ಕ್ರೀಡೆ
RCB ಕಪ್ ಗೆದ್ದೋರ ಥರ ಆಡಿದ್ರು: ಅಂಬಾಟಿ ರಾಯುಡು ವ್ಯಂಗ್ಯ
ಐಪಿಎಲ್ ಸೀಸನ್ 17 ಮುಕ್ತಾಯವಾಗಿದೆ. ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಟಾರ್ಗೆಟ್ ಮಾಡುತ್ತಿರುವುದು ಮಾತ್ರ ನಿಂತಿಲ್ಲ. ಈ ಹಿಂದೆ ಹಲವು ಹೇಳಿಕೆಗಳ ಮೂಲಕ ಗಮನ ಸೆಳೆದಿದ್ದ ರಾಯುಡು ಇದೀಗ ಆರ್ಸಿಬಿ ತಂಡದ ಸಂಭ್ರಮವನ್ನು ವ್ಯಂಗ್ಯವಾಡಿದ್ದಾರೆ. ಮೇ 19 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಆರ್ಸಿಬಿ ತಂಡ 27 ರನ್ಗಳ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ಆರ್ಸಿಬಿ ಆಟಗಾರರು ಸಖತ್ತಾಗೇ ಸಂಭ್ರಮಿಸಿದ್ದರು.
ಚಾನೆಲ್ ಚರ್ಚೆಯೊಂದರಲ್ಲಿ ಈ ಸಂಭ್ರಮವನ್ನು ವ್ಯಂಗ್ಯವಾಡಿ ಮಾತನಾಡಿದ ರಾಯುಡು, ಆ ಪಂದ್ಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಶೇಕ್ ಹ್ಯಾಂಡ್ ಮಾಡಲು ಕಾಯುತ್ತಿದ್ದರು. ಆದರೆ ಆರ್ಸಿಬಿ ಆಟಗಾರರ ಸಂಭ್ರಮ ನೋಡಿದ್ರೆ ಕಪ್ ಗೆದ್ದವರ ಥರ ಆಡುತ್ತಿದ್ದರು ಎಂದು ವ್ಯಂಗ್ಯವಾಡಿದ್ದಾರೆ.
ಕೇವಲ ಒಂದು ಪಂದ್ಯ ಗೆಲ್ಲುವಷ್ಟರಲ್ಲಿ ಕಪ್ ಗೆದ್ದಂತೆ ಆಡಿದ್ರೆ ಹೆಂಗೆ, ನೀವು ಮೊದಲು ಧೋನಿಗೆ ಶೇಕ್ ಹ್ಯಾಂಡ್ ಮಾಡ್ಬೇಕಿತ್ತು. ಅದು ನೀವು ತೋರಿಸಬೇಕಾಗಿದ್ದ ಗೌರವ. ಆದರೆ ಆರ್ಸಿಬಿ ಆಟಗಾರರು ಪಂದ್ಯ ಗೆಲ್ಲುತ್ತಿದ್ದಂತೆ ಒಳ್ಳೆ ಕಪ್ ಗದ್ದೋರ ಥರ ಆಡ್ತಿದ್ದರು ಎಂದು ರಾಯುಡು ಕಿಚಾಯಿಸಿದ್ದಾರೆ. ಒಂದು ಪಂದ್ಯ ಗೆದ್ದು ಕಪ್ ಗೆದ್ದೋರ ಥರ ಆಡಿದ್ರು ಈ ಬಾರಿ ಆರ್ಸಿಬಿ ಟ್ರೋಫಿ ಗೆದ್ದಿಲ್ಲ. ಅವರ ಸಂಭ್ರಮ ಆ ಪಂದ್ಯದಲ್ಲೇ ಕೊನೆಗೊಂಡಿತು. ಅಲ್ಲದೆ ಆರ್ಸಿಬಿ ಅವರು ಇನ್ನೂ ಕೂಡ ಪ್ರಶಸ್ತಿಯನ್ನು ಗೆದ್ದಿಲ್ಲ ಎಂದು ಅಂಬಾಟಿ ರಾಯುಡು ವ್ಯಂಗ್ಯದಿಂದ ಹೇಳಿದ್ದಾರೆ.
