ಚುನಾವಣೆ
ಮೋದಿ ಅಲೆ ಇಲ್ಲ ರಾಜ್ಯದಲ್ಲಿ ನಮ್ಮ ಗ್ಯಾರಂಟಿ ಹವಾ ಇದೆ ಪ್ರೊ.ರಾಜೀವ್ ಗೌಡ
ಬೆಂಗಳೂರು: ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿ ಹವಾ ಇದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಪ್ರೊ.ರಾಜೀವ್ ಗೌಡ ಹೇಳಿದರು, ಹೊಸ ಸುದ್ದಿ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ ಅದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ, 10 ವರ್ಷ ಆಡಳಿತದಲ್ಲಿ ಇರುವ ಬಿಜೆಪಿ ಸರ್ಕಾರದ ಕೊಡುಗೆ ಏನು ಎಂಬುದು ದೇಶದ ಪ್ರಜೆಗಳಿಗೆ ತಿಳಿದಿದೆ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಆಗಬೇಕು, ರಾಜ್ಯದಲ್ಲಿ ಆಡಳಿತದಲ್ಲಿ ಇರುವ ನಮ್ಮ ಕಾಂಗ್ರೆಸ್ ಸರ್ಕಾರದ ಯೋಜೆನಗಳ ಜೊತೆಗೆ ನಮ್ಮ ಪ್ರಣಾಳಿಕೆಯಲ್ಲಿ ನಾವು ನೀಡಿರುವ ಎಲ್ಲಾ ಯೋಜನೆಗಳನ್ನು ಫಲಾನುಭವಿಗಳಿಗೆ ಸಿಗುವಂತೆ ಮಾಡಿ ಅಭಿವೃದ್ಧಿಯ ಯೋಜನೆ ನಾನು ರೂಪಿಸಿಕೊಂಡಿದ್ದೇನೆ, ನಮ್ಮ ಸಂವಿಧಾನ ಎಲ್ಲರಿಗೂ ಶಾಂತಿಯಿAದ ಬದುಕಲು ಅವಕಾಶ ಮಾಡಿಕೊಟ್ಟಿದೆ ಅದರೆ ಇಂದು ಬಿಜೆಪಿಯವರು ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂಬ ಚಿಂತನೆ ನಡೆಸುತ್ತಿದೆ, ಸಂವಿಧಾನವನ್ನು ನಾವು ಬದಲಾಯಿಸುತ್ತೇವೆ ಎಂಬ ಪಕ್ಷದವರಿಗೆ ಯಾರು ಮತ ಹಾಕುವುದಿಲ್ಲ, ಬಿಜೆಪಿ ಅವರು ಧರ್ಮವನ್ನು ದೂರಪಯೋಗಿಸಿಕೊಳ್ಳುತ್ತಿದ್ದಾರೆ, ಕ್ಷೇತ್ರದ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟಿಕೊಂಡಿದ್ದೇನೆ. ಅವರ ಸಮಸ್ಯೆಗಳನ್ನು ಬಗೆಹರಿಸುವುದು ನನ್ನ ಮುಖ್ಯ ಉದ್ದೇಶ, ನನ್ನ ವಿರುದ್ಧ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದು ಅವರ ಕನಸು ಏಕೆಂದರೆ ಅವರು ಬರೇ ಡೋಂಗಿ ಮಾತುಗಳನ್ನು ಆಡುತ್ತಿದ್ದಾರೆ, ಅವರು ಸಂಸದೆಯಾಗಿ ಜನರ ಸಮಸ್ಯೆಗಳನ್ನು ಹಾಗೂ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡದೆ ಶೋಭಕ್ಕ ಗೋ ಬ್ಯಾಕ್ ಎಂದು ಅವರು ಪಕ್ಷದವರೇ ಹೇಳಿದ್ದಾರೆ, ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ಧಿ ಹಾಗೂ ಅವರ ಯೋಜನೆಗಳ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಎಂಬ ವಿಷಯ ದೇಶದಲ್ಲಿ ಇರುವ ಭಾರತೀಯರಿಗೆ ತಿಳಿದಿದೆ, ರಾಜ್ಯದಲ್ಲಿ ಮೋದಿ ಅಲೆ ಇಲ್ಲ ನಮ್ಮ ಗ್ಯಾರಂಟಿಯ ಅಲೆ ಇದೇ, ದೇಶದಲ್ಲಿ ಬೆಲೆ ಏರಿಕೆಗೆ ಮುಖ್ಯ ಕಾರಣ 10 ವರ್ಷದ ಮೋದಿ ಸರ್ಕಾರದ ಆಡಳಿತ ಎಂದರು, ಚುನಾಯಿತರಾಗಿ ಆಯ್ಕೆಯಾಗಿ ಬಂದ ನಂತರ ದೆಹಲಿಗೆ ಹೋಗಿ ಬೆಂಗಳೂರು ನಗರಕ್ಕೆ ಕೇಂದ್ರ,ರಾಜ್ಯ ಮತ್ತು ಬಿಬಿಎಂಪಿಗೆ ಟ್ರಿಪಲ್ ಎಂಜಿನ್ ನಂತೆ ಕೆಲಸ ಮಾಡಲು ಹಣವನ್ನು ತರುತ್ತೇವೆ ಎಂದರು, ಜನರನ್ನು ಖಾಸಗಿಯಿಂದ ಸಾರ್ವಜನಿಕ ಸಾರಿಗೆಗೆ ಬದಲಾಯಿಸುವಂತೆ ಮಾಡಬೇಕಾಗುತ್ತದೆ, ಮೆಟ್ರೋ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚು ಮಾಡಬೇಕು, ಸುತ್ತಮುತ್ತಲಿನ ಕೆರೆಗಳಿಗೆ ಕಾಯಕಲ್ಪ ನೀಡಲಾಗುವುದು ಎಂದರು,
ಚುನಾವಣೆ
ಐದು ನಗರ ಪಾಲಿಕೆ ಚುನಾವಣೆ ಕಾವು: ಕಾಂಗ್ರೆಸ್ ಸೇರಿದಂತೆ ಪಕ್ಷಗಳಲ್ಲಿ ಚಟುವಟಿಕೆ ಜೋರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆ ಮೂಡಿದೆ.
