Connect with us

ಬೆಂಗಳೂರು

ವಿಧಾನ ಪರಿಷತ್ ಚುನಾವಣೆ ಸಿ ಟಿ ರವಿಗೆ ಬಂಪರ್ ಗಿಫ್ಟ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ, ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ರವಿ ಕುಮಾರ್, ಮಾಜಿ ಶಾಸಕರಾದ ಸಿ.ಟಿ.ರವಿ ಹಾಗೂ ಎಂ.ಜಿ.ಮುಳೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ,
ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದ ಸಿ.ಟಿ.ರವಿ ಅವರಿಗೆ ಅದೃಷ್ಟ ಒಲಿದುಬಂದಿದೆ, ಕರ್ನಾಟಕ ಮರಾಠ ಅಭಿವೃದ್ಧ ನಿಗಮದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಜೆ.ಮುಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ,
ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಸ್ಧಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ, ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನವಾಗಿದೆ

ದೇಶ

GBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಿಬಿಎ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕರಡು ಮತದಾರರ ಪಟ್ಟಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಮಾಣಿತ ಕಾರ್ಯವಿಧಾನ (SOP) ಕುರಿತು ಚರ್ಚೆ ನಡೆಯಿತು. ಅಧಿಸೂಚನಾ ವಿವರಣೆಗಳಿಗೆ ಅನುಗುಣವಾಗಿ ವಾರ್ಡ್ ಮ್ಯಾಪ್ ಗಡಿಗಳನ್ನು ಸರಿಪಡಿಸಿ ನವೀಕರಿಸಲು ಐಟಿ ವಿಭಾಗಕ್ಕೆ ನಿರ್ದೇಶನ ನೀಡಲಾಗಿದೆ. ದೀರ್ಘಾವಧಿಯಲ್ಲಿ ವ್ಯವಸ್ಥಿತ ಸರ್ವೇ ನಡೆಸುವಂತೆ ಸೂಚಿಸಲಾಗಿದೆ.

ಚುನಾವಣಾ ವಿಭಾಗ ರಚನೆ

ಪ್ರತಿ ಪಾಲಿಕೆಯಲ್ಲಿ ತಹಸೀಲ್ದಾರ್, ವ್ಯವಸ್ಥಾಪಕ, ಎಫ್‌ಡಿ, ಎಸ್‌ಡಿಎ ಹಾಗೂ ಡೇಟಾ ಎಂಟ್ರಿ ಆಪರೇಟರ್ ಒಳಗೊಂಡ ವಿಶೇಷ ಚುನಾವಣಾ ವಿಭಾಗ ರಚಿಸಲು ಸೂಚಿಸಲಾಗಿದೆ.

ವಿಭಜಿತ ವಾರ್ಡ್‌ಗಳ ವಿಶೇಷ ಪರಿಶೀಲನೆ

ವಿಭಜಿತ ವಾರ್ಡ್‌ಗಳ ಮಾಹಿತಿಯನ್ನು ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಬೇಕು. ಪಾಲಿಕೆ ಆಯುಕ್ತರು ಸ್ವತಂತ್ರವಾಗಿ ಮಾಹಿತಿ ದೃಢೀಕರಿಸಬೇಕು ಎಂದು ಮಹೇಶ್ವರ್ ರಾವ್ ತಿಳಿಸಿದ್ದಾರೆ.

ನೋಡಲ್ ಅಧಿಕಾರಿಗಳ ನೇಮಕ

ಡೇಟಾ ಸಮಸ್ಯೆಗಳ ಪರಿಹಾರ ಹಾಗೂ ಜಿಬಿಎ ಚುನಾವಣಾ ವಿಭಾಗದೊಂದಿಗೆ ಸಮನ್ವಯಕ್ಕಾಗಿ ಕಂದಾಯ ವಿಭಾಗದ ಅಪರ ಆಯುಕ್ತರನ್ನು ಐದು ಪಾಲಿಕೆಗಳಲ್ಲೂ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲು ಸೂಚಿಸಲಾಗಿದೆ.

“ಕರಡು ಮತದಾರರ ಪಟ್ಟಿಯ ಪರಿಶೀಲನೆಯಲ್ಲಿ ಪಾರದರ್ಶಕತೆ, ನಿಖರತೆ ಹಾಗೂ ವಿಶ್ವಾಸಾರ್ಹತೆ ಖಚಿತಪಡಿಸಲು SOP ಕಟ್ಟುನಿಟ್ಟಾಗಿ ಅನುಸರಿಸಬೇಕು” ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಸಭೆಯಲ್ಲಿ ವಿವಿಧ ಪಾಲಿಕೆಗಳ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ದೇಶ

