ಸಿನಿಮಾ
ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್
ಕನ್ನಡತಿ ಆಶಿಕಾ ರಂಗನಾಥ್‌ಗೆ (Ashika Ranganath) ಗೋಲ್ಡನ್ ಚಾನ್ಸ್ ಸಿಕ್ಕಿದೆ. ಚುಟು ಚುಟು ಬೆಡಗಿಗೆ ಟಾಲಿವುಡ್ ಅಂಗಳದಲ್ಲಿ ಬೇಡಿಕೆ ಹೆಚ್ಚಾಗಿದೆ. ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಜೊತೆ ತೆರೆಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಗಿಟ್ಟಿಸಿಕೊಂಡಿರುವ ಆಶಿಕಾ ರಂಗನಾಥ್ ಟಾಲಿವುಡ್‌ನಲ್ಲಿ ಭರವಸೆ ಮೂಡಿಸಿದ್ದಾರೆ. ಸದ್ಯ ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರ’ (Vishwambhara Film) ಸಿನಿಮಾದಲ್ಲಿ ಆಶಿಕಾ ಬಹಳ ಮಹತ್ವದ ಪಾತ್ರವೇ ಸಿಕ್ಕಿದೆಯಂತೆ. ವಸಿಷ್ಠ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ತ್ರಿಷಾ, ಮೀನಾಕ್ಷಿ ಚೌಧರಿ, ಬಣ್ಣ ಹಚ್ಚಿದ್ದಾರೆ. ಇವರ ಜೊತೆಗೆ ಆಶಿಕಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ. ಕಳೆದ ವರ್ಷ ನಂದಮೂರಿ ಕಲ್ಯಾಣ್ ನಟನೆಯ ‘ಆಮಿಗೋಸ್’ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟಿಸಿದ್ದರು. ಆದರೆ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿತ್ತು. ನಂತರ ನಾಗಾರ್ಜುನ ಜೊತೆ ‘ನಾ ಸಾಮಿ ರಂಗ’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಯ್ತು. ಈ ಬೆನ್ನಲ್ಲೇ ಮೆಗಾಸ್ಟಾರ್ ನಟಿಸುವ ಬಂಪರ್ ಅವಕಾಶ ನಟಿಗೆ ಸಿಕ್ಕಿದೆ.
ದೇಶ
ACTOR SRI LEELA : ಬಹುಭಾಷಾ ನಟಿ ಶ್ರೀಲೀಲಾ ಎಂಬಿಬಿಎಸ್ ಪದವಿ ಪೂರ್ಣ
ಬೆಂಗಳೂರು/ಮುಂಬೈ: ಬಹುಭಾಷಾ ನಟಿ ಶ್ರೀಲೀಲಾ ತಮ್ಮ ಎಂಬಿಬಿಎಸ್ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮುಂಬೈನ ಡಿ.ವೈ. ಪಾಟೀಲ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಪದವಿ ಸ್ವೀಕರಿಸಿದ್ದಾರೆ. ಫೆಬ್ರವರಿ 10ರಂದು ನಡೆದ ಸಮಾರಂಭದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ಅಭಿಮಾನಿಗಳಿಂದ ಪ್ರಶಂಸೆಯ ಸುರಿಮಳೆ ಹರಿದುಬಂದಿದೆ.
24 ವರ್ಷದ ನಟಿ ಮೆರೂನ್ ಬಣ್ಣದ ಪದವಿ ಗೌನ್ ಮತ್ತು ಕ್ಯಾಪ್ ಧರಿಸಿ ವೇದಿಕೆಯ ಮೇಲೆ ಹೆಜ್ಜೆ ಹಾಕಿದ ದೃಶ್ಯಗಳು ಅಭಿಮಾನಿಗಳ ಮನಸೆಳೆದಿವೆ. ಒಂದು ವಿಡಿಯೋದಲ್ಲಿ ತಮ್ಮ ಹೆಸರನ್ನು ಘೋಷಿಸುವ ಮೊದಲು ಸಹಪಾಠಿಗಳೊಂದಿಗೆ ಸಾಲಿನಲ್ಲಿ ನಿಂತು ಕಾಯುತ್ತಿರುವುದು ಕಾಣಿಸುತ್ತದೆ. ನಂತರ ಪ್ರಮಾಣಪತ್ರವನ್ನು ನಗುಮೊಗದಿಂದ ಸ್ವೀಕರಿಸಿದ ಅವರು, ವೇದಿಕೆಯಿಂದ ಇಳಿಯುವಾಗ ಕುಟುಂಬ ಸದಸ್ಯರನ್ನು ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದರು.