ಕ್ರೀಡೆ
T20 WORLD CUP : ಪಾಕ್ ಪಂದ್ಯಕ್ಕೂ ಅಭಿಷೇಕ್ ಶರ್ಮಾ ಅನುಮಾನ: ನಾಯಕ ಸೂರ್ಯಕುಮಾರ್ ಸ್ಪಷ್ಟನೆ
ನವದೆಹಲಿ, ಫೆ.13: ಹೊಟ್ಟೆನೋವಿನಿಂದ ಚೇತರಿಸಿಕೊಳ್ಳುತ್ತಿರುವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಗುರುವಾರ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಆಡಲಿಲ್ಲ. ಭಾನುವಾರ ನಡೆಯಲಿರುವ ಪಾಕಿಸ್ತಾನ ಎದುರಿನ ಮಹತ್ವದ ಪಂದ್ಯಕ್ಕೂ ಅವರ ಲಭ್ಯತೆ ಅನುಮಾನಾಸ್ಪದವಾಗಿದೆ ಎಂದು ನಾಯಕ Suryakumar Yadav ತಿಳಿಸಿದ್ದಾರೆ.
ಅಭಿಷೇಕ್ ಸೋಮವಾರ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ತಂಡಕ್ಕೆ ಮರಳಿದರೂ ತರಬೇತಿಯಲ್ಲಿ ಭಾಗವಹಿಸಲಿಲ್ಲ. ಈ ಬಗ್ಗೆ Board of Control for Cricket in India (BCCI) ಪ್ರಕಟಣೆಯಲ್ಲಿ, “ಅಭಿಷೇಕ್ ಇನ್ನೂ ಚೇತರಿಕೆ ಹಂತದಲ್ಲಿದ್ದಾರೆ. ವೈದ್ಯಕೀಯ ತಂಡ ನಿಗಾ ವಹಿಸಿದೆ” ಎಂದು ತಿಳಿಸಿತ್ತು.
ಟಾಸ್ ವೇಳೆ ಮಾತನಾಡಿದ ಸೂರ್ಯಕುಮಾರ್, “ಅಭಿಷೇಕ್ ಒಂದು ಅಥವಾ ಎರಡು ಪಂದ್ಯಗಳಿಗೆ ವಿಶ್ರಾಂತಿ ಪಡೆಯಬಹುದು. ಸಂಪೂರ್ಣ ಫಿಟ್ ಆಗಿಲ್ಲ” ಎಂದರು. ಹೀಗಾಗಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 24 ವರ್ಷದ ಅಭಿಷೇಕ್ ಪಾಕಿಸ್ತಾನ ವಿರುದ್ಧ ಮೂರು ಪಂದ್ಯಗಳಲ್ಲಿ 189 ಸ್ಟ್ರೈಕ್ ರೇಟ್ನಲ್ಲಿ 110 ರನ್ ಗಳಿಸಿದ್ದಾರೆ.
🇮🇳 ಭಾರತಕ್ಕೆ ಭರ್ಜರಿ ಜಯ
ಗುರುವಾರ ನಡೆದ ಪಂದ್ಯದಲ್ಲಿ ಭಾರತ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ 20 ಓವರ್ಗಳಲ್ಲಿ 9 ವಿಕೆಟ್ಗೆ 209 ರನ್ ಪೇರಿಸಿತು. ಕಠಿಣ ಗುರಿ ಬೆನ್ನಟ್ಟಿದ ನಮೀಬಿಯಾ 18.2 ಓವರ್ಗಳಲ್ಲಿ 116 ರನ್ಗಳಿಗೆ ಆಲೌಟ್ ಆಯಿತು.