ಬೇಸಿಗೆಗೆ ಮುನ್ನ ಬೆಂಗಳೂರು ಜಲಮಂಡಳಿ ಎಚ್ಚರಿಕೆ: ಕಾವೇರಿ ನೀರಿಗೆ ಪರ್ಯಾಯ ಯೋಜನೆ

ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್‌ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking Water) ಕೊರತೆ ಆಗದಂತೆ ಬೆಂಗಳೂರು ಜಲಮಂಡಳಿ (Bengaluru Water Board) ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

54 ಟಿಎಂಸಿ ನೀರು ಲಭ್ಯ

ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ 54 ಟಿಎಂಸಿ ನೀರು ಲಭ್ಯವಿದ್ದು, ಜುಲೈವರೆಗೆ ಬೆಂಗಳೂರಿಗೆ ಅಗತ್ಯವಿರುವ 14 ಟಿಎಂಸಿ ನೀರು ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ಯಾಂಕರ್ ವ್ಯವಸ್ಥೆ ಸಿದ್ಧ

ನೀರಿನ ಕೊರತೆ ಕಾಣಿಸಬಹುದಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಜಲಮಂಡಳಿ ಯೋಜನೆ ರೂಪಿಸಿದೆ. ಬೋರ್‌ವೆಲ್‌ ನೀರು ಬೇಸಿಗೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಕಳೆದ ವರ್ಷದಿಂದಲೇ ಬೋರ್‌ವೆಲ್ ನಿರ್ವಹಣೆಯನ್ನು ಜಲಮಂಡಳಿ ವಹಿಸಿಕೊಂಡಿದೆ. ಅಂತರ್ಜಲ ಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ನೀರು ವ್ಯರ್ಥ ಮಾಡಿದ್ರೆ ದಂಡ

ಕಾವೇರಿ ನೀರನ್ನು ಬೈಕ್, ಕಾರು ತೊಳೆಯಲು ಬಳಸುವುದು ಅಥವಾ ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜಲಮಂಡಳಿ ಸಿದ್ಧವಾಗಿದೆ. ವೀಕ್ಷಕರು ಹಾಗೂ ಬ್ಲೂಫೋರ್ಸ್ ತಂಡಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತದೆ.

ಜನರು ನೀರನ್ನು ಜಾಗರೂಕತೆಯಿಂದ ಬಳಕೆ ಮಾಡಿದರೆ ಬೇಸಿಗೆಯಲ್ಲಿ ಜಲಕ್ಷಾಮ ಸಮಸ್ಯೆ ತಗ್ಗಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Continue Reading

ಬೆಂಗಳೂರು

BENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ

ಬೆಂಗಳೂರು: ವಸಂತಪುರದಲ್ಲಿ ಅನಾದಿಕಾಲದಿಂದ ನೆಲಸಿರುವ ಸ್ವಯಂವ್ಯಕ್ತ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು. ಕಳೆದ ಒಂಬತ್ತು ದಿನಗಳಿಂದ ನಡೆದ ಶ್ರೀಸ್ವಾಮಿಯ ಬ್ರಹ್ಮ ರಥೋತ್ಸವವು ವೈಭವಯುತವಾಗಿ ಸಾಗಿದ್ದು, ಅದರ ಅಂತಿಮ ಘಟ್ಟವಾಗಿ ಸ್ವಾಮಿಗೆ ವಿಶ್ರಾಂತಿ ನೀಡುವ ಶಯನೋತ್ಸವ ಸುಗಂಧ ಪರಿಮಳಯುಕ್ತ ಮಂಟಪದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಈ ಶಯನೋತ್ಸವವನ್ನು ತಲಘಟ್ಟಪುರದ ಮಾಜಿ ಶ್ಯಾನಭೋಗ ಟಿ.ವಿ. ನಾರಾಯಣಮೂರ್ತಿ ಅವರ ಕುಟುಂಬವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ತ.ನಾ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಕುಟುಂಬ ಸದಸ್ಯರೊಂದಿಗೆ ಉತ್ಸವ ಜರುಗಿತು. ಪ್ರಧಾನ ಅರ್ಚಕ ರಘುರಾಮ್ ಭಟ್ ಅವರು ಸಕಲ ವಿಧಿವಿಧಾನಗಳೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.

ಉತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ತೀರ್ಥ-ಪ್ರಸಾದ ಸ್ವೀಕರಿಸಿದರು. ಭಕ್ತರ ಜಯಘೋಷಗಳಿಂದ ದೇವಾಲಯ ಪ್ರದೇಶ ಭಕ್ತಿಮಯ ವಾತಾವರಣಕ್ಕೆ ಸಾಕ್ಷಿಯಾಯಿತು.

ಈ ಸಂದರ್ಭದಲ್ಲಿ ಅಕ್ಷಯ ವಿಪ್ರ ಮಹಾಸಭಾದ ಕಾರ್ಯದರ್ಶಿ ಎನ್.ಎಸ್. ಸುಧೀಂದ್ರ ರಾವ್, ಕಿರಣ್ ಕುಮಾರ್, ಎಸ್. ರಾಮರಾವ್, ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Trending