ಬಿಡುವಿಲ್ಲದ ಚಿತ್ರರಂಗದ ವೃತ್ತಿಜೀವನದ ನಡುವೆಯೂ ವೈದ್ಯಕೀಯ ಶಿಕ್ಷಣವನ್ನು ಸಮತೋಲನಗೊಳಿಸಿರುವ ಶ್ರೀಲೀಲಾ ಅವರ ಸಾಧನೆಗೆ ಅಭಿಮಾನಿಗಳು ಹಾಗೂ ಸಿನಿ ವಲಯದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಹಲವು ಭಾಷೆಗಳ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ವಿದ್ಯಾಭ್ಯಾಸವನ್ನು ಕಡೆಗಣಿಸದೇ ಯಶಸ್ವಿಯಾಗಿ ಮುಗಿಸಿರುವುದು ಯುವಜನತೆಗೆ ಸ್ಪೂರ್ತಿಯಾಗಿದೆ.
ನಟನೆ ಜೊತೆಗೆ ವೈದ್ಯಕೀಯ ಕ್ಷೇತ್ರದಲ್ಲೂ ತಮ್ಮ ಹೆಜ್ಜೆ ಇಟ್ಟಿರುವ ಶ್ರೀಲೀಲಾ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದ್ದು, “ಡಾಕ್ಟರ್ ಶ್ರೀಲೀಲಾ” ಎಂದು ಅಭಿಮಾನಿಗಳು ಕರೆದಾಡುತ್ತಿದ್ದಾರೆ.
ದೇಶ
ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಮತ್ತೊಂದು ಸಂಕಷ್ಟ: ಕ್ರೈಸ್ತ ಧರ್ಮಕ್ಕೆ ಅಪಮಾನ ಆರೋಪ, ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು
ಬೆಂಗಳೂರು: ನಟ ಯಶ್ (Yash) ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ (Toxic Cinema) ಚಿತ್ರಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದೆ ಟೀಸರ್‌ನಲ್ಲಿನ ಅಶ್ಲೀಲ ದೃಶ್ಯಗಳನ್ನು ಖಂಡಿಸಿ ಮಹಿಳಾ ಒಕ್ಕೂಟಗಳು ಆಕ್ರೋಶ ವ್ಯಕ್ತಪಡಿಸಿದ್ದರೆ, ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ಚಿತ್ರತಂಡದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಟಾಕ್ಸಿಕ್ ಸಿನಿಮಾದ ಕೆಲವು ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಹಾಗೂ ಕ್ರೈಸ್ತ ಸಮುದಾಯಕ್ಕೆ ಮುಜುಗರ ಉಂಟುಮಾಡಲಾಗಿದೆ ಎಂದು ಆರೋಪಿಸಿ ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ (National Christian Federation) ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹಸಚಿವರು ಹಾಗೂ ಸೆನ್ಸಾರ್ ಬೋರ್ಡ್‌ಗೆ ದೂರು ಸಲ್ಲಿಸಿದೆ. ಕ್ರೈಸ್ತರ ದೇವದೂತ ಸಂತ ಮಿಕಯೇಲ್ ಅವರಿಗೆ ಸಂಬಂಧಿಸಿದ ದೃಶ್ಯಗಳಲ್ಲಿ ಅವಮಾನಕಾರಿ ಹಾಗೂ ಅಶ್ಲೀಲ ಚಿತ್ರೀಕರಣ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಆ ದೃಶ್ಯಗಳನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಸಿನಿಮಾದಲ್ಲಿಯೂ ಸಂತ ಮಿಕಯೇಲ್ ಮುಂದೆ ಚಿತ್ರೀಕರಿಸಿರುವ ದೃಶ್ಯಗಳನ್ನು ತೆಗೆದುಹಾಕಿ, ಕ್ರೈಸ್ತ ಸಮುದಾಯದ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಟಾಕ್ಸಿಕ್ ಟೀಸರ್‌ನಲ್ಲಿನ ಕೆಲವು ದೃಶ್ಯಗಳು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ ಎಂದು ಆರೋಪಿಸಿ ಮಹಿಳಾ ಒಕ್ಕೂಟಗಳು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದವು. ಟೀಸರ್‌ನ ವಿವಾದಾತ್ಮಕ ದೃಶ್ಯಗಳನ್ನು ತೆಗೆದುಹಾಕುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ ಮಾಡಲಾಗಿತ್ತು.