ಆರಂಭಿಕ ಆಟಗಾರ Ishan Kishan ಕೇವಲ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. ಮಧ್ಯಮ ಕ್ರಮಾಂಕದಲ್ಲಿ Hardik Pandya 52 ರನ್ ಗಳಿಸಿ ತಂಡದ ಮೊತ್ತವನ್ನು 200 ದಾಟಿಸಿದರು. ಬೌಲಿಂಗ್ನಲ್ಲಿ Varun Chakravarthy 3 ವಿಕೆಟ್ ಪಡೆದರೆ, Axar Patel ಮತ್ತು ಹಾರ್ದಿಕ್ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರು
ಕ್ರೀಡೆ
BENGALURU : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ಗೆ ಒಪ್ಪಿಗೆ: 35 ಸಾವಿರ ಜನ ಮಿತಿ, ಭದ್ರತೆಗೆ ಸಮಿತಿ
ಬೆಂಗಳೂರು: ನಗರದ **M. Chinnaswamy Stadium**ನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ. ಭದ್ರತೆ ಹಾಗೂ ಜನಸಂಚಾರ ನಿಯಂತ್ರಣಕ್ಕೆ ವಿಶೇಷ ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹಸಚಿವ G. Parameshwara ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹೊಸದಾಗಿ ಏನೂ ಮಾಡುವುದಿಲ್ಲ. ಸೇಫ್ಟಿ ಮೋಸ್ಟ್ ಇಂಪಾರ್ಟೆಂಟ್. ಸಮಿತಿ ಎಲ್ಲಾ ಕ್ರಮ ಕೈಗೊಳ್ಳುತ್ತದೆ” ಎಂದು ಸ್ಪಷ್ಟಪಡಿಸಿದರು.
35 ಸಾವಿರ ಜನರ ಮಿತಿ
ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆಯಲ್ಲಿ Indian Premier League (IPL) ಪಂದ್ಯ ಆಯೋಜನೆಗೆ ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ. ಒಂದು ಪಂದ್ಯಕ್ಕೆ ಗರಿಷ್ಠ 35 ಸಾವಿರಕ್ಕಿಂತ ಹೆಚ್ಚು ಪ್ರೇಕ್ಷಕರು ಸೇರಬಾರದು ಎಂಬ ನಿಯಮ ವಿಧಿಸಲಾಗಿದೆ.
ಕ್ಯಾಬಿನೆಟ್ ಸಭೆಗೆ ಮುನ್ನ ವಿಧಾನಸೌಧದಲ್ಲಿ ಗೃಹ ಸಚಿವರು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ನೇತೃತ್ವದ ಸಮಿತಿ, Karnataka State Cricket Association (KSCA) ಹಾಗೂ Royal Challengers Bengaluru (RCB) ಪ್ರತಿನಿಧಿಗಳು ಭಾಗವಹಿಸಿದ್ದರು.
ಬೈರತಿ ಬಸವರಾಜ್ ಬಂಧನ ಕುರಿತು ಪ್ರತಿಕ್ರಿಯೆ
ಬಿಜೆಪಿ ಶಾಸಕ Bairathi Basavaraj ಬಂಧನ ಪ್ರಕರಣದ ಕುರಿತು ಮಾತನಾಡಿದ ಗೃಹಸಚಿವರು, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬಳಿಕ ಅವರು ಸಿಐಡಿ ಮುಂದೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಕ್ರೀಡೆ
IND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.
ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಫೆ.12ರಂದು ನಮೀಬಿಯಾ ವಿರುದ್ಧ ಕಣಕ್ಕಿಳಿದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಪಾಕಿಸ್ತಾನ ಎದುರಿಸಲು ಸಜ್ಜಾಗಿದೆ.
ಈ ಮಧ್ಯೆ, ಪಾಕಿಸ್ತಾನದ ನಿಗೂಢ ಸ್ಪಿನ್ನರ್ ಉಸ್ಮಾನ್ ತಾರಿಕ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ. ಅದಕ್ಕಾಗಿ ನನ್ನ ಬೌಲಿಂಗ್ ಶೈಲಿಯ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.
