ದೇಶ

ಬೆಂಗಳೂರಿಗರೇ ಹುಷಾರ್ ಇಂದಿನಿAದ ಐದು ದಿನ ಭಾರೀ ಮಳೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿAದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ,
ಮೇ 14 ರಿಂದ ಮೇ 19ರ ವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ, ಇಂದು ನಗರದಲ್ಲಿ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಮಾಹಿತಿ ನೀಡಿದೆ, ಇದರೊಂದಿಗೆ ದಕ್ಷಿಣ ಭಾರತದಲ್ಲಿ ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮೇ 17 ರವರೆಗೆ ಮತ್ತು ರಾಜ್ಯದಲ್ಲಿ ಮೇ 16 ರವರೆಗೆ ಗಮನಾರ್ಹ ಮಳೆಯಾಗಲಿದೆ ಎಂದು ಹೇಳಿದೆ, ನೈಋತ್ಯ ಮಾನ್ಸೂನ್ ಮೇ 19 ರ ಸುಮಾರಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಮತ್ತು ಬಂಗಾಳ ಕೊಲ್ಲಿಯ ಕೆಲವು ಪ್ರದೇಶಗಳಲ್ಲಿ ಹಾದು ಹೋಗುವ ಸಾಧ್ಯತೆಯಿದೆ,
ಮೇ 18 ರವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ, ಮತ್ತು ಮಹಾರಾಷ್ಟçದಲ್ಲೂ ಹಗುರದಿಂದ ಸಾಧಾರಣ ಮಳೆ, ಗುಡುಗು, ಮಿಂಚು ಮತ್ತು ಬಿರುಸಿನ ಗಾಳಿಯನ್ನು ನಿರೀಕ್ಷಿಸಲಾಗುತ್ತಿದೆ, ಇದರ ಜೊತೆಗೆ ಇಂದು ಗುಜರಾತ್, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸಧಾರಣ ಮಳೆ ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ,

Trending

Exit mobile version