ಒಟ್ಟಾರೆ, ಬಿಡುಗಡೆಗೂ ಮುನ್ನವೇ ‘ಟಾಕ್ಸಿಕ್’ ಸಿನಿಮಾ ಭಾರೀ ವಿವಾದದ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುವು ಪಡೆಯಲಿದೆ ಎಂಬುದರ ಮೇಲೆ ಚಿತ್ರತಂಡದ ನಡೆ ಮಹತ್ವ ಪಡೆದುಕೊಂಡಿದೆ.
ದೇಶ
ಭಾರತೀಯ OTT ಇತಿಹಾಸದಲ್ಲೇ ಅಪರೂಪದ ಘಟನೆ
ಬೆಂಗಳೂರು: ಪ್ರಭಾಸ್ (Prabhas) ಎಂದರೆ ಕೇವಲ ಸ್ಟಾರ್ ಅಲ್ಲ, ಅದು ಒಂದು ಬ್ರ್ಯಾಂಡ್. ಭಾರತದ ನಂಬರ್ 1 ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಪ್ರಭಾಸ್ ಅವರಿಗೆ ದೇಶದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಹೇಗೇ ಇರಲಿ, ಬಾಕ್ಸ್ ಆಫೀಸ್‌ನಲ್ಲಿ ಭಾರೀ ಕಲೆಕ್ಷನ್ ಮಾಡುವುದು ಈಗ ಸಾಮಾನ್ಯವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಪ್ರಭಾಸ್ ನಟನೆಯ ಹಾರರ್ ಕಾಮಿಡಿ ಸಿನಿಮಾ ‘ದಿ ರಾಜಾ ಸಾಬ್’ ಕೂಡ ಅದಕ್ಕೆ ಹೊರತಲ್ಲ.
ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 9ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಸಿನಿಮಾ ನಿರೀಕ್ಷಿಸಿದ ಮಟ್ಟದ ಮೆಚ್ಚುಗೆ ಪಡೆಯಲಿಲ್ಲ. ಕಥೆ, ಚಿತ್ರಕಥೆ ಹಾಗೂ ವಿಎಫ್‌ಎಕ್ಸ್ ಬಗ್ಗೆ ಟೀಕೆಗಳು ಕೇಳಿಬಂದರೂ, ಸಿನಿಮಾ ಮೊದಲ ವಾರದಲ್ಲೇ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ಮೊತ್ತ ಗಳಿಸಿತ್ತು. ಇದರಿಂದಲೇ ಪ್ರಭಾಸ್ ಕ್ರೇಜ್ ಯಾವ ಮಟ್ಟದಲ್ಲಿದೆ ಎಂಬುದು ಸ್ಪಷ್ಟವಾಗುತ್ತದೆ.
ಇದೀಗ ‘ದಿ ರಾಜಾ ಸಾಬ್’ ಒಟಿಟಿಯಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದ್ದು, ಇಲ್ಲಿ ಕೂಡ ಬಿಡುಗಡೆಯಿಗೂ ಮುಂಚೆಯೇ ದಾಖಲೆ ಮಟ್ಟದ ಕ್ರೇಜ್ ಸೃಷ್ಟಿಸಿದೆ. ಈ ಸಿನಿಮಾ ಜಿಯೋ ಹಾಟ್‌ಸ್ಟಾರ್ನಲ್ಲಿ ಫೆಬ್ರವರಿ 6ರಿಂದ ಪ್ರಸಾರವಾಗಲಿದೆ. ಒಟಿಟಿ ಪ್ಲಾಟ್‌ಫಾರ್ಮ್ ತನ್ನ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡ ಮಾಹಿತಿಯಂತೆ, ಲಕ್ಷಾಂತರ ಮಂದಿ ‘Remind Me’ ಬಟನ್ ಕ್ಲಿಕ್ ಮಾಡಿದ್ದಾರೆ. ಈ ಭಾರೀ ಟ್ರಾಫಿಕ್ ನಿಭಾಯಿಸಲು ಜಿಯೋ ಹಾಟ್‌ಸ್ಟಾರ್ ತನ್ನ ಸರ್ವರ್‌ಗಳನ್ನು ಅಪ್‌ಗ್ರೇಡ್ ಮಾಡಿರುವುದು ಭಾರತೀಯ ಒಟಿಟಿ ಇತಿಹಾಸದಲ್ಲೇ ಅಪರೂಪದ ಘಟನೆ ಎನ್ನಲಾಗಿದೆ.