ಮಾತಿನ ಸಮರ ಜೋರಾಗಿದೆ
ಟಿ20 ವಿಶ್ವಕಪ್ ಈಗ ರೋಚಕ ಹಂತ ತಲುಪಿದ್ದು, ಈಗಾಗಲೇ 15ಕ್ಕೂ ಹೆಚ್ಚು ಪಂದ್ಯಗಳು ಪೂರ್ಣಗೊಂಡಿವೆ. ಭಾರತ–ಪಾಕಿಸ್ತಾನ ಪಂದ್ಯ ನಡೆಯುತ್ತದೆಯೇ? ಎಂಬ ಅನುಮಾನಕ್ಕೆ ತೆರೆಬಿದ್ದಿದ್ದು, ಪಾಕಿಸ್ತಾನ ಪಂದ್ಯಕ್ಕೆ ಒಪ್ಪಿಗೆ ನೀಡಿದೆ.
ಪಂದ್ಯ ಖಚಿತವಾದ ಬೆನ್ನಲ್ಲೇ ಎರಡೂ ತಂಡಗಳ ನಡುವೆ ಮಾತಿನ ಸಮರ ಜೋರಾಗಿದೆ. ಪಾಕಿಸ್ತಾನಿ ಆಟಗಾರರು ಭಾರತವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದರೆ, ಭಾರತೀಯರು ಪಾಕಿಸ್ತಾನವನ್ನು ಮಣಿಸುತ್ತೇವೆ ಎಂದು ತಿರುಗೇಟು ನೀಡುತ್ತಿದ್ದಾರೆ.
ತಾರಿಕ್ ಸಮರ್ಥನೆ
ಭಾರತೀಯರು ನನ್ನ ಬೌಲಿಂಗ್ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಐಸಿಸಿ ನಿಯಮಗಳ ಪ್ರಕಾರ ನನ್ನ ಬೌಲಿಂಗ್ ಶೈಲಿ ಮಾನ್ಯವಾಗಿದೆ ಎಂದು ಉಸ್ಮಾನ್ ತಾರಿಕ್ ಸಮರ್ಥಿಸಿಕೊಂಡಿದ್ದಾರೆ.
“ಭಾರತೀಯ ಆಟಗಾರರಿಗೆ ನನ್ನ ಬೌಲಿಂಗ್ನಿಂದ ಹೆಚ್ಚುವರಿ ಒತ್ತಡ ಇದೆ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ. ಫೆಬ್ರವರಿ 15ರಂದು ಭಾರತದ ಅಗ್ರ ಕ್ರಮಾಂಕವನ್ನು ಕೆಡವುತ್ತೇನೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ನನ್ನ ಬಗ್ಗೆ ಏನು ಚರ್ಚೆ ನಡೆಯುತ್ತಿದೆ ಎಂಬುದನ್ನು ನಾನು ಪರಿಗಣಿಸುವುದಿಲ್ಲ. ನನ್ನ ಗಮನ ಪಂದ್ಯದಲ್ಲೇ ಇದೆ” ಎಂದು ತಾರಿಕ್ ಹೇಳಿದ್ದಾರೆ.
-
ಕ್ರೀಡೆ21 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ22 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
-
ದೇಶ24 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ21 hours agoವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಎಚ್ಚರಿಕೆ: “ಭಾರತಕ್ಕೆ ಮರಳದಿದ್ದರೆ ಅರ್ಜಿ ವಿಚಾರಣೆ ಇಲ್ಲ”
-
ದೇಶ22 hours agoಜೈರಾಮ್ ರಮೇಶ್ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”
-
ದೇಶ3 hours agoSHAKTI SCHEME : ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್: ಸಚಿವ ಸಂಪುಟದ ಮಹತ್ವದ ನಿರ್ಧಾರ
-
ದೇಶ23 hours agoಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ
-
ದೇಶ3 hours agoBangladesh Election 2026: ಬಿಎನ್ಪಿ ಭರ್ಜರಿ ಗೆಲುವು, ತಾರಿಖ್ ರೆಹಮಾನ್ ಮುಂದಿನ ಪ್ರಧಾನಿ
