ಬೆಂಗಳೂರು
ಮೋದಿ ಯಾಕೋ ವಿಚಿತ್ರವಾಗಿ ಮಾತಾಡ್ತಿದ್ದಾರೆ ಸಿಎಂ ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಎನ್ಡಿಎ ಸೋಲು ಖಚಿತವಾಗಿ ಗೊತ್ತಾಗಿದ್ದು ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು,
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಅವರು ಮಾತನಾಡುತ್ತ ದೇವರೇ ನನ್ನನ್ನೂ ಕಳುಹಿಸಿದ್ದಾನೆ ಎಂದು ಮಾತಾಡುವ ಮಟ್ಟಕ್ಕೆ ಸೋಲಿನ ಸುಳಿವು ಮೋದಿಯವರನ್ನು ಕಾಡುತ್ತಿದೆ ಎಂದು ಕುಟುಕಿದರು, ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು, ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು,
ಇನ್ನು ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದ ಸಿಎಂ, ದೇಶದಲ್ಲಿರುವ ಬಹತೇಕ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ನೆಹರೂ ಅವರ ಅವಧಿಯಲ್ಲಿ ಕಾಂಗ್ರೆಸ್ ಏನು ಮಾಡಿಲ್ಲ ಎನ್ನುವ ಮೋದಿ ಅವರು ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೀ ಸ್ಧಾಪಿಸಲಿಲ್ಲ, ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದು ಪ್ರಶ್ನಿಸಿದರು, ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ಬಿಜೆಪಿಯವರಿಂದ ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲೀಗೀಡಾಗಿದ್ದಾರೆ ಎಂದು ದೂರಿದರು,