ಒಟಿಟಿ ಆವೃತ್ತಿಯಲ್ಲಿ ಪ್ರೇಕ್ಷಕರಿಗೆ ವಿಶೇಷ ಉಡುಗೊರೆಯೂ ಇದೆ. ಚಿತ್ರಮಂದಿರಗಳಲ್ಲಿ ತಾಂತ್ರಿಕ ಕಾರಣಗಳಿಂದ ಕೈಬಿಡಲಾಗಿದ್ದ 4 ರಿಂದ 8 ನಿಮಿಷಗಳ ಹೆಚ್ಚುವರಿ ದೃಶ್ಯಗಳನ್ನು ಸೇರಿಸಲಾಗಿದೆ. ಇದರಲ್ಲಿ ಪ್ರಭಾಸ್ ಅವರ ‘ಓಲ್ಡ್ ಗೆಟಪ್’ ಹಾಗೂ ಒಂದು ಸಾಹಸ ದೃಶ್ಯ ಪ್ರಮುಖ ಆಕರ್ಷಣೆಯಾಗಲಿದೆ.
ಮಾರುತಿ ನಿರ್ದೇಶನದ ಈ ಚಿತ್ರದಲ್ಲಿ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ದಿ ರಾಜಾ ಸಾಬ್’ ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿರಲಿದೆ.
-
ಚುನಾವಣೆ12 hours agoGBA ವಾರ್ಡ್ಗಳಲ್ಲಿ ಬೂತ್ ಹಂಚಿಕೆ ಗೊಂದಲ: ತಿದ್ದುಪಡಿಸದಿದ್ದರೆ ಸುಪ್ರೀಂ ಕೋರ್ಟ್ಗೆ ಮನವಿ – ಸಿ.ಎಂ. ಸತ್ಯನಾರಾಯಣ ಎಚ್ಚರಿಕೆ
-
ದೇಶ17 hours agoಫುಟ್ಪಾತ್ನಲ್ಲಿ ಬೈಕ್ಗೆ ಮಹಿಳೆಯ ಅಡ್ಡಿ: ಕೇರಳದಲ್ಲಿ ವೈರಲ್ ವಿಡಿಯೋ
-
ದೇಶ16 hours agoRBI : ಸಾಲ ವಸೂಲಿಗೆ ಹೊಸ ನಿಯಮಗಳು: ಆರ್ಬಿಐ ಕಟ್ಟುನಿಟ್ಟಿನ ಮಾರ್ಗಸೂಚಿ
-
ದೇಶ17 hours agoSHAKTI SCHEME : ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್: ಸಚಿವ ಸಂಪುಟದ ಮಹತ್ವದ ನಿರ್ಧಾರ
-
ದೇಶ18 hours agoBangladesh Election 2026: ಬಿಎನ್ಪಿ ಭರ್ಜರಿ ಗೆಲುವು, ತಾರಿಖ್ ರೆಹಮಾನ್ ಮುಂದಿನ ಪ್ರಧಾನಿ
-
ಕ್ರೀಡೆ15 hours agoBENGALURU : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ಗೆ ಒಪ್ಪಿಗೆ: 35 ಸಾವಿರ ಜನ ಮಿತಿ, ಭದ್ರತೆಗೆ ಸಮಿತಿ
-
ದೇಶ13 hours agoBENGALURU : ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ನಿಷೇಧ
-
ದೇಶ18 hours agoದೇವನಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ
