Connect with us

ಬೆಂಗಳೂರು

ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ವೇಳೆ ಇತರೆ ರೋಗಿಗಳಿಗೆ ಸಮಸ್ಯೆ – ಆಸ್ಪತ್ರೆಯಲ್ಲಿ ಪರದಾಟ

Published

on

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆಸ್ಪತ್ರೆಗೆ ಬಂದಿದ್ದ ಇತರೆ ರೋಗಿಗಳು ಪರದಾಡುವಂತಾಯಿತು. ಎಸ್‌ಐಟಿ ಅಧಿಕಾರಿಗಳು ನಿನ್ನೆ ತಡರಾತ್ರಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಿದರು. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಅದಕ್ಕೂ ಮೊದಲು ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು.

ಪ್ರಜ್ವಲ್ ವೈದ್ಯಕೀಯ ಪರೀಕ್ಷೆ ವೇಳೆ, ಬೌರಿಂಗ್ ಆಸ್ಪತ್ರೆ ಬಳಿ ಪೊಲೀಸರ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಕೆಎಸ್‌ಆರ್‌ಪಿಯ ಒಂದು ತುಕಡಿ ನಿಯೋಜನೆ ಮಾಡಲಾಗಿತ್ತು. ತುರ್ತು ನಿಗಾ ಘಟಕದ ಮುಂಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಇದರಿಂದಾಗಿ ಇತರೆ ರೋಗಿಗಳು ಪರದಾಡುವಂತಾಯಿತು.

ಎಮರ್ಜೆನ್ಸಿ ಅಂತಾ ಆಟೋದಲ್ಲಿ ಬಂದ ರೋಗಿಯನ್ನ ಗೇಟ್ ಬಳಿಯೇ ತಡೆದು ಸೆಕ್ಯೂರಿಟಿ ಗಾರ್ಡ್ಸ್ ದರ್ಪ ಮೆರೆದರು. ನಡೆದುಕೊಂಡು ಹೋಗಿ, ಇಲ್ಲಿಂದ ಮುಂದೆ ವಾಹನ ಬಿಡೋಲ್ಲ ಎಂದು ತಡೆದರು. ಹೊಟ್ಟೆ ನೋವು ಅಂತಾ ಪೀಣ್ಯದಿಂದ ಬಂದಿದ್ದ ರೋಗಿಯನ್ನು ತಡೆದರು.

ಕಾಲಿಗೆ ಪೆಟ್ಟು ಮಾಡಿಕೊಂಡಿದ್ದ ವೃದ್ಧರೊಬ್ಬರನ್ನು ತಡೆದು ಪೊಲೀಸರು ವಾಪಸ್ ಕಳಿಸಿದರು. ಪರೀಕ್ಷೆಗೆಂದು ಬ್ಯಾಂಡೇಜ್ ಸಮೇತ ರೋಗಿ ಆಸ್ಪತ್ರೆಗೆ ಬಂದಿದ್ದರು. ಈ ಬೆಳವಣಿಗೆ ಸಂಬಂಧ ‘ಪಬ್ಲಿಕ್ ಟಿವಿ’ ಸುದ್ದಿ ಬೆನ್ನಲ್ಲೇ ಆಸ್ಪತ್ರೆ ಸಿಬ್ಬಂದಿ ಎಚ್ಚೆತ್ತಿದ್ದಾರೆ. ಆಸ್ಪತ್ರೆ ಮುಖ್ಯ ಗೇಟ್ ತೆರೆದು ರೋಗಿಗಳಿಗೆ ಪರೀಕ್ಷೆಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದಾರೆ.

ರೋಗಿಗಳಿಗೆ ತೊಂದರೆ ಆಗದಂತೆ ಆಸ್ಪತ್ರೆಗೆ ಬಿಡುವಂತೆ ಪೊಲೀಸರು ಸೂಚಿಸಿದ್ದಾರೆ. ನಂತರ ಸೆಕ್ಯೂರಿಟಿಗಳು ಮುಚ್ಚಿದ್ದ ಗೇಟ್ ತೆರೆದು ಎಂದಿನಂತೆ ರೋಗಿ ಮತ್ತು ಕುಟುಂಬದವರಿಗೆ ಆಸ್ಪತ್ರೆಗೆ ಹೋಗಲು ಅವಕಾಶ ಮಾಡಿಕೊಟ್ಟರು.