ಸುಪ್ರೀಂ ಕೋರ್ಟ್ ಮೊದಲು ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಸಿಬ್ಬಂದಿ ಕೊರತೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಪರಿಗಣಿಸಿ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಅಂತಿಮ ಅವಕಾಶವಾಗಿದ್ದು, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಚುನಾವಣಾ ಪ್ರಕ್ರಿಯೆ ವೇಗ ಪಡೆಯಲು ಕಾರಣವಾಗಿದೆ. ಈ ಬೆಳವಣಿಗೆಯ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಗುರುತಿಸುವಿಕೆ, ಚುನಾವಣಾ ಸಿಬ್ಬಂದಿ ನಿಯೋಜನೆ ಹಾಗೂ ಇತರೆ ಆಡಳಿತಾತ್ಮಕ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಜುಲೈ 10ರೊಳಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವೇಳಾಪಟ್ಟಿ ಘೋಷಣೆಯಾದ ತಕ್ಷಣ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ.
ಇತ್ತ ರಾಜಕೀಯ ಪಕ್ಷಗಳೂ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ. ಮನೆಮನೆಗೆ ಭೇಟಿ, ಸರ್ಕಾರದ ಸಾಧನೆಗಳ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ವಾರ್ಡ್‌ವಾರು ಮತದಾರರ ಸಂಪರ್ಕ ಅಭಿಯಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಜಿಬಿಎ ಚುನಾವಣೆಗಳು ಬೆಂಗಳೂರು ನಗರ ಆಡಳಿತದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಚುನಾವಣೆಗಳಾಗಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
ಚುನಾವಣೆ
Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
-
ದೇಶ13 hours agoರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ
-
ಅಪರಾಧ12 hours agoಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೆ ರೌಡಿಗಳ ದಾಳಿ: ಫ್ಲೈ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
-
ದೇಶ6 hours agoMLA ವಾಹನ ಬಳಕೆಗೆ ಹೊಸ ನಿಯಮ ಜಾರಿ; ವೇತನ, ಪಿಂಚಣಿಯಿಂದಲೇ ಶುಲ್ಕ ಕಡಿತ!
-
ದೇಶ17 hours agoಬ್ಯಾಂಕ್ ಅಕೌಂಟ್ ಕ್ಲೋಸ್ ಮಾಡಿದರೆ ಕ್ರೆಡಿಟ್ ಕಾರ್ಡ್ ಬಂದ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
-
ದೇಶ12 hours ago‘ಮೋದಿ ಒಂದೂವರೆ ಗಂಟೆ ನನಗೆ ಬುದ್ಧಿ ಹೇಳಿದರು’ : ಎಚ್.ಡಿ.ಕುಮಾರಸ್ವಾಮಿ
-
ಅಪರಾಧ10 hours agoವೈರಲ್ ವಿಡಿಯೋ: ಲಾರಿ ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿನಿ
-
ದೇಶ13 hours agoಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಬಾಡಿಗೆ ಒಪ್ಪಂದ ಇಲ್ಲದಿದ್ದರೂ ಉಚಿತ ವಿದ್ಯುತ್ ಪಡೆಯಬಹುದು!
-
ಅಪರಾಧ11 hours agoಆಸ್ಪತ್ರೆ ದೌರ್ಜನ್ಯ ಪ್ರಕರಣ: ವೈರಲ್ ದೃಶ್ಯಗಳ ನಡುವೆ ಕಾರ್ಪೊರೇಟರ್ ಸ್ಪಷ್ಟನೆ ಏನು?
