಲ್ಲ, ಯಾವ ಕಾರಣಕ್ಕೆ ಅವರು ಬಿಜೆಪಿಗೆ ಬಂದರು ಇಂದು ಯಾವ ಕಾರಣಕ್ಕೆ ಬಿಜೆಪಿಯನ್ನು ಬಿಟ್ಟರೂ, ಪಕ್ಷ ಅವರಿಗೆ ಎಲ್ಲವನ್ನು ನೀಡಿತು, ಅವರಿಗೆ ಕೊಟ್ಟ ಕೆಲಸವನ್ನು ಕೂಡ ಬಹಳ ಚನ್ನಾಗಿ ನಿರ್ವಹಸಿ ಒಳ್ಳೆಯ ಹೆಸರನ್ನು ಪಕ್ಷದಲ್ಲಿ ಗಳಿಸಿದರು ನಂತರ ಅವರಿಗೆ ಏನು ಆಯ್ತು ಗೊತ್ತಿಲ್ಲ, ಅಧಿಕಾರ ಎನ್ನುವುದು ಶಾಶ್ವತ ಅಲ್ಲ, ನಮ್ಮ ಬಿಜೆಪಿ ಪಕ್ಷ ಅವರಿಗೆ ಯಾವುದೇ ಕಾರಣಕ್ಕೂ ದ್ರೋಹ ಮಾಡಿಲ್ಲ, ನಾಯಕರಗಳ ಜೊತೆ ಅವರು ಏನು ಮಾಡಿಕೊಂಡಿದ್ದರೊ ನಮಗೆ ಗೊತ್ತಿಲ್ಲ, ಕೆಲ ವ್ಯವಹಾರಗಳನ್ನು ಮುಚ್ಚಿಡಲು ಇಂದು ಅವರು ಕಾಂಗ್ರೆಸ್ ಬಾಗಿಲುನಲ್ಲಿ ನಿಂತಿದ್ದಾರೆ ಎಂಬ ಅನುಮಾನ ಇದೇ, ಚುನಾವಣೆ ಸಂದರ್ಭದಲ್ಲಿ ಪಕ್ಷದ ಕೆಲ ಕಾರ್ಯಕರ್ತರು ಅವರ ವಿರುದ್ಧ ಕೆಲಸ ಮಾಡಿದ್ದಾರೆ ಅವರಿಗೆ ಎಸ್ ಟಿ ಸೋಮಶೇಖರ್ ಅವರು ವೈಯಕ್ತಿಕವಾಗಿ ಏನು ದ್ರೋಹ ಮಾಡಿದರೂ ನಮಗೆ ಗೊತ್ತಿಲ್ಲ, ಈ ತರಹ ಚುಟುವಟಿಕೆ ಮಾಡಿದ ಕಾರ್ಯಕರ್ತರಿಗೆ ಪಕ್ಷ ಶಿಸ್ತಿನ ಕ್ರಮ ತೆಗೆದುಕೊಳ್ಳುತ್ತದೆ ಎಂದರು.
ಮಾಜಿ ಅಧ್ಯಕ್ಷ ಸಿ ಎಂ ಮಾರೇಗೌಡ ಪಕ್ಷ ವಿರುದ್ಧ ಚಟುವಟಿಕೆ ಮಾಡಿಲ್ಲ, ಅದನ್ನು ಮಾಡಿರುವುದು ಧನಂಜಯ. ಮಾರೇಗೌಡರು ಪಕ್ಷ ವಿರುದ್ಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ರೀತಿಯ ಅಧಾರ ಇಲ್ಲ, ಪಕ್ಷದ ಮಾಜಿ ಅಧ್ಯಕ್ಷನ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಗಳ ದಾಖಲೆ ನೀಡಲ್ಲಿ ನಾವು ಕೂಡ ಚರ್ಚೆಗೆ ಸಿದ್ದ ಎಂದರು,
ಯಶವಂತಪುರ ಕ್ಷೇತ್ರದಲ್ಲಿ ಶಾಸಕ ಎಸ್ ಟಿ ಸೋಮಶೇಖರ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದರೂ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಲೀಡ್ ಬರುತ್ತದೆ ಎಂಬ ವಿಶ್ವಾಸ ಇದೇ, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಕೆಂಗೇರಿ ವಾರ್ಡ್ಗೆ ನಾನು ಕೂಡ ಅಕಾಂಕ್ಷಿ ಕೆಂಗೇರಿ ವಾರ್ಡ್ ಅಭಿವೃದ್ಧಿ ಮಾಡಲು ಸಾಕಷ್ಟು ಯೋಜನೆಗಳು ಇರುವುದು, ಚುನಾವಣೆಯಲ್ಲಿ ಕೂಡ ನಾವು ಗೆಲ್ಲುತ್ತೇವೆ ಎಂದರು,
ಕಾಂಗ್ರೆಸ್ ಸರ್ಕಾರ ಕಾವೇರಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಕಾರಣ ಇಂದು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇದೇ, ಸರ್ಕಾರ ದೂರದೃಷ್ಟಿಯನ್ನು ಇಟ್ಟಿಕೊಂಡು ಕಾವೇರಿ ನೀರಿನ ಸಮಸ್ಯೆ ಬಗೆಹರಿಸದೆ ಇಂದು ಸಾಕಷ್ಟು ತೊಂದರೆಗಳನ್ನು ಎದುರುಸುತ್ತಿದ್ದೇವೆ ಎಂದರು,
ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜೀವ್ ಗೌಡ ಅವರ ಗೆಲ್ಲುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ, ಪ್ರಧಾನಿ ಮೋದಿ ಅವರಿಗೆ ಎಲ್ಲಾ ಪಕ್ಷಗಳಲ್ಲೂ ಅಭಿಮಾನಿಗಳು ಇದ್ದಾರೆ, ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಲಾಭ ಬಿಜೆಪಿ ಪಕ್ಷಕ್ಕೆ ಸಿಗುವುದು, ಶೋಭಾ ಅವರಿಗೆ ಗೋ ಬ್ಯಾಕ್ ಎಂದು ಬಿಜೆಪಿ ನಿಷ್ಟವಂತ ಕಾರ್ಯಕರ್ತರು ಯಾರು ಹೇಳಿಲ್ಲ ನಮ್ಮ ಪಕ್ಷದವರು ಟಿಕೆಟ್ ಬೇಕು ಎಂಬ ಆಸೆಗೆ ಮಾಡಿರುವ ಕೆಲಸ ಎಂದರು.
2028ರ ವಿಧಾನಸಭಾ ಚುನಾವಣೆಗೆ ನಮ್ಮಲ್ಲಿ ಇರುವ ಕೆಲ ಕಾರಣಗಳಿಂದ ಯಶವಂತಪುರ ಕ್ಷೇತ್ರಕ್ಕೆ ಮೂಲ ಬಿಜೆಪಿ ಅಭ್ಯರ್ಥಿ ಇಲ್ಲ, ಅದರೆ ಇನ್ನೂ ಸಮಯ ಇರುವ ಕಾರಣ ಪಕ್ಷ ಅಭ್ಯರ್ಥಿಯನ್ನು ಗುರುತಿಸಿ ಪಕ್ಷ ಕಟ್ಟಿರುವ ಕಾರ್ಯಕರ್ತರನ್ನೇ ಅಭ್ಯರ್ಥಿಯಾಗಿ ಘೋಷಿಸುವುದು ಕ್ಷೇತ್ರದಲ್ಲಿ ನಾವೇ ಬೆಳಿಸಿರುವ ನಾಯಕರುಗಳು ನಮ್ಮನ್ನು ತುಳಿಯುತ್ತಿದ್ದಾರೆ ಎಂದರು,
ಚುನಾವಣೆ
Bhabanipur Shock: 700 ಮತದಾರರ ಬೂತ್ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್ಗಳ ಪೈಕಿ 207 ಬೂತ್ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
ಚುನಾವಣೆ
ಜಿಬಿಎ ಚುನಾವಣೆಗೆ ಕೌಂಟ್ಡೌನ್ ಶುರು! ಜೂನ್ನಲ್ಲಿ ಡೇಟ್ ಫಿಕ್ಸ್
ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.
ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.
ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚುನಾವಣೆ
‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಗುರುವಾರ ಕಾಲಿಘಾಟ್ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.
ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.
ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