ದೇಶ

MLA ವಾಹನ ಬಳಕೆಗೆ ಹೊಸ ನಿಯಮ ಜಾರಿ; ವೇತನ, ಪಿಂಚಣಿಯಿಂದಲೇ ಶುಲ್ಕ ಕಡಿತ!

Published

on

ಬೆಂಗಳೂರು, ಜು.8: ಶಾಸಕರ ಭವನದಲ್ಲಿರುವ ಸರ್ಕಾರಿ ವಾಹನಗಳ ದುರುಪಯೋಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ವಿಧಾನಸಭಾ ಸಚಿವಾಲಯ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ನು ಮುಂದೆ ಜನಪ್ರತಿನಿಧಿಗಳ ಆಪ್ತ ಸಹಾಯಕರು, ಬೆಂಬಲಿಗರು ಅಥವಾ ಅತಿಥಿಗಳು ಶಿಫಾರಸು ಪತ್ರದ ಆಧಾರದ ಮೇಲೆ ಸರ್ಕಾರಿ ವಾಹನಗಳನ್ನು ಪಡೆದು ಬೆಂಗಳೂರು ನಗರದ ಹೊರಗೆ ಸಂಚರಿಸಲು ಅವಕಾಶ ಇರುವುದಿಲ್ಲ.

ಹೊಸ ಮಾರ್ಗಸೂಚಿಯ ಪ್ರಕಾರ, ಶಾಸಕರ ಭವನದ ಸರ್ಕಾರಿ ವಾಹನಗಳ ಸಂಚಾರವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ತುರ್ತು ಪರಿಸ್ಥಿತಿ ಅಥವಾ ವಿಮಾನ ನಿಲ್ದಾಣಕ್ಕೆ ತೆರಳುವಂತಹ ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ, ಬೆಂಗಳೂರಿನ ಗಡಿ ದಾಟಬೇಕಾದರೆ ವಿಧಾನಸಭಾಧ್ಯಕ್ಷರ ಲಿಖಿತ ಅನುಮತಿ ಕಡ್ಡಾಯವಾಗಲಿದೆ.

ವಿಧಾನಸಭಾ ಸಚಿವಾಲಯದ ಮಾಹಿತಿ ಪ್ರಕಾರ, ಸೀಮಿತ ಸಂಖ್ಯೆಯ ವಾಹನಗಳು ಮತ್ತು ಚಾಲಕರ ಲಭ್ಯತೆಯಿಂದಾಗಿ ಹಲವು ಬಾರಿ ಹಾಲಿ ಶಾಸಕರಿಗೂ ತುರ್ತು ಸಂದರ್ಭದಲ್ಲಿ ವಾಹನ ಸಿಗದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಸಮಸ್ಯೆ ನಿವಾರಣೆ ಹಾಗೂ ಸಾರ್ವಜನಿಕ ಆಸ್ತಿಯ ಸಮರ್ಪಕ ಬಳಕೆಯನ್ನು ಖಚಿತಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನೊಂದು ಪ್ರಮುಖ ಬದಲಾವಣೆಯಾಗಿ, ನಗದುರಹಿತ (Cashless) ವಸೂಲಾತಿ ವ್ಯವಸ್ಥೆ ಜಾರಿಗೆ ತರಲಾಗಿದೆ. ವಾಹನ ಸಂಚರಿಸಿದ ಪ್ರತಿ ಕಿಲೋಮೀಟರ್‌ಗೆ ನಿಗದಿಪಡಿಸಿದ ಶುಲ್ಕವನ್ನು ಹಾಲಿ ಶಾಸಕರ ವೇತನದಿಂದ ಹಾಗೂ ಮಾಜಿ ಶಾಸಕರ ಪಿಂಚಣಿಯಿಂದ ನೇರವಾಗಿ ಕಡಿತಗೊಳಿಸಲಾಗುತ್ತದೆ.

ಈ ವ್ಯವಸ್ಥೆಯಿಂದ ಶಾಸಕರ ಹೆಸರಿನಲ್ಲಿ ಯಾರು ಸರ್ಕಾರಿ ವಾಹನ ಬಳಸಿದ್ದಾರೆ ಎಂಬ ಸಂಪೂರ್ಣ ದಾಖಲೆ ಲಭ್ಯವಾಗಲಿದ್ದು, ಪಾರದರ್ಶಕತೆ ಹೆಚ್ಚುವ ಜೊತೆಗೆ ಸಾರ್ವಜನಿಕ ಹಣದ ದುರುಪಯೋಗಕ್ಕೂ ಪರಿಣಾಮಕಾರಿ ತಡೆ ಬೀಳಲಿದೆ ಎಂದು ವಿಧಾನಸಭಾ ಸಚಿವಾಲಯ ತಿಳಿಸಿದೆ. ಹೊಸ ನಿಯಮಗಳು ಸರ್ಕಾರಿ ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ಆಡಳಿತದಲ್ಲಿ ಉತ್ತರದಾಯಿತ್ವ ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.

