ಚುನಾವಣೆ
ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಸಮಾಜಕ್ಕೆ ಮುಜುಗರ ಕುಮಾರಸ್ವಾಮಿ
ಶಿವಮೊಗ್ಗ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಎಸ್‌ಐಟಿ ರಚನೆಯಾಗಿದೆ, ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು, ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರೂ ತಲೆಬಾಗಲೇಬೇಕು ಎಂದು ಹೇಳಿದರು,
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಚುನಾವಣೆಗೂ ಮೂರು ದಿನ ವಿಡಿಯೋಗಳನ್ನು ವೈರಲ್ ಮಾಡಿದ್ದಾರೆ, ಇದು ಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದರು, ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ವ್ಯಕ್ತಿ ಬಗ್ಗೆ ಚರ್ಚೆ ಮಾಡಿ ಕುಟುಂಬವನ್ನು ಯಾಕೆ ಎಳೆದು ತರ್ತಿರಾ? ಎಂದು ಪ್ರಶ್ನಿಸಿದ ಅವರು ದೇವೇಗೌಡ ಹಾಗೂ ಕುಮಾರಸ್ವಾಮಿ ಹೆಸರನ್ನು ಯಾಕೆ ತರುತ್ತಿರಾ? ಎಸ್‌ಐಟಿ ವರದಿ ಏನು ಕೊಡುತೋ ಅದರ ಪ್ರಕಾರ ಶಿಕ್ಷಯಾಗುತ್ತದೆ, ಇಂತಹ ಪ್ರಕರಣದಿಂದ ನನಗೆ ಮಾತ್ರ ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ ಇಂತಹಕ್ಕೆ ನನ್ನ ಸಹಮತ ಇಲ್ಲ ಎಂದರು
ಚುನಾವಣೆ
ಐದು ನಗರ ಪಾಲಿಕೆ ಚುನಾವಣೆ ಕಾವು: ಕಾಂಗ್ರೆಸ್ ಸೇರಿದಂತೆ ಪಕ್ಷಗಳಲ್ಲಿ ಚಟುವಟಿಕೆ ಜೋರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆ ಮೂಡಿದೆ.
ಸುಪ್ರೀಂ ಕೋರ್ಟ್ ಮೊದಲು ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಸಿಬ್ಬಂದಿ ಕೊರತೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಪರಿಗಣಿಸಿ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಅಂತಿಮ ಅವಕಾಶವಾಗಿದ್ದು, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಚುನಾವಣಾ ಪ್ರಕ್ರಿಯೆ ವೇಗ ಪಡೆಯಲು ಕಾರಣವಾಗಿದೆ. ಈ ಬೆಳವಣಿಗೆಯ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಗುರುತಿಸುವಿಕೆ, ಚುನಾವಣಾ ಸಿಬ್ಬಂದಿ ನಿಯೋಜನೆ ಹಾಗೂ ಇತರೆ ಆಡಳಿತಾತ್ಮಕ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಜುಲೈ 10ರೊಳಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವೇಳಾಪಟ್ಟಿ ಘೋಷಣೆಯಾದ ತಕ್ಷಣ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ.
ಇತ್ತ ರಾಜಕೀಯ ಪಕ್ಷಗಳೂ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ. ಮನೆಮನೆಗೆ ಭೇಟಿ, ಸರ್ಕಾರದ ಸಾಧನೆಗಳ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ವಾರ್ಡ್‌ವಾರು ಮತದಾರರ ಸಂಪರ್ಕ ಅಭಿಯಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಜಿಬಿಎ ಚುನಾವಣೆಗಳು ಬೆಂಗಳೂರು ನಗರ ಆಡಳಿತದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಚುನಾವಣೆಗಳಾಗಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
ಚುನಾವಣೆ
Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
-
ದೇಶ11 hours agoಅಲಿ ಖಮೇನಿ ಅಂತಿಮಯಾತ್ರೆ ಆರಂಭ: ತೆಹ್ರಾನ್ ಬೀದಿಗಳಲ್ಲಿ ಲಕ್ಷಾಂತರ ಜನರ ಅಂತಿಮ ನಮನ
-
ದೇಶ16 hours agoSakkath Santhe 2026: ಗೃಹ ಉತ್ಪನ್ನಗಳಿಗೆ ವೇದಿಕೆ, ಇಂದಿರಾನಗರದಲ್ಲಿ ಜನಸಾಗರ
-
ದೇಶ14 hours agoಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಜುಲೈ 6ರ ಬೆಂಗಳೂರು ಗೋಲ್ಡ್ ರೇಟ್ ಇಲ್ಲಿದೆ
-
ದೇಶ14 hours agoರಾಜಾಜಿನಗರ ಶಾಸಕರ ಕಚೇರಿ ಮುಂದೆ ಹೈಡ್ರಾಮಾ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
-
ದೇಶ13 hours ago“ಇನ್ನೆಷ್ಟು ಜನ ಸತ್ತರೆ ಕ್ರಮ?” ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಎಸ್.ಟಿ. ಸೋಮಶೇಖರ್
-
ದೇಶ12 hours ago‘ಮಸೀದಿ, ಚೌಲ್ಟ್ರಿಗಳಲ್ಲಿ ಸಾಮೂಹಿಕ SIR’ – ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ-ಜೆಡಿಎಸ್
-
ದೇಶ14 hours agoPoK ಪ್ರತಿಭಟನೆ ತೀವ್ರ: ‘ಗಡಿ ತೆರೆಯಿರಿ, ಮಾನವೀಯ ನೆರವು ನೀಡಿ’ ಎಂದು ಭಾರತದತ್ತ ಮೊರೆ
-
ದೇಶ12 hours agoಚೀನಾ-ಪಾಕ್ ಜಲಾಂತರ್ಗಾಮಿಗಳಿಗೆ ಭಾರತದ ಹೈಟೆಕ್ ಬ್ರಹ್ಮಾಸ್ತ್ರ! ಸಮುದ್ರದಾಳದಲ್ಲಿ ‘ಸೀಕ್ರೆಟ್ ಸೆನ್ಸಾರ್ ನೆಟ್ವರ್ಕ್’