Continue Reading

ದೇಶ

‘ಟೀಮ್ ಬೆಂಗಳೂರು ಅಲ್ಲ, ಟೀಮ್ ಕರ್ನಾಟಕ’ : ಜಾಗತಿಕ ಹೂಡಿಕೆದಾರರಿಗೆ ಡಿಕೆ ಶಿವಕುಮಾರ್ ಮಹತ್ವದ ಸಂದೇಶ

Published

on

ಬೆಂಗಳೂರು, ಜು.8: ಕರ್ನಾಟಕವನ್ನು ಜಾಗತಿಕ ಹೂಡಿಕೆ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಜಾಗತಿಕ ಹೂಡಿಕೆದಾರರ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಇದು ಕೇವಲ ಟೀಮ್ ಬೆಂಗಳೂರು ಅಲ್ಲ, ಟೀಮ್ ಕರ್ನಾಟಕ. ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ” ಎಂದು ಹೇಳಿದರು.

ಸುಮಾರು 200ಕ್ಕೂ ಹೆಚ್ಚು ಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್ (GCC) ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದು, ಬೆಂಗಳೂರಿನ ಅಭಿವೃದ್ಧಿ, ಕೈಗಾರಿಕಾ ವಿಸ್ತರಣೆ ಹಾಗೂ ಭವಿಷ್ಯದ ಹೂಡಿಕೆಗಳ ಕುರಿತು ಸರ್ಕಾರಕ್ಕೆ ಹಲವು ಮಹತ್ವದ ಸಲಹೆಗಳನ್ನು ನೀಡಿದ್ದಾರೆ ಎಂದು ಸಿಎಂ ತಿಳಿಸಿದರು. ಜಾಗತಿಕ ಕಂಪನಿಗಳು ಸರ್ಕಾರದ ಆಡಳಿತದ ಮೇಲೆ ವಿಶ್ವಾಸ ವ್ಯಕ್ತಪಡಿಸಿರುವುದು ಸಂತಸದ ವಿಷಯ ಎಂದರು.

‘Beyond Bengaluru’ ಯೋಜನೆಯಡಿ ಐಟಿ-ಬಿಟಿ ಹಾಗೂ ಕೈಗಾರಿಕೆಗಳನ್ನು ಬೆಂಗಳೂರಿನ ಹೊರಗಿನ 2-Tier ಮತ್ತು 3-Tier ನಗರಗಳಿಗೆ ವಿಸ್ತರಿಸಲು ಸರ್ಕಾರ ಹೊಸ ಕೈಗಾರಿಕಾ ನೀತಿಯನ್ನು ರೂಪಿಸುತ್ತಿದೆ. ಈ ಪ್ರದೇಶಗಳಲ್ಲಿ ಉದ್ಯಮ ಆರಂಭಿಸುವ ಕಂಪನಿಗಳಿಗೆ ಕಡಿಮೆ ದರದಲ್ಲಿ ಜಾಗ, ಕಟ್ಟಡ ಹಾಗೂ ಅಗತ್ಯ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನೂ ಸಿಎಂ ನೀಡಿದರು.

ರಾಜ್ಯದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಹೂಡಿಕೆದಾರರನ್ನು ರಾಜ್ಯದ ಎಲ್ಲ ಭಾಗಗಳಿಗೆ ಆಕರ್ಷಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಉದ್ಯೋಗ ಸೃಷ್ಟಿಗೆ ಸಹಕರಿಸುವ ಕೈಗಾರಿಕೆಗಳಿಗೆ ಅಗತ್ಯ ಸಬ್ಸಿಡಿ ಮತ್ತು ಪ್ರೋತ್ಸಾಹಕ ಯೋಜನೆಗಳನ್ನು ಸರ್ಕಾರ ನೀಡಲಿದೆ ಎಂದರು.

ಇದೇ ವೇಳೆ, ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಮುಂಚೂಣಿಗೆ ತರುವ ಉದ್ದೇಶದಿಂದ ಅತ್ಯಾಧುನಿಕ AI University ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ವಿಶ್ವವಿದ್ಯಾಲಯದ ರೂಪುರೇಷೆಗಳ ಕುರಿತು ಜಾಗತಿಕ ತಂತ್ರಜ್ಞಾನ ತಜ್ಞರು ಹಾಗೂ GCC ಮುಖ್ಯಸ್ಥರಿಂದ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Continue Reading

ದೇಶ

Karnataka SIR : ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಳ್ಳು ಮಾಹಿತಿ? ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ಸಲ್ಲಿಕೆ

Published

on

ಬೆಂಗಳೂರು, ಜು.8: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಈ ಸಂಬಂಧ ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರಿಗೆ ಅಧಿಕೃತ ದೂರು ಸಲ್ಲಿಸಿದೆ.

ಬಿಜೆಪಿ ನೀಡಿರುವ ದೂರಿನಲ್ಲಿ, ಭಾರತೀಯ ಚುನಾವಣಾ ಆಯೋಗವು ಸಂವಿಧಾನದ ವಿಧಿ 324ರ ಅಡಿಯಲ್ಲಿ ಸ್ಥಾಪಿತವಾದ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಸಿದ್ಧತೆ ಮತ್ತು ಪರಿಷ್ಕರಣೆ ಅದರ ಕಾನೂನುಬದ್ಧ ಕರ್ತವ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ, ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 15ರ ಅನ್ವಯ ಪ್ರತಿಯೊಂದು ಚುನಾವಣಾ ಕ್ಷೇತ್ರಕ್ಕೂ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರ ಆಯೋಗಕ್ಕಿದೆ ಎಂದು ತಿಳಿಸಲಾಗಿದೆ.

ಬಿಜೆಪಿ ಪ್ರಕಾರ, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ನಿಖರವಾಗಿಡುವುದು, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯನ್ನು ತಡೆಯುವುದು, ಮೃತಪಟ್ಟವರ ಹೆಸರನ್ನು ತೆಗೆದುಹಾಕುವುದು ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಸೇರ್ಪಡೆಯಾಗದಂತೆ ನೋಡಿಕೊಳ್ಳುವುದಾಗಿದೆ.

ಆದರೆ ಕಾಂಗ್ರೆಸ್, ಬಿಜೆಪಿ ಪ್ರೇರಣೆಯಿಂದಲೇ SIR ಪ್ರಕ್ರಿಯೆ ನಡೆಯುತ್ತಿದೆ ಎಂದು ಕರಪತ್ರಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಆರೋಪ ಮಾಡುತ್ತಿದೆ ಎಂದು ಬಿಜೆಪಿ ದೂರಿನಲ್ಲಿ ಹೇಳಿದೆ. ಚುನಾವಣಾ ಆಯೋಗವು ಬಿಜೆಪಿ ಜೊತೆಗೂಡಿ ಮತದಾರರ ಹೆಸರುಗಳನ್ನು ತೆಗೆದುಹಾಕುತ್ತಿದೆ ಎಂಬ ಆರೋಪವು ಆಯೋಗದ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಪ್ರಯತ್ನವಾಗಿದೆ ಎಂದು ಬಿಜೆಪಿ ವಾದಿಸಿದೆ.

ಇಂತಹ ಸುಳ್ಳು ಮಾಹಿತಿಯಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗುವ ಸಾಧ್ಯತೆ ಇದ್ದು, ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಚುನಾವಣಾ ಸಿಬ್ಬಂದಿಯ ಸುರಕ್ಷತೆಗೂ ಅಪಾಯ ಎದುರಾಗಬಹುದು ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, SIR ಪ್ರಕ್ರಿಯೆಗೆ ಅಡ್ಡಿಪಡಿಸದಂತೆ ಚುನಾವಣಾ ಆಯೋಗ ಕ್ರಮ ವಹಿಸಬೇಕೆಂದು ಬಿಜೆಪಿ ತನ್ನ ದೂರಿನಲ್ಲಿ ಆಗ್ರಹಿಸಿದೆ.

ಸೂಚನೆ: ಈ ಆರೋಪಗಳು ಬಿಜೆಪಿಯ ದೂರಿನಲ್ಲಿರುವ ಅಂಶಗಳಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಈ ಕುರಿತು ಅಧಿಕೃತ ಪ್ರತಿಕ್ರಿಯೆ ಇನ್ನೂ ಪ್ರಕಟವಾಗಿಲ್ಲ.

Continue Reading

Trending